ಶೀರ್ಷಿಕೆ : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ಲಿಂಕ್ : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ಕೊಪ್ಪಳ, ಜು. 24 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಉದ್ಯೋಗಿನಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ಆದೇಶದಂತೆ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಖಾಯಂ ಕರ್ನಾಟಕದ ನಿವಾಸಿಯಾಗಿರಬೇಕು. ಮಹಿಳಾ ಫಲಾನುಭವಿಗಳ ವಾರ್ಷಿಕ ವರಮಾನ ರೂ. 40,000 ಮೀರಿರಬಾರದು. ಯಾವುದೇ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದೆ. ಅರ್ಜಿಗಳನ್ನು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಪಡೆದು, ಇತ್ತಿಚಿನ 3 ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ (ಅಥವಾ ಆಧಾರ ಕಾರ್ಡ), ಪಡಿತರ ಚೀಟಿ, ಯೋಜನಾ ವರದಿಗಳನ್ನು ಲಗತ್ತಿಸಿ ಆಗಸ್ಟ್. 17 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_427.html
0 Response to "ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ