ಶೀರ್ಷಿಕೆ : NEWS AND PHOTO DATE: 28--06--2017
ಲಿಂಕ್ : NEWS AND PHOTO DATE: 28--06--2017
NEWS AND PHOTO DATE: 28--06--2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
************************************************
ಕಲಬುರಗಿ,ಜೂ.28.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಜೂನ್ 29ರಂದು ರಸ್ತೆಯ ಮೂಲಕ ಬಾಗಲಕೋಟೆ ತಾಲೂಕಿನ ಹುನಗಂದದಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜೂನ್ 30ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಕಲಬುರಗಿ ಜಿಲ್ಲೆಯಲ್ಲಿ ಶೇ.95.55ರಷ್ಟು ಆಧಾರ ನೋಂದಣಿ
*********************************************************
ಅವರು ಬುಧವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇ-ಆಡಳಿತ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಲಬುರಗಿ ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗಾಗಿ ಆಧಾರ ನೋಂದಣಿ, ಆಧಾರ ಸೀಡಿಂಗ್ ಮತ್ತು ಆಧಾರ್ ಸಂಬಂಧಿಸಿದ ಸೇವೆಗಳ ಬಗ್ಗೆ ಅರಿವು ಮೂಡಿಸಲು ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಇನ್ನೂ ಬಾಕಿ ಉಳಿದ 120746 ಜನರ ಆಧಾರ್ ನೋಂದಣಿ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಆಧಾರ್ ನೋಂದಣಿಯಲ್ಲಿ ಶೇ. 100ರಷ್ಟು ಸಾಧನೆ ಮಾಡಲು ಶ್ರಮಿಸಬೇಕು. ಈ ಹಿಂದೆ ಎಲ್ಲ ಇಲಾಖೆಗಳ ವಿವಿಧ ಯೋಜನೆಗಳಲ್ಲಿ ಗುರುತಿನ ಚೀಟಿ ಬಳಸುವ ಪದ್ಧತಿ ಇತ್ತು. ಈ ಪದ್ಧತಿಯಿಂದ ಯೋಜನೆಗಳ ಮಾನಿಟರಿಂಗ್ ಮತ್ತು ವರದಿ ಮಾಡಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ನೋಂದಣಿ ಪ್ರಕ್ರಿಯೆ ದೇಶದಾದ್ಯಂತ ಪ್ರಾರಂಭಿಸಲಾಗಿದೆ. ಎಲ್ಲ ಯೋಜನೆಗಳಿಗೆ ಮುಂಬರುವ ದಿನಗಳಲ್ಲಿ ಆಧಾರ್ ಗುರುತಿನ ಚೀಟಿ ಅವಶ್ಯಕವಾಗಿದ್ದು, ವಿಶೇಷವಾಗಿ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಆಧಾರ್ ನೋಂದಣಿ ಕಾರ್ಯದಲ್ಲಿ ಮುತುವರ್ಜಿ ವಹಿಸಬೇಕೆಂದರು.
ಇ-ಆಡಳಿತ ಕೇಂದ್ರದ ಪ್ರೊಸೆಸ್ ಕನ್ಸಲ್ಟೆಂಟ್ ರಘುವಂಶಿ ಅವರು ಮಾತನಾಡಿ, 2016ರಲ್ಲಿ ಆಧಾರ್ ಕಾಯ್ದೆ ಜಾರಿಗೊಳಿಸಲಾಗಿದ್ದು, ಈ ಕಾಯ್ದೆ ಉಲ್ಲಂಘನೆಯಾಗದಂತೆ ಎಲ್ಲ ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈಗ ಕಲಬುರಗಿ ಜಿಲ್ಲೆಯು 22ನೇ ಜಿಲ್ಲೆಯಾಗಿದೆ. ಈ ಆಧಾರ್ ನೋಂದಣಿ ಬಗ್ಗೆ ಎಲ್ಲರೂ ದೃಢ ವಿಶ್ವಾಸ ಹೊಂದಿರಬೇಕು. ಭಾರತ ದೇಶದಾದ್ಯಂತ 2017ರ ಏಪ್ರಿಲ್ 30ರವರೆಗೆ ಒಟ್ಟು 114.36 ಕೋಟಿ ಜನರ ಆಧಾರ್ ನೋಂದಣಿಯಾಗಿದ್ದು, ರಾಜ್ಯದಲ್ಲಿ ಕಳೆದ ಮೇ ಅಂತ್ಯದೊಳಗೆ 6.08 ಕೋಟಿ ಜನರ ಆಧಾರ್ ನೋಂದಣಿಯಾಗಿದೆ. ಆಧಾರ್ ನೋಂದಣಿಗೆ ಒರಿಜನೇಶನ್ ಎಂಬುವುದು ಇರುವುದಿಲ್ಲ ಎಂದರು.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಇ-ಆಡಳಿತ ಕೇಂದ್ರದ ಟೆಕ್ನಿಕಲ್ ಲೀಡ್ ಶ್ರೇಯಸ್ ರಾವತ್, ಟೆಕ್ನಿಕಲ್ ಕನ್ಸಲ್ಟೆಂಟ್ ನಾಗರಾಜ ಎನ್.ಎಂ., ಕಲಬುರಗಿ ಜಿಲ್ಲಾ ಸಮನ್ವಯಾಧಿಕಾರಿ ಆನಂದ ಗಡಾಳೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಶಿಷ್ಟಾಚಾರ ತಹಸೀಲ್ದಾರ ಪ್ರಕಾಶ ಚಿಂಚೋಳಿಕರ್ ಸ್ವಾಗತಿಸಿದರು.
ಜೂನ್ 29ರಂದು ಆವಿಷ್ಕಾರ ಸ್ಥಳ-ಬ್ರಹ್ಮಾಂಡದ ಅರಿವು ಪ್ರದರ್ಶನ
ಕಲಬುರಗಿ,ಜೂ.28.(ಕ.ವಾ.)-ಕಲಬುರಗಿ ವಿಜ್ಞಾನ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಿರುವ ಆವಿಷ್ಕಾರ ಸ್ಥಳ ಮತ್ತು ಬ್ರಹ್ಮಾಂಡದ ಅರಿವು ಪ್ರದರ್ಶನವನ್ನು ಕಲಬುರಗಿ ಮುನ್ಸಿಪಲ್ ಗಾರ್ಡನ್ ಹತ್ತಿರದ ವಿಜ್ಞಾನ ಕೇಂದ್ರದಲ್ಲಿ 2017ರ ಜೂನ್ 29ರಂದು ಬೆಳಗಿನ 11 ಗಂಟೆಗೆ ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್ ಉದ್ಘಾಟಿಸುವರು.
ಗುಲಬರ್ಗಾ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಡಾ. ಎ. ವೆಂಕಟರಮಣ ಸಮಾರಂಭದ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದ ನಿರ್ದೇಶಕ ಕೆ.ಜಿ. ಕುಮಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜೇವರ್ಗಿಯಲ್ಲಿ ಜಾಹೀರಾತು ಪ್ರಕಟಣೆಗೆ ಅನುಮತಿ ಕಡ್ಡಾಯ
*********************************************************
ಕಲಬುರಗಿ,ಜೂ.28.(ಕ.ವಾ.)-ಕರ್ನಾಟಕ ಪುರಸಭೆಗಳ ಅಧಿನಿಯಮ 1964ರ ನಿಯಮ 133 ಮತ್ತು 136ರ ಪ್ರಕಾರ ಜೇವರ್ಗಿ ಪುರಸಭೆ ವ್ಯಾಪ್ತಿಯಲ್ಲಿನ ರಸ್ತೆಯ ಮೇಲೆ ಫ್ಲೇಕ್ಸ್ ಮತ್ತು ಬ್ಯಾನರ್ ಸೇರಿದಂತೆ ಯಾವುದೇ ಜಾಹೀರಾತನ್ನು ಪ್ರಕಟಿಸುವ ಮೊದಲು ಸಾರ್ವಜನಿಕರು ಪುರಸಭೆಯಲ್ಲಿ ನಿಗದಿತ ಶುಲ್ಕ ಪಾವತಿಸಿ ಅನುಮತಿ ಪಡೆದು ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜೇವರ್ಗಿ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಅನುಮತಿ ಪಡೆಯದೇ ಅನಧಿಕೃತವಾಗಿ ಜಾಹೀರಾತನ್ನು ಪ್ರದರ್ಶಿಸಿದರೆ ಅಥವಾ ಪ್ರಕಟಿಸಿದರೆ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಜಾಹೀರಾತಿನ ವಿಧಗಳು, ಪ್ರತಿದಿನದ ಜಾಹೀರಾತಿನ ದರ ಮತ್ತಿತರ ಹೆಚ್ಚಿನ ವಿವರಗಳಿಗಾಗಿ ಜೇವರ್ಗಿ ಪುರಸಭೆ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಿದೆ.
ವಿವಿಧ ವೃತ್ತಿಪರ ಕೋರ್ಸುಗಳ ತರಬೇತಿಗಾಗಿ ಅರ್ಜಿ ಆಹ್ವಾನ
**********************************************************
ಕಲಬುರಗಿ,ಜೂ.28.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ಕೋರ್ಸುಗಳಿಗಾಗಿ ಎಸ್.ಎಸ್.ಎಲ್.ಸಿ., ಐಟಿಐ ತರಬೇತಿಗಳಲ್ಲಿ ಉತ್ತೀರ್ಣರಾದ ಕಲಬುರಗಿ ಜಿಲ್ಲೆಯ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಫಾರ್ಸಿ ಮುಂತಾದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಸರ್ವಿಸಿಂಗ್ ಎಲೆಕ್ಟ್ರಾನಿಕ್ಸ್ ಇಕ್ವಿಪ್‍ಮೆಂಟ್, ಎಲೆಕ್ಟ್ರಿಕಲ್ ವೈರ್‍ಮೇನ್ ಟ್ರೈನಿಂಗ್ ಫಾರ್ ವೈರಿಂಗ್ ಲೈಸೆನ್ಸ್, ಏರ್ ಕಂಡಿಶನ್ ಆಂಡ್ ರಿಫ್ರಿಜರೇಶನ್, ಸ್ಕಿಲ್ ಸುಪರ್‍ವೈಜರ್ ಇನ್ ಸಿವಿಲ್ ಇಂಜಿನಿಯರಿಂಗ್, ರಿಪೇರಿಂಗ್ ಆಫ್ ಡೊಮೆಸ್ಟಿಕ್ ಎಲೆಕ್ಟ್ರಿಕಲ್ ಅಪ್ಲಾಯನ್ಸೆಸ್. ಅರ್ಜಿ ನಮೂನೆಗಳನ್ನು ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಜುಲೈ 15ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಐವಾನ್-ಎ-ಶಾಹಿ ಇಂಡಿಯಾ ಬೈತುಲ ಮಾಲ್ ಕಟ್ಟಡ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಹಾಗೂ ಮೊಬೈಲ್ ಸಂಖ್ಯೆ 08472-244006. ಆಯಾ ತಾಲೂಕಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಮತ್ತು ಅರ್ಜಿ ನಮೂನೆಗಳನ್ನು ಪಡೆಯಬೇಕು. ಕಲಬುರಗಿ ಮಿನಿ ವಿಧಾನ ಸೌಧದದಲ್ಲಿನ ಟ್ರಾಫಿಕ್ ಪೊಲೀಸ್ ಸ್ಟೇಶನ್ ಎದುರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಿದೆ.
ಜುಲೈ 1ರಂದು ಹೋಬಳಿ ಮಟ್ಟದ ಜನಸ್ಪಂದನ ಸಭೆಗಳು
*******************************************************
ಕಲಬುರಗಿ,ಜೂ.28.(ಕ.ವಾ.)-ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ 2017ರ ಜುಲೈ 1ರಂದು ಮೊದಲನೇ ಶನಿವಾರ ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆಗಳನ್ನು ನಡೆಸಲಾಗುವುದು ಎಂದು ಹೆÀಚ್ಚುವರಿ ಜಿಲ್ಲಾಧಿಕಾರಿ ಇಲಿಯಾಸ್ ಅಹ್ಮದ್ ಇಸಾಮದಿ ತಿಳಿಸಿದ್ದಾರೆ. ತಾಲೂಕುವಾರು ನಡೆಯುವ ಜನಸ್ಪಂದನಗಳ ಹೋಬಳಿ, ಗ್ರಾಮ ಮತ್ತು ಸಭೆ ಸ್ಥಳಗಳ ವಿವರ ಇಂತಿದೆ.
ಕಲಬುರಗಿ-ಫರತಾಬಾದ ಹೋಬಳಿಯ ಫರತಾಬಾದ ಗ್ರಾಮ ಪಂಚಾಯಿತಿ ಕಾರ್ಯಾಲಯ. ಆಳಂದ-ಮಾದನಹಿಪ್ಪರಗಾ ಹೋಬಳಿಯ ಹಿರೋಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ. ಅಫಜಲಪುರ-ಅತನೂರ ಹೋಬಳಿಯ ಹಸರಗುಂಡಗಿ ಗ್ರಾಮ ಪಂಚಾಯಿತಿ ಕಾರ್ಯಾಲಯ. ಜೇವರ್ಗಿ-ಇಜೇರಿ ಹೋಬಳಿಯ ಕಾರಭೋಸಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಸೇಡಂ-ಆಟಗಿ ಹೋಬಳಿಯ ಬಟಗೇರಾ(ಬಿ) ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿತ್ತಾಪುರ-ಕಾಳಗಿ ಹೋಬಳಿಯ ಟೇಂಗಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿಂಚೋಳಿ-ಕೋಡ್ಲಿ ಹೋಬಳಿಯ ತೆಗಲತಿಪ್ಪಿ ಸರ್ಕಾರಿ ಶಾಲಾ ಆವರಣ.
ಬೇಡಿಕೆ ಮೇಲೆ ಮನೆಗಾಗಿ ಅರ್ಜಿ ಆಹ್ವಾನ
***************************************
ಕಲಬುರಗಿ,ಜೂ.28.(ಕ.ವಾ.)-ರಾಜ್ಯ ಸರ್ಕಾರವು 2017-18ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ನಿವೇಶನ ಹೊಂದಿರುವ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಬೇಡಿಕೆ ಮೇಲೆ ಮನೆ ಒದಗಿಸಲು ಸೂಚಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಅದರಂತೆ ಸದರಿ ಯೋಜನೆಯ ಪ್ರಯೋಜನ ಪಡೆಯಲಿಚ್ಛಿಸುವ ಕಲಬುರಗಿ ಜಿಲ್ಲೆಯ ಫಲಾನುಭವಿಗಳ ಕುಟುಂಬವು ನಿವೇಶನವನ್ನು ಹೊಂದಿರಬೇಕು. ಈಗಾಗಲೇ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಗಳ ಷರತ್ತುಗಳ ಪ್ರಕಾರ ಅರ್ಹತೆ ಹೊಂದಿರಬೇಕು. ಬೇಡಿಕೆ ಮೇಲೆ ಮನೆ ಯೋಜನೆಯಡಿ ಯಾವುದೇ ಗುರಿಯ ಗರಿಷ್ಠ ಮಿತಿ ಇಲ್ಲದಿರುವುದರಿಂದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ/ತಾಂಡಾ/ ಹಾಗೂ ಇತರ ಜನವಸತಿ ಪ್ರದೇಶದಲ್ಲಿ ವಾಸಿಸುತ್ತಿರುವ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳನ್ನು ತಪ್ಪದೆ ಆಯ್ಕೆ ಮಾಡತಕ್ಕದ್ದೆಂದು ತಿಳಿಸಿದ್ದಾರೆ.
ಫಲಾನುಭವಿಗಳು ಸರ್ಕಾರದ ಯಾವುದೇ ಯೋಜನೆಯಡಿ ಮನೆ ಪಡೆದಿರಬಾರದು ಮತ್ತು ಮನೆ ಪಡೆಯದಿರುವುದಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದೃಢೀಕರಣ ನೀಡಬೇಕು. ಅರ್ಹ ಫಲಾನುಭವಿಗಳು ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ರೇಷನ್ ಕಾರ್ಡ್, ನಿವೇಶನ ಸಂಖ್ಯೆ ಮುಂತಾದ ದಾಖಲಾತಿಗಳನ್ನು ಲಗತ್ತಿಸಲು ಕೋರಿದೆ.
ಅಲೆಮಾರಿ ಜನಾಂಗದವರಿಂದ ವಿವಿಧ ಯೋಜನೆಗಾಗಿ ಅರ್ಜಿ ಆಹ್ವಾನ
******************************************************************
ಕಲಬುರಗಿ,ಜೂ.28.(ಕ.ವಾ.)-ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿ ಒದಗಿಸಿದ ಅನುದಾನದಲ್ಲಿ ಕಲಬುರಗಿ ಜಿಲ್ಲೆಯ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳಿಂದ 2017-18 ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ, ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸಾಲ, ಅರಿವು-ಶೈಕ್ಷಣಿಕ ಸಾಲ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನಕೊಳ್ಳಲು ಸಹಾಯಧನ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಮತ್ತು ವೃತ್ತಿ ತರಬೇತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಆರು ಯೋಜನೆಗಳಲ್ಲಿ ಶೇ.50ರಷ್ಟು ಗೊಲ್ಲ ಸಮುದಾಯಕ್ಕೆ ಹಾಗೂ ಶೇ.50ರಷ್ಟು ಇತರೆ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಲಾಗುವುದು. ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲಿಚ್ಛಿಸುವ ಕಲಬುರಗಿ ಜಿಲ್ಲೆಯ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕೋಣೆ ಸಂಖ್ಯೆ: 22, 3ನೇ ಮಹಡಿ, ವಿಕಾಸ ಭವನ, ಮಿನಿ ವಿಧಾನ ಸೌಧ ಕಲಬುರಗಿ ಹಾಗೂ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಗಳಿಂದ ನಿಗದಿಪಡಿಸಿದ ಅರ್ಜಿಗಳನ್ನು ಉಚಿತವಾಗಿ ಜುಲೈ 15ರೊಳಗೆ ಪಡೆಯಬೇಕು. ಇದಲ್ಲದೆ ನಿಗಮದ ವೆಬ್ ಸೈಟ್ http://ift.tt/2rXHMBJ ದಿಂದಲೂ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ /ದಾಖಲಾತಿಗಳೊಂದಿಗೆ ಜುಲೈ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: http://ift.tt/2rXHMBJ ಹಾಗೂ ನಿಗಮದ ಕಚೇರಿ ದೂರವಾಣಿ ಸಂಖ್ಯೆ 08472-278635ನ್ನು ಸಂಪರ್ಕಿಸಬಹುದೆಂದು ಕಲಬುರಗಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೈರಾಗಿ (ಬಾವ), ಬಾಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಶಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದÀಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊಂದಳಿ, ಪುಲ್‍ಮಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ ನಿರ್ಶಿಕಾರಿ, ಪಾಂಗ್ಯುಯಲ್, ಜೋಷಿ (ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡು ವಾಸುದೇವ್, ವಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ (ಬುರ್‍ಬುರ್‍ಚ), ಹಾವಗಾರ್ (ಹಾವಾಡಿಗಾರ್), ಪಿಚಗುಂಟಲ, ಮಸಣಿಯ ಯೋಗಿ, (ಬೆಸ್ತರ್)ಬುಂಡಬೆಸ್ತ, ಕಟಬು, ದರ್ವೆಶ್, ಕಾಶಿ ಕಪಾಡಿ, ದೊಂಬಿದಾಸ ಮತ್ತು ಬೈಲ್‍ಪತರ್ ಸಮುದಾಯಗಳು ಈ ಸೌಲಭ್ಯಗಳನ್ನು ಪಡೆಯಲು ಅರ್ಹವಾಗಿವೆ.
ಮಿಲಿಟರಿ ಶಾಲೆಯ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
********************************************************************
ಕಲಬುರಗಿ,ಜೂ.28.(ಕ.ವಾ.)-ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಡೆಹಾರಡೂನಿನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕದ ಬಾಲಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಜನವರಿ 2018ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹಾರಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು 2017ರ ಡಿಸೆಂಬರ್ 01 ಮತ್ತು 02 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು 01-07-2018 ರಂತೆ 11ಳಿ ರಿಂದ 13 ವರ್ಷದೊಳಗಿರಬೇಕು. (ಅಂದರೆ ದಿನಾಂಕ 02-07-2005 ರಿಂದ 01-01-2007ರೊಳಗೆ ಜನಿಸಿರಬೇಕು). ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸನ್ನದ್ಧಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ 42,400 ರೂ.ಆಗಿರುತ್ತದೆ.
ವಿವರಣೆ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಮೇರೆಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು 560025 ಇವರಿಂದ ದಿ ಕಮಾಂಡೆಂಟ್, ಆರ್‍ಐಎಂಸಿ ಡೆಹ್ರಾಡೂನ್ (ಪೇಯಬಲ್ ಅಟ್ ಎಸ್‍ಬಿಐ ಟೆಲ್ ಭವನ್, ಡೆಹ್ರಾಡೂನ್ ಬಿ. ಬ್ಯಾಂಕ್ ಕೋಡ್ ಸಂಖ್ಯೆ 01576), ಇವರ ಹೆಸರಿನಲ್ಲಿ ಪಡೆದ ಸಾಮಾನ್ಯ ಅಭ್ಯರ್ಥಿಗಳು 600 ರೂ. ಮತ್ತು ಎಸ್.ಸಿ./ಎಸ್.ಟಿ. ಅಭ್ಯರ್ಥಿಗಳು 555. ರೂ. ಗಳ ಡಿಮಾಂಡ್ ಡ್ರಾಫ್ಟ್ ಮೂಲಕ ಖುದ್ದಾಗಿ ಪಡೆಯಬಹುದಾಗಿದೆ. ರಿಜಿಸ್ಟರ್ಡ್ ಪಾರ್ಸಲ್ ಮೂಲಕ ಅರ್ಜಿ ನಮೂನೆಗಳನ್ನು ಪಡೆಯಲಿಚ್ಚಿಸುವ ಅಭ್ಯಾರ್ಥಿಗಳು ಮೇಲೆ ತಿಳಿಸಿದ ಬ್ಯಾಂಕ್ ಡ್ರಾಫ್ಟಿನೊಂದಿಗೆ 11ಘಿ9 ಅಳತೆಯ ಸೈಜಿನ ಸ್ವವಿಳಾಸದ ಲಕೋಟೆಯ ಮೇಲೆ 10 ರೂ. ಮೌಲ್ಯದ ಅಂಚೆ ಚೀಟಿ ಲಗತ್ತಿಸಿ ಕಳುಹಿಸಿ ಪಡೆಯಬಹುದಾಗಿದೆ.
ಲಕೋಟೆಯ ಮೇಲೆ ಅಭ್ಯರ್ಥಿಯ ಪೂರ್ಣ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ 2017ರ ಸೆಪ್ಟೆಂಬರ್ 30ರ ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459ನ್ನು ಸಂಪರ್ಕಿಸಲು ಕೋರಿದೆ.
ಜೂನ್ 29ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**************************************************
ಕಲಬುರಗಿ,ಜೂ.28.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ಜೂನ್ 29ರಂದು 11ಕೆ.ವಿ. ಮಹಾವೀರ ಫೀಡರ್ ವ್ಯಾಪ್ತಿಯಲ್ಲಿ ಮೋಹನ ಲಾಡ್ಜ್‍ದಿಂದ ಅಂಡರ್ ಬ್ರಿಜ್‍ವರೆಗಿನ ರಸ್ತೆ ಅಗಲೀಕರಣ ಕಾರ್ಯ ನಿಮಿತ್ತ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ಕೈಗೊಳ್ಳುತ್ತಿರುವ ಪ್ರಯುಕ್ತ ಜೂನ್ 29ರಂದು ಬೆಳಗಿನ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸದರಿ ಫೀಡರಿನ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ. 11ಕೆ.ವಿ. ಮಹಾವೀರ ನಗರ ಫೀಡರ: ಮಹಾವೀರ ನಗರ, ಶಾಸ್ತ್ರಿನಗರ, ಹನುಮಾನ ನಗರ, ಪಂಚಶೀಲ ನಗರ, ವೆಂಕಟೇಶ ನಗರ. ಕೆ.ಇ.ಬಿ. ಸ್ಟೋರ್, ಕೆ.ಇ.ಬಿ. ಕ್ವಾರ್ಟರ್ಸ್, ಪಿ.ಡಬ್ಲ್ಯೂ.ಡಿ. ಕಚೇರಿ, ಅಮಲ್‍ವಾಡಿ ಸ್ಟೇಶನ್ ಬಜಾರ್ ಅಪ್ಪÀರ ಲೆನ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
ಜೂನ್ 29ಮತ್ತು 30ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
**********************************************************
ಕಲಬುರಗಿ,ಜೂ.28.(ಕ.ವಾ.)-ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಬೆಣ್ಣೆತೋರಾ ನದಿಯ 600 ಎಂ.ಎಂ. ವ್ಯಾಸದ ಪಿ.ಎಸ್.ಸಿ. ಕೊಳವೆ ಮಾರ್ಗವು ಬೇಲೂರ ಕ್ರಾಸಿನ ಪೆಟ್ರೋಲ್ ಪಂಪ್ ಹತ್ತಿರ ಮತ್ತು ಸಫಾರಿ ಡಾಬಾ ಎದುರುಗಡೆ ಸೋರುತ್ತಿದೆ. ಈ ಕೊಳವೆ ಮಾರ್ಗದ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೆಳಕಂಡ ಮೇಲ್ಮಟ್ಟದ/ಕೆಳಮಟ್ಟದ ಜಲಸಂಗ್ರಾಹಗಾರದಿಂದ ಕಲಬುರಗಿ ನಗರಕ್ಕೆ ಜೂನ್ 29 ಹಾಗೂ 30ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಹಳೆ ಜಲಶುದ್ಧೀಕರಣ ಕೇಂದ್ರ, ಹೆಚ್.ಎಸ್.ಆರ್. ಮೇಲ್ಮಟ್ಟದ/ ಕೆಳಮಟ್ಟದ, ಮೋಮಿನಪುರ, ಸುಪರ್ ಮಾರ್ಕೆಟ್, ಡಿಸಿ ಟ್ಯಾಂಕ್, ಪೊಲೀಸ್ ಕಾಲೋನಿ ಹಾಗೂ ಐವಾನ್-ಇ-ಶಾಹಿ ಟ್ಯಾಂಕಿನ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು NEWS AND PHOTO DATE: 28--06--2017
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 28--06--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 28--06--2017 ಲಿಂಕ್ ವಿಳಾಸ https://dekalungi.blogspot.com/2017/06/news-and-photo-date-28-06-2017.html
0 Response to "NEWS AND PHOTO DATE: 28--06--2017"
ಕಾಮೆಂಟ್ ಪೋಸ್ಟ್ ಮಾಡಿ