news and photo date: 31--07--2017

news and photo date: 31--07--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು news and photo date: 31--07--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : news and photo date: 31--07--2017
ಲಿಂಕ್ : news and photo date: 31--07--2017

ಓದಿ


news and photo date: 31--07--2017

ವಿಳಂಬರಹಿತ ಆಡಳಿತ ವ್ಯವಸ್ಥೆಗೆ ಆದ್ಯತೆ
**********************************
ಕಲಬುರಗಿ,ಜು.31.(ಕ.ವಾ.)-ಕಲಬುರಗಿ ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳಿಗೆ ತೀವ್ರ ಸ್ಪಂದನೆ ನೀಡಿ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ, ದಕ್ಷತೆಯಿಂದ ಕಾರ್ಯನಿರ್ವಹಿಸಲಾಗುವುದು. ಜಿಲ್ಲೆಯ ಜನತೆಗೆ ಭ್ರಷ್ಟಾಚಾರ ರಹಿತ ಮತ್ತು ವಿಳಂಬರಹಿತ ಆಡಳಿತ ವ್ಯವಸ್ಥೆ ಕಲ್ಪಿಸುವುದಕ್ಕೆ ಪ್ರಥಮಾದ್ಯತೆ ನೀಡುವುದಾಗಿ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಹೇಳಿದರು.
ಅವರು ಸೋಮವಾರ ಕಲಬುರಗಿಯ ನೂತನ ಜಿಲ್ಲಾಧಿಕಾರಿಯ ಕಾರ್ಯಾಭಾರ ವಹಿಸಿಕೊಂಡು ಮಾತನಾಡಿ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಹಾಯ ಸಹಕಾರದಿಂದ ಉತ್ತಮ ಆಡಳಿತ ನೀಡಲು ಪ್ರಯತ್ನಿಸಲಾಗುವುದು ಎಂದರು.
ನೂತನ ಜಿಲ್ಲಾಧಿಕಾರಿಗಳು ತಮಿಳುನಾಡು ರಾಜ್ಯದ ಸೇಲಂ ಜಿಲ್ಲೆಯವರಾಗಿದ್ದು, 2010ನೇ ಬ್ಯಾಚಿನ ಐ.ಎಸ್.ಎಸ್. ಅಧಿಕಾರಿಯಾಗಿದ್ದಾರೆ. ಕಾರವಾರ ಸಹಾಯಕ ಆಯುಕ್ತರಾಗಿ, ಕೆ.ಪಿ.ಎಸ್.ಸಿ. ಪರೀಕ್ಷಾ ನಿಯಂತ್ರಣಾಧಿಕಾರಿ ಹಾಗೂ ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತರುಗಳಾದ ರಾಚಪ್ಪ, ಎಂ. ಪರಶುರಾಮ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳು ನೂತನ ಜಿಲ್ಲಾಧಿಕಾರಿಯನ್ನು ಬರ ಮಾಡಿಕೊಂಡರು.

ಜಿಲ್ಲಾ ಸಚಿವರಿಂದ ವಾರ್ತಾ ಇಲಾಖೆಯ ನೂತನ ಬಸ್ಸಿನ ಉದ್ಘಾಟನೆ
***************************************************************
ಕಲಬುರಗಿ,ಜು.31.(ಕ.ವಾ.)-ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಕರ್ತರ ಪ್ರವಾಸ ಕಾರ್ಯಕ್ರಮಕ್ಕಾಗಿ ಇಲಾಖೆಗೆ ನೀಡಿದ ನೂತನ ಬಸ್ಸನ್ನು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಸೋಮವಾರ ಕಲಬುರಗಿಯಲ್ಲಿ ಉದ್ಘಾಟಿಸಿದರು.
ನಂತರ ಇದೇ ಬಸ್ಸಿನಲ್ಲಿ ಮಾಧ್ಯಮದವರೊಂದಿಗೆ ಹೆಚ್.ಕೆ.ಆರ್.ಡಿ.ಬಿ. ಅನುದಾನದಡಿ ಕಲಬುರಗಿ ಮಹಾನಗರ ಪಾಲಿಕೆಯಿಂದ ಲಾಲಗೇರಿ ಕ್ರಾಸಿನಿಂದ ಧೋಬಿ ಘಾಟವರೆಗೆ ಕೈಗೊಂಡ ಸ್ಟಾರ್ಮ್ ವಾಟರ್ ಡ್ರೈನ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಹಾನಗರ ಪಾಲಿಕೆ ಮೇಯರ್ ಶರಣುಕುಮಾರ ಮೋದಿ, ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಡಿ.ಬಿ. ಆಯುಕ್ತ ಹರ್ಷಗುಪ್ತ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ. ಜಾಧವ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಜಿ.ಚಂದ್ರಕಾಂತ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಜಿಲ್ಲಾ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಲೋಕೋಪಯೋಗಿ ಇಲಾಖೆಯಿಂದ ಸುಮಾರು 5-6 ಲಕ್ಷ ರೂ. ವೆಚ್ಚದಿಂದ ನವೀಕೃತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೆಶಕರ ಕೋಣೆಯನ್ನು ಉದ್ಘಾಟಿಸಿದರು.

ಹಿರಿಯ ಸಹಾಯಕ ನಿರ್ದೇಶಕರಾಗಿ ಸಿದ್ದೇಶ್ವರಪ್ಪ ಅಧಿಕಾರ ಸ್ವೀಕಾರ
**********************************************************
ಕಲಬುರಗಿ,ಜು.31.(ಕ.ವಾ.)-ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಸಿದ್ದೇಶ್ವರಪ್ಪ ಜಿ.ಬಿ. ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಜಿ. ಚಂದ್ರಕಾಂತ ಅವರು ಜುಲೈ 31ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕರಿಸಿದರು. ಕಲಬುರಗಿ ವಾರ್ತಾ ಇಲಾಖೆಯ ಪ್ರಭಾರ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಯ ಜೊತೆಗೆ ಯಾದಗಿರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ. ಸಿದ್ದೇಶ್ವರಪ್ಪ ಅವರು ಈ ಟಿವಿ ನ್ಯೂಸ್, ಉದಯ ಟಿವಿ ನ್ಯೂಸ್, ಕಸ್ತೂರಿ ನ್ಯೂಸ್, ಸಮಯ ಟಿವಿ ನ್ಯೂಸ್, “ಜನವಾಹಿನಿ” ಕನ್ನಡ ದೈನಿಕ ಸೇರಿದಂತೆ ಸುಮಾರು 13 ವರ್ಷಗಳ ಕಾಲ ಮಾಧ್ಯಮ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.

ಜಿ. ಚಂದ್ರಕಾಂತ ಸೇವೆ ಮಾದರಿ
****************************
ಕಲಬುರಗಿ,ಜು.31.(ಕ.ವಾ.)-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸುಮಾರು 34 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದುತ್ತಿರುವ ಉಪನಿರ್ದೆಶಕ ಜಿ. ಚಂದ್ರಕಾಂತ ಅವರು ತಮ್ಮ ಸೇವಾವಧಿಯಲ್ಲಿ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಪ್ರಚುರಪಡಿಸುವ ವಿಧಾನ ಎಲ್ಲರಿಗೂ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಹೇಳಿದರು.
ಅವರು ಸೋಮವಾರ ಕಲಬುರಗಿ ವಾರ್ತಾ ಭವನದಲ್ಲಿ ಆಯೋಜಿಸಿದ ಉಪನಿರ್ದೇಶಕ ಜಿ. ಚಂದ್ರಕಾಂತ ಅವರ ಬೀಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು.
ಚಂದ್ರಕಾಂತ ಅವರು ಸರಳ ಸಜ್ಜನಿಕೆಯ ವ್ಯಕಿತ್ವ ಹೊಂದಿದ್ದು, ಎಲ್ಲ ಜನಪ್ರತಿನಿಧಿ ಹಾಗೂ ಅಧಿಕಾರಿಗಳೊಂದಿಗೆ ಉತ್ತಮ ಸಮನ್ವಯತೆ ಸಾಧಿಸಿ ಸರ್ಕಾರದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಹೆಚ್ಚು ಮುತುವರ್ಜಿ ವಹಿಸುತ್ತಿದ್ದರು. ಅವರ ನಿವೃತ್ತಿ ನಂತರ ಬದುಕು ಸುಖಕರವಾಗಲಿ ಎಂದು ಶುಭ ಹಾರೈಸಿ, ಸಂಗೀತ ಮತ್ತು ಸಾಹಿತ್ಯಾಸಕ್ತರಾದ ಜಿ. ಚಂದ್ರಕಾಂತ ಅವರು ನಿವೃತ್ತಿಯ ನಂತರ ಸಂಗೀತ ಮತ್ತು ಸಾಹಿತ್ಯದ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಲಿ ಎಂದು ಹೇಳಿದರು.
ಸತ್ಯಕಾಮ ಪತ್ರಿಕೆ ಸಂಪಾದಕ ಪಿ.ಎಂ. ಮಣ್ಣೂರ ಮಾತನಾಡಿ, ಜಿ. ಚಂದ್ರಕಾಂತ ಉತ್ತಮ ಅಧಿಕಾರಿಗಳಾಗಿ ಹಾಗೂ ಸುದ್ದಿಗಾರರಾಗಿದ್ದರು ಎಂದರು. ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಮಾತನಾಡಿ, ಜಿ. ಚಂದ್ರಕಾಂತ ವಾರ್ತಾಧಿಕಾರಿಯಾಗಿ ಮಾತ್ರವಲ್ಲ. ಒಬ್ಬ ನಿಜವಾದ ಪತ್ರಕರ್ತರಂತೆ ಸೇವೆ ಸಲ್ಲಿಸಿದ್ದಾರೆ. ಅತ್ಯಂತ ಸರಳ ಸ್ವಭಾವದ ಚಂದ್ರಕಾಂತ ಅವರ ಸೇವೆ ಮರೆಯುವಂತಿಲ್ಲ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ. ಚಂದ್ರಕಾಂತ ಅವರು ವಾರ್ತಾ ಇಲಾಖೆಯಲ್ಲಿ 34 ವರ್ಷಗಳ ಕಾಲ ಸಲ್ಲಿಸಿದ ಸೇವೆ ಸಂತೃಪ್ತಿ ತಂದಿದೆ. ಸೇವಾ ಅವಧಿಯಲ್ಲಿ ಪತ್ರಕರ್ತರು ಹಾಗೂ ಸಿಬ್ಬಂದಿಗಳು ನೀಡಿದ ಸಹಕಾರ ಮೆರೆಯುವಂತಿಲ್ಲ ಎಂದರು. ಪತ್ರಕರ್ತರ ಸಂಗಮನಾಥ ಅವರು ಜಿ. ಚಂದ್ರಕಾಂತ ಅವರ ವ್ಯಕ್ತಿತ್ವ ಕುರಿತು ರಚಿಸಿದ ಕವಿತೆ ವಾಚಿಸಿದರು.
ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣುಕುಮಾರ ಮೋದಿ, ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಡಿ.ಬಿ. ಆಯುಕ್ತ ಹರ್ಷಗುಪ್ತ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿಜಯವಾಣಿ ವರದಿಗಾರ ಪ್ರಭಾಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು.

ಹೈ.ಕ. ಮಂಡಳಿಯಿಂದ 1845 ಕೋಟಿ ರೂ. ಖರ್ಚು
********************************************
ಕಲಬುರಗಿ,ಜು.31.(ಕ.ವಾ.)-ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು 2013-14ರಿಂದ 2017-18ರ ಜೂನ್ ಅಂತ್ಯದವರೆಗೆ ಒಟ್ಟು 1845 ಕೋಟಿ ರೂ.ಗಳನ್ನು ಖರ್ಚು ಮಾಡುವ ಮೂಲಕ ಹೈ.ಕ. ಭಾಗದ ಅಭಿವೃದ್ಧಿಯಲ್ಲಿ ಮುತುವರ್ಜಿಯಿಂದ ಕೆಲಸ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು.
ಅವರು ಸೋಮವಾರ ಕಲಬುರಗಿಯ ವಾರ್ತಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2013-14 ರಿಂದ 2016-17ನೇ ಸಾಲಿನವರೆಗೆ ಕ್ರಿಯಾ ಯೋಜನೆಯಲ್ಲಿ ಅನುಮೋದನೆಯಾದ ಒಟ್ಟು 9526 ಕಾಮಗಾರಿಗಳ ಪೈಕಿ 4328 ಕಾಮಗಾರಿಗಳು ಪೂರ್ಣಗೊಂಡಿದ್ದು, 3363 ಕಾಮಗಾರಿಗಳು ವಿವಿದ ಹಂತದಲ್ಲಿ ಪ್ರಗತಿಯಲ್ಲಿರುತ್ತವೆ. 2016-17ನೇ ಸಾಲಿನಲ್ಲಿ ಮಂಜೂರಾಗಿರುವ ಎಲ್ಲ ಕಾಮಗಾರಿಗಳನ್ನು 2017ರ ಅಕ್ಟೋಬರ್ ಅಂತ್ಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ತೆರೆಯಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಸಕ್ತ ವರ್ಷ 8 ಪ್ರೌಢಶಾಲೆ ಮತ್ತು 19 ಪದವಿ ಪೂರ್ವ ಕಾಲೇಜು ತೆರೆಯಲು ಉದ್ದೇಶಿಸಲಾಗಿದ್ದು, ಇದೇ ವರ್ಷವೇ ಶಾಲಾ-ಕಾಲೇಜುಗಳ ಆರಂಭಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆದಿದೆ. ಆದಾಗಿದ್ದರೆ ಮುಂದಿನ ವರ್ಷ ಶಾಲಾ ಕಾಲೇಜು ತೆರೆಯಲಾಗುವುದು ಎಂದು ತಿಳಿಸಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳುವ ಯಾವುದೇ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಥರ್ಡ್‍ಪಾಟಿ ವರದಿ ನೀಡಿದ ನಂತರವೇ ಬಿಲ್ ಪಾವತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಶುದ್ಧ ಕುಡಿಯುವ ನೀರು ಪೂರೈಕೆಗೆ ಬೇಕಾಗುವ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಮೇಯರ್ ಶರಣುಕುಮಾರ ಮೋದಿ, ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಡಿ.ಬಿ. ಆಯುಕ್ತ ಹರ್ಷಗುಪ್ತ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. '

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಪ್ರವಾಸ
*****************************************************************
ಕಲಬುರಗಿ,ಜು.31.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಸರ್ಕಾರ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆಡಳಿತಾಧಿಕಾರಿ ಮೊಹಮ್ಮದ್ ಮೊಹಸಿನ್ ಅವರು ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ 2017ರ ಆಗಸ್ಟ್ 2ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ರಿಟ್ ಪಿಟಿಷನ್ 204976/16 ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಅಂದು ರಾತ್ರಿ 9.05 ಗಂಟೆಗೆ ಕಲಬುರಗಿಯಿಂದ ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಆಗಸ್ಟ್ 1ರಿಂದ ಮಾನಸಿಕ ರೋಗಿಗಳ ತಪಾಸಣಾ ಶಿಬಿರ
*************************************************
ಕಲಬುರಗಿ,ಜುಲೈ.31.(ಕ.ವಾ.)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಮನೋಚೈತನ್ಯ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ ಆರು ತಾಲೂಕುಗಳ ಆಸ್ಪತ್ರೆಗಳಲ್ಲಿ ಮಾನಸಿಕ ರೋಗಿಗಳ ತಪಾಸಣಾ ಶಿಬಿರವನ್ನು ಕೆಳಕಂಡ ವಾರ ಮತ್ತು ದಿನಾಂಕಗಳಂದು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ತಾಲೂಕು ಆಸ್ಪತ್ರೆÉ ಜರುಗುವ ಶಿಬಿರದ ದಿನಾಂಕ, ವಾರ ಹಾಗೂ ಪಾಲ್ಗೊಳ್ಳುವ ತಜ್ಞ ಮನೋವೈದ್ಯರುಗಳ ವಿವರ ಇಂತಿದೆ.
ಮೊದಲನೇ ಮಂಗಳವಾರ: ಆಗಸ್ಟ್ 1ರಂದು ಆಳಂದÀ ತಾಲೂಕು ಆಸ್ಪತ್ರೆ-ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ|| ಚಂದ್ರಶೇಖರ ಹೂಡೇದ್. ಮೊದಲನೇ ಶುಕ್ರವಾರ: ಆಗಸ್ಟ್ 4ರಂದು ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಆಸ್ಪತ್ರೆ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೃದ್ಯ ಡಾ. ವಿಜಯೇಂದ್ರ ಎಂ.ಡಿ., ಎರಡನೇ ಮಂಗಳವಾರ: ಆಗಸ್ಟ್ 8ರಂದು ಚಿಂಚೋಳಿ ತಾಲೂಕು ಆಸ್ಪತ್ರೆ-ಕಲಬುರಗಿ ಜಿಲ್ಲಾ ಆಸ್ಪತ್ರೆಯ ಮನೋವೃದ್ಯ ಡಾ. ವಿಜಯೇಂದ್ರ ಎಂ.ಡಿ., ಎರಡನೇ ಶುಕ್ರವಾರ: ಆಗಸ್ಟ್ 11ರಂದು ಅಫಜಲಪುರ ತಾಲೂಕು ಆಸ್ಪತ್ರೆ-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ|| ಶರಣಬಸಪ್ಪ ಕೆ., ಮೂರನೇ ಶುಕ್ರವಾರ: ಆಗಸ್ಟ್ 18ರಂದು ಜೇವರ್ಗಿ ತಾಲೂಕು ಆಸ್ಪತ್ರೆ-ಕೆ.ಬಿ.ಎನ್. ಆಸ್ಪತ್ರೆಯ ಮನೋವೃದ್ಯ ಡಾ|| ಅಮೋಲ್ ಪತಂಗೆ.ನಾಲ್ಕನೇ ಮಂಗಳವಾರ: ಆಗಸ್ಟ್ 21ರಂದು ಸೇಡಂ ತಾಲೂಕು ಆಸ್ಪತ್ರೆ-ಕಲಬುರಗಿ ಬಸವೇಶ್ವರ ಆಸ್ಪತ್ರೆಯ ಮನೋವೃದ್ಯ ಡಾ. ಅಜಯ ಢಗೆ ಭೇಟಿ ನೀಡುವರು.
ಮೇಲ್ಕಂಡ ದಿನಾಂಕಗಳಂದು ಮನೋವೈದ್ಯರು ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಬಹಳ ಮಂಕಾಗಿರುವ, ಯಾರ ಜೊತೆಗೂ ಸೇರದಿರುವ, ಬೇರೆಯವರಿಗೆ ಕಾಣಿಸದ ದೃಶ್ಯ ತಮಗೆ ಕಾಣಿಸುತ್ತದೆ ಹಾಗೂ ಕೇಳಿಸದ ಧ್ವನಿ ತನಗೆ ಕೇಳಿಸುತ್ತದೆ ಎನ್ನುವ, ಎಲ್ಲರ ಬಗ್ಗೆ ಸಂಶಯ ಪಡುವ, ಆತ್ಮಹತ್ಯೆ ಬಗ್ಗೆ ಆಲೋಚಿಸುವ, ಮೂರ್ಛೆರೋಗ, ಬುದ್ಧಿಮಾಂದ್ಯರು ಮುಂತಾದ ಮಾನಸಿಕ ತೊಂದರೆ ಅಥವಾ ಮಾನಸಿಕ ರೋಗದಿಂದ ಬಳಲುತ್ತಿರುವವರು ಸದರಿ ದಿನದಂದು ಮನೋವೈದ್ಯರ ಹತ್ತಿರ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.












ಹೀಗಾಗಿ ಲೇಖನಗಳು news and photo date: 31--07--2017

ಎಲ್ಲಾ ಲೇಖನಗಳು ಆಗಿದೆ news and photo date: 31--07--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo date: 31--07--2017 ಲಿಂಕ್ ವಿಳಾಸ https://dekalungi.blogspot.com/2017/07/news-and-photo-date-31-07-2017.html

Subscribe to receive free email updates:

0 Response to "news and photo date: 31--07--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ