ಶೀರ್ಷಿಕೆ : ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ
ಲಿಂಕ್ : ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ
ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ
ಕೊಪ್ಪಳ, ಜು. 26 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ವಿಶೇಷ ಚಿಕಿತ್ಸಾ ಘಟಕ (ನಿರ್ಭಯ ಕೇಂದ್ರ)-181 ವತಿಯಿಂದ ಗಂಗಾವತಿ ನಗರದ ವಿವಿಧ ಪದವಿ ಪೂರ್ವ ಕಾಲೇಜುಗಳಲ್ಲಿ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು
ಗಂಗಾವತಿಯ ಕಾರುಣ್ಯ ಸ್ವಾತಂತ್ರ ಪದವಿ ಪೂರ್ವ ಕಾಲೇಜು, ಲಯನ್ಸ ಪದವಿ ಪೂರ್ವ ಕಾಲೇಜು ಹಾಗೂ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕಾಲೇಜುಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ವಿಶೇಷ ಚಿಕಿತ್ಸಾ ಘಟಕದ ಉದ್ದೇಶ ಮತ್ತು ದೊರೆಯುವ ಉಚಿತ ದೂರವಾಣಿ ಸೇವೆ 08539-225181 ಬಗ್ಗೆ ಮತ್ತು ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಾದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವರದಕ್ಷಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ತಡೆ ಕುರಿತಂತೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳು ಎದುರಿಸುವ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಸಮಾಲೋಚಕರಾದ ಶಿಲ್ಪಾ ಬಾರಕೇರ, ಕಾನೂನು ಸಲಹೆಗಾರರಾದ ಉಮಾ ಹಿರೇಮಠ ಕಾಲೇಜುಗಳ ಪ್ರಾಚಾರ್ಯರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು, ಅಂಗನವಾಡಿ ವಲಯ ವೃತ್ತ ಮೇಲ್ವಿಚಾರಕಿಯರು, ಸೇರಿದಂತೆ ಮಹಿಳಾ ವಿಶೇಷ ಚಿಕಿತ್ಸಾ ಘಟಕದ (ನಿರ್ಭಯ ಕೇಂದ್ರ) ಸಿಬ್ಬಂದಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/07/blog-post_793.html
0 Response to "ಕಾಲೇಜು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ