News and Photo date: 23-06-2017

News and Photo date: 23-06-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo date: 23-06-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo date: 23-06-2017
ಲಿಂಕ್ : News and Photo date: 23-06-2017

ಓದಿ


News and Photo date: 23-06-2017

ಬೀಜ, ರಸಗೊಬ್ಬರ ಸಮರ್ಪಕ ದಾಸ್ತಾನಿಗೆ ಸೂಚನೆ
*************************************************
ಕಲಬುರಗಿ,ಜೂ.23.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಜೂನ್ ಮಾಹೆಯಲ್ಲಿ ಒಳ್ಳೆಯ ಮಳೆಯಾಗಿದೆ. ರೈತರು ಉದ್ದು, ಹೆಸರು ಬಿತ್ತನೆ ಮಾಡುತ್ತಿದ್ದು, ಬಿತ್ತನೆಗೆ ಅನುಕೂಲವಾಗುವ ಹಾಗೆ ಸಮರ್ಪಕ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಇನ್ನು ಮುಂದೆ ರೈತರು ತೊಗರಿ ಬಿತ್ತಲು ಪ್ರಾರಂಭಿಸುವರು. ಜಿಲ್ಲೆಗೆ ಅವಶ್ಯವಿರುವ ಸಮರ್ಪಕ ತೊಗರಿ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು ಎಂದರು.
ಪ್ರಮಾಣೀಕರಿಸಿದ ಬೀಜಗಳನ್ನು ಸಹ ಪರೀಕ್ಷೆಗೆ ಒಳಪಡಿಸಿ, ಬೀಜದ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಸುಮಾರು 6.95 ಲಕ್ಷ ರೈತ ಕುಟುಂಬಗಳು ಕೃಷಿ ಅವಲಂಬಿಸಿದ್ದಾರೆ. ಈ ಪೈಕಿ ಸುಮಾರು ಒಂದು ಲಕ್ಷ ರೈತರು ಮಾತ್ರ ಕೃಷಿ ಸಾಲ ಪಡೆದಿದ್ದಾರೆ. ಪ್ರತಿ ಹೋಬಳಿ ಮತ್ತು ಗ್ರಾಮಗಳಲ್ಲಿ ಬ್ಯಾಂಕ್‍ಗಳಿದ್ದು, ಎಲ್ಲ ರೈತರಿಗೂ ಕೃಷಿ ಸಾಲ ದೊರಕಿಸುವಂತೆ ಕ್ರಮ ಒದಗಿಸಲು ಲೀಡ್ ಬ್ಯಾಂಕ್ ಮ್ಯಾನೇಜರ್‍ರಿಗೆ ಸಚಿವರು ಸೂಚಿಸಿದರು.
ರೈತರು ನಾಟಿ ಪದ್ಧತಿಯಲ್ಲಿ ಬೆಳೆ ಬೆಳೆದರೆ 4000ರೂ. ಪ್ರೋತ್ಸಾಹಧನ ಹಾಗೂ ಬೀಜಗಳನ್ನು ಕೈಯಿಂದ ಬಿತ್ತನೆ ಮಾಡಿದರೆ 2500 ರೂ.ಗಳ ಪ್ರೋತ್ಸಾಹಧನ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ಸರ್ಕಾರ ನೀಡುವುದು. ಎಲ್ಲ ರೈತ ಸಂಪರ್ಕ ಕೇಂದ್ರದಲ್ಲಿ ಈ ಕುರಿತು ಮಾಹಿತಿ ನೀಡಿ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಪ್ರಾತ್ಯಕ್ಷಿಕೆಗಳನ್ನು ರೂಪಿಸಬೇಕು ಹಾಗೂ ಎಲ್ಲ ರೈತರಿಗೆ ಮಾಹಿತಿ ನೀಡಬೇಕು ಎಂದರು.
ರಾಜ್ಯದಾದ್ಯಂತ ಮರಳಿನ ಸಮಸ್ಯೆ ಇದೆ. ಇದರ ಶಾಶ್ವತ ಪರಿಹಾರಕ್ಕೆ ಮರಳು ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಯಿಂದ ಹಿಂಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವಹಿಸಲಾಗಿದೆ. ಗಣಿ ಇಲಾಖೆಯಿಂದ ಮರಳಿನ ಬ್ಲಾಕ್‍ಗಳನ್ನು ಗುರುತಿಸಿ ಹರಾಜು ಮಾಡಿ ಮರಳನ್ನು ದೊರಕಿಸಲಾಗುವುದು. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 45 ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಈ ಪೈಕಿ 19 ಬ್ಲಾಕ್‍ಗಳ ಹರಾಜಿಗಾಗಿ ಟೆಂಡರ್ ಕರೆಯಲಾಗಿದೆ. ಜೂನ್ 26ರಂದು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿದೆ. ಸರ್ಕಾರಿ ಕಾಮಗಾರಿಗಳಿಗಾಗಿ 6 ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಆದಷ್ಟು ಬೇಗ ಮರಳು ಸರಾಗವಾಗಿ ದೊರೆಯಲಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳು ನ್ಯಾಯಾಲಯದ ಸ್ಟೇದಿಂದಾಗಿ ಸ್ಥಗಿತಗೊಂಡು ಅಪೂರ್ಣ ಸ್ಥಿತಿಯಲ್ಲಿವೆ. ಸುಮಾರು ವರ್ಷಗಳಿಂದ ರಸ್ತೆ ಮತ್ತು ಸೇತುವೆಗಳು ಇದ್ದು, ಅಧಿಕಾರಿಗಳು ನ್ಯಾಯಾಲಯಕ್ಕೆ ಪ್ಯಾರಾವೈಸ್ ವಿವರಣೆ ನೀಡುವ ಮೂಲಕ ಸ್ಟೇ ವೇಕೆಂಟ್ ಮಾಡಿಸಬೇಕು. ಬಹಳದಿನಗಳಿಂದ ಅಪೂರ್ಣ ಸ್ಥಿತಿಯಲ್ಲಿರುವ ರಸ್ತೆ ಕಾಮಗಾರಿಗಳ ಉಳಿದ ಕಾಮಗಾರಿಗೆ ಮರು ಟೆಂಡರ್ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರಿಗೆ ಬ್ಲಾಕ್‍ಲಿಸ್ಟ್ ಮಾಡಬೇಕು. ಈ ವರ್ಷ ನೂತನವಾಗಿ ಹಮ್ಮಿಕೊಂಡಿರುವ ಕಾಮಗಾರಿಗಳ ಎಲ್ಲ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗ ಟೆಂಡರ್ ಕರೆಯಬೇಕು ಎಂದರು.
ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ನಮ್ಮ ಗ್ರಾಮ ನಮ್ಮ ರಸ್ತೆ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಯಾವುದೇ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಜರುಗಿದರೆ ಸಂಬಂಧಪಟ್ಟ ಕಾರ್ಯನಿರ್ವಾಹಕ ಇಂಜಿನಿಯರ್‍ರನ್ನು ಜವಾಬ್ದಾರರನ್ನಾಗಿಸಲಾಗುವುದು. ನಮ್ಮ ಗ್ರಾಮ ನಮ್ಮ ರಸ್ತೆಯ 4ನೇ ಹಂತದ ಯೋಜನೆಯಡಿ ಹಮ್ಮಿಕೊಂಡಿರುವ ಕಾಮಗಾರಿಗಳಿಗೆ ಆದಷ್ಟು ಬೇಗ ಟೆಂಡರ್ ಕರೆಯಬೇಕು. 5 ವರ್ಷಗಳ ಹಿಂದೆ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಗುತ್ತಿಗೆಗಾರರು ದುರಸ್ತಿ ಮಾಡಬೇಕಾಗಿದೆ. ಈ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ನಿಂಬರ್ಗಾ, ಪಡಸಾವಳಗಿ ಮತ್ತು ಕೋತನ ಹಿಪ್ಪರಗಾ ಗ್ರಾಮಗಳ ಕೆರೆ ನಿರ್ಮಾಣಕ್ಕೆ ಈ ಹಿಂದೆ ಟೆಂಡರ್ ಕರೆಯಲಾಗಿತ್ತು. ಕೆರೆ ನಿರ್ಮಾಣಕ್ಕೆ ಅವಶ್ಯಕವಿರುವ ಜಮೀನನ್ನು ಭೂಸ್ವಾಧೀನ ಪಡಿಸಲು ಅವಶ್ಯಕವಿರುವ ಅನುದಾನವನ್ನು ಭೂಸ್ವಾಧೀನ ಇಲಾಖೆಗೆ ಜಮಾ ಮಾಡಲಾಗಿತ್ತು. ಆದರೆ ಹಣ ರೈತರಿಗೆ ಪಾವತಿಯಾಗಿಲ್ಲ. ಕಾರಣ ಕೆರೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ. ಜಿಲ್ಲಾಧಿಕಾರಿಗಳು ಭೂಸ್ವಾಧೀನ ಮತ್ತು ಸಣ್ಣ ನೀರಾವರಿ ಇಲಾಖೆಯ ಸಮೀಕ್ಷೆ ಕೈಗೊಂಡು ಸಮಸ್ಯೆ ಪರಿಹರಿಸಬೇಕು ಎಂದು ತಿಳಿಸಿದರು.
ಮಳೆಗಾಲದಲ್ಲಿ ಜಿಲ್ಲೆಯ ನದಿಗಳ ಮೇಲೆ ನಿರ್ಮಿಸಿರುವ ಬ್ಯಾರೇಜ್‍ಗಳ ಗೇಟುಗಳನ್ನು ತೆರವುಗೊಳಿಸಬೇಕು. ಒಂದು ವೇಳೆ ಹೆಚ್ಚಿಗೆ ಮಳೆಯಾಗಿ ನದಿಯಲ್ಲಿ ಪ್ರವಾಹ ಉಂಟಾದಲ್ಲಿ ಬ್ಯಾರೇಜಿನಲ್ಲಿ ನೀರು ಸಂಗ್ರಹವಾಗಿ ಬ್ಯಾರೇಜು ಹಾನಿಗೀಡಾಗುವ ಹಾಗೂ ರೈತರ ಜಮೀನು, ಗ್ರಾಮಗಳು ಹಾನಿಯಾಗುವ ಸಂಭವಗಳಿರುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಸಭೆಯಲ್ಲಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಶಾಸಕ ಬಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆ:
******************************************
ಬೇಗ ಗ್ರಾಮಗಳ ಆಯ್ಕೆ ಮಾಡಲು ಸಲಹೆ
***************************************
ಕಲಬುರಗಿ,ಜೂ.23.(ಕ.ವಾ.)-ಪ್ರತಿ ಗ್ರಾಮದಲ್ಲಿ ಒಂದು ಕೋಟಿ ರೂ. ಹಾಗೂ ಮುಖ್ಯಮಂತ್ರಿಗಳ 21 ಅಂಶಗಳ ಕಾರ್ಯಕ್ರಮವನ್ನು ಒಗ್ಗೂಡಿಸಿ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಮಾಡಲು ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆ ರೂಪಿಸಲಾಗಿದೆ. ಆದಷ್ಟು ಬೇಗ ಶಾಸಕರು ಹಾಗೂ ವಿಧಾನ ಪರಿಷತ್ ಶಾಸಕರು ಗ್ರಾಮಗಳನ್ನು ಆಯ್ಕೆ ಮಾಡಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಸಲಹೆ ನೀಡಿದರು.
 ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಒಂದು ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ 4 ಗ್ರಾಮಗಳನ್ನು ಹಾಗೂ ವಿಧಾನಪರಿಷತ್ ಸದಸ್ಯರು ಒಂದು ಗ್ರಾಮದ ಹೆಸರನ್ನು ಅಭಿವೃದ್ಧಿಗಾಗಿ ಆಯ್ಕೆ ಮಾಡಬೇಕಾಗಿದೆ ಎಂದರು.
ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆಯಾಗುವ ಪ್ರತಿ ಗ್ರಾಮಕ್ಕೆ ಗರಿಷ್ಠ ಒಂದು ಕೋಟಿ ರೂ. ಅನುದಾನದಂತೆ ರಾಜ್ಯದ ಒಟ್ಟು 1000 ಗ್ರಾಮಗಳನ್ನು ಪ್ರಸಕ್ತ ವರ್ಷ ಆಯ್ಕೆ ಮಾಡಿ ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಹೆಪ್ಸಿಬಾರಾಣಿ ಕೊರ್ಲಪಾಟಿ, ಶಾಸಕ ಬಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಗಡಿ ಪ್ರದೇಶ ಅಭಿವೃದ್ಧಿ ಅಧ್ಯಕ್ಷರ ಪ್ರವಾಸ
ಕಲಬುರಗಿ,ಜೂ.23.(ಕ.ವಾ.)-ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು ಬೆಂಗಳೂರಿನಿಂದ ಕಾರಿನ ಮೂಲಕ ಜೂನ್ 24ರಂದು ಸಂಜೆ 7.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
 ಜೂನ್ 25ರಂದು ಬೆಳಿಗ್ಗೆ 8 ಗಂಟೆಗೆ ಯಾದಗಿರಿ ಮತ್ತು ಗುರುಮಿಠಕಲ್‍ಗೆ ಪ್ರಯಾಣಿಸಿ, ಸಾರ್ವಜನಿಕರನ್ನು ಭೇಟಿ ಮಾಡಿ ಯಾದಗಿರಿಯಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜೂನ್ 26ರಂದು ಗುರುಮಿಠಕಲ್‍ದಲ್ಲಿ ರಂಜಾನ್ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜೂನ್ 27ರಂದು ಗಡಿ ಪ್ರಾಧಿಕಾರದ ಕಾಮಗಾರಿಗಳ ಬಗ್ಗೆ ಬೀದರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜೂನ್ 28 ರಿಂದ ಜುಲೈ 5ರವರೆಗೆ ಗುರುಮಿಠಕಲ್ ಮತಕ್ಷೇತ್ರದ ಗಡಿ ಗ್ರಾಮಗಳಲ್ಲಿ ಕೆ.ಬಿ.ಜೆ.ಎನ್.ಎಲ್.ದಿಂದ ತೆಗೆದುಕೊಂಡಿರುವ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಕಾಮಗಾರಿಗಳ ಪರಿವೀಕ್ಷಣೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದವರಿಗೆ ಒದಗಿಸಲಾದ ಬೋರವೇಲ್‍ಗಳ ಪರಿವೀಕ್ಷಣೆ ಹಾಗೂ ಸಾರ್ವಜನಿಕರ ಭೇಟಿ ನೀಡುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜೂನ್ 24ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
***************************************************
ಕಲಬುರಗಿ,ಜೂ.23.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಶಾಂತಿ ನಗರ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ಕೈಗೊಳ್ಳುವ ಪ್ರಯುಕ್ತ ಜೂನ್ 24ರಂದು ಬೆಳಗಿನ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ. ಶಾಂತಿ ನಗರ: ಎಂ.ಎಸ್.ಕೆ. ಮಿಲ್ ಗೇಟ್, ಖಾದ್ರಿ ಚೌಕ್, ಮಹ್ಮದಿ ಚೌಕ್, ಗಾಲಿಬ್ ಕಾಲೋನಿ, ವೆಂಕಟೇಶ್ವರ ಗುಡಿ (ಎನ್.ಆರ್. ಕಾಲೋನಿ), ಅಫಜಲಪುರ ಕ್ರಾಸ್ ಪ್ರದೇಶ, ಶಾಂತಿನಗರ, ವಿದ್ಯಾನಗರ, ವಡ್ಡರ ಗಲ್ಲಿ, ಬೋರಾಬಾಯಿ ನಗರ, ಬಸವ ನಗರ, ಹೀರಾಪುರ, ಮಿಸಬಾ ನಗರ, ಕೆ.ಎಸ್.ಆರ್.ಸಿ. ಕ್ಯಾರ್ಟರ್ಸ್, ಹೀರಾನಗರ, ಭೀಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಜೂನ್ 28ರಂದು ಗೈರು ಹಾಜರಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ
ಕಲಬುರಗಿ,ಜೂ.23.(ಕ.ವಾ.)-ಕಲಬುರಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ ವೃಂದದ ಅಡುಗೆ ಸಹಾಯಕರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಜೂನ್ 21ರಂದು ನಡೆಸಲಾಗಿದೆ. ಆದರೆ ಸದರಿ ದಿನಾಂಕದಂದು ಅರ್ಹ ಅಭ್ಯರ್ಥಿಗಳಿಗೆ ತಾಂತ್ರಿಕ ದೋಷದಿಂದ ಕಾಲ್‍ಲೆಟರ್ (ಸಂದರ್ಶನ ಪತ್ರ) ಪಡೆಯಲು ಕಾಲಾವಕಾಶ ಕಡಿಮೆ ಇರುವುದರಿಂದ ಅರ್ಹ ಅಭ್ಯರ್ಥಿಗಳು ದಾಖಲಾತಿಗಳ ಪರಿಶೀಲನೆಗೆ ಹಾಜರಾಗದೇ ಇರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಸದರಿ ದಿನಾಂಕದಂದು ಗೈರು ಹಾಜರಾದ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪರಿಶೀಲಿಸಲು 2017ರ ಜೂನ್ 28ರಂದು ಅವಕಾಶ ಕಲ್ಪಿಸಲಾಗಿದೆ.
ಮೂಲ ದಾಖಲಾತಿಗಳ ಪರಿಶೀಲನೆಗೆ ಗೈರು ಹಾಜರಾದ ಅಡುಗೆ ಸಹಾಯಕರ ಹುದ್ದೆಯ ಅರ್ಹ ಅಭ್ಯರ್ಥಿಗಳು ಮಾತ್ರ ಕಾಲ್‍ಲೆಟರ್ (ಸಂದರ್ಶನ ಪತ್ರ) ಪಡೆದು ಜೂನ್ 28ರಂದು ಬೆಳಗಿನ 10 ಗಂಟೆಗೆ ಕಲಬುರಗಿ ಹಳೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆಗೆ ದಾಖಲಾತಿಗಳೊಂದಿಗೆ ಹಾಜರಾಗಬೇಕೆಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್. ರಾಜಪ್ಪ ತಿಳಿಸಿದ್ದಾರೆ.
ಜುಲೈ 6ರಂದು ಜಿ.ಪಂ. ಸಾಮಾನ್ಯ ಸಭೆ
****************************************
ಕಲಬುರಗಿ,ಜೂ.23.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ ಏಳನೇ ಸಾಮಾನ್ಯ ಸಭೆಯು 2017ರ ಜುಲೈ 6ರಂದು ಬೆಳಿಗ್ಗೆ 11 ಗಂಟೆಗೆ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಸಂಬಂಧಪಟ್ಟ ಆಯಾ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಖುದ್ದಾಗಿ ಈ ಸಭೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಕೃಷಿ ಪಂಡಿತ ಪ್ರಶಸ್ತಿಗೆ ಭಾಜನರಾದ ಶಿವಶರಣಪ್ಪ ಲಕ್ಷ್ಮಣ ಬುಳ್ಳಾ ಅವರಿಗೆ ಸನ್ಮಾನ
ಕಲಬುರಗಿ,ಜೂ.23.(ಕ.ವಾ.)-ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ರೈತರಾದ ಶಿವಶರಣಪ್ಪ ಲಕ್ಷಣ ಬುಳ್ಳಾ ಅವರಿಗೆ ಸಾವಯವ ಕೃಷಿ ವಿಭಾಗದಲ್ಲಿ 2013-14ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ 2017ರ ಜೂನ್ 21ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ಈ ಪ್ರಶಸ್ತಿ ಲಭಿಸಿದ್ದಕ್ಕಾಗಿ ಕಲಬುರಗಿ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ ಎಂದು ಕಲಬುರಗಿ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.
ತೆರಿಗೆ ಪಾವತಿಗೆ ಕೇವಲ ಒಂದು ವಾರ ಬಾಕಿ
*******************************************
ಕಲಬುರಗಿ,ಜೂ.23.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ದಂಡ ರಹಿತ ಆಸ್ತಿ ತೆರಿಗೆ ಪಾವತಿಸಲು ಕೇವಲ ಒಂದುವಾರ ಮಾತ್ರ ಬಾಕಿ ಇದ್ದು, ತೆರಿಗೆ ಪಾವತಿಗೆ 2017ರ ಜೂನ್ 30ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ತಿಳಿಸಿದ್ದಾರೆ.
ದಂಡ ರಹಿತ ಆಸ್ತಿ ತೆರಿಗೆ ಪಾವತಿ ಕುರಿತು ಇನ್ನೂ ಸಾಕಷ್ಟು ಆಸ್ತಿದಾರರಿಗೆ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿ ಬಾಕಿ ಇರಿಸಿಕೊಂಡಿದ್ದು, ಈಗಲಾದರೂ ಸದರಿ ಅವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಬಾಕಿಯಿರುವ ಆಸ್ತಿ ತೆರಿಗೆಯನ್ನು ಚಾಲ್ತಿ ವರ್ಷಕ್ಕೆ ದಂಡರಹಿತವಾಗಿ ಪಾವತಿಸಲು ಹಾಗೂ ಹಿಂದಿನ ಬಾಕಿ ಇರುವ ಆಸ್ತಿ ತೆರಿಗೆ ಮೇಲೆ ಇನ್ನೂ ಹೆಚ್ಚಿನ ದಂಡಕ್ಕೆ ಗುರಿಯಾಗುವುದಕ್ಕೆ ತಪ್ಪಿಸಲು ಆಸ್ತಿಗಳ ಮಾಲೀಕರು ಒಂದು ವಾರದೊಳಗಾಗಿ (ಜೂನ್ 30ರವರೆಗೆ) ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಬೇಕು.
ಸಾರ್ವಜನಿಕರ ಅನುಕೂಲಕ್ಕಾಗಿ ರಜಾ ದಿನಗಳಂದು ಸಹ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸಿನಲ್ಲಿರುವ ಗುಲಬರ್ಗಾ ಒನ್‍ಗಳಲ್ಲಿ ತೆರಿಗೆ ಪಾವತಿಸಿ ಇದರ ಸದುಪಯೋಗ ಪಡೆಯಬೇಕೆಂದು ಅವರು ಕೋರಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖುಲ್ಲಾ ನಿವೇಶನ, ಮನೆ, ಅಂಗಡಿ, ವಾಣಿಜ್ಯ ಕಟ್ಟಡ, ಕಲ್ಯಾಣ ಮಂಟಪ, ನರ್ಸಿಂಗ್ ಹೋಂ, ಬಹು ಮಹಡಿ ಕಟ್ಟಡ, ಅಪಾರ್ಟ್‍ಮೆಂಟ್, ಫಂಕ್ಷನ್ ಹಾಲ್‍ಗಳು ಮತ್ತು ಇತರೆ ಸಾಕಷ್ಟು ಆಸ್ತಿ ಹೊಂದಿರುವ ವಿವಿಧ ಆಸ್ತಿಗಳ ಮಾಲೀಕರು ಮೇ 1ರಿಂದ (ಜೂನ್ 22ರವರೆಗೆ) ಈವರೆಗೆ ತಮ್ಮ ಆಸ್ತಿ ತೆರಿಗೆ ಪಾವತಿಸಿ ಸದರಿ ಯೋಜನೆಯ ಸದುಪಯೋಗವನ್ನು ಪಡೆದುಕೊಂಡಿರುವುದಕ್ಕೆ ಮಹಾನಗರ ಪಾಲಿಕೆಯಿಂದ ಅಭಿನಂದನೆ ಸಲ್ಲಿಸಿರುತ್ತಾರೆ.
ಜೂನ್ 24ರಿಂದ ಜಿಲ್ಲೆಯ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾಗಾರ
 ******************************************************************************
ಕಲಬುರಗಿ,ಜೂ.23.(ಕ.ವಾ.)-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ “ಗರ್ಭಿಣಿ ಸ್ತ್ರೀಯರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮದ ನೂತನ ವಿಧಾನಗಳ” ಕುರಿತು ಕಾರ್ಯಾಗಾರವನ್ನು ಜೂನ್ 24 ಮತ್ತು 25ರಂದು ಪ್ರತಿದಿನ ಬೆಳಗಿನ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಜೂನ್ 24ರಂದು ಬೆಳಗಿನ 10 ಗಂಟೆಗೆ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದು, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅಧÀ್ಯಕ್ಷತೆಯಲ್ಲಿ ಜರುಗುವ ಈ ಕಾರ್ಯಾಗಾರದಲ್ಲಿ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ, ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣು ಮೋದಿ ಅತಿಥಿಗಳಾಗಿ ಆಗಮಿಸುವರು.
ಡಿವೈನ್ ಸಂಸ್ಕಾರ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಡಾ. ಶುಭದಾ ನೀಲ್, ವ್ಯಕ್ತಿತ್ವ ವಿಕಾಸನ ತರಬೇತಿದಾರ ಇ.ವ್ಹಿ. ಗಿರೀಶ್, ಜಿಲ್ಲಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಶಾಂತಕ್ಕ ಬಿರಾದಾರ, ಜೀಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಸ್ತ್ರೀರೋಗ ವಿಭಾಗದ ಹೆಚ್.ಓ.ಡಿ. ಡಾ. ನಿರ್ಮಲಾ ರಾಂಪೂರೆ ವಿಶೇಷ ಆಹ್ವಾನಿತರಾಗಿ ಹಾಗು ಕಲಬುರಗಿ ಬ್ರಹ್ಮಕುಮಾರಿ ನಿರ್ದೇಶಕ ರಾಜಯೋಗಿನಿ ಬಿ.ಕೆ. ರತ್ನಾ ಬಜೇನಜೀ ಬಹೇನಜೀ ಸಹ ಸಂಯೋಜಕರಾಗಿ ಆಗಮಿಸುವರು.
ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ
*********************************************************
ಕಲಬುರಗಿ,ಜೂ.23.(ಕ.ವಾ.)-ಕಲಬುರಗಿ ರಂಗಾಯಣದ ನಿರ್ದೇಶಕರ ಹುದ್ದೆ ಕಾರ್ಯಾಭಾರವನ್ನು ಮಹೇಶ ವಿ. ಪಾಟೀಲ ಅವರು 2017ರ ಜೂನ್ 23ರಂದು ವಹಿಸಿಕೊಂಡಿರುತ್ತಾರೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ರಂಗಾಯಣಕ್ಕೆ ಸಂಬಂಧಿಸಿದಂತೆ ಪತ್ರ ವ್ಯವಹಾರಕ್ಕಾಗಿ ನಿರ್ದೇಶಕರು, ರಂಗಾಯಣ, ಡಾ. ಸಿದ್ಧಯ್ಯ ಪುರಾಣಿಕ ಸುವರ್ಣ ಸಾಂಸ್ಕøತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲ ರಸ್ತೆ ಕಲಬುರಗಿ ಕಚೇರಿಗೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-227735 ಹಾಗೂ ಮೊಬೈಲ್ ಸಂಖ್ಯೆ 9987074308/9322406581ಗಳನ್ನು ಸಂಪರ್ಕಿಸಲು ಕೋರಿದೆ.
ಐ.ಟಿ.ಐ. ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್
ಎಂಟ್ರಿ ಮೂಲಕ ಡಿಪ್ಲೋಮಾ ದ್ವಿತೀಯ ವರ್ಷಕ್ಕೆ ನೇರ ಪ್ರವೇಶ
***********************************************************
ಕಲಬುರಗಿ,ಜೂ.23.(ಕ.ವಾ.)- ಕಲಬುರಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎರಡು ವರ್ಷ ಅವಧಿಯ ಐ.ಟಿ.ಐ. (IಖಿI) ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರೀಷಿಸಿಯನ್ ಮ್ಯಾನುಫ್ಯಾಕ್ಚರಿಂಗ್‍ನಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ದ್ವಿತೀಯ ವರ್ಷಕ್ಕೆ ಪ್ರವೇಶ ಪಡೆಯಬಹುದಾಗಿದೆ ಎಂದು ಕಲಬುರಗಿ ಜಿ.ಟಿ.ಟಿ.ಸಿ. ಪ್ರಾಂಶುಪಾಲರು ತಿಳಿಸಿದಾರೆ.
ಅಭ್ಯರ್ಥಿಗಳು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸಂತ್ರಾಸವಾಡಿ ದರ್ಶನಾಪೂರ ಲೇಔಟ್ ಎಮ್.ಜಿ. ರೋಡ ಕಲಬುರಗಿಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬೇಕು. ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿ ಪಡೆದ ವಿಧ್ಯಾರ್ಥಿಗಳಿಗೆ ಶೇ. 100 ರಷ್ಟು ಉದ್ಯೋಗವು ದೊರಕಿಸಿಕೊಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-230084, ಮೊಬೈಲ್ ಸಂಖ್ಯೆ 7057031498, 9448419143ಗಳನ್ನು ಸಂಪರ್ಕಿಸಲು ಕೋರಿದೆ.










ಹೀಗಾಗಿ ಲೇಖನಗಳು News and Photo date: 23-06-2017

ಎಲ್ಲಾ ಲೇಖನಗಳು ಆಗಿದೆ News and Photo date: 23-06-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo date: 23-06-2017 ಲಿಂಕ್ ವಿಳಾಸ https://dekalungi.blogspot.com/2017/06/news-and-photo-date-23-06-2017.html

Subscribe to receive free email updates:

0 Response to "News and Photo date: 23-06-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ