ಶೀರ್ಷಿಕೆ : ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ
ಲಿಂಕ್ : ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ
ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ
ಕೊಪ್ಪಳ, ಜು. 11 (ಕರ್ನಾಟಕ ವಾರ್ತೆ): ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯ ನಿರುದ್ಯೋಗಿ ಅಂಗವಿಕಲರ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಸಾಲ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ – 08, ಪರಿಶಿಷ್ಟ ಪಂಗಡ – 04, ಇತರೆ – 18, ಸೇರಿದಂತೆ ಒಟ್ಟು - 30 ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಈ ಯೋಜನೆಯಡಿ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಆಧಾರ ಯೋಜನೆಯಡಿ ಸಾಲ ಪಡೆದ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ. ಅರ್ಜಿ ಸಲ್ಲಿಸಲು 18 ರಿಂದ 55 ವರ್ಷ ವಯೋಮಿತಿಯ ನಿರುದ್ಯೋಗಿಗಳಾಗಿರಬೇಕು. ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ 11,500 ಮತ್ತು ನಗರ ಪ್ರದೇಶದ ಅಭ್ಯಥಿಗಳಿಗೆ ರೂ,24,000 ಗಳಿಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು. ಅರ್ಜಿ ನಮೂನೆ, ಧೃಡೀಕರಿಸಿದ ಅಂಗವಿಕಲರ ಗುರುತಿನ ಚೀಟಿ, ಚಾಲ್ತಿಯಲ್ಲಿರುವ ಧೃಡೀಕರಿಸಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಧೃಡೀಕರಿಸಿದ ವಾಸಸ್ಧಳ ಪ್ರಮಾಣ ಪತ್ರ, ಅಂಗವಿಕಲತೆ ತೋರುವ 02 ಪೋಟೊ, ಸ್ಧಳಿಯ ಸಂಸ್ಧೆಗಳಾದ ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಗಳಿಂದ ಈ ಮೊದಲು, ಸಾಲ ಪಡೆಯದಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಆಗಸ್ಟ್. 07 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಛೇರಿಗೆ ಅಥವಾ ದೂರವಾಣಿ ಸಂಖ್ಯೆ 08539- 221460/ 220496 ಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_13.html
0 Response to "ಆಧಾರ ಯೋಜನೆ : ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ