ಶೀರ್ಷಿಕೆ : ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜು. 07 (ಕರ್ನಾಟಕ ವಾರ್ತೆ): ಕೊಪ್ಪಳದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿ ಇವರ ಅನುಧಾನದಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸೌಲಭ್ಯ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಯೋಜನೆಗಳ ವಿವರ ಇಂತಿವೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲ ಯೋಜನೆ, ಅರಿವು-ಶಿಕ್ಷಣ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ ಹಾಗೂ ವೃತ್ತಿ ತರಬೇತಿ ಯೋಜನೆಗಳನ್ನು ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾತ್ತಿದ್ದು, ಶೇ.50 ರಷ್ಟು ಗೊಲ್ಲ ಸಮುದಾಯಕ್ಕೆ ಹಾಗೂ ಶೇ.50 ರಷ್ಟು ಇತರೆ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಲಾಗುವುದು.
ಸೌಲಭ್ಯ ಪಡೆಯಲಿಚ್ಛಿಸುವ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರು ಕೊಪ್ಪಳದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ಆಯಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ನಿಗದಿತ ಅರ್ಜಿ ನಮೂನೆಗಳನ್ನು ಜುಲೈ. 15 ರೊಳಗಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ. 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಯನ್ನು ಸಂಪರ್ಕಿಸಬಹುದು. ಮತ್ತು ನಿಗಮದ ವೆಬ್ಸೈಟ್ http://ift.tt/2rXHMBJ ವೀಕ್ಷಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_66.html
0 Response to "ಅಲೆಮಾರಿ/ ಅರೆ ಅಲೆಮಾರಿ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ