ಶೀರ್ಷಿಕೆ : ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜು. 07 (ಕರ್ನಾಟಕ ವಾರ್ತೆ): ಕಾರಟಗಿ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ. ಶೇ.7.25ರ ಯೋಜನೆಯಡಿ ವಿದ್ಯಾರ್ಥಿ ಪ್ರೋತ್ಸಾಹಧನ, ಅಡುಗೆ ಅನಿಲ ಸಿಲೆಂಡರ್ ಮತ್ತು ಒಲೆ ಹಾಗೂ ವೈಯಕ್ತಿಕ ಶೌಚಾಲಯ ನಿರ್ಮಾಣ ಇತ್ಯಾದಿ ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಇತರೆ ಬಡಜನರಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ಪ್ರೋತ್ಸಾಹಧನ ಎಸ್.ಎಸ್.ಎಲ್.ಸಿ-ರೂ.3000/-, ಐ.ಟಿ.ಐ ಇತರೆ ವೃತ್ತಿಪರ ತರಗತಿ ರೂ.3000/-, ಪಿಯುಸಿ. ಉದ್ಯೋಗ ಆಧಾರಿತ ಡಿಪ್ಲೋಮಾ ರೂ.4500, ಪದವಿ ತರಗತಿಗೆ ರೂ.6000/-, ಎಂ.ಎ./ಎಂ.ಎಸ್.ಸಿ/ಎಂ.ಕಾಂ/ ಎಂ.ಎಸ್.ಡಬ್ಲ್ಯೂ/ಎಂ.ಸಿ.ಎ/ಬಿ.ಇ/ರೂ.15000/- ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಮತದಾರರ ಗುರುತಿನ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಪ್ರಸ್ತುತ ವ್ಯಾಂಸಗ ಪ್ರಮಾಣ ಪತ್ರ, ಶಾಲೆ/ಕಾಲೇಜನ ಸಂಪೂರ್ಣ ವಿಳಾಸ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಇತ್ಯಾದಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಅಡುಗೆ ಅನಿಲ ಸಿಲೆಂಡರ್ ಮತ್ತು ಒಲೆ ಇತ್ಯಾದಿ ಸೌಲಭ್ಯ ಪಡೆಯಲು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಅರ್ಜಿದಾರರ ಫೋಟೋ, ಹಾಗೂ ವೈಯಕ್ತಿಕ ಶೌಚಾಲಯ ದಾಖಾಲಾತಿಗಳ ವಿವರ ಆಧಾರ ಕಾರ್ಡ, ರೇಷನ್ ಕಾರ್ಡ, ಗುರುತಿನ ಚೀಟಿ, ಬ್ಯಾಂಕ ಪಾಸ್ ಬುಕ್ ನಂ, ಪಾಸ್ ಪೋಟೋ, ಫಾರಂ -3, ಟ್ಯಾಕ್ಸ್ ಪೇಡ್ ರಶೀದಿ, ಜುಲೈ 13 ರೊಳಗಾಗಿ ಕಾರಟಗಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_49.html
0 Response to "ಕಾರಟಗಿ: ವ್ಯಕ್ತಿ ಸಂಬಂಧಿತ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ