News Date: 01--06---2017

News Date: 01--06---2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News Date: 01--06---2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News Date: 01--06---2017
ಲಿಂಕ್ : News Date: 01--06---2017

ಓದಿ


News Date: 01--06---2017

ಸೇಡಂ ಮಾದರಿ ಮತಕ್ಷೇತ್ರವಾಗಿ ಸಜ್ಜು
*************************************
ಕಲಬುರಗಿ,ಜೂ.01.(ಕ.ವಾ.)-ಸೇಡಂ ಮತಕ್ಷೇತ್ರದ ಎಲ್ಲ ಗ್ರಾಮ ಮತ್ತು ತಾಂಡಾಗಳಿಗೆ ಸುಸಜ್ಜಿತ ಸರ್ವಋತು ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಮಾದರಿ ಮತಕ್ಷೇತ್ರವನ್ನಾಗಿ ಸಜ್ಜುಗೊಳಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ||ಶರಣಪ್ರಕಾಶ ಪಾಟೀಲ ಹೇಳಿದರು.
ಅವರು ಗುರುವಾರ ಸೇಡಂ ಮತಕ್ಷೇತ್ರದ ಹಲಕೋಡ ಗ್ರಾಮದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, 2016-17ನೇ ಸಾಲಿನ ಹೆಚ್.ಕೆ.ಆರ್.ಡಿ.ಬಿ. ಯೋಜನೆ ಅಡಿಯಲ್ಲಿ ಸೇಡಂ ಮತಕ್ಷೇತ್ರದ ಹಲಕೋಡ ಗ್ರಾಮದಿಂದ ಹಾಬಾಳ(ಟಿ) ಗ್ರಾಮದವರೆಗಿನ 4.617 ಕಿ.ಮಿ. ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಚಿಂಚೋಳಿ ತಾಲೂಕಿನ ಸುಮಾರು 30 ಗ್ರಾಮಗಳು ಸೇಡಂ ಮತಕ್ಷೇತ್ರದ ವ್ಯಾಪ್ತಿಯಲ್ಲಿವೆ. ಅಲ್ಲಿಂದ ಸೇಡಂಗೆ ನೇರ ಸಂಚಾರ ಸೌಲಭ್ಯ ಕಲ್ಪಿಸಲು ಸುಸಜ್ಜಿತ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಹಲಕೋಡ ಭಾಗದ ಜನತೆ ಹಾಬಾಳ(ಟಿ) ಮಾರ್ಗವಾಗಿ ಸೇಡಂಗೆ ಆಗಮಿಸುವಾಗ ಮಧ್ಯದಲ್ಲಿ ಕಾಗಿಣಾ ನದಿ ದಾಟಬೇಕಾಗುತ್ತಿತ್ತು. ನದಿ ದಾಟುವಾಗ ಸುಮಾರು ಜನರು ಪ್ರವಾಹದಲ್ಲಿ ಸಿಲುಕಿ ಸಾವನ್ನಪ್ಪಿದ್ದನ್ನು ಮನಗಂಡು ಹಲಕೊಡ ಹತ್ತಿರ 4.30 ಕೋಟಿ ರೂ.ಗಳ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗುತ್ತಿದೆ. ಇನ್ನೂ 20 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಸೇತುವೆಯ ಉದ್ಘಾಟನೆಗೆ ಆಗಮಿಸಿದಾಗ ಜಟ್ಟೂರು ಗ್ರಾಮದ ಹತ್ತಿರ ನಿರ್ಮಿಸಲಾಗುವ ಬ್ರಿಡ್ಜ್ ಕಂ ಬ್ಯಾರೇಜ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಹೈದ್ರಾಬಾದ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ರೂಪಗೊಂಡಿರುವ 371ಜೆ ಕಲಂನಿಂದಾಗಿ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆತಿದೆ. ಪ್ರತಿವರ್ಷ ವೈದ್ಯಕೀಯದಲ್ಲಿ 750 ಮತ್ತು ಇಂಜನೀಯರಿಂಗ್‍ನಲ್ಲಿ 6000ಕ್ಕೂ ಹೆಚ್ಚಿನ ಸೀಟುಗಳು ಈ ಬಾಗದ ಬಡ ವಿದ್ಯಾರ್ಥಿಗಳಿಗೆ ಮೀಸಲಿಡುವ ಮೂಲಕ ಬಡವಿದ್ಯಾರ್ಥಿಗಳು ಸಹಿತ ವೈದ್ಯಕೀಯ ಮತ್ತು ಇಂಜನೀಯರಿಂಗ್ ಓದಲು ಸಾಧ್ಯವಾಗಿದೆ. ಈ ಭಾಗದಲ್ಲಿ ಖಾಲಿ ಇರುವ ನೌಕರಿಗಳನ್ನು ಇದೇ ಭಾಗದವರಿಂದ ಭರ್ತಿ ಮಾಡಲು ಕ್ರಮ ಜರುಗಿಸಲಾಗಿದ್ದು, ಇಲ್ಲಿಯವರೆಗೆ 18000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೊಂದು ವರ್ಷದಲ್ಲಿ ಸುಮಾರು 12000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಹೈ.ಕ.ಭಾಗದ ಅಭಿವೃದ್ಧಿಗೆ ಸರ್ಕಾರ ಮೂರು ವರ್ಷಗಳ ಕಾಲ ಪ್ರತಿ ವರ್ಷ 1000 ಕೋಟಿ ರೂ.ರಂತೆ 3000 ಕೋಟಿ ರೂ. ಹಾಗೂ ಈ ವರ್ಷ 1500 ಕೋಟಿ ರೂ. ಹೀಗೆ ಒಟ್ಟು 4500 ಕೋಟಿ ರೂ.ಗಳನ್ನು ನೀಡಿದೆ. ಇದರಿಂದಾಗಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲವಾಗಿದೆ ಎಂದರು. ಗ್ರಾಮೀಣ ಪ್ರದೇಶದ ಎಲ್ಲ ನಾಗರೀಕರು ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದರು.
ತೊಗರಿ ಬೆಲೆಯಲ್ಲಿ ಕುಸಿತ ಉಂಟಾದಾಗ ಸರ್ಕಾರ ಬೆಂಬಲ ಬೆಲೆಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ 642 ಕೋಟಿ ರೂ.ಗಳಲ್ಲಿ 11 ಲಕ್ಷ ಕ್ವಿಂಟಲ್ ತೊಗರಿ ರೈತರಿಂದ ಖರೀದಿಸಲಾಗಿದೆ. ಆದಾಗ್ಯೂ ಇನ್ನು ಹಲವಾರು ರೈತರಲ್ಲಿ ತೊಗರಿ ಉಳಿದುಕೊಂಡಿರುವುದರಿಂದ ಬೆಂಬಲ ಬೆಲೆಯಲ್ಲಿ ಖರೀದಿಸಲು ನಾಳೆಯಿಂದ 10 ದಿನಗಳವರೆಗೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಜಿಲ್ಲೆಯಿಂದ 10 ದಿನಗಳಲ್ಲಿ 3 ಲಕ್ಷ ಕ್ವಿಂಟಲ್ ತೊಗರಿ ಖರೀದಿಸಲು ಅವಕಾಶಗಳಿವೆ. ನಿಡಗುಂದಾ ಮತ್ತು ಸುಲೇಪೇಟ್‍ಗಳಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ಭಾಗದ ರೈತರು ಇದರ ಪ್ರಯೋಜನ ಪಡೆಯಬೇಕೆಂದರು.
ಜಟ್ಟೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಚಂದ್ರಕಲಾ ಬಲರಾಮ, ಉಪಾಧ್ಯಕ್ಷ ಬಿಚ್ಚರೆಡ್ಡಿ, ಮಾಜಿ ಅಧ್ಯಕ್ಷ ಸುಭಾಷ್ಚಂದ್ರ ನಿಷ್ಠಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ರುದ್ರರೆಡ್ಡಿ ಪಡಶೆಟ್ಟಿ, ತಾಲೂಕು ಪಂಚಾಯತಿ ಸದಸ್ಯರುಗಳಾದ ವೆಂಕಟರೆಡ್ಡಿ, ಜಗನ್ನಾಥ ಇದಲಾಯಿ, ಎ.ಪಿ.ಎಂ.ಸಿ. ಸದಸ್ಯ ಸೋಮನಾಥರೆಡ್ಡಿ ವಂಗಾ, ಗಣ್ಯರಾದ ಶಿವಕುಮಾರ ದೇಶಮುಖ, ವಿಶ್ವನಾಥರೆಡ್ಡಿ, ಬಿ.ವಿ.ಸಜ್ಜನ,
ನಾಗರಾಜ ಪಾಟೀಲ, ಲಿಂಗರೆಡ್ಡಿ ಸಾಹುಕಾರ, ನರೋತ್ತಮ, ಸೇಡಂ ಸಹಾಯಕ ಆಯುಕ್ತ ಪರಶುರಾಮ, ಚಿಂಚೋಳಿ ತಹಸೀಲ್ದಾರ್ ದಯಾನಂದ ಪಾಟೀಲ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜನೀಯರ್ ವಿಜಯಕುಮಾರ ಸಂಗಾವಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಸಚಿವರು ಸುಲೇಪೇಟಿನಲ್ಲಿ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಚಿಂಚೋಳಿ ತಾಲೂಕಿನ ಗಣಾಪುರ ಗ್ರಾಮದಲ್ಲಿ ಆರ್.ಎಂ.ಎಸ್.ಎ. ಯೋಜನೆಯಡಿ ನಿರ್ಮಿಸಿದ ನೂತನ ಪ್ರೌಢಶಾಲಾ ಕಟ್ಟಡ ಉದ್ಘಾಟಿಸಿದರು. ಭಕ್ತಂಪಳ್ಳಿ ಗ್ರಾಮದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. ಪರದಾರ ಮೋತಕಪಲ್ಲಿ ಗ್ರಾಮದಲ್ಲಿ ಗರಗಪಲ್ಲಿ ಕ್ರಾಸ್‍ದಿಂದ ಅಣವಾರವರೆಗಿನ 2.6 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು ಹಾಗೂ ಕುಡಿಯುವ ನೀರಿನ ಮೇಲ್ಮಟ್ಟದ ಜಲ ಸಂಗ್ರಹಾಗಾರ ಉದ್ಘಾಟಿಸಿದರು. ತುಮಕುಂಟಾ ಗ್ರಾಮದಲ್ಲಿ ಕೆ.ಆರ್.ಡಿ.ಸಿ.ಎಲ್. ವತಿಯಿಂದ ನಿರ್ಮಿಸುತ್ತಿರುವ ಚಿಂಚೋಳಿಯಿಂದ ಬೀದರವರೆಗಿನ 60.04 ಕಿ.ಮೀ. ರಾಜ್ಯ ಹೆದ್ದಾರಿ-15ರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಬಾಲ್ಯ ವಿವಾಹ ತಡೆಯುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ
***************************************************************
ಕಲಬುರಗಿ,ಜೂ.01.(ಕ.ವಾ.)-ಬಾಲ್ಯವಿವಾಹವು ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್ ಅವರು ಹೇಳಿದರು.
ಅವರು ಗುರುವಾರ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶ್ವ ಸೇವಾ ಮಿಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಮೂಡಿಸುವ ಸಾಕ್ಷರತಾ ರಥಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸಲು ಈ ಸಾಕ್ಷರತಾ ರಥ ಕಾರ್ಯನಿರ್ವಹಿಸಲಿದೆ. ಎಲ್ಲ ಇಲಾಖೆಗಳ ಸಹಕಾರದಿಂದ ಜಿಲ್ಲೆಯಲ್ಲಿ ವರ್ಷ ಪೂರ್ತಿ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಜುಆಗೃತಿ ಕಾರ್ಯಕ್ರಮಗಳನ್ನು ನಡೆಸಲು ಯೋಚಿಸಲಾಗುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಅವರು ಮಾತನಾಡಿ, 21 ವರ್ಷದೊಳಗಿನ ಬಾಲಕ ಹಾಗೂ 18 ವರ್ಷದೊಳಗಿನ ಬಾಲಕಿಯ ಮದುವೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತವರಿಗೆ 1 ಲಕ್ಷ ರೂಪಾಯಿ ದಂಡ ಅಥವಾ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಜೂನ್ 7 ರವರೆಗೆ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹೆಚ್. ಮಾಲಾಜಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಧುತ್ತರಗಾಂವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿ.ವಿ. ರಾಮನ್, ಕಲಬುರಗಿ ನ್ಯಾಯವಾದಿಗಳ ಸಂಘದ ವಕೀಲರಾದ ಗಣಪತರಾವ್ ಅಂಕಲಗಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಠ್ಠಲ್ ಚಿಕಣಿ, ಕಾನೂನು ಮತ್ತು ಪರಿವೀಕ್ಷಣಾ ಅಧಿಕಾರಿ ಭರತೇಶ ಶೀಲವಂತ್, ಡಾನ್ ಬಾಸ್ಕೋ ಸಂಸ್ಥೆಯ ಫಾದರ್ ಸಜಿ, ವಿಶ್ವ ಸೇವಾ ಮಿಷನ್ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಸ್ವಾಮೀಜಿ ಹಾಗೂ ನೂರಾರು ಮಕ್ಕಳು ಭಾಗವಹಿಸಿದ್ದರು.
ಸಾಕ್ಷರತಾ ರಥವು ರೈಲ್ವೆ ನಿಲ್ದಾಣ, ತಾರಫೈಲ್, ರೆಹಮತನಗರ, ಕೇಂದ್ರ ಬಸ್ ನಿಲ್ದಾಣ, ಎಂ.ಎಸ್.ಕೆ. ಮಿಲ್, ಬಸವನಗರ, ಸುಪರ ಮಾರ್ಕೆಟ್, ಹುಮನಾಬಾದ್ ಬೇಸ್, ಸಂಜೀವನಗರ, ಹಾಗೂ ಹುಮನಾಬಾದ್ ವೃತ್ತಗಳಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಮೂಡಿಸಿತು.
ಪ್ರವಾಸೋದ್ಯಮ ಸಚಿವರ ಪ್ರವಾಸ
**********************************
ಕಲಬುರಗಿ,ಜೂನ್.01.(ಕ.ವಾ.)-ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ ಖರ್ಗೆ ಅವರು ಜೂನ್ 2ರಂದು ಬೆಳಗಿನ 10.30 ಗಂಟೆಗೆ ಚಿತ್ತಾಪುರ ಪಿ.ಯು. ಕಾಲೇಜಿನ ಗ್ರೌಂಡಿನಲ್ಲಿ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಹಾಗೂ ಐ.ಟಿ.ಐ. ಕಾಲೇಜಿನ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12 ಗಂಟೆಗೆ ಅಲ್ಲಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಡಿಗಲ್ಲು ಸಮಾರಂಭ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ದಿಗ್ಗಾಂವದಲ್ಲಿ ಅಂಬೇಡ್ಕರ ಜಯಂತಿ ಕಾರ್ಯಕ್ರಮ ಹಾಗೂ ಸಿ.ಎಸ್.ಆರ್. ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 7 ಗಂಟೆಗೆ ಕಲಬುರಗಿಗೆ ಆಗಮಿಸುವರು. ಅದೇ ದಿನ ರಾತ್ರಿ 9.05 ಗಂಟೆಗೆ ಕಲಬುರಗಿಯಿಂದ ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು.
ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರವೇಶ ಪ್ರಕ್ರಿಯೆ ಪ್ರಾರಂಭ
*********************************************************************
ಕಲಬುರಗಿ,ಜೂನ್.01.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನಲ್ಲಿ 2017-18ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಐದು ವರ್ಷದ ಬಿ.ಎ.-ಎಲ್.ಎಲ್.ಬಿ. ಕಾನೂನು ಪದವಿಗಳ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಬಿ.ಎ. ಎಲ್.ಎಲ್.ಬಿ. ಕೋರ್ಸಿನ ಅವಧಿ 5 ವರ್ಷದಾಗಿದ್ದು, ಮೊದಲ ಎರಡು ವರ್ಷ ಕಲಾ ವಿಷಯಗಳಿಗೆ ಸೀಮಿತವಾಗಿದ್ದು, ಕೊನೆಯ 3 ವರ್ಷಗಳು ಕಾನೂನು ವಿಷಯಗಳನ್ನೊಳಗೊಂಡಿದೆ. ದ್ವಿತೀಯ ವರ್ಷದ ಪಿ.ಯು.ಸಿ. ಅಥವಾ ತತ್ಸಮಾನದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಒಟ್ಟು ಶೇ. 45ರಷ್ಟು ಅಂಕ ಪಡೆದಿರಬೇಕು (ಇತರೆ ಹಿಂದುಳಿದ ವರ್ಗದವರು ಶೇ. 42 ಮತ್ತು ಪ.ಜಾ., ಪ.ಪಂ. ಶೇ. 40 ರಷ್ಟು ಅಂಕ ಪಡೆದಿರಬೇಕು). ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ವಯೋಮಿತಿ ಗರಿಷ್ಠ 20 ವರ್ಷ. (1997ರ ಮೇ 15ರಂದು ಅಥವಾ ನಂತರ ಜನಿಸಿರಬೇಕು) ಹಾಗೂ ಪ.ಜಾ./ ಪ.ಪಂ. ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ 22 ವರ್ಷ (1995 ರ ಮೇ 15ರಂದು ಅಥವಾ ನಂತರ ಜನಿಸಿರಬೇಕು) ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಪ್ರವೇಶವು ಈಗಾಗಲೇ ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪಡೆಯಲು ಆಗಸ್ಟ್ 8 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಶಿವಾನಂದ ಹೆಚ್. ಲೇಂಗಟಿ ಮೊಬೈಲ್ ಸಂ. 9449122506, ಡಾ: ರೇಖಾ ಚವ್ಹಾಣ ಮೊಬೈಲ್ ಸಂಖ್ಯೆ 9448231891, ಡಾ: ಶೈಲಜಾ: 9886223349 ಹಾಗೂ ವಾಣಿ ಮರಡಿ: 9035695232ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಸೇಡಂ: ಮೆಟ್ರಿಕ್ ನಂತರ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
**************************************************************
ಕಲಬುರಗಿ,ಜೂನ್.01.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸೇಡಂ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ 2017-18ನೇ ಸಾಲಿನಲ್ಲಿ ಪ್ರವೇಶಕ್ಕಾಗಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗಕ್ಕೆ ಸೇರಿದ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಸ್ಥಾನ ಮತ್ತು ಶೇ. 25ರಷ್ಟು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಇ., ಎಂ.ಎ., ಎಂ.ಎಸ್ಸಿ., ಎಲ್.ಎಲ್.ಬಿ. ಹಾಗೂ ನರ್ಸಿಂಗ್ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಸತಿ ನಿಲಯಗಳ ವಿವರ ಇಂತಿದೆ. ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಊಡಗಿ ರಸ್ತೆ ಸೇಡಂ ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಪಿ.ಯು. ಕಾಲೇಜು ಆವರಣ ಸೇಡಂ.
ಇಚ್ಛೆಯುಳ್ಳ ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆ ಹೆಚ್ಚಿನ ಮಾಹಿತಿಗಾಗಿ ಸೇಡಂ ವಸತಿ ನಿಲಯದ ಮೇಲ್ವಿಚಾರಕರನ್ನು ಸಂಪರ್ಕಿಸಬೇಕು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೇಡಂ ಕೆ.ಇ.ಬಿ. ಕಾಲೋನಿಯಲ್ಲಿರುವ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯನ್ನು, ಸೇಡಂ ಬಾಲಕಿಯರ ವಸತಿ ನಿಲಯದ ನಿಲಯ ಪಾಲಕರ ಮೊಬೈಲ್ ಸಂಖ್ಯೆ 9632960015, ಸೇಡಂ ಬಾಲಕರ ವಸತಿ ನಿಲಯ ನಿಲಯ ಪಾಲಕರ ಮೊಬೈಲ್ ಸಂಖ್ಯೆ 8073555826ನ್ನು ಸಂಪರ್ಕಿಸಲು ಕೋರಲಾಗಿದೆ.
ಜಾತಿ ಪ್ರಮಾಣಪತ್ರ ರದ್ದು
*************************
ಕಲಬುರಗಿ,ಜೂನ್.01.(ಕ.ವಾ.)-ಕಲಬುರಗಿ ತಾಲೂಕಿನ ಹಾಗರಗಿಯ ಬಸವರಾಜ ಸಿದ್ರಾಮಯ್ಯ ಮಠಪತಿ ಅವರು ಕಲಬುರಗಿ ಮಹಾನಗರ ಪಾಲಿಕೆಯಿಂದ ದಿನಾಂಕ: 29-10-1987ರಂದು ಪಡೆಯಲಾದ ಪರಿಶಿಷ್ಟ ಜಾತಿ (ಬೇಡ ಜಂಗಮ) ಪ್ರಮಾಣಪತ್ರವನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ದಿನಾಂಕ: 02-03-2017ರ ತಮ್ಮ ಆದೇಶದನ್ವಯ ಈ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಿದ್ದಾರೆ.
ಮಹಾನಗರ ಪಾಲಿಕೆ ಕಚೇರಿಯಿಂದ ದಿನಾಂಕ: 29-10-1987ರಂದು ಬಸವರಾಜ ಸಿದ್ರಾಮಯ್ಯ ಮಠಪತಿ ಅವರು ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರು. ಜಿಲ್ಲಾಧಿಕಾರಿಗಳು ಈ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಿದ್ದರಿಂದ ಕಲಬುರಗಿ ಮಹಾನಗರ ಪಾಲಿಕೆಯಿಂದ ಸಹ ಸದರಿ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಲಾಗಿದೆ ಎಂದು ಕಲಬುರಗಿ ಮಹಾನಗರಪಾಲಿಕೆ ಆಯುಕ್ತ ಪಿ. ಸುನೀಲ ಕುಮಾರ ಅವರು ತಿಳಿಸಿದ್ದಾರೆ.
ಜೂನ್ 5ರಂದು ಉಳಿದ ಎರಡು ಸ್ಥಾಯಿ ಸಮಿತಿಗಳಿಗೆ ಚುನಾವಣೆ
**************************************************************
ಕಲಬುರಗಿ,ಜೂನ್.01.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಹಾಗೂ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸುವ ಸಾಮಾನ್ಯ ಸಭೆಯನ್ನು 2017ರ ಜೂನ್ 5ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಮಹಾನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್ ಹಾಲ್)ನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಚುನಾವಣೆಯ ಅಧ್ಯಕ್ಷಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ ತೆರಿಗೆ ಹಣಕಾಸು ಮತ್ತು ಮೇಲ್ಮನವಿಗಳ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಈಗಾಗಲೇ ಚುನಾವಣೆ ನಡೆಸಲಾಗಿದೆ. ಉಳಿದ ಎರಡು ಸ್ಥಾಯಿ ಸಮಿತಿಗಳಾದ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಹಾಗೂ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮುಂದೂಡಲಾಗಿತ್ತು. ಈ ಎರಡು ಸಮಿತಿಗಳಿಗೆ ಚುನಾವಣೆ ನಡೆಸುವುದು ಅವಶ್ಯವಾಗಿದ್ದರಿಂದ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸುವ ಸಾಮಾನ್ಯ ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಎಲ್ಲ ಸದಸ್ಯರು ನಿಗದಿತ ಸಮಯಕ್ಕೆ ಹಾಜರಿರಬೇಕೆಂದು ಕೋರಲಾಗಿದೆ.
ಜೂನ್ 3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
************************************************
ಕಲಬುರಗಿ,ಜೂನ್.01.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗ-1ರಿಂದ 11ಕೆ.ವಿ. ಮೊರಟಗಿ ಮತ್ತು 110 ಕೆ.ವಿ. ಅಫಜಲಪುರ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಕೆಳಕಂಡ ಗ್ರಾಮಗಳಲ್ಲಿನ ಮಾರ್ಗದ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ಜೂನ್ 3ರಂದು ಬೆಳಗಿನ 8 ರಿಂದ ಸಾಯಂಕಾಲ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ವಿತರಣಾ ಕೇಂದ್ರಗಳÀ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಕೆಳಕಂಡ ವಿತರಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
 ವಿದ್ಯುತ್ ನಿಲುಗಡೆಯಾಗುವ ಗ್ರಾಮಗಳ ವಿವರ ಇಂತಿದೆ: 110 ಕೆ.ವಿ. ಮೊರೆಟಗಿ, 110 ಕೆ.ವಿ. ಅಫಜಲಪುರ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಅಫಜಲಪುರ ನಗರ ಹಾಗೂ ಗ್ರಾಮಿಣ ಪ್ರದೇಶ, ಘತ್ತರಗಾ, ಶಿರವಾಳ, ಹಳಿಯಾಳ, ಬಳ್ಳೂರಗಿ, ಅಳಗಿ(ಬಿ), ಕುಲಾಲಿ, ಕಲ್ಲೂರ, ಚೌಡಾಪುರ, ದೇವಲಗಾಣಗಾಪುರ, ಬಂದರವಾಡ, ಧನ್ನೂರ, ಚಿಣಮಗೇರಾ, ರೇವೂರ, ಆತನೂರ, ಮಲ್ಲಾಬಾದ, ಬಡದಾಳ ಹಾಗೂ 110 ಕೆ.ವಿ. ಕರಜಗಿ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕರಜಗಿ, ಮಣ್ಣೂರ, ಮಾಶ್ಯಾಳ, ಉಡಚಣ, ಗೌರ(ಬಿ), ಭೋಸಗಾ, ನಂದರಗಾ ಮತ್ತು ಹಸರಗುಂಡಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲದೇ ಮೇ. ರೇಣುಕಾ ಶುಗರ್ಸ್ ಪ್ರಾವೇಟ್ ಲಿಮಿಟೆಡ್ ಘಟಕಕ್ಕೆ ವಿದ್ಯುತ್ ಸರಬರಾಜು ಇರುವುದಿಲ್ಲ
.
ಸೇಡಂ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ
********************************************
ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
****************************************
ಕಲಬುರಗಿ,ಜೂನ್.01.(ಕ.ವಾ.)-ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ದಿನಾಂಕ: 25-05-2017ರ ಆದೇಶದ ಪ್ರಕಾರ 2017-18ನೇ ಸಾಲಿನಿಂದ ವಸತಿ ನಿಲಯಗಳ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ಅರ್ಜಿ ಪಡೆದು ಆಯ್ಕೆ ಪ್ರಕ್ರಿಯೆ ಜರುಗಿಸಲು ಆದೇಶ ನೀಡಿರುತ್ತಾರೆ.
ಆದ್ದರಿಂದ ಸೇಡಂ ಸಮಾಜ ಕಲ್ಯಾಣ ಇಲಾಖೆಯಿಂದ ದಿನಾಂಕ: 19-5-2017ರಂದು 2017-18ನೇ ಸಾಲಿನ ಸೇಡಂ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಲು ಆಹ್ವಾನಿಸುವ ಪ್ರಕಟಣೆಯನ್ನು ಹಿಂಪಡೆಯಲಾಗಿದೆ.
ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ವೆಬ್‍ಸೈಟ್ ವಿಳಾಸವನ್ನು ನಂತರ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸೇಡಂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.
ಶಹಾಬಾದ ಐ.ಟಿ.ಐ. ಪ್ರವೇಶಕ್ಕೆ ಅರ್ಜಿ ಆಹ್ವಾನ
**********************************************
ಕಲಬುರಗಿ,ಜೂನ್.01.(ಕ.ವಾ.)-ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಾಬಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2017-18ನೇ ಸಾಲಿನ ಎಸ್.ಸಿ.ವಿ.ಟಿ. ಯೋಜನೆಯಡಿ ತರಬೇತಿಗೆ ಲಭ್ಯವಿರುವ ವಿದ್ಯುತ್ ಕರ್ಮಿ ವೃತ್ತಿ ಮತ್ತು ಜೋಡಣೆ ವೃತ್ತಿಯ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಶಿವಾಜಿ ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿರ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರಾಚಾರ್ಯ ಶಿವಾಜಿ ಹೆಚ್ ಅಥವಾ ಮೊಬೈಲ್ ಸಂಖ್ಯೆ 9036812885ನ್ನು ಸಂಪರ್ಕಿಸಲು ಕೋರಿದೆ.
ಜೇವರ್ಗಿ ಪಟ್ಟಣದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಜೂನ್.01.(ಕ.ವಾ.)-ಜೇವರ್ಗಿ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಭೀಮಾ ಜಾಕ್‍ವೆಲ್ ಹಾಗೂ ಶುದ್ಧೀಕರಣ ಘಟಕದ ಕೇಂದ್ರದಲ್ಲಿ ತಾಂತ್ರಿಕ ದೋಷದಿಂದ ಪಂಪ್ ಮೋಟಾರು ಕೆಟ್ಟು ಹೋಗಿದೆ. ಕಾರಣ ಸದರಿ ಪಂಪ್ ಮೋಟಾರು ದುರಸ್ತಿ ಆಗುವವರೆಗೆ ಸುಮಾರು 4 ದಿನಗಳವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದ್ದರಿಂದ ಜೇವರ್ಗಿ ಪಟ್ಟಣದ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಜೇವರ್ಗಿ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.










ಹೀಗಾಗಿ ಲೇಖನಗಳು News Date: 01--06---2017

ಎಲ್ಲಾ ಲೇಖನಗಳು ಆಗಿದೆ News Date: 01--06---2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 01--06---2017 ಲಿಂಕ್ ವಿಳಾಸ https://dekalungi.blogspot.com/2017/06/news-date-01-06-2017.html

Subscribe to receive free email updates:

0 Response to "News Date: 01--06---2017"

ಕಾಮೆಂಟ್‌‌ ಪೋಸ್ಟ್‌ ಮಾಡಿ