ಶೀರ್ಷಿಕೆ : ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ
ಲಿಂಕ್ : ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ
ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ
ಕೊಪ್ಪಳ, ಜು. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮವನ್ನು ಜುಲೈ. 11 ರಂದು ಬೆಳಿಗ್ಗೆ 11-00 ಗಂಟೆಗೆ ಹಳೇ ಜಿಲ್ಲಾ ಆಸ್ಪತ್ರೆ ಆವರಣದ ವಿಜಯನಗರ ಶ್ರೀಕೃಷ್ಣ ದೇವರಾಯ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪ.ಂ ಹಂಗಾಮಿ ಅಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 8-30 ಗಂಟೆಗೆ “ಹೊಸ ಅಲೆ ಹೊಸ ವಿಶ್ವಾಸ ಸಂಪೂರ್ಣ ಜವಾಬ್ದಾರಿಯೊಂದಿಗೆ ಪರಿಹಾರ ವಿಕಾಸ” ಎಂಬ ಘೋಷ ವಾಕ್ಯದೊಂದಿಗೆ, ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊಸಪೇಟೆ ರಸ್ತೆ ಮೂಲಕ ಅಶೋಕ ವೃತ್ತ ಮಾರ್ಗವಾಗಿ ವಿಜಯನಗರ ಶ್ರೀಕೃಷ್ಣ ದೇವರಾಯ ಸ್ನಾತಕೋತ್ತರ ಕೇಂದ್ರದ ಆವರಣದವರೆಗೂ “ಜನಜಾಗೃತಿ ಜಾಥ” ನಡೆಯುವುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/11.html
0 Response to "ಜು. 11 ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯೆ ಸ್ಥಿರೀಕರಣ ಪಾಕ್ಷಿಕ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ