ಶೀರ್ಷಿಕೆ : News and photo date: 13-07-2017
ಲಿಂಕ್ : News and photo date: 13-07-2017
News and photo date: 13-07-2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
********************************************
ಕಲಬುರಗಿ,ಜು.13.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 14ರಂದು ಬೆಳಿಗ್ಗೆ 05.39 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಜುಲೈ 14 ಹಾಗೂ 15ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸಚಿವರು ಜುಲೈ 16ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ, ರಾತ್ರಿ ರೈಲು ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುವರು.

ಜಿಲ್ಲೆಯಲ್ಲಿ 48 ಬಾಲಕಾರ್ಮಿಕರ ಪತ್ತೆ
*******************************
ಕಲಬುರಗಿ,ಜು.13.(ಕ.ವಾ.)-ಕಲಬುರಗಿ ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಕೈಗೊಂಡ ಬಾಲಕಾರ್ಮಿಕ ಸಮೀಕ್ಷೆಯಲ್ಲಿ ಒಟ್ಟು 9615 ಸಂಸ್ಥೆಗಳ ತಪಾಸಣೆ ನಡೆಸಿದ್ದು, ಟಾಸ್ಕ್‍ಫೋರ್ಸ್ ತಂಡಗಳು 48 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿವೆ ಹಾಗೂ 30 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್ ಹೇಳಿದರು.
ಅವರು ಗುರುವಾರ ಕಲಬುರಗಿಯಲ್ಲಿ ರಾಷ್ಟ್ರೀಯ ಬಾಲಕಾರ್ಮಿಕ ನಿರ್ಮೂಲನಾ ಹಾಗೂ ಪುನರ್ವಸತಿ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲಕಾರ್ಮಿಕ ಸಮೀಕ್ಷೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಂಡು ಬಾಲಕಾರ್ಮಿಕ ನಿರ್ಮೂಲನಾ ಯೋಜನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಆಳಂದ ತಾಲೂಕಿನಲ್ಲಿ ಬಾಲಕಾರ್ಮಿಕರ ಪುನ: ಸಮೀಕ್ಷೆ ಕೈಗೊಳ್ಳಬೇಕು. ಪತ್ತೆ ಹಚ್ಚಲಾದ ಬಾಲಕಾರ್ಮಿಕರನ್ನು ಶಾಲೆಗೆ ಸೇರಿಸಿ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಬಾಲಕಾರ್ಮಿಕರ ಗಾರ್ಡಿಯನ್ ಆಗಿ ಮಾಡಿ ಪ್ರತಿ ತಿಂಗಳು ವರದಿ ಪಡೆಯಬೇಕು. ಪ್ರತಿ ತಿಂಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಿರಂತರ ದಾಳಿ ಹಾಗೂ ತಪಾಸಣಾ ಕಾರ್ಯವನ್ನು ಹೆಚ್ಚು ಚುರುಕಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.
ಕಲಬುರಗಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ 264 ಗ್ರಾಮ ಪಂಚಾಯಿತಿ, ನಗರ ಪ್ರದೇಶಗಳ 148 ವಾರ್ಡು ಹಾಗೂ ಕಲಬುರಗಿ ನಗರದ 55 ವಾರ್ಡುಗಳ ವ್ಯಾಪ್ತಿಯಲ್ಲಿ ವಿವಿಧ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲು ಜಾಥಾ, ಬೀದಿ ನಾಟಕ ಮುಂತಾದ ಅರ್ಥಪೂರ್ಣ ಚಟುವಟಿಕೆಗಳನ್ನು ಆಯೋಜಿಸಬೇಕು. ಇದಲ್ಲದೇ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಶೀಘ್ರವಾಗಿ ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಸರ್ಕಾರಿ ಜಮೀನಿನಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಿಗಾಗಿ ಮಾದರಿ ವಿಶೇಷ ತರಬೇತಿ ಕೇಂದ್ರ ಕಟ್ಟಡದ ಪ್ರಸ್ತಾವನೆಯನ್ನು ತಯಾರಿಸಬೇಕೆಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆಯಾ ಗ್ರಾಮ ಪಂಚಾಯಿತಿಗಳು ಬಾಲಕಾರ್ಮಿಕರ ಮಾಹಿತಿ ಒದಗಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಇದಲ್ಲದೆ ಶಾಲೆಗೆ ಸೇರ್ಪಡೆಯಾದ ಬಾಲಕಾರ್ಮಿಕರನ್ನು ಹಾಗೂ ಶಾಲಾ ಮುಖ್ಯೋಪಾಧ್ಯಾಯರನ್ನು ಊಟಕ್ಕೆ ಆಹ್ವಾನಿಸಲಾಗುವುದೆಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಸಹಾಯಕ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಉಪ ಕಾರ್ಮಿಕ ಆಯುಕ್ತ ಎಂ. ಚಿದಾನಂದ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಎಸ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಹೆಚ್‍ಆರ್‍ಡಿ ಸಂಸ್ಥೆಯ ಸದಸ್ಯ ಸುರೇಶ ಬಡಿಗೇರ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜುಲೈ 15ರಂದು ಉದ್ಯೋಗ ಮೇಳ
*******************************
ಕಲಬುರಗಿ,ಜು.13.(ಕ.ವಾ.)-ಕಲಬುರಗಿಯ ಎಂ.ಎಸ್.ಕೆ. ಮಿಲ್ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜಿನ ಹಿಂದಿರುವ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಜುಲೈ 15ರಂದು ಬೆಳಗಿನ 11 ರಿಂದ ಸಂಜೆ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆÉ. ಎಸ್.ಬಿ.ಐ. ಲೈಫ್ ಇನ್ಸೂರೆನ್ಸ್ ಕಲಬುರಗಿ. ಬೋಷ್ ಸ್ಕಿಲ್ ಇಂಡಿಯಾ ಬೆಂಗಳೂರು. ಎಲ್ ಆಂಡ್ ಟಿ ಫೈನಾನ್ಸ್ ಲಿಮಿಟೆಡ್ ಬೆಂಗಳೂರು. ಹೆಡ್ ಹೆಲ್ಡ ಹೈ ಬೆಂಗಳೂರು. ಯೂರೇಕಾ ಫೋಬ್ರ್ಸ್ ಕಲಬುರಗಿ. ಎಂ.ಎನ್. ಗ್ಲೋಬಲ್ ಸರ್ವಿಸೆಸ್ ಕಲಬುರಗಿ.

ಹೀಗಾಗಿ ಲೇಖನಗಳು News and photo date: 13-07-2017
ಎಲ್ಲಾ ಲೇಖನಗಳು ಆಗಿದೆ News and photo date: 13-07-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo date: 13-07-2017 ಲಿಂಕ್ ವಿಳಾಸ https://dekalungi.blogspot.com/2017/07/news-and-photo-date-13-07-2017.html
0 Response to "News and photo date: 13-07-2017"
ಕಾಮೆಂಟ್ ಪೋಸ್ಟ್ ಮಾಡಿ