ಶೀರ್ಷಿಕೆ : News and photos date: 24-6-2017
ಲಿಂಕ್ : News and photos date: 24-6-2017
News and photos date: 24-6-2017
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮ ಪ್ರಯುಕ್ತ
*************************************************
ಗರ್ಭಿಣಿಯರ ಹಾಗೂ ಶಿಶು ಮರಣ ಪ್ರಮಾಣ ಇಳಿಮುಖ
*****************************************************
ಕಲಬುರಗಿ,ಜೂ.24.(ಕ.ವಾ.)-ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳು ನೇರವಾಗಿ ಜನರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ತಲುಪುತ್ತಿರುವ ಪ್ರಯುಕ್ತ ಕಲಬುರಗಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಹಾಗೂ ಶಿಶು ಮರಣ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಹೇಳಿದರು.
ಅವರು ಶನಿವಾರ ಕಲಬುರಗಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ “ಗರ್ಭಿಣಿ ಸ್ತ್ರೀಯರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮದ ನೂತನ ವಿಧಾನಗಳ” ಕುರಿತು ಏರ್ಪಡಿಸಿದ್ದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಗರ್ಭಿಣಿ ಮಹಿಳೆಯರಿಗೆ ಆರೋಗ್ಯ, ಸ್ವಚ್ಛಗೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಮಾನಸಿಕ ಹಾಗೂ ದೈಹಿಕ ಸ್ಥೈರ್ಯ ಹೆಚ್ಚಿಸುವ ಕಾರ್ಯ ಮಾಡಬೇಕು. ಜಿಲ್ಲೆಯಲ್ಲಿ ಕಳೆದ ತಿಂಗಳು ಪ್ರಾರಂಭವಾದ “ಕೂಸು” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಅದೇ ರೀತಿ ಜುಲೈ ಮಾಹೆಯಲ್ಲಿ ಪ್ರಾರಂಭವಾಗಲಿರುವ ಪ್ರೌಢಶಾಲಾ ಬಾಲಕಿಯರ ಮನೆಗೊಂದÀು ಕಡ್ಡಾಯ ಶೌಚಾಲಯ ಕಾರ್ಯಕ್ರಮಕ್ಕೂ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಬೆಂಬಲ ನೀಡಲಾಗುವುದು ಎಂದು ಹೇಳಿದರು.
ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆವಹಿಸಿ ಮಾತನಾಡಿ, ಗರ್ಭಿಣಿ ಮಹಿಳೆಯರ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹೆಚ್ಚಿನ ಗುರುತರ ಜವಾಬ್ದಾರಿಯಿದೆ. ಗರ್ಭಿಣಿ ಮಹಿಳೆಯರಿಗೆ ಮಾಸಿಕ 6000 ರೂ. ಭತ್ಯೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಎಂದರು.
ಡಿವೈನ್ ಸಂಸ್ಕಾರ್ ರಿಸರ್ಚ್ ಫೌಂಡೇಶನ್ನಿನ ಅಧ್ಯಕ್ಷ ಡಾ. ಶುಭದಾ ನೀಲ್ ಮಾತನಾಡಿ, ಜನಿಸುವ ಮಗು ಜೀವನ ಪರ್ಯಂತ ಸುಖಿಯಾಗಿರಬೇಕಾದರೆ ಗರ್ಭಿಣಿ ಮಹಿಳೆಯರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಬೇಕು ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮಹಾನಗರ ಪಾಲಿಕೆ ಮಹಾಪೌರ ಶರಣು ಮೋದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ರವೀಂದ್ರ ನಾಗಲೀಕರ್, ಕಲಬುರಗಿ ಬ್ರಹ್ಮಕುಮಾರಿ ನಿರ್ದೇಶಕ ರಾಜಯೋಗಿನಿ ಬಿ.ಕೆ. ರತ್ನಾ ಬಜೇನಜೀ ಬಹೇನಜೀ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವ್ಯಕ್ತಿತ್ವ ವಿಕಾಸನ ತರಬೇತಿದಾರ ಇ.ವ್ಹಿ. ಗಿರೀಶ್ ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸ್ವಾಗತಿಸಿದರು. ಚಾಮರಾಜ್ ದೊಡ್ಮನಿ ಕಾರ್ಯಕ್ರಮ ನಿರೂಪಿಸಿದರು.
ಶೌಚಾಲಯ ನಿರ್ಮಾಣದಿಂದ ಆರೋಗ್ಯ
**************************************
ಕಲಬುರಗಿ,ಜೂ.24.(ಕ.ವಾ.)-ಬಯಲು ಬಹಿರ್ದೆಸೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಎಲ್ಲರೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡು ಬಳಸುವ ಮೂಲಕ ಆರೋಗ್ಯವಂತರಾಗಬೇಕೆಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅಫಜಲಪುರ ಶಾಸಕ ಮಾಲೀಕಯ್ಯ ವ್ಹಿ. ಗುತ್ತೇದಾರ್ ತಿಳಿಸಿದರು.
ಅವರು ಶನಿವಾರ ಕಲಬುರಗಿ ತಾಲೂಕಿನ ಫರಹತಾಬಾದ್ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕಲಬುರಗಿ ಹಾಗೂ ಗ್ರಾಮ ಪಂಚಾಯಿತಿ ಫರಹತಾಬಾದ ಹಾಗೂ ಹೊನ್ನಕಿರಣಗಿ ಇವುಗಳ ಸಂಯುಕ್ತಾಶ್ರಯದಲ್ಲಿ 2017-18ನೇ ಸಾಲಿನ ಕೂಸು ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮಸ್ಥರೆಲ್ಲರೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವಲ್ಲಿ ಮುಂದೆ ಬಂದು ಸ್ವಚ್ಛ ಭಾರತ ಅಭಿಯಾನಕ್ಕೆ ಸಹಕರಿಸಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳಿಗೆ ಎಲ್ಲರೂ ಸಹಕರಿಸಿ ಪ್ರಯೋಜನ ಪಡೆಯಬೇಕು. ತಮ್ಮ ಮನೆ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಲು ಸ್ವತ: ಗಾಂಧೀಜಿಯವರೇ ತಮ್ಮ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿದ್ದರು. ಇದನ್ನು ಮಾದರಿಯಾಗಿಟ್ಟುಕೊಂಡು ಎಲ್ಲರೂ ತಮ್ಮ ಮನೆ, ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.
ದುಶ್ಚಟಗಳಿಂದ ಆರೋಗ್ಯ ಮತ್ತು ಪರಿಸರದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತದೆ. ಎಲ್ಲರೂ ದುಶ್ಚಟಗಳಿಂದ ಮುಕ್ತರಾಗಿ ಪರಿಸರ ಹಾನಿಯಾಗದಂತೆ ನೋಡಿಕೊಳ್ಳಬೇಕು. ಮುಂದಿನ ಪೀಳಿಗೆ ಆರೋಗ್ಯವಾಗಿರಲು ಪರಿಸರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಸರ್ಕಾರವು ಗರ್ಭಿಣಿಯರಿಗೆ ಮತ್ತು ಹುಟ್ಟುವ ಮಗುವಿನ ಆರೈಕೆಗೆ ಹಲವಾರು ಯೋಜನೆ ಹಮ್ಮಿಕೊಂಡಿದೆ. ಇದರ ಪ್ರಯೋಜನ ಪಡೆಯಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳು ಜಿ.ಪಿ.ಎಸ್. ಹಾಗೂ ಪಿ.ಡಿ.ಓ. ಗಳ ತೊಂದರೆಯಿಂದ ಹೆಚ್ಚಿನ ಪ್ರಗತಿ ಆಗುತ್ತಿಲ್ಲ. ಕಾರಣ ಸರ್ಕಾರ ಇಂದಿರಾ ಮನೆ ಎಂಬ ಆ್ಯಪ್ ಅಭಿವೃದ್ಧಿ ಪಡಿಸಿದ್ದು, ಈ ಆ್ಯಪನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡು, ಈ ಆ್ಯಪ್ ಮೂಲಕ ಮನೆಯೊಂದಿಗೆ ಫಲಾನುಭವಿಯ ಭಾವಚಿತ್ರ ಪಡೆದು ಕಳುಹಿಸಿದರೆ ಮನೆಯ ಅನುದಾನ ಮಂಜೂರು ಮಾಡಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಒಂದು ವಾರದಲ್ಲಿ 40 ಶೌಚಾಲಯಗಳನ್ನು ನಿರ್ಮಿಸಲು ಗುರಿ ನೀಡಲಾಗಿತ್ತು. ಅದರಂತೆ ಫರಹತಾಬಾದ ಮತ್ತು ಕಿರಣಗಿ ಗ್ರಾಮ ಪಂಚಾಯಿತಿಯ ತಲಾ 40 ಗರ್ಭಿಣಿಯರು ಶೌಚಾಲಯಗಳನ್ನು ನಿರ್ಮಿಸಿದ್ದಾರೆ. ಜಿಲ್ಲೆಯ ಎಲ್ಲ ಗರ್ಭಿಣಿಯರಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿದ ನಂತರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳನ್ನು ಗುರಿಯಾಗಿರಿಸಿಕೊಂಡು ಶೌಚಾಲಯ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ, ಉಪಾಧ್ಯಕ್ಷೆ ಶೋಭಾ ಎಸ್. ಸಿರಸಗಿ, ಕಲಬುರಗಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಕೆ. ಸಜ್ಜನ್, ಫರಹತಾಬಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧಾನಮ್ಮ ಎಸ್. ಭಜಂತ್ರಿ, ಹೊನ್ನಕಿರಣಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಆರ್. ಕಾಬಾ, ಹೇರೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಎಸ್. ದೊಡ್ಮನಿ, ಫಿರೋಜಾಬಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ವಿದ್ಯಾಧರ ಮಾಮನಿ, ಬಸವಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಬಿ. ಹಬ್ಬಣ್ಣಾ, ಮಿಣಜಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಾಬಾಯಿ ಎಸ್. ರಾಠೋಡ, ಕೌಲಗಾ(ಬಿ) ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಯ್ಯಮ ಎಚ್. ಸುಬೇದಾರ್, ಖಣದಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾಬಾಯಿ ಡಿ. ರಾಠೋಡ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಕಾಂತ ಜೇವಣಗಿ, ಫರಹತಾಬಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಣ್ಣ, ಹೊನ್ನಕಿರಣಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ಕೆ. ಅತಿಥಿಗಳಾಗಿ ಪಾಲ್ಗೊಂಡಿದ್ದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಲು ಸೂಚನೆ
**********************************************************************
ಕಲಬುರಗಿ,ಜೂ.24.(ಕ.ವಾ.)-ಕಲಬುರಗಿ ಜಿಲ್ಲೆಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕಲ್ಲದೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಸೂಚಿಸಿದರು.
ಅವರು ಶನಿವಾರ ಕಲಬುರಗಿಯಲ್ಲಿ ಮುಂದುವರೆದ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ವಿಜಯಪುರ-ಕಲಬುರಗಿ-ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 218ರಲ್ಲಿ ಬರುವ ಕುರಿಕೋಟಾ ಸೇತುವೆ ನಿರ್ಮಾಣ ಕಾರ್ಯ ಬೇಗ ಪೂರ್ಣಗೊಳಿಸಲು ಅನುವಾಗುವಂತೆ ಬೆಣ್ಣೆತೋರಾ ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ನದಿಗೆ ಬಿಡುಗಡೆಗೊಳಿಸುವ ಬಗ್ಗೆ ನೀರಾವರಿ ಇಲಾಖೆಯವರು ಕಾರ್ಯ ಯೋಜನೆ ರೂಪಿಸಬೇಕು. ನದಿಯಲ್ಲಿ ನೀರು ಬಿಡುವ ಬಗ್ಗೆ ರೈತರಿಗೆ ಮುಂಚಿತವಾಗಿ ಮುನ್ನೆಚ್ಚರಿಕೆ ನೀಡಬೇಕು. ನೀರು ತೆರವಾದ ಕೂಡಲೇ ಕಾಮಗಾರಿ ತೀವ್ರಗತಿಯಲ್ಲಿ ಕೈಗೊಳ್ಳಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ತೋಟಗಾರಿಕಾ ಕ್ಷೇತ್ರವನ್ನು ಹೆಚ್ಚು ವಿಸ್ತರಿಸುವುದರೊಂದಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ತೋಟಗಾರಿಕೆ ಅಧಿಕಾರಿಗಳು ಹೆಚ್ಚು ಮತುವರ್ಜಿಯಿಂದ ಕೈಗೊಳ್ಳಬೇಕು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅನುಷ್ಠಾನಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಸರ್ಕಾರದ ಯಾವುದೇ ಯೋಜನೆಯ ಹಣ ದುರುಪಯೋಗವಾಗದಂತೆ ಹಾಗೂ ಹಣ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು. ತೋಟಗಾರಿಕೆ ಯೋಜನೆಗಳ ಬಗ್ಗೆ ರೈತರಿಗೆ ಹೆಚ್ಚಿನ ತಿಳುವಳಿಕೆ ನೀಡಬೇಕೆಂದು ಸೂಚಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಮತ್ತು ಕಟ್ಟಡಗಳ ಕಾಮಗಾರಿಗಳ ತಾಂತ್ರಿಕ ಮಂಜೂರಾತಿ ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಬರುವ ಜುಲೈ ಒಂದರೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ಯಾವುದೇ ಲೋಪದೋಷವಾಗದಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಕಾಮಗಾರಿ ಸ್ಥಳಗಳಿಗೆ ಆಕಸ್ಮಿಕ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ನೋಡಿಕೊಳ್ಳಬೇಕೆಂದರು.
ಕಲಬುರಗಿ ಜಿಲ್ಲೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಬದಲಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಡುವ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಸಾರಿಗೆ ಇಲಾಖೆಯಿಂದ ಸಿಂದಗಿ ಗ್ರಾಮದಲ್ಲಿ ಡ್ರೈವಿಂಗ್ ಟ್ರೇನಿಂಗ್ ಸೆಂಟರ್ ನಡೆಸಲಾಗುತ್ತಿದ್ದು, ಈ ಸೆಂಟರಿಗೆ ಅಪ್ರೋಚ್ ರಸ್ತೆ ನಿರ್ಮಾಣದ ಪ್ರಸ್ತಾವನೆ ನೀಡಬೇಕೆಂದರು.
ವಿವಿಧ ಬೆಳೆಗಳ ಬೆಲೆ ಕುಸಿತದ ಸಂದರ್ಭದಲ್ಲಿ ಬೆಂಬಲ ಬೆಲೆಯಲ್ಲಿ ಸರ್ಕಾರದ ವಿವಿಧ ಬೆಳೆಗಳ ಖರೀದಿ ಮಾಡುವ ಸಂದರ್ಭದಲ್ಲಿ ಉಂಟಾಗುವ ದುರುಪಯೋಗವನ್ನು ತಡೆಗಟ್ಟಲು ಅನುವಾಗುವಂತೆ ರೈತರು ಬೆಳೆಯುವ ಎಲ್ಲ ಬೆಳೆಗಳನ್ನು ಆನ್‍ಲೈನ್ ಮುಖಾಂತರ ನೋಂದಣಿ ಮಾಡಿಸಬೇಕೆಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ, ಉಪಾಧ್ಯಕ್ಷೆ ಶೋಭಾ ಎಸ್. ಸಿರಸಗಿ, ಆಳಂದ ಶಾಸಕ ಬಿ.ಆರ್.ಪಾಟೀಲ, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಕೆ.ಡಿ.ಪಿ. ಸದಸ್ಯರಾದ ಮಲ್ಲಿಕಾರ್ಜುನ ಸಾಗರ, ಶರಣರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಾನೂನುಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಕಾರಿ
ಕಲಬುರಗಿ,ಜೂ.24.(ಕ.ವಾ.)-ಇಂದಿನ ಸಮಾಜದಲ್ಲಿ ಮಕ್ಕಳು ಶೋಷಣೆಗೊಳಗಾಗುತ್ತಿದ್ದು, ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಇರುವ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆ ಕುರಿತು ಸಂಕ್ಷಿಪ್ತ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್. ಆರ್. ಮಾಣಿಕ್ಯ ತಿಳಿಸಿದರು.
ಅವರು ಗುರುವಾರ ಕಲಬುರಗಿ ಸಿಟಿ ಕ್ಯಾಂಪ್ ಪಿ.ಯು. ಕಾಲೇಜ ಮತ್ತು ಸಿಟಿ ಅಕಾಡೆಮಿ ಹೈಸ್ಕೂಲ್‍ಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಹರಾ ಸೇವಾ ಸಂಸ್ಥೆ ಹಾಗೂ ರಹೆನುಮಾ ಕಾನೂನು ಕೇಂದ್ರ, ಸಿಟಿ ಕಂಪೋಸಿಟ್ ಪಿ.ಯು. ಕಾಲೇಜ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ “ಪೋಲಿಸ್ ದೂರು ಪ್ರಾಧಿಕಾರ ಮತ್ತು ಸಂತ್ರಸ್ತ ಪರಿಹಾರ ಯೋಜನೆ” ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗಿರುವ ಹಕ್ಕುಗಳನ್ನು ಅವರಿಗೆ ತಿಳಿಸಿಕೊಡುವುದು ಅವಶ್ಯಕವಾಗಿದೆ. ನ್ಯಾಯದಾನದ ಬಗ್ಗೆ ಪ್ರಚಲಿತದಲ್ಲಿರುವ ದಿನೋಪಯೋಗಿ ಕಾನೂನುಗಳ ಬಗ್ಗೆ ಜ್ಞಾನವನ್ನು ಹೊಂದಿರುವುದು ಅವಶ್ಯಕ. ಜನನ-ಮರಣ ನೋಂದಣಿ ಕಾಯ್ದೆ, ಮೋಟಾರ ವಾಹನ ಕಾಯ್ದೆ, ಗ್ರಾಹಕರ ಹಿತರಕ್ಷಣಾ ಕಾಯ್ದೆ, ವಿಮಾ ಕಾಯ್ದೆ, ವಾರಸಾ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆಗಳ ಬಗ್ಗೆ ಸಂಕ್ಷಿಪ್ತ ಅರಿವನ್ನು ಹೊಂದಿರುವುದು ಅವಶ್ಯಕವಾಗಿದೆ. ಇದಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಾಲಾ ಕಾಲೇಜುಗಳಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಈ ಕಾನೂನುಗಳ ಬಗ್ಗೆ ಪರಿಚಯ ಮಾಡಿಕೊಟ್ಟು ವಿದ್ಯಾರ್ಥಿಗಳ ಜ್ಞಾನವನ್ನು ವೃದ್ಧಿಸುವುದಲ್ಲದೇ ಅವರ ಜೀವನ ನಿರ್ವಹಣೆಗೆ ಸಹಾಯವಾಗುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಕಾನೂನು ಸೇವಾ ಪ್ರಾಧಿಕಾರವು ಉಚಿತವಾಗಿ ನೆರವು ನೀಡಲು ಇರುವ ಯೋಜನೆಗಳು ಮತ್ತು ಅದನ್ನು ಪಡೆಯಲು ಬೇಕಾದ ಅರ್ಹತೆ, ಕಾನೂನು ಸೇವಾ ಪ್ರಾಧಿಕಾರದ ವಿವಿಧ ಪ್ರಕಾರದ ನೆರವಿನ ಬಗ್ಗೆ, ಕಾನೂನು ಸೇವಾ ಪ್ರಾಧಿಕಾರವು ನಡೆಸುತ್ತಿರುವ ಉಚಿತ ಕಾನೂನು ಸೇವೆಗಳ ಬಗ್ಗೆ ಮತ್ತು ಅವುಗಳು ಕಾರ್ಯನಿರ್ವಹಣೆಯ ಬಗ್ಗೆಯೂ ವಿವರವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಕ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೊಳಗಾದ ಅಥವಾ ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಅಥವಾ ಮಾನಭಂಗಕ್ಕೆ ಒಳಗಾದಾಗ ಅವರ ಪುರ್ನವಸತಿ ಮತ್ತು ಅವರ ಜೀವನ ನಿರ್ವಹಣೆಗೆ ಮತ್ತು ಸಂತ್ರಸ್ತ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ಪಡೆಯಲು ಎಲ್ಲ ಸಂತ್ರಸ್ತರಿಗೂ ಅವಕಾಶ ಇರುವುದಾಗಿ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಗ್ರಾಮೀಣ ಪೊಲೀಸ್ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ವಾಜೀದ ಪಟೇಲ್ ಎಂ. ಪೋಲಿಸ್ ದೂರು ಪ್ರಾಧಿಕಾರದ ಕುರಿತು ಮಾತನಾಡಿ, ಪೊಲೀಸ್ ಠಾಣೆಯಲ್ಲಿ ಯಾವ ರೀತಿ ದೂರುಗಳನ್ನು ದಾಖಲಿಸಬೇಕು ಮತ್ತು ಠಾಣೆಗೆ ದಾಖಲಿಸುವ ದೂರುಗಳನ್ನು ಯಾವ ರೀತಿ ಬರೆಯಬೇಕು ಮತ್ತು ಎಲ್ಲಿ ದೂರುಗಳನ್ನು ಸಲ್ಲಿಸಬೇಕು ಮತ್ತು ದೂರು ಸಲ್ಲಿಸಿದ ನಂತರ ಪೊಲೀಸ್‍ನವರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಂವಿಧಾನ ಮತ್ತು ಕೆಲವು ಕಾನೂನುಗಳ ಸಂಕ್ಷಿಪ್ತ ಜ್ಞಾನವನ್ನು ಹೊಂದುವುದು ಅತ್ಯವಶ್ಯಕವಾಗಿದೆ ಎಂದರು.
ಸಹರಾ ಸೇವಾ ಸಂಸ್ಥೆ ನಿರ್ದೇಶಕ ಶ್ರೀ ಮಸ್ತಾನ್ ಬಿರಾದಾರ ಪ್ರಾಸ್ತಾವಿಕ ಮಾತನಾಡಿ, ತಮ್ಮ ಸಹಾರಾ ಸೇವಾ ಸಂಸ್ಥೆ ಮತ್ತು ರೆಹನುಮಾ ಕಾನೂನು ಕೇಂದ್ರವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗೆ ಎಲ್ಲ ಸಾಮಾನ್ಯ ಜನರಿಗೆ ಕಾನೂನಿನ ಅರಿವನ್ನು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದರ ಜೊತೆಗೆ ರೆಹನುಮಾ ಕಾನೂನು ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ತೆರೆಯಲಾಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿ ವಕೀಲರನ್ನು ನೇಮಿಸಲಾಗಿದೆ. ಈ ಎಲ್ಲ ಕಾರ್ಯಕ್ರಮಗಳಿಗೂ ಕಾನೂನು ಸೇವಾ ಪ್ರಾಧಿಕಾರವು ಸಂಪೂರ್ಣ ಸಹಕಾರ ನೀಡಿರುವುದಾಗಿ ತಿಳಿಸಿದರು.
ಹೀಗಾಗಿ ಲೇಖನಗಳು News and photos date: 24-6-2017
ಎಲ್ಲಾ ಲೇಖನಗಳು ಆಗಿದೆ News and photos date: 24-6-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photos date: 24-6-2017 ಲಿಂಕ್ ವಿಳಾಸ https://dekalungi.blogspot.com/2017/06/news-and-photos-date-24-6-2017.html
0 Response to "News and photos date: 24-6-2017"
ಕಾಮೆಂಟ್ ಪೋಸ್ಟ್ ಮಾಡಿ