ಶೀರ್ಷಿಕೆ : ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ
ಲಿಂಕ್ : ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ
ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ
ಕೊಪ್ಪಳ ಜು. 19 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ತಾಲೂಕು ಗಿಣಿಗೇರಾ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಟೆಂಟ್‍ಗಳಲ್ಲಿ ವಾಸವಿರುವ ಹೊರ ರಾಜ್ಯದ ಅಲೆಮಾರಿ ಜನಾಂಗ ಕುಟುಂಬದ ಗರ್ಭಿಣಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳದಿಂದ ಅಲೆಮಾರಿ ಜನಾಂಗ ಗರ್ಭಿಣಿ ತಾಯಂದಿರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಬುಧವಾರದಂದು ಆಯೋಜಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಅವರು ಪೌಷ್ಠಿಕ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿದರು. ಗಿಣಿಗೇರ ಗ್ರಾಮದಲ್ಲಿ ವಾಸವಾಗಿರುವ ಹೊರ ರಾಜ್ಯದಿಂದ ಬಂದಂತಹ ಅಲೆಮಾರಿ ಜನಾಂಗ ಕುಟುಂಬದ ಗರ್ಭಿಣಿ ಮಹಿಳೆಯರಿಗೆ ಮತ್ತು 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆ ಮಾಡುವ ಕುರಿತು ಗಿಣಿಗೇರ ಗ್ರಾಮದ ಬೈ ಪಾಸ್ ರಸ್ತೆಯಲ್ಲಿ ಟೆಂಟ್‍ಗಳಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗದ ಕುಟುಂಬಗಳನ್ನು ಸಮೀಕ್ಷೆ ನಡೆಸಲಾಗಿದ್ದು ಇದರಲ್ಲಿ ಒಟ್ಟು 53 ಕುಟುಂಬಗಳಿವೆ. ಇದರಲ್ಲಿ ಗರ್ಭಿಣಿಯರು 7 ಜನ ಮತ್ತು ಬಾಣಂತಿಯರು 3 ಜನ, ಇದರಲ್ಲಿ 0-3 ವರ್ಷದೊಳಗಿನ ಮಕ್ಕಳ ಸಂಖ್ಯೆ 21 ಮತ್ತು 03 ರಿಂದ 6 ವರ್ಷದೊಳಗಿನ ಮಕ್ಕಳ ಸಂಖ್ಯೆ 22. ಈ ಎಲ್ಲ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಪೌಷ್ಠಿಕ ಆಹಾರ ಸೇವಿಸಿ ಸದೃಢವಾಗಿ ಬೆಳೆÉಯಲು ಪೌಷ್ಠಿಕ ಆಹಾರವನ್ನು ಇಲಾಖೆ ವತಿಯಿಂದ ವಿತರಿಸುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಾಲಪ್ಪ ಡಿ ಕಂದಳ್ಳಿ ಮಾತನಾಡಿ ಕರ್ನಾಟಕದಲ್ಲಿ ವಾಸವಾಗಿರುವ ಮಕ್ಕಳು ಯಾರೇ ಆಗಿರಲಿ ಕರ್ನಾಟಕದವರೇ ಆಗಿರಲಿ ಅಥವಾ ಹೊರ ರಾಜ್ಯದಿಂದ ಬಂದಂತಹ ಮಕ್ಕಳೇ ಆಗಿರಲಿ ಎಲ್ಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತಾಗಬೇಕು ಮತ್ತು ಮಕ್ಕಳು ಸದೃಢವಾಗಿ ಬೆಳೆಯಬೇಕು ಎಂಬುದು ಇಲಾಖೆಯ ಆಶಯವಾಗಿದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿ ಬಡಿಗೇರ ಮಾತನಾಡಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ಇಲಾಖೆಯಿಂದ ಅಲೇಮಾರಿ ಜನಾಂಗದ ಮಕ್ಕಳ ಶಿಕ್ಷಣದ ಕುರಿತು ಸ್ಥಳ ಭೇಟಿ ಪರಿಶೀಲನೆ ನಡೆಸಲಾಗಿದೆ. ಅಂತಹ ಮಕ್ಕಳ ಶಿಕ್ಷಣ ಸಲುವಾಗಿ ಟೆಂಟ್ ಶಾಲೆಯನ್ನು ಪ್ರಾರಂಭಿಸಲು ನಿರ್ಧರಿಸಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಟೆಂಟ್ ಶಾಲೆ ಪ್ರಾರಂಭವಾದ ನಂತರ ಎಲ್ಲ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಎಂದರು.
ಮೇಲ್ವಿಚಾರಕಿ ರೆಹಮತ್ ಬಿ ಪ್ರಾಸ್ಥಾವಿಕ ಮಾತನಾಡಿದರು, ಪ್ರಾಥಮಿಕ ಆರೋಗ್ಯ ಕೇಂದ್ರದ ಶ್ರೀಧರ್, ಅಂಗನವಾಡಿ ಕಾರ್ಯಕರ್ತೆಯರಾದ ಯಮನಕ್ಕ, ಪುಷ್ಪಾ, ಜ್ಯೋತಿ, ಮಂಜುಳಾ, ಯಲ್ಲಮ್ಮ ಹಾಜರಿದ್ದರು. ದೇವರಾಜ ಕಿನ್ನಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹೀಗಾಗಿ ಲೇಖನಗಳು ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ
ಎಲ್ಲಾ ಲೇಖನಗಳು ಆಗಿದೆ ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ ಲಿಂಕ್ ವಿಳಾಸ https://dekalungi.blogspot.com/2017/07/blog-post_43.html
0 Response to "ಅಲೆಮಾರಿ ಜನಾಂಗದ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರ ಕಿಟ್ ವಿತರಣೆ"
ಕಾಮೆಂಟ್ ಪೋಸ್ಟ್ ಮಾಡಿ