ಶೀರ್ಷಿಕೆ : ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ
ಲಿಂಕ್ : ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ
ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಗಿಣಿಗೇರಾ ಕ್ಷೇತ್ರದ ಜಿ.ಪಂ. ಸದಸ್ಯ ರಾಜಶೇಖರ ಹಿಟ್ನಾಳ್ ಅವರು ಆಯ್ಕೆಯಾದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ಶೇಖರಪ್ಪ ನಾಗರಳ್ಳಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರದಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ಜರುಗಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿತ್ತು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಲಾಗಿದ್ದ ಕಾಲಮಿತಿಯಲ್ಲಿ ರಾಜಶೇಖರ ಹಿಟ್ನಾಳ್ ಅವರು ಮಾತ್ರ ಎರಡು ನಾಮಪತ್ರವನ್ನು ಸಲ್ಲಿಸಿದರು. ಮಧ್ಯಾಹ್ನ 3-30 ಗಂಟೆಗೆ ಚುನಾವಣಾಧಿಕಾರಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು ನಾಮಪತ್ರ ಪರಿಶೀಲಿಸಿ, ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಪ್ರಕಟಿಸಿದರು. ಒಬ್ಬರೇ ಅಭ್ಯಥಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ರಾಜಶೇಖರ ಹಿಟ್ನಾಳ್ ಅವರು ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹರ್ಷ ಗುಪ್ತ ಅವರು ಘೋಷಿಸಿ, ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್‍ರಾಜಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚುನಾವಣೆ ಸಂದರ್ಭದಲ್ಲಿ ಒಟ್ಟು 29 ಜಿ.ಪಂ. ಸದಸ್ಯರುಗಳ ಪೈಕಿ 17 ಸದಸ್ಯರು ಹಾಜರಿದ್ದರು. ಜಿಲ್ಲಾ ಪಂಚಾಯತಿಯಲ್ಲಿ ಪಕ್ಷಗಳ ಬಲಾಬಲ ಇಂತಿದೆ. ಕಾಂಗ್ರೆಸ್-17, ಬಿಜೆಪಿ-11 ಹಾಗೂ ಪಕ್ಷೇತರ-01.
ಜಿ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜಶೇಖರ ಹಿಟ್ನಾಳ್ ಅವರು ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ಅರ್ಹ ವ್ಯಕ್ತಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಆಡಳಿತ ನಡೆಸಬೇಕಿದ್ದು, ಸರ್ವರನ್ನೂ ಒಗ್ಗೂಡಿಸಿಕೊಂಡು, ಉತ್ತಮ ಸೇವೆ ಸಲ್ಲಿಸುವುದಾಗಿ ಹೇಳಿದರು. ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ ಸೇರಿದಂತೆ ಜಿ.ಪಂ. ಸದಸ್ಯರುಗಳು ನೂತನ ಅಧ್ಯಕ್ಷರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಹೀಗಾಗಿ ಲೇಖನಗಳು ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ
ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ ಲಿಂಕ್ ವಿಳಾಸ https://dekalungi.blogspot.com/2017/07/blog-post_96.html
0 Response to "ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ರಾಜಶೇಖರ ಹಿಟ್ನಾಳ ಆಯ್ಕೆ"
ಕಾಮೆಂಟ್ ಪೋಸ್ಟ್ ಮಾಡಿ