ಶೀರ್ಷಿಕೆ : news and photo date: 17-7-2017
ಲಿಂಕ್ : news and photo date: 17-7-2017
news and photo date: 17-7-2017
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
********************************************
ಕಲಬುರಗಿ,ಜು.17(ಕ.ವಾ)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 18ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು. ಅಂದು ಸಚಿವರು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ
***********************************************
ಕಲಬುರಗಿ,ಜು.17(ಕ.ವಾ)-ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 18ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಧ್ಯಕ್ಷರು ಅಂದು ಕಲಬುರಗಿಯಿಂದ ಯಾದಗಿರಿ ಜಿಲ್ಲೆಯ ಇಡ್ಲೂರು ಗ್ರಾಮಕ್ಕೆ ಪ್ರಯಾಣಿಸಿ, ಪಿ.ಎಂ.ಜಿ.ಎಸ್.ವೈ. ಯೋಜನೆ ಅಡಿ ಅಜಲಾಪುರ-ಸಂಕಲಾಪುರ ರಸ್ತೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮರಳಿ ಕಲಬುರರಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ 19ರಂದು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ, ಸಾರ್ವಜನಿಕರನ್ನು ಭೇಟಿ ಮಾಡುವರು. ಅಂದು ರಾತ್ರಿ 8 ಗಂಟೆಗೆ ಕಲಬುರಗಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಜಲಸಂಪನ್ಮೂಲ ಸಚಿವರ ಪ್ರವಾಸ
*******************************
ಕಲಬುರಗಿ,ಜು.17(ಕ.ವಾ)-ಜಲ ಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವ ಎಂ.ಬಿ. ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 18ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ಆಗಮಿಸುವರು. ಬೆಳಗಿನ 6.15 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.

ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಯಶಸ್ಸಿಗೆ ಮನವಿ
**************************************************
ಕಲಬುರಗಿ,ಜು.17.(ಕ.ವಾ.)-ಸಾಂಕ್ರಾಮಿಕ ರೋಗವಾಗಿರುವ ಕ್ಷಯರೋಗದ ನಿರ್ಮೂಲನೆಗಾಗಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಅಂಗವಾಗಿ ಆರೋಗ್ಯ ಕಾರ್ಯಕರ್ತರು ಮನೆಗೆ ಭೇಟಿ ನೀಡಿದಾಗ ಅಗತ್ಯ ಮಾಹಿತಿ ನೀಡುವುದರ ಮೂಲಕ ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅವರು ಸೋಮವಾರ ಅಶೋಕ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಹಯೋಗದಲ್ಲಿ ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಯೋಜಿಸಿದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ 15 ದಿನಗಳ ಕಾಲ ಗ್ರಾಮೀಣ, ನಗರ, ಕೊಳಚೆ, ಗಣಿ ಪ್ರದೇಶಗಳು ಹಾಗೂ ಕ್ಷಯರೋಗಿಗಳು ಹೆಚ್ಚಿಗಿರುವ ಪ್ರದೇಶಗಳನ್ನು ಆಯ್ಕೆ ಮಾಡಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಪತ್ತೆಯಾದ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ ಮಾತನಾಡಿ, ಕ್ಷಯರೋಗವನ್ನು ಪ್ರಾರಂಭದ ಹಂತದಲ್ಲಿ ಪತ್ತೆ ಹೆಚ್ಚಿ ಕೂಡಲೇ ಚಿಕಿತ್ಸೆ ಪ್ರಾರಂಭಿಸಿ ಸತತವಾಗಿ 6 ತಿಂಗಳ ಔಷಧಿ ಸೇವಿಸಿದರೆ ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಮುಖ ಮಾಡಬಹುದು. ಆದರೆ ರೋಗಿಗಳು 2-3 ತಿಂಗಳ ಔಷಧಿ ಸೇವಿಸಿ ಮುಂದಿನ ಔಷಧಿ ಸೇವಿಸದೇ ಬಿಟ್ಟರೆ ಡ್ರಗ್ ರೆಸಿಸ್ಟೆನ್ಸಿ ಕ್ಷಯ ಉಂಟಾಗಿ ರೋಗ ಗುಣಮುಖವಾಗಲು ಕಷ್ಟಕರವಾಗುತ್ತದೆ ಎಂದರು.
ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತವಾದ ಕೆಮ್ಮು, ಜ್ವರ, ಅದರಲ್ಲೂ ಸಂಜೆ ವೇಳೆ ಹೆಚ್ಚಾಗುವುದು ಮತ್ತು ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವಂತಹ ಕ್ಷಯರೋಗದ ಲಕ್ಷಣಗಳು ಕಂಡ ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು. ಕ್ಷಯರೋಗ ಖಚಿತಪಟ್ಟರೆ ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಡಾಟ್ಸ್ ಚಿಕಿತ್ಸೆ ಮತ್ತು ಔಷಧಿಯನ್ನು ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾರಕರು, ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1607 ತಂಡಗಳÀನ್ನು ರಚಿಸಲಾಗಿದೆ. ಪ್ರತಿಯೊಂದು ತಂಡಕ್ಕೆ ಇಬ್ಬರಂತೆ ಒಟ್ಟು 3214 ಸಿಬ್ಬಂದಿಗಳು ಮತ್ತು 322 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಕಲಬುರಗಿ ಜಿಲ್ಲೆ ಸೇರಿದಂತೆ ಭಾರತ ದೇಶದ ಒಟ್ಟು ಐವತ್ತು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರ್.ಸಿ.ಹೆಚ್. ಅಧಿಕಾರಿ ಡಾ|| ರುದ್ರವಾಡಿ, ಕ್ಷಯರೋಗ ಅಧಿಕಾರಿ ಡಾ|| ಶರಣಬಸಪ್ಪ ಗಣಜಲಖೇಡ, ಕುಟುಂಬ ಕಲ್ಯಾಣ ಅಧಿಕಾರಿ ಡಾ|| ನಾಗಲೀಕರ್, ತಾಲೂಕು ವೈದ್ಯಾಧಿಕಾರಿ ಡಾ|| ರಾಜಕುಮಾರ, ಅಶೋಕ ನಗರದ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ಬಾಬುರಾವ್ ಚವ್ಹಾಣ, ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ಹೋಳಕರ್, ವಿಠ್ಠಲ ನಗರ ಶಾಂತಿ ಸಮಿತಿ ಸದಸ್ಯ ವಿ.ಆರ್. ಚಾಂಬಾಳ್, ಸುರೇಶ ಎಸ್. ದೊಡಮನಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಹೀಗಾಗಿ ಲೇಖನಗಳು news and photo date: 17-7-2017
ಎಲ್ಲಾ ಲೇಖನಗಳು ಆಗಿದೆ news and photo date: 17-7-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo date: 17-7-2017 ಲಿಂಕ್ ವಿಳಾಸ https://dekalungi.blogspot.com/2017/07/news-and-photo-date-17-7-2017.html
0 Response to "news and photo date: 17-7-2017"
ಕಾಮೆಂಟ್ ಪೋಸ್ಟ್ ಮಾಡಿ