ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ

ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ
ಲಿಂಕ್ : ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ

ಓದಿ


ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ


ಕೊಪ್ಪಳ, ಜು. 12 (ಕರ್ನಾಟಕ ವಾರ್ತೆ): ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ಯಾವುದೇ ದೂರುಗಳು ಇದ್ದಲ್ಲಿ ಸಾರ್ವಜನಿಕರು ಪೊಲೀಸ್ ದೂರು ಪ್ರಾಧಿಕಾರಕ್ಕೆ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಉಚ್ಚನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾದ ಎ.ಎಸ್. ಪಾಚ್ಚಾಪುರೆ ಅವರು ಹೇಳಿದರು.
    ಕೊಪ್ಪಳ ಜಿಲ್ಲಾ ವಕೀಲರ ಸಂಘ, ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರ ಇವರ ವತಿಯಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬುಧವಾರದಂದು ಹಮ್ಮಿಕೊಳ್ಳಲಾಗಿದ್ದ “ಪೊಲೀಸ್ ದೂರುಗಳ ರಚನೆ ಬಗ್ಗೆ ಜಾಗೃತಿ ಕಾರ್ಯಕ್ರಮ”ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 
    ಕರ್ನಾಟಕ ಪೊಲೀಸ್ ಕಾಯ್ದೆ 2012 ರ ತಿದ್ದುಪಡಿ ಕಲಂ 28 ರಲ್ಲಿ ಪೊಲೀಸ್ ದೂರುಗಳ ಪ್ರಾಧಿಕಾರದ ಬಗ್ಗೆ ತಿದ್ದುಪಡಿ ಯಾಗಿದ್ದು, 5 ಜನರನ್ನು ಒಳಗೊಂಡ ಒಂದು ಸಮಿತಿಯನ್ನು ರಚಿಸಲಾಗಿದ್ದು, ಅದೇ ಪೊಲೀಸ್ ದೂರುಗಳ ಪ್ರಾಧಿಕಾರವಾಗಿದೆ.  ನಿವೃತ್ತ ಹೈಕೊರ್ಟ್‍ನ ನ್ಯಾಯಾಧೀಶರು ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ.  ಪೊಲೀಸ್ ವಿರುದ್ಧ ಯಾವುದೇ ಸಾರ್ವಜನಿಕ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ ಆರೋಪ, ಪೊಲೀಸ್ ವಶದಲ್ಲಿದ್ದಾಗ ಅಪರಾಧಿಯ ಮರಣ, ಅತ್ಯಾಚಾರ ಪ್ರಕರಣ, ಅಪರಾಧಿಗಳಿಗೆ ಮಾರಣಾಂತಿಕ ಹಲ್ಲೆ, ಕಾನೂನಿನ ವಿರುದ್ಧದ ಹಾಗೂ ದುರ್ನಡತೆಗಳಂತಹ ದೂರುಗಳಿದ್ದಲ್ಲಿ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ಸಲ್ಲಿಸಬೇಕು.  ಡಿವೈಎಸ್‍ಪಿ ಹುದ್ದೆಯ ಅಧಿಕಾರಿಗಿಂತ ಮೇಲ್ದರ್ಜೆಯ ಅಧಿಕಾರಿಗಳ ವಿರುದ್ಧದ ದೂರುಗಳನ್ನು ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ, ಹಾಗೂ ಡಿವೈಎಸ್‍ಪಿ ಮತ್ತು ಅದಕ್ಕಿಂತ ಕೆಳದರ್ಜೆ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧದ ದೂರುಗಳಿಂದ್ದಲ್ಲಿ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ಸಲ್ಲಿಸಿಬಹುದು.  ಈಗಾಗಲೆ ಕೊಪ್ಪಳ ಜಿಲ್ಲೆಯಲ್ಲಿಯೂ ಕೂಡ ಪೊಲೀಸ್ ದೂರು ಪ್ರಾಧಿಕಾರ ಅಸ್ತಿತ್ವದಲ್ಲಿದೆ ಎಂದು ಎ.ಎಸ್. ಪಾಚ್ಚಾಪುರೆ ಅವರು ಹೇಳಿದರು.
    ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಪ್ರಾಧಿಕಾರ ಕಛೇರಿಯು ಜಿಲ್ಲಾ ಆಡಳಿತ ಭವನದ ಆವರಣದ ಸ್ಪಂದನಾ ಕೇಂದ್ರದ ಹತ್ತಿರ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿಗಳ ಮೇಲೆ ಯಾವುದೇ ದೂರುಗಳಿದ್ದಲ್ಲಿ “ಕೊಪ್ಪಳ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರ”ಕ್ಕೆ ಸಲ್ಲಿಸಬಹುದು ಎಂದು ಹೇಳಿದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ಅವರು ವಹಿಸಿದ್ದರು.  ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ, ಸಿವಿಲ್ ನ್ಯಾಯಾಧೀಶರಾದ ವಿಜಯಕುಮಾರ ಕನ್ನೂರ, ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಎಂ.ಆರ್. ಕಾಂಬ್ಳೆ, ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯ ಮಹಾಂತೇಶ್ ಮಲ್ಲನಗೌಡರ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಯು. ಪೋಚಗುಂಡಿ, ಉಪಾಧ್ಯಕ್ಷ ಎಸ್.ಹೆಚ್. ಇಂಗಳ್ದಾಳ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ

ಎಲ್ಲಾ ಲೇಖನಗಳು ಆಗಿದೆ ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ ಲಿಂಕ್ ವಿಳಾಸ https://dekalungi.blogspot.com/2017/07/blog-post_16.html

Subscribe to receive free email updates:

0 Response to "ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ : ಎ.ಎಸ್. ಪಾಚ್ಚಾಪುರೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ