ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ

ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ
ಲಿಂಕ್ : ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ

ಓದಿ


ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ


ಕೊಪ್ಪಳ ಜು. 18 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರು, ಬಾಣಂತಿಯರಿಗೆ ವಿತರಿಸಲಾಗುತ್ತಿದ್ದ ಪೂರಕ ಪೌಷ್ಠಿಕ ಆಹಾರವನ್ನು ಇನ್ನು ಮುಂದೆ ಮಾಸ್ಟರ್ ಕಿಟ್ ಬ್ಯಾಗ್ ಮೂಲಕ ವಿತರಿಸುವ ನೂತನ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಕೊಪ್ಪಳ ನಗರದ ಕಾಳಿದಾಸ ನಗರ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಿಸುವ ಮೂಲಕ ನೂತನ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆರಲ್ಲಿನ ಅಪೌಷ್ಠಿಕತೆ ದೂರವಾದಲ್ಲಿ, ಆರೋಗ್ಯವಂತ ಮಗು ಜನಿಸಲು ಸಾಧ್ಯವಾಗಲಿದೆ. ಇದಕ್ಕೆಂದೇ, ಸರ್ಕಾರದ ವತಿಯಿಂದ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ, ಬಾಣಂತಿಯರಿಗೆ ಉತ್ತಮ ಗುಣಮಟ್ಟದ ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ. ಮಹಿಳೆಯರಿಗೆ ನೀಡಲಾಗುವ ಅಕ್ಕಿ, ಗೋಧಿ, ರಾಗಿಹಿಟ್ಟು, ರವ, ಬೆಲ್ಲ, ಶೇಂಗಾ ಹಾಗೂ ಹೆಸರುಕಾಳು ಆಹಾರ ಧಾನ್ಯವನ್ನು ಸದ್ಯ ಪ್ರತ್ಯೇಕವಾಗಿ ನೀಡಲಾಗುತ್ತಿದೆ. ಈ ರೀತಿ ನೀಡಲಾಗುವ ಆಹಾರ ಕೆಲವೆಡೆ ಕೆಲವೇ ಸಾಮಗ್ರಿ ವಿತರಿಸಲಾಗುತ್ತಿದೆ, ಗುಣಮಟ್ಟ, ತೂಕದಲ್ಲಿ ವ್ಯತ್ಯಾಸ ಹೀಗೆ ಹಲವು ಬಗೆಯ ದೂರುಗಳು ಕೇಳಿ ಬರುತ್ತಿತ್ತು. ಇಂತಹ ದೂರುಗಳು ಬಾರದಂತೆ ಹಾಗೂ ಎಲ್ಲ ಆಹಾರ ಸಾಮಗ್ರಿಗಳು ನಿಗದಿತ ತೂಕದಲ್ಲಿ, ನಿಗದಿತ ಪ್ರಮಾಣದಲ್ಲಿ ಮಹಿಳಾ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಸರ್ಕಾರದ ಯೋಜನೆ ಸಾಕಾರವಾಗಲು ಸಾಧ್ಯ ಎಂಬುದನ್ನು ಮನಗಂಡು, ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರವನ್ನು ಮಹಿಳಾ ಫಲಾನುಭವಿಗಳಿಗೆ ವಿತರಿಸಲು ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಂತಹ ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಕೊಪ್ಪಳ ತಾಲೂಕಿನಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಶೀಘ್ರದಲ್ಲಿಯೇ ಇದು ಜಿಲ್ಲೆಯ ಎಲ್ಲ ತಾಲೂಕುಗಳಿಗೂ ವಿಸ್ತರಣೆಯಾಗಲಿದೆ. ಮಹಿಳೆಯರಿಗೆ ನೀಡಲಾಗುವ ಮಾಸ್ಟರ್ ಕಿಟ್ ಬ್ಯಾಗ್ 02 ಕೆ.ಜಿ. ಅಕ್ಕಿ, 02 ಕೆ.ಜಿ. ಗೋಧಿ, 01 ಕೆ.ಜಿ. ರಾಗಿಹಿಟ್ಟು, 01 ಕೆ.ಜಿ. ರವ, 500 ಗ್ರಾಂ ಬೆಲ್ಲ, 250 ಗ್ರಾಂ ಶೇಂಗಾ ಹಾಗೂ 450 ಗ್ರಾಂ ಹೆಸರುಕಾಳು ಸೇರಿದಂತೆ ಒಟ್ಟು 7 ಕೆ.ಜಿ, 200 ಗ್ರಾಂ ತೂಕದ ಪೂರಕ ಪೌಷ್ಠಿಕ ಆಹಾರವನ್ನು ಒಳಗೊಂಡಿರುತ್ತದೆ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಪ್ರತಿ ತಿಂಗಳು ಇಂತಹ ಮಾಸ್ಟರ್ ಕಿಟ್ ಬ್ಯಾಗ್ ವಿತರಿಸಲಾಗುವುದು. ಗರ್ಭಿಣಿಯರು, ಬಾಣಂತಿಯರು ಈ ಆಹಾರ ಪದಾರ್ಥಗಳನ್ನು ಸರಿಯಾಗಿ ಸೇವಿಸಬೇಕು ಅಲ್ಲದೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುವುದರ ಜೊತೆಗೆ, ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಿಕೊಳ್ಳಬೇಕು. ಹೆಚ್ಚು ಪೋಷಕಾಂಶವಿರುವ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ, ಸದೃಢ ಮತ್ತು ಆರೋಗ್ಯವಂತ ಮಗು ಜನಿಸಲು ಸಾಧ್ಯವಾಗಲಿದೆ ಎಂದು ಮಹಿಳಾ ಫಲಾನುಭವಿಗಳಿಗೆ ಹೇಳಿದರು. ಎಲ್ಲ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಸಕಾಲಕ್ಕೆ ಈ ಮಾಸ್ಟರ್ ಆಹಾರ ಕಿಟ್ ಬ್ಯಾಗ್‍ಗಳನ್ನು ನಿಗದಿತ ಸಮಯದಲ್ಲಿ ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಅಂಗನವಾಡಿ ಕೇಂದ್ರದ ಸಮೀಕ್ಷಾ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.ಲ
ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಾಲಪ್ಪ ಕಂದಳ್ಳಿ, ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ಹಡಪದ ಸೇರಿದಂತೆ ಕಾಳಿದಾಸ ನಗರದ ಗರ್ಭಿಣಿಯರು, ಬಾಣಂತಿಯರು, ತಾಯಂದಿರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ

ಎಲ್ಲಾ ಲೇಖನಗಳು ಆಗಿದೆ ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/07/blog-post_47.html

Subscribe to receive free email updates:

0 Response to "ಕಿಟ್ ಬ್ಯಾಗ್ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಪ್ರಾರಂಭ- ಎಂ. ಕನಗವಲ್ಲಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ