ಶೀರ್ಷಿಕೆ : ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ
ಲಿಂಕ್ : ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ
ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ
ಕೊಪ್ಪಳ ಜು. 18 (ಕರ್ನಾಟಕ ವಾರ್ತೆ): ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷಗುಪ್ತಾ ಅವರು ಕೊಪ್ಪಳ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಸೋಮವಾರದಂದು ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು.
ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ತಳಕಲ್ ಬಳಿ ನಿರ್ಮಾಣವಾಗುತ್ತಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಟ್ಟಡ, ವರ್ಕ್‍ಶಾಪ್, ಬಾಲಕಿಯರ ವಸತಿ ನಿಲಯ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪರಿಶೀಲಿಸಿದರು. ನಿರ್ಮಾಣ ಸಂದರ್ಭದಲ್ಲಿ ಅಳವಡಿಸಲಾದ ಶಿಸ್ತು, ತಾಂತ್ರಿಕತೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ವಿಚಾರಣೆ ನಡೆಸಿದರು. ತ್ವರಿತವಾಗಿ ಕೈಗೊಳ್ಳಲಾಗುತ್ತಿರುವ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯೋಜನೆಯ ಸಮಗ್ರ ವಿವರಣೆಯನ್ನು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಬಿ.ವೈ. ಬಂಡಿವಡ್ಡರ್ ಅವರು ನೀಡಿದರು. ಯಲಬುರ್ಗಾ ಎಇಇ ಉಮಾಪತಿ ಶೆಟ್ಟರ್ ಹಾಗೂ ಮೆ: ಬಿ.ಜಿ. ಸಿರ್ಕೆ ಕಂಪನಿಯ ಯೋಜನಾ ಅಭಿಯಂತರ ಜೆ.ಎಸ್. ಪಾಟೀಲ್ ಉಪಸ್ಥಿತರಿದ್ದು, ಪೂರಕ ಮಾಹಿತಿಯನ್ನು ಹರ್ಷಗುಪ್ತ ಅವರಿಗೆ ನೀಡಿದರು.
ತಳಕಲ್‍ನ ಸಿ.ಸಿ. ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದ ಹರ್ಷಗುಪ್ತಾ ಅವರು ರಸ್ತೆ ಬದಿಯಲ್ಲಿ ಸರ್ವಿಸ್ ಲೇನ್‍ಗಳಿಗೆ ಅಳವಡಿಸಲಾದ ಪೇವೇರ್‍ಗಳನ್ನು ಪರಿಶೀಲಿಸಿದರು. ನಂತರ ಭಾನಾಪುರದ ಸಿಸಿ ರಸ್ತೆಗಳಿಗೆ ಎರಡೂ ಬದಿಯಲ್ಲಿ ನಿರ್ಮಿಸಿದ ಚರಂಡಿಗಳನ್ನು ಗಮನಿಸಿದ ಅವರು, ಸಾರ್ವಜನಿಕ ಕುಂದುಕೊರತೆ ವಿಚಾರಿಸಿದರು. ಕೊಪ್ಪಳ ನಗರದಲ್ಲಿ ನಿರ್ಮಿಸಲಾಗುತ್ತಿರುವ ರಂಗ ಮಂದಿರದ ಕಾಮಗಾರಿ ಪರಿಶೀಲಿಸಿದ ಅವರು, ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಅನುದಾನದ ಕುರಿತು ವಿವರಣೆ ಪಡೆದುಕೊಂಡರು. ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ, ನೂತನವಾಗಿ ಪ್ರಾರಂಭಿಸಲಾದ ಈಜುಕೊಳ, ಸ್ಟೇಡಿಯಂ ಪ್ರೇಕ್ಷಕರ ಗ್ಯಾಲರಿ ಕಾಮಗಾರಿ ವೀಕ್ಷಿಸದರು. ಅಲ್ಲದೆ ಕೊಪ್ಪಳ ಶಾಸಕರ ಕೋರಿಕೆಯಂತೆ ಬರುವ ದಿನಗಳಲ್ಲಿ ಕೈಗೊಳ್ಳಲಾಗುವ ಹಸನ್ ರಸ್ತೆ, ಗಡಿಯಾರ ಕಂಬದಿಂದ ಮುದ್ದಾಬಳ್ಳಿ ಕ್ರಾಸ್‍ವರೆಗಿನ ರಸ್ತೆ ಅಭಿವೃದ್ಧಿಗೊಳಿಸುವ ಕಾಮಗಾರಿ ಕುರಿತಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ನಿರ್ಮಿತಿ ಕೇಂದ್ರದ ಅಧಿಕಾರಿ ಶಶಿಧರ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ
ಎಲ್ಲಾ ಲೇಖನಗಳು ಆಗಿದೆ ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ ಲಿಂಕ್ ವಿಳಾಸ https://dekalungi.blogspot.com/2017/07/blog-post_88.html
0 Response to "ಪ್ರಾದೇಶಿಕ ಆಯುಕ್ತ ಹರ್ಷಗುಪ್ತರಿಂದ ಜಿಲ್ಲೆಯ ವಿವಿಧ ಕಾಮಗಾರಿಗಳ ಪರಿಶೀಲನೆ"
ಕಾಮೆಂಟ್ ಪೋಸ್ಟ್ ಮಾಡಿ