ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ

ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ
ಲಿಂಕ್ : ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ

ಓದಿ


ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ


ಕೊಪ್ಪಳ, ಜು. 20(ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳನ್ನು 2017 ರ ಜುಲೈ 19 ರಿಂದ ಡಿಸೆಂಬರ್ 31 ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
    ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಕಳೆದ ಜು. 15 ರಂದು ಸಲ್ಲಿಸಿರುವ ಕೋರಿಕೆಯನ್ವಯ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದೆ.  ಕೊಪ್ಪಳ ಜಿಲ್ಲೆಯಾದ್ಯಂತ ಯಾವುದೇ ಹಬ್ಬ, ರಾಷ್ಟ್ರೀಯ ಹಬ್ಬಗಳು, ಮೆರವಣಿಗೆ, ಸಮಾರಂಭ, ರಾಜಕೀಯ ನಾಯಕರುಗಳ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳನ್ನು ಉಪಯೋಗಿಸುತ್ತಿರುವುದರಿಂದ, ಗರ್ಭಿಣಿಯರಿಗೆ, ನವಜಾತ ಶಿಶುಗಳಿಗೆ, ಬಾಣಂತಿಯರಿಗೆ, ವಯೋವೃದ್ಧರಿಗೆ, ಹೃದಯ ಸಂಬಂಧಿತ ಖಾಯಿಲೆ ಇರುವ ರೋಗಿಗಳಿಗೆ ಮತ್ತು ಅನಾರೋಗ್ಯದಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಸೇರಿದಂತೆ ಎಲ್ಲರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದಲ್ಲದೆ ಕೆಲವು ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಹಾ ವರದಿಯಾಗಿರುತ್ತವೆ.  ಹೆಚ್ಚಿನ ಶಬ್ದದ ಸೌಂಡ್ ಸಿಸ್ಟಮ್ ಹಚ್ಚುವುದರಿಂದ ವಿದ್ಯಾರ್ಥಿಗಳಲ್ಲಿ ಎಕಾಗ್ರತೆ ಕೊರತೆಯಾಗಿ ವಿದ್ಯಾಬ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಹೃದಯ ಸಂಬಂಧಿತ ರೋಗಿಗಳಿಗೆ ಶಬ್ದ ಮಾಲಿನ್ಯದ ಸಮಸ್ಯೆ (ಹೈಡೆಸಿಬೆಲ್ ಎಫೆಕ್ಟ್) ಉಂಟಾಗಿ ಹೃದಯಗಳಲ್ಲಿ ಅಳವಡಿಸಿರುವ ಸಾಧನೆಗಳಿಗೆ ಧಕ್ಕೆಯಾಗುವ ಸಂಭವವಿರುತ್ತದೆ.  ಹಾಗೂ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತದೆ.  ಈ ಹಿಂದೆ ಗಂಗಾವತಿ ನಗರದಲ್ಲಿ  ಹೋಳಿ ಹಬ್ಬದ ಆಚರಣೆ ಸಮಯದಲ್ಲಿ ಹಾಗೂ ಪ್ರತಿ ವರ್ಷದ ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಕೊಪ್ಪಳ ಮತ್ತು ಗಂಗಾವತಿ ನಗರದಲ್ಲಿ ಡಿ.ಜೆ ಸೌಂಡ್ ಸಿಸ್ಟಮ್ ಹಾಕಿ ಉತ್ಸವ ಆಚರಿಸುವ ನೆಪದಲ್ಲಿ ಕಿಡಿಗೇಡಿಗಳು ಗಲಾಟೆ ಸೃಷ್ಟಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಿದ ಘಟನೆಗಳು ಜರುಗಿವೆ.  ಡಿ.ಜೆ ಸಾಧನಗಳನ್ನು ಬಳಸುವುದರಿಂದ ಕಿವಿಯ ತಮಟೆಯ ಮೆಲೆ ದುಷ್ಪರಿಣಾಮ ಉಂಟಾಗಿ ಶ್ರವಣ ದೋಷ ಉಂಟಾಗುವ ಸಾಧ್ಯತೆಗಳು ಇರುತ್ತವೆ.  ಹಗಲು ವೇಳೆಯಲ್ಲಿ ಹೆಚ್ಚಿನ ಶಬ್ದವಿರುವ ಸಾಧನಗಳನ್ನು ಬಳಸುವುದರಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಂಭವವಿರುತ್ತದೆ.  ರಾತ್ರಿ ವೇಳೆಯಲ್ಲಿ ಶಬ್ದ ಸಾಧನಗಳನ್ನು ಬಳಸುವುದರಿಂದ ವೃದ್ಧರು/ ರೋಗಿಗಳು ನಿದ್ರಾಹೀನತೆ ಸಮಸ್ಯೆಯಿಂದ ಬಳಲುವ ಸಾಧ್ಯತೆ ಇರುತ್ತದೆ.  ಹೆಚ್ಚಿನ ಡೆಸಿಬಲ್ ಶಬ್ದವಿರುವ ಸೌಂಡ್ ಸಿಸ್ಟಮ್‍ನಿಂದ ವ್ಯಾಪ್ತಿ ಪ್ರದೇಶದ ನಿವಾಸಿಗರ ಮೇಲೆ ಕೌಟುಂಬಿಕ ಮತ್ತು ಮಾನಸಿಕ ನೆಮ್ಮದಿಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆಗಳು ಇರುವುದರಿಂದ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಬ್ಬಗಳು ಹಾಗೂ ಇತರೆ ಹಬ್ಬಗಳು ಬರುತ್ತಿದ್ದು, ಹಬ್ಬಗಳ ಆಚರಣೆ ಸಮಯದಲ್ಲಿ ಕೋಮು ಸಾಮರಸ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಶಬ್ದ ಹೊರಸೂಸುವ ಎಲ್ಲಾ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸುವ ಅವಶ್ಯಕತೆ ಇರುತ್ತದೆ.  ಈ ಅಂಶಗಳನ್ನು ಪರಿಗಣಿಸಿ, ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 36, ವೈಸ್ ಪಲುಷನ್ (ರೆಗುಲೇಷನ್ & ಕಂಟ್ರೋಲ್) ರೂಲ್ಸ್ 2000 & ಎನ್ವಿರೋನ್‍ಮೆಂಟ್ (ಪ್ರೋಟೆಕ್ಷನ್) ಯಾಕ್ಟ್ 1986ರಲ್ಲಿ ನಿಯಮಗಳನ್ನು ಪರಿಗಣಿಸಿ ಹೆಚ್ಚಿನ ಶಬ್ದ ಹೊರಸೂಸುವ ಎಲ್ಲಾ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ಕೊಪ್ಪಳ ಜಿಲ್ಲಾ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳ ಕಚೇರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. 
ಜಿಲ್ಲಾ ಪೊಲೀಸ್ ಅಧೀಕ್ಷರು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ್ದು,  ಅವರ ಕೋರಿಕೆಯನ್ನು ಪರಿಗಣಿಸಿ, ರಾಷ್ಟ್ರೀಯ ಹಬ್ಬಗಳಂದು, ಕೋಮು ಸಾಮರಸ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಶಬ್ದ ಹೊರಸೂಸುವ ಎಲ್ಲಾ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸುವುದು ಸೂಕ್ತವೆಂದು ಕಂಡುಬಂದಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ರಿಟ್ ಪಿಟಿಷನ್.72/1998 ರಲ್ಲಿ ದಿನಾಂಕ: 18-17-2005 ರಂದು ಆದೇಶ ಹೊರಡಿಸಿ ಎಷ್ಟು ಡೆಸಿಬಲ್ ಶಬ್ದ ಹೊರಸೂಸುವ ಸಾಧನಗಳನ್ನು ಅಳವಡಿಸಿಕೊಳ್ಳಬೇಕೆಂದು ತೀರ್ಪು ನೀಡಿದ್ದು, ತೀರ್ಪಿನಲ್ಲಿಯ ವಿಷಯ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ಇವರ ಪತ್ರದಲ್ಲಿ ಕಾಣಿಸಿರುವ ವಿಷಯಗಳನ್ನು ಗಮನಿಸಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳನ್ನು ಜಿಲ್ಲೆಯಾದ್ಯಂತ ನಿಷೇಧಿಸುವುದು ಸೂಕ್ತವೆಂದು ಕಂಡುಬಂದ ಪ್ರಯುಕ್ತ, ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 36, ನಾಯ್ಸ್ ಪಲ್ಯೂಷನ್ (ರೆಗುಲೇಷನ್ & ಕಂಟ್ರೋಲ್) ರೂಲ್ಸ್ 2000 & ಎನ್ವಿರೋನ್‍ಮೆಂಟ್ (ಪ್ರೊಟೆಕ್ಷನ್) ಆ್ಯಕ್ಟ್ 1986 ರನ್ವಯ ಆದೇಶವನ್ನು ಹೊರಡಿಸಲಾಗಿದೆ. 
ಕೊಪ್ಪಳ ಜಿಲ್ಲೆಯಾದ್ಯಂತ ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ, ಆರೋಗ್ಯ ಹಾಗೂ ಪರಿಸರ ಮಾಲಿನ್ಯವನ್ನು ಕಾಪಾಡುವ ದೃಷ್ಟಿಯಿಂದ ಮೇಲೆ ವಿವರಿಸಿದ ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಹೆಚ್ಚಿನ ಶಬ್ದ ಹೊರಸೂಸುವ ಸಾಧನ ಸಲಕರಣೆಗಳನ್ನು ಉಪಯೋಗಿಸುವುದನ್ನು ದಿನಾಂಕ: 19-07-2017 ರಿಂದ 31-12-2017 ರವರೆಗೆ ನಿಷೇಧಿಸಲಾಗಿದೆ.  ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು  ಆದೇಶದಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ

ಎಲ್ಲಾ ಲೇಖನಗಳು ಆಗಿದೆ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/07/blog-post_98.html

Subscribe to receive free email updates:

0 Response to "ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳ ನಿಷೇಧ : ಎಂ. ಕನಗವಲ್ಲಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ