ಶೀರ್ಷಿಕೆ : ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, ಜು. 18(ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ (ಐಟಿಐ ಕಾಲೇಜು) ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಲ್ಲಿ ತಾತ್ಕಾಲಿಕವಾಗಿ ಬೋಧನೆ ಮಾಡಲು ಅತಿಥಿ ಬೋಧಕರು ಬೇಕಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ವಿದ್ಯುನ್ಮಾನ ದುರುಸ್ತಿಗಾರ (ಎಲೆಕ್ಟ್ರಾನಿಕ್ಸ್ ಮೆಕಾನಿಕ್) - 02 (ಎನ್‍ಓಎಸ್), ಕಾರ್ಯಾಗಾರ ಲೆಕ್ಕ ಮತ್ತು ವಿಜ್ಞಾನ (ವರ್ಕಶಾಪ್ ಕಲೆಕ್ಷನ್ & ಸೈನ್ಸ್) – 01 (ಎನ್‍ಓ), ಎಂ.ಎಂ.ವಿ - 02 (ಎನ್‍ಓಸ್), ಮೆಕ್ ಅಗ್ರಿ – 01 (ಎನ್‍ಓ), ವೃತ್ತಿಗಳಲ್ಲಿ ಬೋಧನೆ ಮಾಡಲು ಖಾಯಂ ಸಿಬ್ಬಂದಿ ನೇಮಕಾತಿ ಆಗುವವರೆಗೆ ತಾತ್ಕಾಲಿಕವಾಗಿ ಅತಿಥಿ ಬೋಧಕರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೋಬೈಲ್ ನಲ್ಲಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಆಯಾ ವಿಭಾಗಗಳಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸೇವೆಯಿಂದ ನಿವೃತ್ತರಾಗಿರುವ ನೌಕರರೂ ಸಹ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಎಲ್ಲಾ ದಾಖಲೆಗಳ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜುಲೈ. 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಥವಾ ಖುದ್ದಾಗಿ ಸಂಸ್ಥೆಯ ಪ್ರಾಚಾರ್ಯರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸರ ಸಂಭಾವನೆ ನೀಡಲಾಗುವುದು ಎಂದು ಗಂಗಾವತಿ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_23.html
0 Response to "ಗಂಗಾವತಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ