ಶೀರ್ಷಿಕೆ : ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜು. 27 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯ ವಲಯ ಯೋಜನೆಯಡಿ ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ತೋಟಗಾರಿಕೆಯಲ್ಲಿ ತೊಡಗಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬರಗಾಲದ ಸಮಯದಲ್ಲಿ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ನೀರಿನ ಅಭಾವವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾನ್ಯ ರೈತರಿಗೆ ಶೇ. 50 ರಂತೆ ಗರಿಷ್ಠ ರೂ. 50,000/-ಗಳನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ರೈತರಿಗೆ ಶೇ.90 ರಂತೆ ಗರಿಷ್ಠ ರೂ. 90,000/-ಗಳ ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸಲು ತೋಟಗಾರಿಕೆಯಲ್ಲಿ ತೊಡಗಿರುವ ರೈತ ಫಲಾನುಭವಿಗಳು ಬಹು ವಾರ್ಷಿಕ ತೋಟಗಾರಿಕೆ ಬೆಳೆಗಳನ್ನು ಬೆಳೆಯುವವರಾಗಿದ್ದು, ಸಾಮಾನ್ಯ ವರ್ಗದ ರೈತರು ಕನಿಷ್ಠ 1 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಬೆಳೆಯುತ್ತಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು, ಕನಿಷ್ಠ 1 ಎಕರೆ ಪ್ರದೇಶದಲ್ಲಿ ಬಹು ವಾರ್ಷಿಕ ತೋಟಗಾರಿಕೆ ಬೆಳೆ ಬೆಳೆಯುತ್ತಿರಬೇಕು. ನಿಗದಿಪಡಿಸಿದ ಅರ್ಜಿ ನಮೂನೆಗಾಗಿ ಹಾಗೂ ಸಲ್ಲಿಸಬೇಕಾಗಿರುವ ದಾಖಲೆಗಳಿಗಾಗಿ ಸಂಬಂಧಪಟ್ಟ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ಇಲಾಖೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕಾ ಇಲಾಖೆ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ, ಮಾಹಿತಿ ಪಡೆಯಬಹುದಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_857.html
0 Response to "ನೀರಿನ ಟ್ಯಾಂಕರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ