NEWS AND PHOTO DATE: 27--07--2017

NEWS AND PHOTO DATE: 27--07--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 27--07--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 27--07--2017
ಲಿಂಕ್ : NEWS AND PHOTO DATE: 27--07--2017

ಓದಿ


NEWS AND PHOTO DATE: 27--07--2017

ಗ್ರಾಮೀಣಾಭಿವೃದ್ಧಿ ಸಚಿವರ ಪ್ರವಾಸ
********************************
ಕಲಬುರಗಿ,ಜು.27.(ಕ.ವಾ.)-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಎಚ್.ಕೆ. ಪಾಟೀಲ ಅವರು ಹುಬ್ಬಳ್ಳಿಯಿಂದ ರಸ್ತೆ ಮೂಲಕ ಜುಲೈ 28ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪ್ರವಾಸ
ಕಲಬುರಗಿ,ಜು.27.(ಕ.ವಾ.)-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರು ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 28ರಂದು ಬೆಳಗಿನ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು. ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವರು. ರಾತ್ರಿ 9 ಗಂಟೆಗೆ ಸೋಲಾಪುರ-ಯಶವಂತಪುರ ರೈಲಿನ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು.
ಗಡಿ ಪ್ರದೇಶ ಅಭಿವೃದ್ಧಿ ಅಧ್ಯಕ್ಷರ ಪ್ರವಾಸ
************************************
ಕಲಬುರಗಿ,ಜು.27.(ಕ.ವಾ.)-ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು ಜುಲೈ 28ರಂದು ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವರು. ನಂತರ ಸಂಜೆ 6.30 ಗಂಟೆಗೆ ಯಾದಗಿರಿಯಿಂದ ಹೈದ್ರಾಬಾದಿಗೆ ಪ್ರಯಾಣಿಸುವರು.
ಧರ್ಮಸಿಂಗ್ ನಿಧನಕ್ಕಾಗಿ ನಗರ ಕೆ.ಡಿ.ಪಿ. ಸಭೆಯಲ್ಲಿ ಶೋಕಾಚರಣೆ
************************************************************
ಕಲಬುರಗಿ,ಜು.27.(ಕ.ವಾ.)-ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ನಗರ ಮಟ್ಟದ ಕೆ.ಡಿ.ಪಿ. ಪರಿಶೀಲನಾ ಸಭೆಯು ಗುರುವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ನಿಧನ ಸಂದೇಶ ಬಂದಿರುವ ಪ್ರಯುಕ್ತ ಸಭೆಯನ್ನು ರದ್ದುಪಡಿಸಲಾಯಿತು. ನಂತರ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಚಿವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗರ ನಿಧನದ ಆಘಾತಕಾರಿ ಸುದ್ದಿ ಕೇಳಿ ಎಲ್ಲರಿಗೂ ತೀವ್ರ ನೋವಾಗಿದೆ. ಸುಮಾರು 50 ವರ್ಷಗಳ ಕಾಲ ರಾಜಕೀಯ ಜೀವನ ಸವೆಸಿದ ಧರ್ಮಸಿಂಗ್ ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದರು. ಅವರ ನಿಧನದಿಂದ ಪಕ್ಷಕ್ಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ದು:ಖವನ್ನು ಸಹಿಸುವ ಶಕ್ತಿ ಕುಟುಂಬದ ಎಲ್ಲ ಸದಸ್ಯರಿಗೂ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಖಮರುಲ್ ಇಸ್ಲಾಂ, ವಿಧಾನ ಪರಿಷತ್ ಶಾಸಕ ಕೆ.ಬಿ. ಶಾಣಪ್ಪ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್ ಅವರು ಸಹ ತೀವ್ರ ಶೋಕ ಸಂತಾಪ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
ಗ್ರಾಮೀಣ ಮೂಲಭೂತ ಸೌಕರ್ಯಾಭಿವೃದ್ಧಿ ಅಧ್ಯಕ್ಷರ ಪ್ರವಾಸ
******************************************************
ಕಲಬುರಗಿ,ಜು.27.(ಕ.ವಾ.)-ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಅಧ್ಯಕ್ಷ ರಾಜಶೇಖರ ಬಿ. ಪಾಟೀಲ ಅವರು ಹುಮನಾಬಾದಿನಿಂದ ಜುಲೈ 28ರಂದು ಬೆಳಗಿನ 10.45 ಗಂಟೆಗೆ ಕಲಬುರಗಿಗೆ ಆಗಮಿಸುವರು. ಮರಳಿ ಕಲಬುರಗಿಯಿಂದ ಹುಮನಾಬಾದಿಗೆ ಪ್ರಯಾಣಿಸಿ ವಾಸ್ತವ್ಯ ಮಾಡುವರು.
ಧರ್ಮಸಿಂಗ್ ನಿಧನಕ್ಕಾಗಿ ಗಣ್ಯರ ಸಂತಾಪ
**************************************
ಕಲಬುರಗಿ,ಜು.27.(ಕ.ವಾ.)-ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಎನ್. ಧರಂಸಿಂಗ್ ಅವರ ನಿಧನಕ್ಕಾಗಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.
ಧರಂಸಿಂಗ್ ಅವರು ಈ ನಾಡು ಕಂಡ ಅಪ್ರತಿಮ ಜನ ನಾಯಕರಲ್ಲಿ ಒಬ್ಬರು. ತಮ್ಮ ಜೀವನದುದ್ದಕ್ಕೂ ಅಜಾತ ಶತ್ರು ಎನಿಸಿಕೊಂಡಿದ್ದ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿಯ ಕೊಡುಗೆ. ಏಳು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಈ ನಾಡಿನ ಪ್ರಗತಿಗಾಗಿ ಅಹರ್ನಿಷಿ ಶ್ರಮಿಸಿದ್ದ ಧರಂಸಿಂಗ್ ಅವರು ಕರ್ನಾಟಕದ ಮುಖ್ಯಮಂತ್ರಿಗಳಾಗಿ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನ ಮನ್ನಣೆ ಗಳಿಸಿದ್ದರು. ದೇವರಾಜ ಅರಸು ಅವರ ಸಂಪುಟದಲ್ಲಿ ಸಚಿವರಾಗಿ ಅರಸು ಅವರ ವೈಚಾರಿಕತೆಯನ್ನು ಮೈಗೂಡಿಸಿಕೊಂಡಿದ್ದರು. ಗುಂಡೂರಾವ್, ವೀರಪ್ಪ ಮೊಯಿಲಿ ಹಾಗೂ ಎಸ್.ಎಂ. ಕೃಷ್ಣ ಅವರ ಸಂಪುಟಗಳಲ್ಲಿಯೂ ಸಚಿವರಾಗಿ ವಿವಿಧ ಖಾತೆಗಳನ್ನು ದಕ್ಷತೆಯಿಂದ ನಿರ್ವಹಿಸಿ, ತಮ್ಮ ಕಾರ್ಯಕ್ಷಮತೆ ಮೆರೆದಿದ್ದರು.
ಧರಂಸಿಂಗ್ ಅತ್ಯಂತ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿತ್ವವನ್ನು ಉಳ್ಳ ವ್ಯಕ್ತಿ. ಬಡವರು, ಶ್ರಮಿಕರು ಹಾಗೂ ದುರ್ಬಲ ವರ್ಗಗಳ ನೋವಿಗೆ ಮಿಡಿಯುತ್ತಿದ್ದ ಧರಂಸಿಂಗ್ ರಾಷ್ಟ್ರ ಮಟ್ಟದಲ್ಲಿಯೂ ತಮ್ಮ ಮೌಲಿಕ ವ್ಯಕ್ತಿತ್ವದಿಂದ ಅಪಾರ ಮನ್ನಣೆ ಗಳಿಸಿದ್ದರು. ಪ್ರತಿಪಕ್ಷದ ನಾಯಕರಾಗಿಯೂ ಅವರು ವಿಧಾನಮಂಡಲದಲ್ಲಿ ತಮ್ಮ ಅನುಭವದ ಧಾರೆ ಎರೆದಿದ್ದರು. ಅವರ ನಿಧನದಿಂದ ಕನ್ನಡ ನಾಡು ಹಾಗೂ ಕಾಂಗ್ರೆಸ್ ಪಕ್ಷ ಒಬ್ಬ ಧೀಮಂತ ಜನ ನಾಯಕರನ್ನು ಕಳೆದುಕೊಂಡಂತಾಗಿದೆ. ಅವರ ನಿಧನದ ದುಖ:ವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಆ ಭಗವಂತನು ಕರುಣಿಸಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಕಂಬನಿ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ನಿಧನಕ್ಕೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಹಾಗೂ ಬಹುಕಾಲದ ಒಡನಾಡಿಯಾಗಿರುವ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಗೆಳೆಯನ ಅಗಲಿಕೆ ವಿಷಯ ತಿಳಿದು ಕಣ್ಣೀರು ಹರಿಸಿದ್ದಾರೆ. ನಾವಿಬ್ಬರೂ ಸುಮಾರು 50 ವರ್ಷಗಳಿಂದ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇವೆ. ಅವರು ನಿಧನರಾಗಿದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆಯಿಂದ ಕುಟುಂಬದಲ್ಲಿ ದೊಡ್ಡಣನನ್ನು ಕಳೆದುಕೊಂಡಷ್ಟು ಆಘಾತವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.
ನಮ್ಮಿಬ್ಬರಲ್ಲಿ ಭಿನ್ನಾಭಿಪ್ರಾಯವಿದ್ದರೂ ಯಾವತ್ತು ಅದು ನಮ್ಮಿಬ್ಬರ ವೈಶಮ್ಯಕ್ಕೆ ಕಾರಣವಾಗಲಿಲ್ಲ. ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಳ್ಳುತ್ತಿದ್ದೇವು. ಅವರ ಸಾವಿನ ಸುದ್ದಿ ಕೇಳಿ ಭೂಮಿ ಕುಸಿದು ಬಿದ್ದಂತಾಯಿತು. ಅವರ ಸರಳ ಸಜ್ಜನತೆಯ ಸ್ವಭಾವದಿಂದ ಎಲ್ಲರೊಂದಿಗೆ ಆತ್ಮೀಯತೆಯಿಂದ ವರ್ತಿಸುತ್ತಿದ್ದ ಧೀಮಂತ ನಾಯಕರಾಗಿದ್ದರು ಎಂದು ಗುಣಗಾನ ಮಾಡಿದ್ದಾರೆ.
ಮಾಲೀಕಯ್ಯ ವ್ಹಿ. ಗುತ್ತೇದಾರ್ ಸಂತಾಪ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಹೃದಯಘಾತದಿಂದ ನಿಧನವಾದ ವಿಷಯ ತಿಳಿದು ಅತೀವ ದು:ಖವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಹಾಗೂ ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲೆಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಮಾಲೀಕಯ್ಯ ವ್ಹಿ. ಗುತ್ತೇದಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
******************************************************
ಕಲಬುರಗಿ,ಜು.27.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿ ನಿಲಯಗಳ 2017-18ನೇ ಸಾಲಿಗೆ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಪಡೆಯಲು ಕಲಬುರಗಿ ಜಿಲ್ಲೆಯ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದವರಿಗೆ ಆದಾಯ ಮಿತಿ 1 ಲಕ್ಷ ರೂ. ದೊಳಗಿರಬೇಕು. ಅಭ್ಯರ್ಥಿಗಳು ಇಲಾಖೆಯ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ hಣಣಠಿ://ಞಚಿಡಿeಠಿಚಿss.ಛಿgg.gov.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಆಗಸ್ಟ್ 26ರೊಳಗಾಗಿ ಅರ್ಜಿ ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಮೇಲ್ಕಂಡ ಇಲಾಖೆಯ ವೆಬ್‍ಸೈಟ್‍ನ್ನು ಹಾಗೂ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿhosಣeಟಚಿಜmissioಟಿ@gmಚಿiಟ.ಛಿomಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯಾಲಯವನ್ನು ಅಗತ್ಯ ದಾಖಲೆಗಳೊಂದಿಗೆ ಸಂರ್ಪಸಬೇಕು ಅಥವಾ ಸಹಾಯವಾಣಿ ಸಂಖ್ಯೆ:080-65970006ನ್ನು ಸಹ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಐ.ಟಿ.ಐ. ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
************************************************
ಕಲಬುರಗಿ,ಜು.27.(ಕ.ವಾ.)-ಅಫಜಲಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ವಿ.ಟಿ. ಯೋಜನೆ ಅಡಿಯಲ್ಲಿ ತರಬೇತಿಗೆ 2017ನೇ ಸಾಲಿನಲ್ಲಿ ಮುಂದುವರೆದ ಸುತ್ತಿನಲ್ಲಿ ಮೇರಿಟ್ ಆಧಾರದ ಮೇಲೆ ಪ್ರವೇಶ ಪಡೆಯಲು ಲಭ್ಯವಿರುವ 6 ವೃತ್ತಿಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಫಲಜಲಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ವೃತ್ತಿ ಘಟಕಗಳ ಹೆಸರು ಮತ್ತು ಖಾಲಿ ಸ್ಥಾನಗಳ ಸಂಖ್ಯೆ ಇಂತಿದೆ: ಎಲೆಕ್ಟ್ರಿಷಿಯನ್-01, ಎಲೆಕ್ಟ್ರಾನಿಕ್ ಮೆಕ್ಯಾನಿಕ್-18, ಫಿಟ್ಟರ್-08, ಟರ್ನರ್-16, ಮೆಕ್ಯಾನಿಕ್ ಮೋಟರ್ ವೆಹಿಕಲ್(ಎಂಎಂವಿ)-18 ಹಾಗೂ ಮೆಕ್ಯಾನಿಕ್ ರೆಫ್ರಿಜಿರೇಟರ್ ಆಂಡ್ ಏರ್ ಕಂಡೀಶನಿಂಗ್-22.
ವಿದ್ಯಾರ್ಥಿಗಳು ಅಫಜಲಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖುದ್ದಾಗಿ ಆಗಮಿಸಿ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ಸರ್ಕಾರಿ ತರಬೇತಿ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ 08470-282011, ಕಿರಿಯ ತರಬೇತಿ ಅಧಿಕಾರಿಗಳಾದ ಮಲ್ಲಪ್ಪ ಜಮಾದಾರ ಮೊಬೈಲ್ ಸಂಖ್ಯೆ 9972876330 ಹಾಗೂ ಸುರೇಶ ತಳವಾರ ಮೊಬೈಲ್ ಸಂಖ್ಯೆ 9449653024ನ್ನು ಸಂಪರ್ಕಿಸಲು ಕೋರಲಾಗಿದೆ.
ಹಾಸ್ಟೆಲ್ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
*******************************************
ಕಲಬುರಗಿ,ಜು.27.(ಕ.ವಾ.)-ಕಲಬುರಗಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಸಲಾಗುತ್ತಿರುವ ಇಂಜನಿಯರಿಂಗ್, ಕಾನೂನು ಹಾಗೂ ಸ್ನಾತಕೋತ್ತರ (ಪಿ.ಜಿ.) ಬಾಲಕ/ ಬಾಲಕಿಯರ ಕಾಲೇಜು ಹಾಸ್ಟೆಲ್‍ಗಳ 2016-17ನೇ ಸಾಲಿನ ಪ್ರವೇಶಕ್ಕಾಗಿ ಕಲಬುರಗಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಾಲಕ/ಬಾಲಕಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಬಂಧಪಟ್ಟ ವಸತಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟಿನಲ್ಲಿ ಜುಲೈ 28ರಿಂದ ಆಗಸ್ಟ್ 5ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
10 ಜನ ಬಾಲಕಾರ್ಮಿಕರ ಪುನರ್ವಸತಿ
**********************************
ಕಲಬುರಗಿ,ಜು.27.(ಕ.ವಾ.)-ಕಾರ್ಮಿಕ ಇಲಾಖೆ, ಕಾರ್ಖಾನೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಆಪರೇಶನ್ ಮುಸ್ಕಾನ್-3 ತಂಡವು ಕಪನೂರ ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ಅಬ್ದುಲ್ ಸಲೀಂ ಮಾಲೀಕತ್ವದ ಮೆ|| ಪಯೋನಿಯರ್ ಪಾಸ್ಟಿಕ್ ಕಾರ್ಖಾನೆಯ ಮೇಲೆ ದಾಳಿ ನಡೆಸಿ ಕಾರ್ಖಾನೆಯಲ್ಲಿ ಕಾರ್ಯನಿರತ 10 ಜನ ಬಾಲಕಾರ್ಮಿಕರನ್ನು ಮತ್ತು ಕಿಶೋರಾವಸ್ಥೆ ಕಾರ್ಮಿಕರುಗಳನ್ನು ಬಿಡುಗಡೆಗೊಳಿಸಿ ಪುನರ್ವಸತಿ ಕಲ್ಪಿಸಲಾಗಿದೆ. ಸದರಿ ಮಕ್ಕಳ ವಯಸ್ಸಿನ ದೃಢೀಕರಣಕ್ಕಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ವಯಸ್ಸಿನ ದೃಢೀಕರಣ ಪತ್ರವನ್ನು ಜಿಲ್ಲಾ ವೈದ್ಯಾಧಿಕಾರಿಗಳು ನೀಡಿದ ನಂತರ ಕಾರ್ಖಾನೆ ಇಲಾಖೆಯ ಉಪನಿರ್ದೇಶಕರು ಮುಂದಿನ ಕಾನೂನಾತ್ಮಕ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ 2016ರನ್ವಯ 14 ವರ್ಷದೊಳಗಿನ ಬಾಲಕಾರ್ಮಿಕರನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. 14 ರಿಂದ 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಸಹ ನಿಷೇಧಿಸಲಾಗಿದೆ. ಕಾಯ್ದೆಯ ಪ್ರಾವಧಾನಗಳ ಉಲ್ಲಂಘನೆ ಮಾಡಿದಲ್ಲಿ 50,000 ರೂ. ವರೆಗಿನ ದಂಡ ಅಥವಾ ಎರಡು ವರ್ಷಗಳ ಜೈಲು ಶಿಕ್ಷೆ ದಂಡನೆಗೊಳಪಡಿಸಲಾಗುತ್ತದೆ ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.



ಹೀಗಾಗಿ ಲೇಖನಗಳು NEWS AND PHOTO DATE: 27--07--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 27--07--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 27--07--2017 ಲಿಂಕ್ ವಿಳಾಸ https://dekalungi.blogspot.com/2017/07/news-and-photo-date-27-07-2017.html

Subscribe to receive free email updates:

0 Response to "NEWS AND PHOTO DATE: 27--07--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ