ಶೀರ್ಷಿಕೆ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ
ಲಿಂಕ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ
ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರದ ‘ವಿಜಯ ನಗರ ಬಡಾವಣಿಯಲ್ಲಿ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ ಸೋಮವಾರದಂದು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶರಣಪ್ಪ ಗೌರಿಪುರ ಅವರು ಮಾತನಾಡಿ, ಸರ್ಕಾರವು ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ 6 ರಿಂದ 14 ವರ್ಷದೂಳಗಿನ ಮಕ್ಕಳಿಗೆ ಶಿಕ್ಷಣದೊಂದಿಗೆ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಶಾಲಾ ಸಮವಸ್ತ್ರ, ಶಾಲಾ ಪಠ್ಯ ಪುಸ್ತಕವನ್ನು ಸಹ ಉಚಿತವಾಗಿ ನೀಡುತ್ತಿದೆ. ಸರಕಾರಿ ಶಾಲೆಯಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣ ಸೌಲಭ್ಯ ಯಾವುದೇ ಖಾಸಗಿ ಶಾಲೆಯಲ್ಲಿ ಲಭ್ಯವಿರುವುದಿಲ್ಲ ಆದ್ದರಿಂದ ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಎಂದು ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೇಖರಗೌಡ ಜಿ. ರಾಮತ್ನಾಳ ರವರು ಮಾತನಾಡಿ, ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಹಾಗೂ ಕಾನೂನು ಜಾರಿಗೊಳಿಸಿದೆ ಬಾಲ ಕಾರ್ಮಿಕ ಪದ್ಧತಿ ನಿಷೇಧ ಹಾಗೂ ಕಿಶೋರಾವಸ್ಥೆಯ ಮಕ್ಕಳ ಮಕ್ಕಳ ದುಡಿಮೆ ನಿಯಂತ್ರಣ ಕಾಯ್ದೆ-2015ರನ್ವಯ 14 ವರ್ಷದೊಳಗಿನ ಯಾವುದೇ ಮಗುವು ಶಾಲೆಯಿಂದ ಹೊರಗುಳಿಯುವಂತಿಲ್ಲಾ, ಒಂದು ವೇಳೆ ಶಾಲೆಯಿಂದ ಹೊರಗುಳಿದಲ್ಲಿ ಅತಂಹ ಮಕ್ಕಳನ್ನು ಬಾಲ ಕಾರ್ಮಿಕರು ಎಂದು ಪರಿಗಣಿಸಬಹುದಾಗಿದೆಂದು ತಿಳಿಸುತ್ತದೆ. ಆದ್ದರಿಂದ ಮಕ್ಕಳು ಶಾಲೆಯಿಂದ ಹೊರಗುಳಿದ ಪ್ರಕರಣಗಳು ಕಂಡುಬಂದಲ್ಲಿ ಅಥವಾ ವರದಿಯಾದಲ್ಲಿ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ ಕಲಂ 29 ರಡಿಯಲ್ಲಿ ಪ್ರದತ್ತವಾದ ಅಧಿಕಾರದನ್ವಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ವಿಚಾರಣೆ ಮಾಡಲಾಗುತ್ತದೆ ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರುಗಳಾದ ಮಹಾಲಿಂಗಪ್ಪ ದೋಟಿಹಾಳ, ಹನುಂತಪ್ಪ ಬಿಜಕಲ್ಲ, ಶಾಂತಮ್ಮ ಕಟ್ಟಿಮನಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ವೀರಭದ್ರಯ್ಯ ಹಿರೇಮಠ, ರವಿಕುಮಾರ ಕೆ.ಎಸ್. ಎಸ್.ಬಿ.ಕುರಿ. ಶಂಕರಗೌಡ ಪಾಟೀಲ್, ನಾಗಪ್ಪ ಎ.ಎಸ್.ಐ. ಬಸಪ್ಪ ಹಾದಿಮನಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಬಾಲಕರ ಬಾಲಮಂದಿರ ಸಿಬ್ಬಂದಿಗಳು ವಿಜಯನಗರ ಕಾಲೋನಿಯ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಹೀಗಾಗಿ ಲೇಖನಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/blog-post_38.html
0 Response to "ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಶಾಲಾ ದಾಖಲಾತಿ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ