ಶೀರ್ಷಿಕೆ : ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಲಿಂಕ್ : ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, ಜು. 18(ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕನಕಗಿರಿ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆ (ಐಟಿಐ ಕಾಲೇಜ್) ಯಲ್ಲಿ ಪ್ರಸಕ್ತ ಸಾಲಿಗೆ ವಿದ್ಯುತ್ ಶಿಲ್ಪಿ (ಎಲೆಕ್ಟ್ರಿಷಿಯನ್) ಹಾಗೂ ಜೋಡಣೆಗಾರ (ಫಿಟ್ಟರ್) ವೃತ್ತಿಗಳಲ್ಲಿ ತಾತ್ಕಾಲಿಕವಾಗಿ ಬೋಧನೆ ಮಾಡಲು ಅತಿಥಿ ಬೋಧಕರು ಬೇಕಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ವಿದ್ಯುನ್ಮಾನ್ ವಿದ್ಯುತ್ ಶಿಲ್ಪಿ (ಎಲೆಕ್ಟ್ರೀಷಿಯನ್) - 01 (ಎನ್‍ಓ), ಹಾಗೂ ಜೋಡಣೆಗಾರ (ಫಿಟ್ಟರ್) - 02 (ಎನ್‍ಓಎಸ್), ವೃತ್ತಿಗಳಲ್ಲಿ ಬೋಧನೆಮಾಡಲು ಖಾಯಂ ಸಿಬ್ಬಂದಿ ನೇಮಕಾತಿ ಆಗುವವರೆಗೆ ತಾತ್ಕಾಲಿಕವಾಗಿ ಅತಿಥಿ ಬೋಧಕರನ್ನು ಆಯ್ಕೆಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್‍ನಲ್ಲಿ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಆಯಾ ವಿಭಾಗಗಳಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸೇವೆಯಿಂದ ನಿವೃತ್ತರಾಗಿರುವ ನೌಕರರೂ ಸಹ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಎಲ್ಲಾ ದಾಖಲೆಗಳ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜುಲೈ. 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಥವಾ ಖುದ್ದಾಗಿ ಸಂಸ್ಥೆಯ ಪ್ರಾಚಾರ್ಯರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸರ ಸಂಭಾವನೆ ನೀಡಲಾಗುವುದು ಎಂದು ಕನಕಗಿರಿ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/07/blog-post_97.html
0 Response to "ಕನಕಗಿರಿ: ಐ.ಟಿ.ಐ ಕಾಲೇಜಿನಲ್ಲಿ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ