ಶೀರ್ಷಿಕೆ : ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್
ಲಿಂಕ್ : ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್
ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್
ಕೊಪ್ಪಳ ಜು. 12 (ಕರ್ನಾಟಕ ವಾರ್ತೆ): ನಿವೇಶನ ಹೊಂದಿರುವ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ವಸತಿ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಎಲ್ಲರಿಗೂ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ಒದಗಿಸುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ತಿಳಿಸಿದ್ದಾರೆ.
ನಿವೇಶನ ಹೊಂದಿರುವ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮನೆ ಒದಗಿಸಲು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಘೋಷಿಸಿರುವ ಪ್ರಕಾರ, ನಮ್ಮ ಸರ್ಕಾರ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಬೇಡಿಕೆ ಮೇಲೆ ಮನೆ ಒದಗಿಸಲು ಮುಂದಾಗಿದೆ. ನಿವೇಶನ ಹೊಂದಿರುವ ವಸತಿ ರಹಿತ ಪರಿಶಿಷ್ಟ ಕುಟುಂಬಗಳು ಆಯಾ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅರ್ಹ ಕುಟುಂಬಗಳನ್ನು ಗುರುತಿಸಿ, ಅಂತಹವರಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ಒದಗಿಸಲಾಗುವುದು. ಈ ಯೋಜನೆಯಡಿ ಬೇಡಿಕೆ ಮೇಲೆ ಮನೆ ನಿರ್ಮಾಣ ಕಾರ್ಯಕ್ರಮ ಇರುವುದರಿಂದ, ಈ ಯೋಜನೆಗೆ ಗುರಿಯ ಗರಿಷ್ಟ ಮಿತಿ ಇರುವುದಿಲ್ಲ. ಗ್ರಾಮ ಪಂಚಾಯತಿಗಳಲ್ಲಿ ಎಲ್ಲ ಅರ್ಹ ಪ.ಜಾತಿ ಮತ್ತು ಪ.ಪಂಗಡದ ಕುಟುಂಬಗಳಿಗೆ ಗ್ರಾಮ ಸಭೆಯಿಂದ ಆಯ್ಕೆ ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳನ್ನು ನಿಯಮಾನುಸಾರ ಆಯ್ಕೆ ಮಾಡುವಂತೆ ಈಗಾಗಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ಎಲ್ಲ ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮನವಿ ಮಾಡಿಕೊಂಡಿದ್ದಾರೆ.
ಹೀಗಾಗಿ ಲೇಖನಗಳು ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್
ಎಲ್ಲಾ ಲೇಖನಗಳು ಆಗಿದೆ ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್ ಲಿಂಕ್ ವಿಳಾಸ https://dekalungi.blogspot.com/2017/07/blog-post_55.html
0 Response to "ನಿವೇಶನ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಎಲ್ಲರಿಗೂ ಮನೆ- ರಾಘವೇಂದ್ರ ಹಿಟ್ನಾಳ್"
ಕಾಮೆಂಟ್ ಪೋಸ್ಟ್ ಮಾಡಿ