ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಕ್ : ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಓದಿ


ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಜು. 01 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಸಿದ್ದಾಪುರ ಪದವಿ ಪೂರ್ವ ವಸತಿ ಕಾಲೇಜಿನ ಪ್ರಸಕ್ತ ಸಾಲಿನ ಪ್ರಥಮ ಪಿ.ಯು.ಸಿ. ವಿಜ್ಞಾನ ಕೋರ್ಸುಗಳಿಗೆ ಪ್ರವೇಶ ಆರಂಭಗೊಂಡಿದ್ದು, ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
    ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮುಂದುವರೆದ ಶಿಕ್ಷಣ ನೀಡವ ಹಿತದೃಷ್ಟಿಯಿಂದ ಸರ್ಕಾರವು ಜಿಲ್ಲೆಗೊಂದರಂತೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದಲೆ 30 ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲಾಗಿದೆ.  ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಬ್ಯಾಸ ನೀಡಲಾಗುತ್ತಿದೆ.  ಸಾಮಾನ್ಯ ವರ್ಗ, ಪ.ಜಾತಿ/ ಪ.ವರ್ಗ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಪದವಿ ಪೂರ್ವ (ವಿಜ್ಞಾನ) ಶಿಕ್ಷಣವನ್ನು ಕಲ್ಪಿಸಲಾಗಿದೆ. 
    ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಶೇ.50 ಸೀಟುಗಳು ವಿದ್ಯಾರ್ಥಿನಿಯರಿಗೆ ಹಾಗೂ ಶೇ.50 ಸೀಟುಗಳು ವಿದ್ಯಾರ್ಥಿಗಳಿಗೆ ಲಭ್ಯವಾಗಿವೆ.  ಇಂಗ್ಲೀಷ್ ಮಾಧ್ಯಮದಲ್ಲಿ ಪೂರ್ಣ ಪ್ರಮಾಣದಲ್ಲಿ ಶಿಕ್ಷಣ ನೀಡಲಾಗುತ್ತದೆ.  ಪ್ರಥಮ ಪಿಯುಸಿಯಲ್ಲಿ ಪ್ರವೇಶ ಪಡೆದು ದ್ವಿತೀಯ ಪಿಯುಸಿ ವರೆಗೆ ವಿದ್ಯಾಭ್ಯಾಸ ಮಾಡಬಹುದಾಗಿದೆ.  ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ. ಸಂಯೋಗಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು.  
     ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ, ಹಿಂದುಳಿದ ವರ್ಗದ ಪ್ರವರ್ಗ-1 ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ, ಹಾಗೂ ಹಿಂದುಳಿದ ವರ್ಗ 2ಎ, 2ಬಿ, 3ಎ, 3ಬಿ ಗುಂಪಿಗೆ ಸೇರಿದ ಹಿಂದುಳಿದ ವರ್ಗದವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 1 ಲಕ್ಷ, ಮಿತಿಯಲ್ಲಿರಬೇಕು.  ಎಸ್‍ಎಸ್‍ಎಲ್‍ಸಿ ಹಂತ ಇರುವ ಎಲ್ಲಾ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು  ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಜು. 01 ರಿಂದ ಅರ್ಜಿ ಫಾರಂಗಳನ್ನು ನೀಡಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಮೊರಾರ್ಜಿ ದೇಸಾಯಿ (ಉನ್ನತಿಕರಿಸಿದ) ವಸತಿ ಶಾಲೆ ಸಿದ್ದಾಪುರ (ಜಮಾಪುರ), ತಾಲೂಕ ಗಂಗಾವತಿ, ಜಿಲ್ಲಾ ಕೊಪ್ಪಳ, ಇಲ್ಲಗೆ ಜುಲೈ. 10 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_57.html

Subscribe to receive free email updates:

0 Response to "ಸಿದ್ದಾಪುರ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ