ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ

ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ
ಲಿಂಕ್ : ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ

ಓದಿ


ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ

ಕೊಪ್ಪಳ, ಜು. 06 (ಕರ್ನಾಟಕ ವಾರ್ತೆ): “ಸ್ವಚ್ಛ ಭಾರತ ಮಿಷನ್” ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು ಜಿಲ್ಲಾ ಸಾಕ್ಷರತಾ ಯೋಜನೆಯ ಪ್ರೇರಕರಿಗೆ ಕರೆ ನೀಡಿದರು.

    ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ವತಿಯಿಂದ “ಸ್ವಚ್ಛ ಭಾರತ ಮತ್ತು ಸಾಕ್ಷರ ಭಾರತ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ ಮನೆಗೆ ಒಂದರಂತೆ ಶೇ.70 ರಷ್ಟು ಶೌಚಾಲಗಳು ಈಗಾಗಲೆ ನಿರ್ಮಾಣ ವಾಗಿದ್ದು, ಇನ್ನೂ ಶೇ.30 ರಷ್ಟು ನಿರ್ಮಾಣ ಬಾಕಿ ಇದೆ.  ಬಾಕಿ ಉಳಿದ ಪ್ರದೇಶಗಳಲ್ಲಿ ಐವತ್ತು ದಿನಗಳ ಒಳಗಾಗಿ ಶೌಚಾಲಯಗಳನ್ನು ನಿರ್ಮಿಸಿ ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು.  ಸ್ವಚ್ಛ ಭಾರತ ಮತ್ತು ಸಾಕ್ಷರ ಭಾರತ ಕಾರ್ಯಕ್ರಮದಡಿ ಸ್ವಚ್ಛತೆ ಹಾಗೂ ಶಿಕ್ಷಣಕ್ಕಾಗಿ ಪ್ರತಿ ಗ್ರಾಮ ಪಂಚಾಯತಿ ವತಿಯಿಂದ ಇಬ್ಬರಂತೆ ಪ್ರೇರಕರು ಕಾರ್ಯನಿರ್ವಹಿಸುತ್ತಿದ್ದಾರೆ.  ಇವರು ಅನಕ್ಷರಸ್ಥ ಹಿರಿಯ ನಾಗರೀಕರಿಗೆ ಕಲಿಕಾ ತರಬೇತಿಯನ್ನು ನೀಡುತ್ತಿದ್ದಾರೆ.  ಶೌಚಾಲಯ ನಿರ್ಮಾಣಕ್ಕೂ ಸಹ ಉತ್ಸಾಹಪೂರ್ವಕವಾಗಿ ಶ್ರಮಿಸುತ್ತಿದ್ದಾರೆ.  ಪ್ರತಿಯೊಬ್ಬರು ಕನಿಷ್ಠ 10 ಶೌಚಾಲಯಗಳನ್ನು ನಿರ್ಮಿಸಲು ಪ್ರೇರೇಪಿಸಬೇಕು.  ಅಂತಹವರಿಗೆ ಪ್ರತಿ ಶೌಚಾಲಯಕ್ಕೆ ರೂ. 150 ರಂತೆ ಪ್ರೋತ್ಸಾಹಧನವನ್ನು ನೀಡಿ ಸನ್ಮಾನಿಸಲಾಗುವುದು.  ಯಾವ ಮನೆಗಳಲ್ಲಿ ಶೌಚಾಲಯ ಇಲ್ಲ ಎಂಬುವುದರ ಬಗ್ಗೆ ಪಟ್ಟಿ ತಯಾರಿಸಿ, ಕೂಡಲೇ ಶೌಚಾಲಯ ನಿರ್ಮಿಸಲು ಪ್ರಯತ್ನಿಸಿ.  ಮೊದಲು ಮನೆಗಳಲ್ಲಿ, ಶಾಲೆಗಳಲ್ಲಿ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯಗಳು ನಿರ್ಮಾಣವಾಗಬೇಕು.  ಯಾರು ಗ್ರಾಮಗಳಲ್ಲಿ 100 ಶೌಚಾಲಯಗಳನ್ನು ನಿರ್ಮಿಸಲು ಪ್ರೇರಣೆ ನೀಡುತ್ತಾರೆಯೋ ಅಂತಹ ಪ್ರೇರಕರಿಗೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು ಹೇಳಿದರು. 
ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಉಮಾದೇವಿ ಸೊನ್ನದ ಅವರು ಮಾತನಾಡಿ, ಸ್ವಚ್ಛ ಭಾರತ ಅಭಿಯಾನದಡಿ ಕರ್ನಾಟಕ ಮುಂಚೂಣಿಯಲ್ಲಿದೆ.  ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಆರೋಗ್ಯ ಇರುತ್ತದೆ.  ಉತ್ತಮ ಆರೋಗ್ಯ, ಶಿಕ್ಷಣ ಎಲ್ಲರೂ ಪಡೆದುಕೊಳ್ಳಬೇಕು.  ಶೌಚಾಲಯ ನಿರ್ಮಿಸಲು ಎಲ್ಲರೂ ಪಣತೊಡಿ, ಕೊಪ್ಪಳ ಜಿಲ್ಲೆಯಲ್ಲಿ ಇನ್ನೂ 90 ಸಾವಿರಕ್ಕೂ ಅಧಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದ್ದೇವೆ.   ಶೌಚಾಲಯಗಳ ನಿರ್ಮಾಣದ ಜೊತೆ-ಜೊತೆಯಲ್ಲಿ ಸಾಕ್ಷರತೆ ಕಾರ್ಯಕ್ರಮಕ್ಕೆ ಸ್ಪಂದಿಸಿ ಎಂದು ಹೇಳಿದರು.   
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಸೇರಿದಂತೆ ವಿವಿಧ ಗ್ರಾ.ಪಂ ಪಿ.ಡಿ.ಓ.ಗಳು, ಪ್ರೇರಕರು ಉಪಸ್ಥಿತರಿದ್ದರು.  ಕೆಲ ಪ್ರೇರಕರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ, ತಾವು ಕನಿಷ್ಟ 100 ಶೌಚಾಲಯಗಳನ್ನು ನಿರ್ಮಾಣ  ಮಾಡಿಸುತ್ತೆವೆಂದು ಭರವಸೆ ನೀಡಿದರು.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ ಲಿಂಕ್ ವಿಳಾಸ https://dekalungi.blogspot.com/2017/07/blog-post_81.html

Subscribe to receive free email updates:

0 Response to "ಕೊಪ್ಪಳ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ : ವೆಂಕಟ್‍ರಾಜಾ"

ಕಾಮೆಂಟ್‌‌ ಪೋಸ್ಟ್‌ ಮಾಡಿ