ಶೀರ್ಷಿಕೆ : News date 30-6-2017
ಲಿಂಕ್ : News date 30-6-2017
News date 30-6-2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ,ಜೂ.30.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಜೂನ್ 30ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸುವರು. ನಂತರ ಕಲಬುರಗಿಯಿಂದ ಬೆಂಗಳೂರಿಗೆ ರೈಲು ಮೂಲಕ ಪ್ರಯಾಣ ಮಾಡುವರು.
ಜುಲೈ 1ರಂದು ನೊಂದವರ ದಿನಾಚರಣೆ
ಕಲಬುರಗಿ,ಜೂ.30.(ಕ.ವಾ.)-ಕಲಬುರಗಿ ಈಶಾನ್ಯ ವಲಯ ವ್ಯಾಪ್ತಿಯ ಪ್ರತಿಯೊಂದು ಜಿಲ್ಲೆಯಲ್ಲಿ ತಿಂಗಳ ಮೊದಲನೇ ಶನಿವಾರದಂದು ನೊಂದವರ/ಫಿರ್ಯಾದಿಯ ದಿನಾಚರಣೆಯನ್ನು ಠಾಣಾ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಮೊಟ್ಟ ಮೊದಲ ಬಾರಿಗೆ ಕಲಬುರಗಿ ನಗರದಲ್ಲಿ ಜುಲೈ 1ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಪೊಲೀಸ್ ಭವನದಲ್ಲಿ ಈಶಾನ್ಯ ವಲಯದ ನೊಂದವರ/ಫಿರ್ಯಾದಿಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಈಶಾನ್ಯ ವಲಯದ ಆರಕ್ಷಕ ಮಹಾ ನಿರೀಕ್ಷಕ ಆಲೋಕ್ ಕುಮಾರ್ ದಿನಾಚರಣೆ ಉದ್ಘಾಟಿಸಲಿದ್ದು, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ವ್ಹಿ. ಪಾಟೀಲ್ ಮುಖ್ಯ ಅತಿಥಿಯಾಗಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಗೂ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕಮ್ ಪ್ರಕಾಶ ಅಮೃತ್ ಅತಿಥಿಗಳಾಗಿ ಆಗಮಿಸಲಿದ್ದಾರೆ.
ವರದಿಯಾದ ಪ್ರಕರಣಗಳಲ್ಲಿನ ಫಿರ್ಯಾದಿಯು ತಾನು ನೀಡಿದ ದೂರಿಗೆ ಪೊಲೀಸರ ಸ್ಪಂದನೆ, ಆ ಪ್ರಕರಣದ ತನಿಖೆಯ ಹಂತ ಹಾಗೂ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪಣೆಯಲ್ಲಿನ ನ್ಯಾಯಾಂಗ ವಿಚಾರಣೆ ಮತ್ತು ಆರೋಪಿತರಿಗೆ ಶಿಕ್ಷೆ ವಿಧಿಸುವುದಕ್ಕಾಗಿ ಫಿರ್ಯಾದಿ ಮತ್ತು ಸಾಕ್ಷಿದಾರರ ಪೂರಕ ಸಾಕ್ಷಿ ಹೇಳಿಕೆಗೆ ನೊಂದವರ ದಿನಾಚರಣೆಯ ಪ್ರೇರಣೆಯಾಗಲಿದೆ. ಪೊಲೀಸರಿಂದ ರಕ್ಷಣೆ ನೀಡುವುದೇ ದಿನಾಚರಣೆಯ ಮೂಲ ಉದ್ದೇಶವಾಗಿದೆ. “ನೊಂದವರಿಗೆ ನ್ಯಾಯ, ಈಶಾನ್ಯ ವಲಯ ಪೊಲೀಸರ ಧ್ಯೇಯ” ಎಂಬುದು ಈಶಾನ್ಯ ವಲಯದ ಪೊಲೀಸ್ ಘೋಷ ವಾಕ್ಯವಾಗಿದೆ. ಸಾರ್ವಜನಿಕರು, ಫಿರ್ಯಾದಿದಾರರು ಮತ್ತು ಪ್ರಕರಣಗಳಲ್ಲಿನ ಸಾಕ್ಷಿದಾರರು ಪಾಲ್ಗೊಳ್ಳಲು ಕೋರಲಾಗಿದೆ.
ಕೆ.ಎ.ಎಸ್., ಪೊಲೀಸ್ ಇನ್ಸ್‍ಪೆಕ್ಟರ್ ನೇಮಕಾತಿಗಳಿಗೆ ಉಚಿತ ತರಬೇತಿ
ಕಲಬುರಗಿ,ಜೂ.30.(ಕ.ವಾ.)-ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಕೆ.ಎ.ಎಸ್., ಪೊಲೀಸ್ ಇನ್ಸ್‍ಪೆಕ್ಟರ್ ಹಾಗೂ ಪೊಲೀಸ್ ಪೇದೆಗಳ ನೇರ ನೇಮಕಾತಿಗಳಿಗೆ ಸಂಬಂಧಿಸಿದಂತೆ ಕಲಬುರಗಿಯ ಪ್ರತಿಷ್ಟಿತ ಎನ್.ಎಸ್.ಎಸ್. ಕರಿಯರ್ ಅಕಾಡೆಮಿಯ ಉಪನ್ಯಾಸಕರಿಂದ ಉಚಿತವಾಗಿ ತರಬೇತಿ ಶಿಬಿರವನ್ನು ಕಲಬುರಗಿ ನಗರದ ಎಂ.ಎಸ್.ಕೆ ಮಿಲ್ ರಸ್ತೆ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 1ರಿಂದ 13ರವರೆಗೆ ಪ್ರತಿದಿನ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಅರ್ಹ ಆಸಕ್ತ ಯುವಕ/ಯುವತಿಯರು ಮೇಲ್ಕಂಡ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಜುಲೈ 1ರಿಂದ ಉಚಿತ ತರಬೇತಿಗೆ ಹಾಜರಾಗಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂತೋಷ ಜವಳಿ ಮೊಬೈಲ್ ಸಂಖ್ಯೆ 9632294864 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪುನರ್ ವಸತಿ ಕೇಂದ್ರ ಸ್ಥಾಪಿಸಲು ಸರ್ಕಾರೇತರ ಸಂಸ್ಥೆಯಿಂದ ಅರ್ಜಿ ಆಹ್ವಾನ
ಕಲಬುರಗಿ,ಜೂ.30.(ಕ.ವಾ.)-ತೀವ್ರತರವಾದ ಮಾನಸಿಕ ಖಾಯಿಲೆಗಳಿಂದ ಗುಣ ಹೊಂದಿದ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆ/ಮೆಡಿಕಲ್ ಕಾಲೇಜು ಆಸ್ಪತ್ರೆ ಅಥವಾ ಇನ್ಯಾವುದೇ ಸರ್ಕಾರಿ ಕಟ್ಟಡಗಳಲ್ಲಿ ಅಥವಾ ಸರ್ಕಾರಿ ಕಟ್ಟಡ ಲಭ್ಯವಿಲ್ಲದ ಪಕ್ಷದಲ್ಲಿ ಜಿಲ್ಲಾ ಆಸ್ಪತ್ರೆ ಹತ್ತಿರದಲ್ಲಿ ಬಾಡಿಗೆ ಕಟ್ಟಡದಲ್ಲಿ “ಸಮುದಾಯ ಮಾನಸಿಕ ಆರೋಗ್ಯ ಕೇಂದ್ರ (ಆಚಿಥಿ ಅಚಿಡಿe ಅeಟಿಣಡಿe)/ಪುನರ್ ವಸತಿ ಕೇಂದ್ರವನ್ನು ಸ್ಥಾಪಿಸಿ ಕಾರ್ಯನಿರ್ವಹಿಸಲು ಆಸಕ್ತಿಯಿರುವ ಕಲಬುರಗಿ ಜಿಲ್ಲೆಯ ಸರ್ಕಾರೇತರ ಸಂಸ್ಥೆ (ಎನ್.ಜಿ.ಓ.)ಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರೇತರ ಸಂಸ್ಥೆಯಾಗಿ ಅಧಿಕೃತ ನೋಂದಣಿ ಮಾಡಿಸಿದ ಪ್ರಮಾಣಪತ್ರ ಹೊಂದಿರಬೇಕು. ಸಂಸ್ಥೆಯು ಕನಿಷ್ಠ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರಬೇಕು. ಸಂಸ್ಥೆಯು ಮುಖ್ಯವಾಗಿ ಮಾನಸಿಕ ರೋಗಿಗಳಿಗೆ ಸೇವೆಗೈಯುವ ಉದ್ದೇಶ ಮತ್ತು ಆಸಕ್ತಿ ಹೊಂದಿರಬೇಕು. ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕಲ್ಲದೇ ಸಂಸ್ಥೆಯು ವ್ಯವಸ್ಥಿತವಾಗಿ ರೂಪಗೊಂಡಂತಹ ಆಡಳಿತ ಮಂಡಳಿ ಹೊಂದಿರಬೇಕು. ಲಾಭಕ್ಕಾಗಲಿ ಅಥವಾ ಮಂಡಳಿಯ ಸದಸ್ಯರ ಲಾಭಕ್ಕಾಗಲಿ ನಡೆದಿರತಕ್ಕದಲ್ಲ.
ಎನ್.ಜಿ.ಓ. ಕಾರ್ಯನಿರ್ವಹಣೆಯ ಫೋಟೋ ಸಹಿತ ಬುಕಲೇಟ್‍ನ್ನು ಲಗತ್ತಿಸಿ ಜುಲೈ 10ರ ಸಂಜೆ 4.30 ಗಂಟೆಯೊಳಗಾಗಿ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಹೀಗಾಗಿ ಲೇಖನಗಳು News date 30-6-2017
ಎಲ್ಲಾ ಲೇಖನಗಳು ಆಗಿದೆ News date 30-6-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News date 30-6-2017 ಲಿಂಕ್ ವಿಳಾಸ https://dekalungi.blogspot.com/2017/06/news-date-30-6-2017.html
0 Response to "News date 30-6-2017"
ಕಾಮೆಂಟ್ ಪೋಸ್ಟ್ ಮಾಡಿ