ಶೀರ್ಷಿಕೆ : ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ
ಲಿಂಕ್ : ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ
ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ
ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಹಲವು ಕ್ರಮಗಳಿಂದಾಗಿ ಈ ಬಾರಿಯ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆ 11 ನೇ ಸ್ಥಾನ ಪಡೆದಿದ್ದು, ಬರುವ ವರ್ಷ ಜಿಲ್ಲೆ 05 ರೊಳಗೆ ಸ್ಥಾನಗಳಿಸಲು ಈಗಿನಿಂದಲೇ ಫಲಿತಾಂಶ ಸುಧಾರಣಾ ಚಟುವಟಿಕೆಗಳನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಯೋಜನೆ ಯುನಿಸೆಫ್ ವತಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಹಾಗೂ ಅತಿ ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳಿಗೆ ಸನ್ಮಾನ ಕೈಗೊಳ್ಳುವ ಸಲುವಾಗಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಸಾಧನೆಗಳನ್ನು ಗಮನಿಸಿದಾಗ, ಕೊಪ್ಪಳ ಜಿಲ್ಲೆ ಅತ್ಯಂತ ಕೆಳಮಟ್ಟದಲ್ಲಿತ್ತು. ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರೌಢಶಾಲಾ ಶಿಕ್ಷಕರ ಸಹಕಾರದಿಂದ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಈ ಬಾರಿಯ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆ ರಾಜ್ಯದಲ್ಲಿಯೇ 11 ನೇ ಸ್ಥಾನ ಗಳಿಸಿದೆ. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಕೊಪ್ಪಳ ಜಿಲ್ಲೆ ಮೊದಲ ಸ್ಥಾನಗಳಿಸಿದ್ದು, ಸಂತಸದ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಸುಮಾರು 150 ಸರ್ಕಾರಿ ಪ್ರೌಢಶಾಲೆಗಳಿದ್ದು, ಈ ಪೈಕಿ ಕೇವಲ 03 ಶಾಲೆಗಳಲ್ಲಿ ಮಾತ್ರ ಶೇ. 100 ರಷ್ಟು ಫಲಿತಾಂಶ ಪಡೆಯಲು ಸಾಧ್ಯವಾಗಿದೆ ಎಂದ ಜಿಲ್ಲಾಧಿಕಾರಿಗಳು, ಈ ಮೂರೂ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಹಾಗೂ ಡಿಡಿಪಿಐ ಶ್ಯಾಮಸುಂದರ್ ಅವರಿಗೆ ವೈಯಕ್ತಿಕವಾಗಿ ತಲಾ ಒಂದು ಐಬಾಲ್ ಟ್ಯಾಬ್ ಅನ್ನು ಬಹುಮಾನವಾಗಿ ನೀಡಿದರು. ಇದೇ ರೀತಿ ಬರುವ ದಿನಗಳಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆಯುವ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು ಎಂದರು.
ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಬಡ ಮಕ್ಕಳು ಕಲಿಯಲು ಬರುತ್ತಿದ್ದು, ಶಿಕ್ಷಕರು, ಆ ಮಕ್ಕಳಿಗೆ ತಂದೆ-ತಾಯಿಯ ಸ್ಥಾನದಲ್ಲಿ ನಿಂತು, ಪ್ರೀತಿಸಿ, ಮಕ್ಕಳ ಶ್ರೇಯಸ್ಸಿಗೆ ಪ್ರಾಮಾಣಿಕ ಯತ್ನ ಮಾಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ, ಅವರ ಭವಿಷ್ಯ ಉಜ್ವಲಗೊಂಡು, ಜೀವಮಾನವಿಡೀ ಮಕ್ಕಳ ಮನಸ್ಸಿನಲ್ಲಿ ಶಿಕ್ಷಕರು ಉಳಿಯುತ್ತೀರಿ. ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆ 05 ರೊಳಗೆ ಸ್ಥಾನ ಗಳಿಸುವಂತಾಗಬೇಕು. ಈ ದಿಸೆಯಲ್ಲಿ ಸುಧಾರಣಾ ಚಟುವಟಿಕೆಗಳನ್ನು ಈಗಿನಿಂದಲೇ ಪ್ರಾರಂಭಿಸಿ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಶಿಕ್ಷಕರಿಗೆ ಮನವಿ ಮಾಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು ಮಾತನಾಡಿ, ಈಗಿನ ಕಾಲ ಅತ್ಯಂತ ಸ್ಪರ್ಧಾತ್ಮಕವಾಗಿದ್ದು, ಹೆಚ್ಚು ಫಲಿತಾಂಶ ಹಾಗೂ ಅಂಕ ಗಳಿಸುವವರಿಗೆ ಸ್ಪರ್ಧಾತ್ಮಕ ದೃಷ್ಟಿಯಲ್ಲಿ ಹೆಚ್ಚಿನ ಆದ್ಯತೆ ದೊರೆಯುವುದು ಸಹಜವಾಗಿದೆ. ಕಡಿಮೆ ಫಲಿತಾಂಶ ಪಡೆಯುವ ಶಾಲೆಗಳು ತಾತ್ಸಾರಕ್ಕೆ ಒಳಗಾದರೆ, ವಿದ್ಯಾರ್ಥಿಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಅವಕಾಶ ಕಡಿಮೆಯಾಗುತ್ತಿದೆ. ಹೀಗಾಗಿ ಫಲಿತಾಂಶ ಸುಧಾರಣೆಗೆ ಶಾಲೆಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಲು ಪ್ರಾರಂಭಿಸಬೇಕು. ಸಣ್ಣ, ಸಣ್ಣ ಪ್ರಯತ್ನಗಳು ಉತ್ತಮ ಫಲಿತಾಂಶ ಮೂಡಿಸುವಲ್ಲಿ ಪೂರಕವಾಗುತ್ತವೆ. ಶಕ್ತಿ ಮೀರಿ ಯತ್ನಿಸಿದಾಗ ಮಾತ್ರ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯ. ಮಕ್ಕಳಿಗೆ ಶಾಲೆಗಳಲ್ಲಿ ಪಠ್ಯ ಬೋಧನೆ ಜೊತೆಗೆ, ಜೀವನ ಕೌಶಲ್ಯ, ಸಮಾಜ ಸುಧಾರಣೆ, ಪರಿಸರ ಸ್ವಚ್ಛತೆ, ಮುಂದಾಳತ್ವ ಗುಣ, ಪರಿಸ್ಥಿತಿಗಳ ನಿರ್ವಹಣೆ ಮುಂತಾದ ಮೌಲ್ಯಾಧಾರಿತ ವಿಷಯಗಳನ್ನು ಕಲಿಸುವತ್ತಲೂ ಹೆಚ್ಚಿನ ಆಧ್ಯತೆ ನೀಡಬೇಕು. ಜಿಲ್ಲೆಯಲ್ಲಿನ ಶಾಲೆಗಳ ಶೌಚಾಲಯ ಸ್ಥಿತಿ-ಗತಿ ತೃಪ್ತಿಕರವಾಗಿಲ್ಲ. ಸಮರ್ಪಕವಾಗಿ ನಿರ್ವಹಣೆ ಮಾಡುವತ್ತ ಗಮನ ನೀಡಬೇಕು. ಶೌಚಾಲಯಗಳ ನಿರ್ಮಾಣ ಹಾಗೂ ಬಳಕೆಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿತ್ಯ ಶಾಲೆಗಳಲ್ಲಿ ಆಗಬೇಕು ಎಂದು ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಬಾರಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಅಲ್ಲದೆ ಪ್ರಸಕ್ತ ವರ್ಷವೂ ಇನ್ನಷ್ಟು ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀದೇವಿ ಗದ್ದಿಗೌಡರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಯುನಿಸೆಫ್‍ನ ಹರೀಶ್ ಜೋಗಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ 2016-17 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಶೇ. 100 ರಷ್ಟು ಫಲಿತಾಂಶ ಪಡೆದ 28 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೂ ಸನ್ಮಾನಿಸಿ ಗೌರವಿಸಲಾಯಿತು.
ಹೀಗಾಗಿ ಲೇಖನಗಳು ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/07/blog-post_5.html
0 Response to "ಎಸ್‍ಎಸ್‍ಎಲ್‍ಸಿ ಫಲಿತಾಂಶ : ಐದರೊಳಗೆ ಸ್ಥಾನಪಡೆಯಲು ಯತ್ನಿಸಿ- ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ