ಶೀರ್ಷಿಕೆ : NEWS AND PHOTOS 10-07-2017
ಲಿಂಕ್ : NEWS AND PHOTOS 10-07-2017
NEWS AND PHOTOS 10-07-2017
***************************************************
ಕಲಬುರಗಿ,ಜು.10.(ಕ.ವಾ.)-ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳನ್ನು ತಡೆಗಟ್ಟಲು ಅನುವಾಗುವಂತೆ ಕಲಬುರಗಿ ನಗರದಲ್ಲಿ ಶೇ. 100 ರಷ್ಟು ಯು.ಜಿ.ಡಿ. ಸೌಲಭ್ಯ ಕಲ್ಪಿಸಲು ಸುಮಾರು 350 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಂಡಿದ್ದು, ಈಗಾಗಲೇ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ ಹೇಳಿದರು.
ಅವರು ಸೋಮವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಅನುದಾನದ ಪೈಕಿ ರಾಜ್ಯ ಸರ್ಕಾರ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಹೆಚ್.ಕೆ.ಆರ್.ಡಿ.ಬಿ.ಯ ಒಟ್ಟು 141 ಕೋಟಿ ರೂ., ಅಮೃತ ಯೋಜನೆಯ 192 ಕೋಟಿ ರೂ. ಹಾಗೂ ಕರ್ನಾಟಕ ಮೂಲ ಸೌಕರ್ಯಾಭಿವೃದ್ಧಿ ನಿಗಮದ 27 ಕೋಟಿ ರೂ. ಬಳಸಿಕೊಳ್ಳಲಾಗುವುದೆಂದರು.
ಕಲಬುರಗಿ ನಗರದಲ್ಲಿ ಈಗಾಗಲೇ 4 ವಾರ್ಡುಗಳಿಗೆ ಪೂರ್ಣ ಹಾಗೂ 7 ವಾರ್ಡುಗಳಲ್ಲಿ ಭಾಗಶ: ನಿರಂತರ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ವಿಶ್ವ ಬ್ಯಾಂಕಿನ 500 ಕೋಟಿ ರೂ. ಆರ್ಥಿಕ ನೆರವಿನಿಂದ ಉಳಿದ 44 ವಾರ್ಡುಗಳು ಹಾಗೂ ಭಾಗಶ: ವಾರ್ಡುಗಳಲ್ಲಿಯೂ ನಿರಂತರ ನೀರು ಸರಬರಾಜು ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರ ಪಕ್ಕದಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಿಂದ ಈಜುಕೊಳ ನಿರ್ಮಿಸಲು ಯೋಜಿಸಲಾಗಿದೆ ಎಂದರು.
ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಮಾಜಿ ಮೇಯರ್ ಸೈಯ್ಯದ್ ಅಹ್ಮದ್, ಕೂಡಾ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ. ಜಾಧವ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಒಂದನೇ ಸಿ.ಎಂ. ಪ್ಯಾಕೇಜಿನ 40 ಕಾಮಗಾರಿ ಪೂರ್ಣ
**********************************************
ಕಲಬುರಗಿ,ಜು.10.(ಕ.ವಾ.)-ಮುಖ್ಯಮಂತ್ರಿಗಳ ಒಂದನೇ ಪ್ಯಾಕೇಜಿನಡಿ ಕಲಬುರಗಿ ನಗರದಲ್ಲಿ ಕೈಗೆತ್ತಿಕೊಳ್ಳಲಾದ 41 ಕಾಮಗಾರಿಗಳ ಪೈಕಿ 40 ಕಾಮಗಾರಿಗಳು ಪೂರ್ಣಗೊಂಡಿದ್ದು, 93.84 ಕೋಟಿ ರೂ. ಖರ್ಚಾಗಿದೆ ಎಂದು ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ ಹೇಳಿದರು.
ಅವರು ಸೋಮವಾರ ಕಲಬುರಗಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಿ.ಎಂ. ಎರಡನೇ 100 ಕೋಟಿ ರೂ.ಗಳ ಪ್ಯಾಕೇಜಿನಡಿ 133 ಕಾಮಗಾರಿ ಪೂರ್ಣಗೊಳಿಸಿದ್ದು, 86.88 ಕೋಟಿ ರೂ. ಖರ್ಚಾಗಿದೆ. ಸಿ.ಎಂ. 3ನೇ 100 ಕೋಟಿ ರೂ.ಗಳ ಪ್ಯಾಕೇಜಿನಡಿ 10 ಕಾಮಗಾರಿ ಪೂರ್ಣಗೊಂಡಿದ್ದು, 24.01 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದೇ ರೀತಿ ಮೊದಲನೇ 40 ಕೋಟಿ ರೂ. ವಿಶೇಷ ಅನುದಾನದಡಿ 27 ಕಾಮಗಾರಿ ಮುಗಿಸಿದ್ದು, 22.41 ಕೋಟಿ ರೂ. ಹಾಗೂ 2ನೇ 50 ಕೋಟಿ ರೂ. ವಿಶೇಷ ಅನುದಾನಡಿ 2 ಕಾಮಗಾರಿ ಮುಗಿಸಿದ್ದು, 11 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.
ಮಹಾನಗರ ಪಾಲಿಕೆಯಿಂದ 2015-16ನೇ ಸಾಲಿನ ಎಸ್.ಎಫ್.ಸಿ. ಯೋಜನೆಯಡಿ 217 ಕಾಮಗಾರಿ ಪೂರ್ಣಗೊಂಡಿದ್ದು, 13.53 ಕೋಟಿ ರೂ. ವೆಚ್ಚ ಮಾಡಲಾಗಿದೆ. 2016-17ನೇ ಸಾಲಿನ ಎಸ್.ಎಫ್.ಸಿ. ಯೋಜನೆಯಡಿ 54 ಕಾಮಗಾರಿ ಮುಗಿದಿದ್ದು, 7.51 ಕೋಟಿ ರೂ. ಹಾಗೂ 2017-18ನೇ ಸಾಲಿನ ಎಸ್.ಎಫ್.ಸಿ. ಯೋಜನೆಯಡಿ 17 ಕಾಮಗಾರಿ ಪೂರ್ಣಗೊಂಡಿದ್ದು, 3.49 ಕೋಟಿ ರೂ. ವೆಚ್ಚವಾಗಿದೆ. ಅದೇ ರೀತಿ 14ನೇ ಹಣಕಾಸು ನಿಧಿಯಡಿ 2015-16ನೇ ಸಾಲಿನ 102 ಕಾಮಗಾರಿ ಪೂರ್ಣಗೊಳಿಸಿದ್ದು, 6.42 ಕೋಟಿ ರೂ. ಖರ್ಚು ಮಾಡಲಾಗಿದೆ. ಅದೇ ರೀತಿ 2016-17ನೇ ಸಾಲಿನ 125 ಕಾಮಗಾರಿ ಪೂರ್ಣಗೊಂಡಿದ್ದು, 7.42 ಕೋಟಿ ರೂ. ಖರ್ಚಾಗಿದೆ. 2017-18ನೇ ಸಾಲಿನಲ್ಲಿ 201 ಕಾಮಗಾರಿಗಳು ಮಂಜೂರಾಗಿವೆ ಎಂದರು.
ಕಲಬುರಗಿ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ಹಾಗೂ ಕಲಬುರಗಿ ನಗರದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಕೈಗೆತ್ತಿಕೊಳ್ಳಲಾದ ಕುಡಿಯುವ ನೀರು ಮತ್ತು ಯುಜಿಡಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಕಳಪೆ ಕಾಮಗಾರಿ ಕೈಗೊಳ್ಳುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದೆಂದರು.
ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಹ್ಮದ್ ಅಸಗರ್ ಚುಲಬುಲ್, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ಆಕೃತಿ ಸಾಗರ, ಮಾಜಿ ಮೇಯರ್ ಸೈಯ್ಯದ್ ಅಹ್ಮದ್, ಕೂಡಾ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ. ಜಾಧವ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು NEWS AND PHOTOS 10-07-2017
ಎಲ್ಲಾ ಲೇಖನಗಳು ಆಗಿದೆ NEWS AND PHOTOS 10-07-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTOS 10-07-2017 ಲಿಂಕ್ ವಿಳಾಸ https://dekalungi.blogspot.com/2017/07/news-and-photos-10-07-2017.html
0 Response to "NEWS AND PHOTOS 10-07-2017"
ಕಾಮೆಂಟ್ ಪೋಸ್ಟ್ ಮಾಡಿ