NEWS AND PHOTOS 14--16--2017

NEWS AND PHOTOS 14--16--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTOS 14--16--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTOS 14--16--2017
ಲಿಂಕ್ : NEWS AND PHOTOS 14--16--2017

ಓದಿ


NEWS AND PHOTOS 14--16--2017

ಜೂನ್ 16ರಂದು ಗ್ರಾಹಕರ ಸಂಪರ್ಕ ಸಭೆ
*****************************************
ಕಲಬುರಗಿ,ಜೂ.14.(ಕ.ವಾ.)-ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ (ಕೆ.ಇ.ಆರ್.ಸಿ.) ನಿರ್ದೇಶನ ಮೇರೆಗೆ ಹಾಗೂ ಗ್ರಾಹಕರೊಡನೆ ಉತ್ತಮ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಿಂದ ಕಲಬುರಗಿ ನಗರ ವಿಭಾಗದ ವ್ಯಾಪ್ತಿಗೆ ಬರುವ ಉಪವಿಭಾಗಗಳ ಗ್ರಾಹಕರ ಸಂಪರ್ಕ ಸಭೆಯು ಕಲಬುರಗಿ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರವರ ಅಧ್ಯಕ್ಷತೆಯಲ್ಲಿ ಜೂನ್ 16ರಂದು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ನಿಯಮಿತದ ಕೆ.ಇ.ಬಿ.ಇ.ಎ. ಸಂಘದ ಕಟ್ಟಡದಲ್ಲಿ ಉಪವಿಭಾಗವಾರು ಆಯೋಜಿಸಲಾಗಿದೆ. ಗ್ರಾಹಕರ ಸಂಪರ್ಕ ಸಭೆಗೆ ಹಾಜರಾಗಿ ತಮ್ಮ ಯಾವುದೇ ತರಹದ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಕೊಂದುಕೊರತೆಗಳನ್ನು ಸಲ್ಲಿಸಬಹುದಾಗಿದೆ ಎಂದು ಜೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ಗ್ರಾಹಕರ ಸಂಪರ್ಕ ಸಭೆ ನಡೆಯುವ ಉಪವಿಭಾಗದ ಹೆಸರು ಹಾಗೂ ಸಮಯದ ವಿವರ ಇಂತಿದೆ. ಕಲಬುರಗಿ ನಗರ ಉಪವಿಭಾಗ-1 ಮತ್ತು ನಗರ ಉಪವಿಭಾಗ-3ಕ್ಕೆ ಸಂಬಂಧಿಸಿದಂತೆ ಗ್ರಾಹಕರ ಸಂಪರ್ಕ ಸಭೆಯು ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ. ಕಲಬುರಗಿ ನಗರ ಉಪವಿಭಾಗ-2 ಮತ್ತು ನಗರ ಉಪವಿಭಾಗ-4ಕ್ಕೆ ಸಂಬಂಧಿಸಿದಂತೆ ಗ್ರಾಹಕರ ಸಂಪರ್ಕ ಸಭೆ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆಯವರೆಗೆ.

ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ
***********************************************************
ಕಲಬುರಗಿ,ಜೂ.14.(ಕ.ವಾ.)-ಮುಂಗಾರು ಹಂಗಾಮಿಗಾಗಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2017-18 ನೇ ಸಾಲಿಗೆ ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತೋಟಗಾರಿಕೆ ಬೆಳೆಗಳಾದ ನಿಂಬೆ, ದಾಳಿಂಬೆ, ಪಪ್ಪಾಯ ಮತ್ತು ಹಸಿರು ಮೆಣಸಿನಕಾಯಿ (ನೀರಾವರಿ) ಬೆಳೆಗಳನ್ನು ಈ ಯೋಜನೆಯ ವಿಮೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೆಶಕ ಮಹ್ಮದ್ ಅಲಿ ತಿಳಿಸಿದ್ದಾರೆ.
ಹಸಿರು ಮೆಣಸಿನಕಾಯಿ (ನೀರಾವರಿ) ಬೆಳೆಗೆ 3491ರೂ, ನಿಂಬೆ ಬೆಳೆಗೆ 2809 ರೂ., ಪಪ್ಪಾಯ ಬೆಳೆಗೆ 6682ರೂ., ಹಾಗೂ ದಾಳಿಂಬೆ ಬೆಳೆಗೆ 6324 ರೂ.ಗಳನ್ನು ಪ್ರತಿ ಹೆಕ್ಟೇರ್‍ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ.
ವಿಮಾ ಕಂತು ಪಾವತಿಸಲು (ಸಾಲ ಪಡೆದ ಮತ್ತು ಸಾಲ ಪಡೆಯದ ರೈತರಿಗೆ) 2017ರ ಜೂನ್ 30 ಕೊನೆಯ ದಿನವಾಗಿದೆ. ಜಿಲ್ಲೆಯ ಎಲ್ಲ ರೈತರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ಕಲಬುರಗಿ (ಜಿ.ಪಂ.)ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ/ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.
ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದತೆ ಇತ್ಯಾದಿ ಮಾಹಿತಿಗಳನ್ನು ಸ್ಥಳಿಯವಾಗಿ ಲಭ್ಯವಿರುವ ಟೇಲಿಮೇಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಗುಂಡಗುರ್ತಿ: ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
************************************************************
ಕಲಬುರಗಿ,ಜೂ.14.(ಕ.ವಾ.)-ಚಿತ್ತಾಪುರ ತಾಲೂಕಿನ ಗುಂಡಗುರ್ತಿ (ಎಸ್.ಸಿ.) ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2017-18ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರೌಢಶಾಲಾ ಕನ್ನಡ ಭಾಷಾ-01, ಇಂಗ್ಲೀಷ್-01, ಗಣಿತ-01 ಹಾಗೂ ಸಮಾಜ ವಿಜ್ಞಾನ-01 ವಿಷಯಗಳ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಬಿ.ಎ., ಬಿ.ಎಡ್. ಮತ್ತು ಬಿ.ಎಸ್‍ಸಿ., ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಪ್ರತಿ ಮಾಹೆ 6000 ರೂ. ಗೌರವಧನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 19ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗುಂಡಗುರ್ತಿ (ಎಸ್.ಸಿ.) ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಹಾಗೂ ಪ್ರಾಚಾರ್ಯ ಸುರೇಶ ಅಲ್ದಾರ್ಥಿ ಅವರ ಮೊಬೈಲ್ ಸಂಖ್ಯೆ 9741182727ನ್ನು ಸಂಪರ್ಕಿಸಲು ಕೋರಿದೆ.
ಚಿತ್ತಾಪುರ ಐ.ಟಿ.ಐ. ಪ್ರವೇಶಕ್ಕೆ ಅವಧಿ ವಿಸ್ತರಣೆ
ಕಲಬುರಗಿ,ಜೂ.14.(ಕ.ವಾ.)-ಕಲಬುರಗಿ ಜಿಲ್ಲೆಯ ಚಿತ್ತಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ವಿ.ಟಿ. ಯೋಜನೆಯಡಿ 2017-18ನೇ ಸಾಲಿನ ತರಬೇತಿಗೆ ಲಭ್ಯವಿರುವ ಫಿಟ್ಟರ್-21 ಮತ್ತು ಎಲೆಕ್ಟ್ರಿಷಿಯನ್-21 ವೃತ್ತಿಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಜೂನ್ 17ರವರೆಗೆ ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಭೀಮಾಶಂಕರ ಹೊರಕೇರಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಇಲಾಖೆಯ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ತಮ್ಮ ಹತ್ತಿರದ ಯಾವುದೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಥವಾ ಇಂಟರ್‍ನೆಟ್ ಕೇಫೆಯಲ್ಲಿ ಆನ್‍ಲೈನ್ ಮೂಲಕ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಸಂಸ್ಥೆಯ ಪ್ರಾಚಾರ್ಯರು ಅಥವಾ ಮೊಬೈಲ್ ಸಂ. 7483060265ನ್ನು ಸಂಪರ್ಕಿಸಲು ಕೋರಲಾಗಿದೆ. ಈ ಹಿಂದೆ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12ರವರೆಗೆ ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
******************************
ಕಲಬುರಗಿ,ಜೂ.14.(ಕ.ವಾ.)-ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಫಲಾನುಭವಿಗಳು ಅರ್ಜಿ ಸಲ್ಲಿಸಲು ಹಾಗೂ ಅರಿವು-ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2017ರ ಜೂನ್ 24ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 9ರವರೆಗೆ ನಿಗದಿಪಡಿಸಲಾಗಿತ್ತೆಂದು ಡಿ. ದೇವರಾ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
**********************************************************************************
ಕಲಬುರಗಿ,ಜೂ.14.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿ ನಿಲಯಗಳ 2017-18ನೇ ಸಾಲಿನ ಹೊಸದಾಗಿ ಪ್ರವೇಶಕ್ಕಾಗಿ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನವು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಇತರೆ ಹಿಂದುಳಿದ ವರ್ಗಗಳ ಜನಾಂಗಕ್ಕೆ ಸೇರಿದವರಿಗೆ 1 ಲಕ್ಷ ರೂ. ಹಾಗೂ ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರಿಗೆ 2.50 ಲಕ್ಷ ರೂ. ನಿಗದಿಪಡಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ.
ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಿದ್ದಲ್ಲಿ bಛಿತಿhosಣeಟಚಿಜmissioಟಿ@gmಚಿiಟ.ಛಿom ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ದೂರವಾಣಿ ಸಂಖ್ಯೆ 080-65970006ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

ಕಲಬುರಗಿ: ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ
********************************************************************************
ಅರ್ಜಿ ಆಹ್ವಾನ
**************
ಕಲಬುರಗಿ,ಜೂ.14.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಲಬುರಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ 2017-18ನೇ ಸಾಲಿನ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಇಲಾಖೆಯ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟಿನಲ್ಲಿ ಆನ್‍ಲೈನ್ ಮೂಲಕ ಆನ್‍ಲೈನ್ ಮೂಲಕ ಜುಲೈ 12ರೊಳಗಾಗಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನವು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಇತರೆ ಹಿಂದುಳಿದ ವರ್ಗಗಳ ಜನಾಂಗಕ್ಕೆ ಸೇರಿದವರಿಗೆ 1 ಲಕ್ಷ ರೂ. ಹಾಗೂ ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರಿಗೆ 2.50 ಲಕ್ಷ ರೂ. ನಿಗದಿಪಡಿಸಲಾಗಿದೆ.
ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪಲೋಡ್ ಮಾಡಲಾದ ದಾಖಲಾತಿಗಳ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಜುಲೈ 15ರೊಳಗಾಗಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕೆಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಚಿತ್ತಾಪುರ:ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ
******************************************************************************
ಅರ್ಜಿ ಆಹ್ವಾನ
***************
ಕಲಬುರಗಿ,ಜೂ.14.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಚಿತ್ತಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಳಕಂಡ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ 2017-18ನೇ ಸಾಲಿನ ಪ್ರವೇಶಕ್ಕಾಗಿ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನವು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಇತರೆ ಹಿಂದುಳಿದ ವರ್ಗಗಳ ಜನಾಂಗಕ್ಕೆ ಸೇರಿದವರಿಗೆ 1 ಲಕ್ಷ ರೂ. ಹಾಗೂ ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರಿಗೆ 2.50 ಲಕ್ಷ ರೂ. ನಿಗದಿಪಡಿಸಲಾಗಿದೆ. ಅರ್ಜಿಗಳನ್ನು ಎಲ್ಲ ದಾಖಲಾತಿಗಳೊಂದಿಗೆ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳನ್ನು ಅಥವಾ ಸಂಬಂಧಪಟ್ಟ ವಸತಿ ನಿಲಯಗಳ ನಿಲಯ ಪಾಲಕರಿಗೆ ಜುಲೈ 12ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಞಚಿಡಿeಠಿಚಿss.ಛಿgg.gov.iಟಿ ವೆಬ್‍ಸೈಟ್‍ನ್ನು ಅಥವಾ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸûರಣಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಿದೆ.
ವಸತಿ ನಿಲಯಗಳ ವಿವರ ಇಂತಿದೆ. ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ ಚಿತ್ತಾಪುರ, ಕಾಳಗಿ, ಹೆಬ್ಬಾಳ. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಚಿತ್ತಾಪುರ, ಚಿತ್ತಾಪುರ ಟೌನ್, ವಾಡಿ(ಜಂ).

ಜೆ.ಟಿ.ಟಿ.ಸಿ.ಯಲ್ಲಿ ವಿವಿಧ ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನ
*************************************************************
ಕಲಬುರಗಿ,ಜೂ.14.(ಕ.ವಾ.)-ಕಲಬುರಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ.)ದಲ್ಲಿ 2017-18ನೇ ಸಾಲಿನ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಕಂಪ್ಯೂಟರ್ ಇಂಟಿಗ್ರೇಟೆಡ್ ಮ್ಯಾನುಪ್ಯಾಕ್ಚರಿಂಗ್ ತರಬೇತಿಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಐ.ಟಿ.ಐ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಶಸ್ವಿಯಾಗಿ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಶೇ. 100 ರಷ್ಟು ಉದ್ಯೋಗವನ್ನು ದೊರಕಿಸಿಲಾಗುವುದು. ಅಭ್ಯರ್ಥಿಗಳು ಖುದ್ದಾಗಿ ಬಂದು ಜೂನ್ 21ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ನಗರದ ಸಂಗತ್ರಾಸವಾಡಿಯ ಜಿ.ಟಿ.ಟಿ.ಸಿ. ತರಬೇತಿ ಕೇಂದ್ರವನ್ನು ಹಾಗೂ ದೂರವಾಣಿ ಸಂಖ್ಯೆ 08472-238084, ಮೊಬೈಲ್ ಸಂಖ್ಯೆ 9449419143/9141630308/8453327166ಗಳನ್ನು ಸಂಪರ್ಕಿಸಬೇಕೆಂದು ಪ್ರಾಂಶುಪಾಲ ಮೋಹನ ರಾಠೋಡ ತಿಳಿಸಿದ್ದಾರೆ.

ವಾಡಿ: ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
****************************************************
ಕಲಬುರಗಿ,ಜೂ.14.(ಕ.ವಾ.)-ಚಿತ್ತಾಪುರ ತಾಲೂಕಿನ ವಾಡಿ (ಎಸ್.ಸಿ.) ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 2017-18ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕನ್ನಡ ಮತ್ತು ಸಮಾಜ ವಿಜ್ಞಾನ-01 ಹುದ್ದೆ, ಗಣಿತ ಮತ್ತು ವಿಜ್ಞಾನ-01 ಹುದ್ದೆ, ಹಿಂದಿ-01 ಹುದ್ದೆ, ಇಂಗ್ಲೀಷ್-01 ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಬಿ.ಎ., ಬಿ.ಎಡ್. ಮತ್ತು ಬಿ.ಎಸ್‍ಸಿ., ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಪ್ರತಿ ಮಾಹೆ 6000 ರೂ. ಗೌರವಧನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 20ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಾಡಿ (ಎಸ್.ಸಿ.) ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯನ್ನು ಹಾಗೂ ಪ್ರಾಚಾರ್ಯ ರಜನಿ ಜಗದೀಶ ಪಾಟೀಲ ಮೊಬೈಲ್ ಸಂಖ್ಯೆ 9538605666, 9538905666ಗಳನ್ನು ಸಂಪರ್ಕಿಸಲು ಕೋರಿದೆ.
ಜೂನ್ 15ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಜೂ.14.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಸಿದ್ದೇಶ್ವರ ನಗರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ಕೈಗೊಳ್ಳುವ ಪ್ರಯುಕ್ತ ಜೂನ್ 15ರಂದು ಬೆಳಗಿನ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ. ಸಿದ್ದೇಶ್ವರ ನಗರ: ಸಂತ್ರಾಸವಾಡಿ ಜಿ.ಡಿ.ಎ., ಎಂ.ಜಿ ರೋಡ್, ದರ್ಶನಾಪುರ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಫಿಲ್ಡ್ ಸೂಪರ್‍ವೈಸರ್ ಹುದ್ದೆಗಾಗಿ ಅರ್ಜಿ ಆಹ್ವಾನ
***********************************************
ಕಲಬುರಗಿ,ಜೂ.14.(ಕ.ವಾ.)-ಬೆಂಗಳೂರಿನ ಪವರ್ ಗ್ರೀಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‍ರವರು ಫೀಲ್ಡ್ ಸೂಪರ್‍ವೈಸರ್ ಹುದ್ದೆ (ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಮತ್ತು ಸಿವಿಲ್) ಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲಾ.್ಲ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಕಡ್ಡಾಯವಾಗಿ ಒಂದು ವರ್ಷದ ಅನುಭವ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು 2017ರ ಜೂನ್ 24ರೊಳಗಾಗಿ ತಿತಿತಿ.ಠಿoತಿeಡಿgಡಿiಜiಟಿಜiಚಿ.ಛಿom ವೆಬ್‍ಸೈಟಿನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ವಯೋಮಿತಿ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ವೆಬ್‍ಸೈಟ್‍ನ್ನು ಅಥವಾ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಕೋಟ್ಪಾ ಕಾಯ್ದೆ ಕಾರ್ಯಾಚರಣೆ:3100 ರೂ.ದಂಡ
**************************************************
ಕಲಬುರಗಿ,ಜೂ.14.(ಕ.ವಾ.)-ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಜಿಗಿಯುವ ತಂಬಾಕು ಪೊಟ್ಟಣಗಳನ್ನು ನಿಷೇಧಿಸಿರುವ ಪ್ರಯುಕ್ತ ಹಾಗೂ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ತಂಬಾಕು ನಿಷೇಧ ಕೋಶ ಹಾಗೂ ಚಿಂಚೋಳಿ ತಾಲೂಕು ತನಿಖಾ ದಳದಿಂದ ಮಂಗಳವಾರ ಚಿಂಚೋಳಿ ನಗರದಲ್ಲಿನ ಪ್ರಮುಖ ಪಾನ್ ಶಾಪ್, ಹೋಟೆಲ್ ಹಾಗೂ ಸಾರ್ವಜನಿಕ ಪ್ರದೇಶಗಳಗೆ ಭೇಟಿ ನೀಡಿ ಧೂಮಪಾನ ಮಾಡುತ್ತಿರುವ ಹಾಗೂ ಕೋಟ್ಪಾ ಕಾಯ್ದೆ-2003ರ ಅಡಿಯಲ್ಲಿ ನಿಯಮ ಬಾಹಿರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಹ ಅಂಗಡಿಗಳಿಗೆ ದಂಡ ವಿಧಿಸಲಾಯಿತು. ಕೋಟ್ಪಾ ಕಾಯ್ದೆ-2003 ರ ಸೆಕ್ಷನ್-04ರ ಅಡಿಯಲ್ಲಿ 17 ಹಾಗೂ 6ಬಿ ಸಂಬಂಧಿಸಿದಂತೆ ಒಟ್ಟು 19 ಪ್ರಕರಣಗಳು ದಾಖಲಿಸಿ, 3100 ರೂ.ಗಳ ದಂಡ ವಿಧಿಸಲಾಯಿತು.
ಸದರಿ ತಂಡವು ಸಾರ್ವಜನಿಕರಲ್ಲಿ ತಿಳುವಳಿಕೆ ಮತ್ತು ಜನಸಾಮಾನ್ಯರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ ಕಾಯ್ದೆಯ ನಿಯಮ ಪಾಲನೆ ಮಾಡುವಂತೆ ಮತ್ತು ಕೋಟ್ಪಾ ಕಾಯ್ದೆ-2003ರ ಸೆಕ್ಷನ್-04ರ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದಲ್ಲದೆ 18 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸೂಚಿಸಿದರು. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆಯ ನಾಮಫಲಕಗಳನ್ನು ಎಲ್ಲ ಪಾನ್‍ಶಾಪ್, ಹೋಟೇಲ್, ಬಾರ್ ಮತ್ತು ರೇಸ್ಟೋರೆಂಟ್‍ಗಳ ಮಾಲೀಕರು/ಮಾರಾಟಗಾರರು ಕಡ್ಡಾಯವಾಗಿ ನಾಮಫಲಕವನ್ನು ಪ್ರದರ್ಶಿಸಬೇಕೆಂದು ಸೂಚಿಸಲಾಯಿತು.




ಜಿಲ್ಲಾ ಮಟ್ಟದ ತನಿಖಾ ದಳದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ ಸುಜಾತಾ ಪಾಟೀಲ, ರವಿ, ಹೆಲ್ತ್ ಇನ್ಸ್‍ಪೆಕ್ಟರ್ ಮಲ್ಲಿಕಾರ್ಜುನ, ಚಿಂಚೋಳಿ ಹಿರಿಯ ಆರೋಗ್ಯ ಸಹಾಯಕ ನೀಲಕಂಠ, ಅನೀಲ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು NEWS AND PHOTOS 14--16--2017

ಎಲ್ಲಾ ಲೇಖನಗಳು ಆಗಿದೆ NEWS AND PHOTOS 14--16--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTOS 14--16--2017 ಲಿಂಕ್ ವಿಳಾಸ https://dekalungi.blogspot.com/2017/06/news-and-photos-14-16-2017.html

Subscribe to receive free email updates:

0 Response to "NEWS AND PHOTOS 14--16--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ