ಶೀರ್ಷಿಕೆ : ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜು. 24 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ಸೂಚನೆಯಂತೆ ಪ್ರಸಕ್ತ ಸಾಲಿಗೆ ಸಮೃದಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ತಲಾ 10,000 ರೂ. ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಜಿಲ್ಲೆಯಲ್ಲಿ 400 ಫಲಾನುಭವಿಗಳ ಗುರಿ ನಿಗದಿ ಪಡಿಸಿದ್ದು, ಅರ್ಜಿ ಸಲ್ಲಿಸಲು 18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಖಾತೆ ಹೊಂದಿರಬೇಕು. ಅರ್ಜಿಗಳನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಅಥವಾ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಗಳಲ್ಲಿ ಪಡೆದು, ಇತ್ತೀಚಿನ 4 ಭಾವಚಿತ್ರ, ಬ್ಯಾಂಕ್ ಪಾಸ್‍ಬುಕ್ ಝರಾಕ್ಸ್, ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್, ಪಡಿತರ ಚೀಟಿ, ಬೀದಿ ಬದಿ ವ್ಯಾಪಾರಿ ಎಂದು ಪೌರಾಡಳಿತ ಇಲಾಖೆಯಿಂದ ನೊಂದಣಿ ಮಾಡಿಸಿರುವ/ ನಗರಸಭೆ/ ಪಟ್ಟಣ ಪಂಚಾಯತ್ ಇಲಾಖೆಯಿಂದ ನೊಂದಣಿ ಮಾಡಿಸಿರುವ ಗುರುತಿನ ಚೀಟಿ, ಗ್ರಾಮೀಣ ಪ್ರದೇಶದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ನೋಂದಣಿ ಮಾಡಿಸಿರುವ ದೃಢೀಕರಿಸಿದ ಗುರುತಿನ ಚೀಟಿ, ಅರ್ಜಿದಾರರ ವಯಸ್ಸು ದೃಢೀಕರಿಸುವ ದಾಖಲೆ, ಟಿ.ಸಿ ಅಥವಾ ಸರ್ಕಾರಿ ವೈದ್ಯರಿಂದ ವಯಸ್ಸಿನ ದೃಢೀಕರಣ ಪತ್ರ, ಫಲಾನುಭವಿಯನ್ನೊಳಗೊಂಡ ವ್ಯಾಪಾರ ಮಾಡುತ್ತಿರುವ ಸ್ಥಳದ ಭಾವಚಿತ್ರ ಇತ್ಯಾದಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ, ಆಗಸ್ಟ್. 17 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_705.html
0 Response to "ಸಮೃದಿ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ