News and photo Date: 05-07-2017

News and photo Date: 05-07-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 05-07-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 05-07-2017
ಲಿಂಕ್ : News and photo Date: 05-07-2017

ಓದಿ


News and photo Date: 05-07-2017

ಮಕ್ಕಳ ಆಯೋಗದಿಂದ ಸರ್ಕಾರಿ ಶಾಲೆಗಳ ಸಶಕ್ತೀಕರಣ ಕಾರ್ಯಕ್ರಮ
************************************************************
ಕಲಬುರಗಿ,ಜುಲೈ.05.(ಕ.ವಾ.)-ಕರ್ನಾಟಕ ರಾಜ್ಯದಾದ್ಯಂತ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಿ ಶಾಲೆಗಳನ್ನು ಸಶಕ್ತೀಕರಣಗೊಳಿಸುವ ಕಾರ್ಯಕ್ರಮವನ್ನು ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲು ಯೋಜಿಸಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಅಮರ ಆಳ್ವಾ ಅವರು ಹೇಳಿದರು.
ಅವರು ಬುಧವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಮತ್ತು ಗುಣಮಟ್ಟದ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.
ಶಿಕ್ಷಣ ಇದ್ದರೆ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿಗಳು ಹಾಗೂ ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯುವ ಮೂಲಕ ಶೇ. 70ರಷ್ಟು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಸರ್ಕಾರಿ ಶಾಲೆಗಳ ಬಲವರ್ಧನೆ ನಮೆಲ್ಲರ ಕರ್ತವ್ಯ. ಇದನ್ನು ಸರಿಪಡಿಸಲು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೆಚ್ಚುವರಿ ಸಮಯ ಮತ್ತು ಹೆಚ್ಚು ಪರಿಶ್ರಮವಹಿಸಿ ಮಕ್ಕಳ ಕ್ಷೇಮಾಭ್ಯುದಯಕ್ಕಾಗಿ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚಿಸಿದರು.
ಸÀರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ಕೊರತೆಯಿಂದ ಪಾಲಕರು ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹ ಮಾಡುತ್ತಾರೆ. ಹೆಣ್ಣು ಮಕ್ಕಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಹೆಣ್ಣು ಮಕ್ಕಳು ಶಾಲೆಗೆ ಹೋಗದಿದ್ದರೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. 14-18 ವರ್ಷ ವಯೋಮಿತಿಯ ಹೆಣ್ಣು ಮಕ್ಕಳಿಗೆ ಭದ್ರತೆಯ ತೀವ್ರ ಅಗತ್ಯತೆಯಿದೆ. ಇದಕ್ಕಾಗಿ ಪ್ರತಿಯೊಂದು ಮಗು ಶಿಕ್ಷಣ ಪಡೆದಾಗ ಮಾತ್ರ ಸೂಪರ್ ಪವರ್ ಭಾರತವಾಗಲಿದೆ ಎಂದು ನುಡಿದರು.
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ವಸ್ತು ಮತ್ತು ಸಾಮಗ್ರಿಗಳನ್ನು ಬಳಸಿಕೊಂಡು ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಆವರಣ ಗೋಡೆ ನಿರ್ಮಿಸಿಕೊಳ್ಳಬೇಕು. ಜಿಲ್ಲೆಯ ಶಾಲೆಗಳ ಶೌಚಾಲಯಗಳ ಸ್ಥಿತಿಗತಿ ಉತ್ತಮವಾಗಿರುವಂತೆ ನೋಡಿಕೊಳ್ಳಬೇಕು. ಪ್ರತಿ ದಿನ ಶೌಚಾಲಯಗಳ ಸ್ವಚ್ಫತೆಯನ್ನು ಮತ್ತು ಪರಿಸರದ ಸ್ವಚ್ಪತೆಯನ್ನು ಕಾಪಾಡುವುದರೊಂದಿಗೆ ಇಡೀ ಶಾಲೆಯ ವಾತಾವರಣ ಬಲವರ್ಧಿಸಲು ಆದ್ಯತೆ ನೀಡಬೇಕೆಂದು ಹೇಳಿದರು.
ಎಲ್ಲಾ ಶಾಲೆಗಳಲ್ಲಿ ಕಂಪ್ಯೂಟರ್‍ಗಳನ್ನು ಅಳವಡಿಸಬೇಕಲ್ಲದೇ ಫ್ಯಾನ್, ಲೈಟ್ ಮತ್ತು ಬೆಂಚುಗಳನ್ನು ಹಾಗೂ ವಿದ್ಯುತ್ ಮತ್ತು ಫ್ಯಾನ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು. ಜಿಲ್ಲೆಯ ಶಾಲೆಗಳಲ್ಲಿರುವ ಪ್ರಯೋಗಾಲಯಗಳನ್ನು ಒಂದು ತಿಂಗಳೊಳಗೆ ವೈಜ್ಞಾನಿಕವಾಗಿ ಸರಿಪಡಿಸಬೇಕು. ಮಕ್ಕಳಿಗೆ ಪಾಠ ಹೇಳುವ ಶಿಕ್ಷಕರಲ್ಲಿ ಶಿಸ್ತು ಅತೀ ಮುಖ್ಯ. ಇದನ್ನು ಜಾರಿಗೊಳಿಸುವ ಪ್ರಮುಖ ಹೋಣೆಗಾರಿಕೆ ಎಲ್ಲ ಎ.ಆರ್.ಸಿ. ಮತ್ತು ಬಿ.ಆರ್.ಸಿ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲಿದೆ. ಮಕ್ಕಳ ಸಂಗೀತ, ಚಿತ್ರಕಲೆ, ಆಟೋಟ ಮುಂತಾದ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.
ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಜೀವನ ರೂಪಿಸುವ ಮತ್ತು ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಪ್ರಮುಖ ಹೊಣೆ ಶಿಕ್ಷಣ ಇಲಾಖೆಯ ಮೇಲಿದೆ. ಈ ನಿಟ್ಟಿನಲ್ಲಿ ಜುಲೈ 31ರೊಳಗೆ ಎಲ್ಲ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಅಸೋಸಿಯೇಶನ್ ಪ್ರಾರಂಭಿಸಬೇಕು. ಪ್ರತಿಯೊಂದು ಅಸೋಸಿಯೇಶನ್ನಿನಲ್ಲಿ ಕನಿಷ್ಠ 150 ವಿದ್ಯಾರ್ಥಿಗಳಿರಬೇಕೆಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ. ಕೊಳ್ಳಾ, ಚಂದ್ರಶೇಖರ ಅಲ್ಲಿಪುರ, ಶಿಕ್ಷಣ ಇಲಾಖೆಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಎಲ್ಲರನ್ನು ಸಭೆಗೆ ಸ್ವಾಗತಿಸಿದರು.
ಪ್ರವಾಸೋದ್ಯಮ ಸಚಿವರ ಪ್ರವಾಸ
*******************************
ಕಲಬುರಗಿ,ಜುಲೈ.05.(ಕ.ವಾ.)-ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ ಖರ್ಗೆ ಅವರು ಬೆಂಗಳೂರಿನಿಂದ ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 7ರಂದು ಬೆಳಗಿನ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು. ಅಂದು ಕಲಬುರಗಿಯಿಂದ ಚಿತ್ತಾಪುರಕ್ಕೆ ಪ್ರಯಾಣಿಸಿ, ಬೆಳಗಿನ 11 ಗಂಟೆಗೆ ಚಿತ್ತಾಪುರದಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 8ರಂದು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ, ಬೆಳಿಗ್ಗೆ 11 ಗಂಟೆಗೆ ಯಾದಗಿರಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ 9ರಂದು ಕಲಬುರಗಿಯಿಂದ ಚಿತ್ತಾಪುರಕ್ಕೆ ಪ್ರಯಾಣಿಸಿ, ಅಂದು ಬೆಳಗಿನ 11 ಗಂಟೆಗೆ ಚಿತ್ತಾಪುರದಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ 10 ಹಾಗೂ 11ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಲೋಕಾಯುಕ್ತ ಎಸ್.ಪಿ. ಹುದ್ದೆಯ ಹೆಚ್ಚುವರಿ ಪ್ರಭಾರ ಸ್ವೀಕಾರ
****************************************************
ಕಲಬುರಗಿ,ಜುಲೈ.05.(ಕ.ವಾ.)-ಕರ್ನಾಟಕ ಲೋಕಾಯುಕ್ತ ಕಲಬುರಗಿ ವಿಭಾಗೀಯ ಕಚೇರಿಯ ಪೊಲೀಸ್ ಅಧೀಕ್ಷಕ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಬಸವರಾಜ ಬಿ. ಕಡಕೋಳ ಅವರು ಬುಧವಾರ ಸ್ವೀಕರಿಸಿದರು.
ಕಲಬುರಗಿ ಹಾಗೂ ಬೀದರ ಜಿಲ್ಲೆಗಳ ಸಾರ್ವಜನಿಕರು ತಮ್ಮ ದೂರು/ಕುಂದುಕೊರತೆಗಳನ್ನು ನೇರವಾಗಿ ಪೊಲೀಸ್ ಅಧೀಕ್ಷಕರ ಕಚೇರಿ, ಕರ್ನಾಟಕ ಲೋಕಾಯುಕ್ತ, ಐವಾನ್-ಇ-ಶಾಹಿ ಕಂಪೌಂಡ ಕಲಬುರಗಿ ಕಚೇರಿಗೆ ಸಲ್ಲಿಸಬಹುದಾಗಿದೆ. ಸದರಿ ಕಚೇರಿ ದೂರವಾಣಿ/ಫ್ಯಾಕ್ಸ್ ಸಂಖ್ಯೆ 08472-263645 ಇರುತ್ತದೆ ಎಂದು ಪೊಲೀಸ್ ಅಧೀಕ್ಷಕರು ಅವರು ತಿಳಿಸಿದ್ದಾರೆ.





ಹೀಗಾಗಿ ಲೇಖನಗಳು News and photo Date: 05-07-2017

ಎಲ್ಲಾ ಲೇಖನಗಳು ಆಗಿದೆ News and photo Date: 05-07-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 05-07-2017 ಲಿಂಕ್ ವಿಳಾಸ https://dekalungi.blogspot.com/2017/07/news-and-photo-date-05-07-2017.html

Subscribe to receive free email updates:

0 Response to "News and photo Date: 05-07-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ