NEWS AND PHOTOS DATE; 11--07--2017

NEWS AND PHOTOS DATE; 11--07--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTOS DATE; 11--07--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTOS DATE; 11--07--2017
ಲಿಂಕ್ : NEWS AND PHOTOS DATE; 11--07--2017

ಓದಿ


NEWS AND PHOTOS DATE; 11--07--2017

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ 
*******************************
ಕಲಬುರಗಿ,ಜು.11.(ಕ.ವಾ.)-ರಾಜ್ಯ ಸಚಿವ ಸಂಪುಟದಲ್ಲಿ ಮೂರು ಸಚಿವರ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿಗಾಗಿ ಶೀಘ್ರದಲ್ಲೇ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. 
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದ್ದು, ಮುಂಬರುವ ದಿನಗಳಲ್ಲಿ ಕಲಬುರಗಿ ಜಿಲ್ಲೆ ಸೇರಿದಂತೆ ಮಳೆ ಕೊರತೆ ಉಂಟಾಗಿರುವ ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಕ್ರಮ ಜರುಗಿಸಲಾಗುವುದು ಎಂದರು. 
ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಂಟ್ವಾಳ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತøತ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು, ಕಾನೂನು ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಜಾಗೃತದಳ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಪೊಲೀಸರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸುವ ಅಗತ್ಯವಿಲ್ಲ ಎಂದರು. 
ಇಂಧನ ಸಚಿವ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ವಿಧಾನ ಪರಿಷತ್ ಶಾಸಕ ಶರಣಪ್ಪ ಮಟ್ಟೂರ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
*************************************
ಕಲಬುರಗಿ,ಜು.11.(ಕ.ವಾ.)-ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ಐವಾನ್-ಇ-ಶಾಹಿ ಅತಿಥಿ ಗೃಹದ ಆವರಣದಲ್ಲಿ ವಿವಿಧ ಸಂಘಟನೆಗಳಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದಕ್ಕೂ ಮುನ್ನ ಮುಖಂಡರಾದ ವೈಜನಾಥ ಪಾಟೀಲ ಹಾಗೂ ಎಸ್.ಕೆ. ಕಾಂತಾ ಅವರೊಂದಿಗೆ ಉಭಯ ಕುಶಲೋಪರಿ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಆಲೋಕಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಾರ್ಡ್‍ವೇರ್ ಅಸಿಸ್ಟಂಟ್ ವೃತ್ತಿಪರ ಕೋರ್ಸಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಜು.11.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2016-17 ನೇ ಸಾಲಿನಲ್ಲಿ ಕೌಶಲ್ಯ ತರಬೇತಿ ಯೋಜನೆಯಡಿ ಕಂಪ್ಯೂಟರ್ ಹಾರ್ಡವೇರ್ ಅಸಿಸ್ಟಂಟ್ ವೃತ್ತಿಪರ ಕೋರ್ಸುಗಳಲ್ಲಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ. ಪಾಸಾದ ಕಲಬುರಗಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ, ಪಾರ್ಸಿ ಜನಾಂಗದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ್ ಪಾಷಾ ಕಾರಟಗಿ ತಿಳಿಸಿದ್ದಾರೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಕಡಗಂಚಿ ಕಾಂಪ್ಲೆಕ್ಸಿನ ಕೇರ್/ಆಫ್ ಫಾಲ್‍ಕಾನ್ ಟೆಕ್ನಾಲಜಿ ಎಸಿಸಿಪಿಎಲ್ ಟ್ರೈನಿಂಗ್ ಡಿವಿಜನ್‍ನಲ್ಲಿ ತರಬೇತಿ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಿನಿ ವಿಧಾನಸೌಧ ಟ್ರಾಫಿಕ ಪೋಲಿಸ್ ಸ್ಟೇಷನ್ ಎದುರಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260/244006ನ್ನು ಅಥವಾ ಮೇಲ್ಕಂಡ ಸದರಿ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







ಮುಖ್ಯಮಂತ್ರಿಗಳಿಂದ ಅಹವಾಲು ಸ್ವೀಕಾರ
ಓರ್ವ ನಟಿಯ ಆಯ್ಕೆಗಾಗಿ ಅರ್ಜಿ ಆಹ್ವಾನ
***********************************
ಕಲಬುರಗಿ,ಜು.11.(ಕ.ವಾ.)-ಕಲಬುರಗಿ ರಂಗಾಯಣಕ್ಕೆ ತಾತ್ಕಾಲಿಕವಾಗಿ 3 ವರ್ಷಗಳ ಅವಧಿಗೆ ಓರ್ವ ನಟಿಯನ್ನು ಆಯ್ಕ್ಕೆ ಮಾಡಿಕೊಂಡು ರೆಪರ್ಟರಿ ಪ್ರಾರಂಭಿಸಲಾಗುತ್ತಿದೆ. ಇದಕ್ಕಾಗಿ ಓರ್ವ ನಟಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಕಲಾವಿದರ ವಯಸ್ಸು ಗರಿಷ್ಟ 25 ವರ್ಷ ಮೀರಬಾರದು. ಈಗಾಗಲೇ ಆಯ್ಕೆಯಾಗಿರುವ ನಟ-ನಟಿಯರು ಪುನ: ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸಂಪೂರ್ಣ ಸ್ವವಿವರದೊಂದಿಗೆ ತಮ್ಮ ಸಂಬಂಧಿಸಿದ ದಾಖಲೆಗಳೊಂದಿಗೆ ಜುಲೈ 22ರ ಸಂಜೆ 5 ಗಂಟೆಯೊಳಗಾಗಿ ಇ-ಮೇಲ್ ವಿಳಾಸ ಡಿಚಿಟಿgಚಿಥಿಚಿಟಿಚಿಞಚಿಟಚಿbuಡಿgi@gmಚಿiಟ.ಛಿom ಅಥವಾ ಅಂಚೆ ಮೂಲಕ, ಖುದ್ದಾಗಿ ಅರ್ಜಿಯನ್ನು ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ಧಯ್ಯ ಪುರಾಣಿಕ ಸುವರ್ಣ ಸಾಂಸ್ಕøತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ–585105 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಷರತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-227735ನ್ನು ಸಂಪರ್ಕಿಸಲು ಕೋರಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ
**************************************
ಕಲಬುರಗಿ,ಜು.11.(ಕ.ವಾ.)-ಕಲಬುರಗಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಅಡುಗೆಯವರ ಮತ್ತು ಅಡುಗೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಎಸ್.ಎಸ್.ಎಲ್.ಸಿ. ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಪ್ರವರ್ಗವಾರು/ ಮೀಸಲಾತಿಯನುಸಾರ 2017ರ ಜುಲೈ 3 ಹಾಗೂ 4ರಂದು ಏರ್ಪಡಿಸಿದ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅಧಿಕೃತ hಣಣಠಿ://ತಿತಿತಿ.ಞಚಿಟಚಿbuಡಿಚಿgi.iಟಿ/bಛಿm/ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ್ ಪಾಷಾ ಕಾರಟಗಿ ತಿಳಿಸಿದ್ದಾರೆ.
ಸದರಿ ತಾತ್ಕಾಲಿಕ ಪಟ್ಟಿಗೆ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ 2017ರ ಜುಲೈ 17 ರೊಳಗಾಗಿ ತಾರಫೈಲ್ 8ನೇ ಕ್ರಾಸ್, ಡಂಕಿನ ಭಾವಿ ಹತ್ತಿರ, ಜಿಡಿಎ ಲೇಔಟ್, ಅಂಬಿಕಾ ನಗರ ಹಿಂದುಗಡೆ. ಡಿ. ದೇವರಾಜ ಭವನ ಕಲಬುರಗಿ-585102 ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಶುಭಾಗ್ಯ ಯೋಜನೆಗಾಗಿ ಅರ್ಜಿ ಆಹ್ವಾನ
************************************
ಕಲಬುರಗಿ,ಜು.11.(ಕ.ವಾ.)-ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ 2017-18ನೇ ಸಾಲಿನ ಪಶುಭಾಗ್ಯ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಇಚ್ಛೆಯುಳ್ಳ ರೈತರಿಂದ ಹೈನುರಾಸು ಘಟಕ, ಕುರಿ/ಮೇಕೆ ಘಟಕ, ಕೋಳಿ ಘಟಕಗಳ ಸ್ಥಾಪನೆಗಾಗಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಕಲಬುರಗಿ ಜಿಲ್ಲೆಯ ಭೂರಹಿತ/ ಸಣ್ಣ ರೈತ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಇತರೆ ವರ್ಗ/ಹಾಲು ಉತ್ಪಾದಕರ ಸಂಘದ ಮಹಿಳಾ ಸದಸ್ಯರು, ದೇವದಾಸಿಯರು, ವಿಧವೆಯರು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 50ರಷ್ಟು ಸಹಾಯಧನ ಮತ್ತು ಇತರೆ ವರ್ಗದವರಿಗೆ ಶೇ. 25ರಷ್ಟು ಸಹಾಯಧನ ಇರುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜುಲೈ 15 ರಿಂದ ಆಗಸ್ಟ್ 4ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು.
ಈ ಹಿಂದೆ 2015-16ನೇ ಹಾಗೂ 2016-17ನೇ ಸಾಲಿನ ಈ ಯೋಜನೆಯಡಿಯಲ್ಲಿ ಆಯ್ಕೆಯಾಗಿ ಸೌಲಭ್ಯ ಪಡೆದುಕೊಂಡಿರುವ ಫಲಾನುಭವಿಗಳು ಈ ಸಾಲಿನ ಅರ್ಜಿ ಪಡೆಯಲು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಜುಲೈ 20ರಂದು ಜಿ.ಪಂ. ಯೋಜನಾ ಸಮಿತಿ ಅಧ್ಯಕ್ಷರ ಚುನಾವಣೆ
********************************************************
ಕಲಬುರಗಿ,ಜು.11.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರ ಚುನಾವಣೆಯು ಜುಲೈ 20ರಂದು ಕಲಬುರಗಿ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಯೋಜನಾ ಸಮಿತಿ ಚುನಾವಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ 1993ರ 310ರ ಅನ್ವಯ ಹೊರಡಿಸಿದ ಅಧಿಸೂಚನೆ ದಿನಾಂಕ: 13-01-2017ರಂತೆ ಚುನಾವಣೆ ಪ್ರಕ್ರಿಯೆಯ ವೇಳಾ ಪಟ್ಟಿ ಇಂತಿದೆ.
ಜುಲೈ 20ರಂದು ಬೆಳಗಿನ 10.30 ರಿಂದ ಮಧ್ಯಾಹ್ನ 10.45 ಗಂಟೆಯವರೆಗೆ ಆಸಕ್ತ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುತ್ತದೆ. ಬೆಳಗಿನ 10.45 ರಿಂದ 11 ಗಂಟೆಯವರೆಗೆ ನಾಮಪತ್ರಗಳ ಪರಿಶೀಲನೆ. ಬೆಳಿಗ್ಗೆ 11.15 ಗಂಟೆಗೆ ಸರಿಯಾಗಿರುವ ನಾಮಪತ್ರಗಳ ಘೋಷಣೆ ಮಾಡಲಾಗುವುದು. ನಾಮಪತ್ರ ಹಿಂತೆಗೆದುಕೊಳ್ಳುವ ಸಮಯ ಬೆಳಗಿನ 11.15 ರಿಂದ 11.30 ಗಂಟೆಯವರೆಗೆ ಇರುತ್ತದೆ. ಬೆಳಿಗ್ಗೆ 11.35 ಗಂಟೆಗೆ ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ. ಚುನಾವಣೆ ಅಗತ್ಯವಿದ್ದಲ್ಲಿ ಬೆಳಿಗ್ಗೆ 11.40 ರಿಂದ ಮಧ್ಯಾಹ್ನ 12.40 ಗಂಟೆಯವರೆಗೆ ಮತದಾನ ನಡೆಸಲಾಗುತ್ತದೆ.
ಮಕ್ಕಳು-ಯುವ ಬರಹಗಾರರಿಂದ ಅರ್ಜಿ ಆಹ್ವಾನ
******************************************
ಕಲಬುರಗಿ,ಜು.11.(ಕ.ವಾ.)-ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಸೃಜನಶೀಲ ಸಾಹಿತ್ಯ ಪ್ರಕಾರದಲ್ಲಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಯುವ ಮತ್ತು ಉದಯೋನ್ಮುಖ ಬರಹಗಾರರಿಗೆ ನೆರವು ನೀಡುವ ಮತ್ತು ಮಕ್ಕಳು ಎದುರಿಸುತ್ತಿರುವ ಸವಾಲು ಮತ್ತು ಸಮಸ್ಯೆಗಳ ಕುರಿತು ವಸ್ತು ವಿಷಯಗಳಿಗೆ ಸಂಬಂಧಪಟ್ಟಂತೆ ರಂಗ ನಾಟಕಗಳನ್ನು ರಚಿಸಲು ಆಸಕ್ತ ಮಕ್ಕಳು ಹಾಗೂ ಯುವ ಬರಹಗಾರರನ್ನು “ನಾಟಕ ರಚನಾ ಕಮ್ಮಟ”ಕ್ಕಾಗಿ ರಾಜ್ಯದ ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು, ಕಲಬುರಗಿ ಮತ್ತು ಬೆಳಗಾವಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಜಿಲ್ಲೆಗಳನ್ನು ಒಳಗೊಂಡಂತೆ ಪ್ರತಿಯೊಂದು ಕಂದಾಯ ವಿಭಾಗದಿಂದ 30 ಮಕ್ಕಳನ್ನು ಹಾಗೂ 10 ಅರ್ಹ ಯುವ ಬರಹಗಾರರ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ಅರ್ಹ ಮಕ್ಕಳು, ಯುವ ಮತ್ತು ಉದಯೋನ್ಮುಖ ಬರಹಗಾರರು ತಮ್ಮ ವಯಸ್ಸಿನ ದಾಖಲೆ, ಇತ್ತೀಚಿನ ಭಾವಚಿತ್ರ ಮತ್ತು ಸ್ವತ: ಇತ್ತೀಚೆಗೆ ರಚಿಸಿರುವ ಸೃಜನಶೀಲ ಸಾಹಿತ್ಯ ಪ್ರಕಾರದ ಕನಿಷ್ಠ 10 ಪುಟಗಳಿರುವ ಬರಹವನ್ನು ಸ್ವ-ವಿವರವುಳ್ಳ ಅರ್ಜಿಯೊಂದಿಗೆ ಲಗತ್ತಿಸಿ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು. ಮಕ್ಕಳ ವಯೋಮಿತಿ 16 ವರ್ಷದೊಳಗಿರಬೇಕು ಹಾಗೂ ಯುವ ಬರಹಗಾರರು 18 ವರ್ಷ ಮೇಲ್ಪಟ್ಟು 40 ವರ್ಷದೊಳಗಿನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ವಲಯದ ಸಂಚಾಲಕ ಪ್ರಭಾಕರ್ ಸಾತಖೇಡ್ ಮೊಬೈಲ್ ಸಂಖ್ಯೆ 9448814099, ದೂರವಾಣಿ ಸಂಖ್ಯೆ 08472-228870 ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಎನ್. ಚಲವಾದಿ ಅವರನ್ನು ಹಾಗೂ ದೂರವಾಣಿ ಸಂಖ್ಯೆ 080-22130912, 22221241ಗಳನ್ನು ಸಂಪರ್ಕಿಸಲು ಕೋರಿದೆ.
ಜುಲೈ 12ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*********************************************
ಕಲಬುರಗಿ,ಜುಲೈ.11.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ-1 ವಿಭಾಗದಿಂದ 110/11ಕೆ.ವಿ. ಯುನಿವರ್ಸಿಟಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ವಿತರಣಾ ಕೇಂದ್ರಗಳಲ್ಲಿ ಸುಧಾರಣಾ ಕಾರ್ಯ ಕೈಗೊಂಡಿರುವ ಪ್ರಯುಕ್ತ ಜುಲೈ 12ರಂದು ಸದರಿ ಫೀಡರುಗಳ ವ್ಯಾಪ್ತಿಯ ಗ್ರಾಮಗಳು ಮತ್ತು ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂದು ಬೆಳಗಿನ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಗ್ರಾಮಗಳ ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಫೀಡರ ಮತ್ತು ಗ್ರಾಮಗಳ ವಿವರ ಇಂತಿದೆ.
ಎಫ್.10: ನಂದೂರ ಮತ್ತು ಎಫ್-12: ಕೆಸರಟಗಿ ಫೀಡರ್ ಹಾಗೂ ಕೆ.ಐ.ಡಿ.ಬಿ. ನಂದೂರ ಫೀಡರ್ ಮೇಲೆ ಬರುವ ಗ್ರಾಮಗಳಾದ ನಂದೂರ, ಕೆಸರಟಗಿ ಇಂಡಸ್ಟ್ರಿಯಲ್ ಏರಿಯಾ, ನಂದೂರ, ನಂದೂರ(ಕೆ), ಧರ್ಮಪುರ.
ಸರ್ಕಾರಿ ಪ್ರಾತ್ಯಕ್ಷಿಕೆ ಪ್ರೌಢಶಾಲೆಯಲ್ಲಿ ಮೌಲ್ಯಾಂಕನ ಶಿಬಿರ
****************************************************
ಕಲಬುರಗಿ,ಜುಲೈ.11.(ಕ.ವಾ.)-ಕಲಬುರಗಿ ದಕ್ಷಿಣ ವಲಯ ತಾಲೂಕಿನ ಸರ್ವ ಶಿಕ್ಷಣ ಅಭಿಯಾನದ ಸಮನ್ವಯ ಶಿಕ್ಷಣ ಚಟುವಟಿಕೆ ಅಡಿಯಲ್ಲಿ ಕಲಬುರಗಿ ದಕ್ಷಿಣ ವಲಯದ ಎಲ್ಲ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ಖಾನ್ ಕಲಬುರಗಿ ಸರ್ಕಾರಿ ಪ್ರಾತ್ಯಕ್ಷಿಕೆ ಪ್ರೌಢಶಾಲೆಯಲ್ಲಿ ಅವರು ಉದ್ಘಾಟಿಸಿದರು.
ಎ.ಪಿ.ಸಿ. ಜ್ಯೋತಿ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎ.ಪಿ.ಸಿ. ಹೆಚ್.ಡಿ. ದೇಶಮುಖ, ಬಿ.ಆರ್.ಸಿ. ಪ್ರಕಾಶ ಬಿ. ಯಲಗೋಡ, ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಮೂಲಗೆ, ಕಾರ್ಯದರ್ಶಿ ಬಾಬು ಎ. ಮೌರ್ಯ, ಖ್ಯಾತ ವೈದ್ಯ ವಿಜಯಕುಮಾರ ಹಿರೇಮಠ ಹಾಗೂ ಕೆ.ಬಿ.ಎನ್. ವೈದ್ಯರು, ಪಾಲಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.
ಸಹಶಿಕ್ಷಕ ಮುಜಮಿಲ್ ಕಾರ್ಯಕ್ರಮ ನಿರೂಪಿಸಿದರು. ಬಿ.ಐ.ಇ.ಆರ್.ಟಿ. ಮಲ್ಲಿಕಾರ್ಜುನ ಹೂಗಾರ ಸ್ವಾಗತಿಸಿದರು. ಸಿ.ಆರ್.ಸಿ. ಸಂಗಣ್ಣ ಜಾಬಾ ವಂದಿಸಿದರು.
ಜುಲೈ 12ರಂದು ಫೋನ್-ಇನ್ ಕಾರ್ಯಕ್ರಮ
***************************************
ಕಲಬುರಗಿ,ಜುಲೈ.11.(ಕ.ವಾ.)-ಗುಲಬರ್ಗಾ ದೂರದರ್ಶನ ಕೇಂದ್ರವು ಜುಲೈ 12ರಂದು ಸಂಜೆ 5.30 ಗಂಟೆಯಿಂದ ಜನಸ್ಪಂದನÀ ನೇರ ಫೋನ್–ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ.
“ಸಿರಿಧಾನ್ಯಗಳ ಬೇಸಾಯ ಕ್ರಮ ಹಾಗೂ ಮಹತ್ವ” ಕುರಿತು ಕೇಳುಗರ ಪ್ರಶ್ನೆಗಳಿಗೆ ಕಲಬುರಗಿ ಕೃಷಿ ಸಂಶೋಧನಾ ಕೇಂದ್ರದ ಬೇಸಾಯಶಾಸ್ತ್ರಜ್ಞ ಡಾ.ಪಂಡಿತ ರಾಠೋಡ ಹಾಗೂ ಬೀದರ ತೋಟಗಾರಿಕಾ ಮಹಾವಿದ್ಯಾಲಯದ ವಿಷಯ ತಜ್ಞೆ ಶಶಿಕಲಾ ರೂಳಿ ಅವರು ಉತ್ತರಿಸುವರು.
ದೂರದರ್ಶನ ಕೇಂದ್ರದ ಕಾರ್ಯಕ್ರಮ ನಿರ್ವಾಹಕ ಪ್ರಕಾಶ ಕೆ. ಮುಜುಮದಾರ ಕಾರ್ಯಕ್ರಮ ಪ್ರಸ್ತುತ ಪಡಿಸುವರು. ಸಾರ್ವಜನಿಕರು ದೂರವಾಣಿ ಸಂಖ್ಯೆ 08472-220491, 220492ಗಳನ್ನು ಸಂಪರ್ಕಿಸಿ ತಮ್ಮ ಪ್ರಶ್ನೆಗಳಿಗೆ ತಜ್ಞರಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ದೂರದರ್ಶನ ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಹೀಗಾಗಿ ಲೇಖನಗಳು NEWS AND PHOTOS DATE; 11--07--2017

ಎಲ್ಲಾ ಲೇಖನಗಳು ಆಗಿದೆ NEWS AND PHOTOS DATE; 11--07--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTOS DATE; 11--07--2017 ಲಿಂಕ್ ವಿಳಾಸ https://dekalungi.blogspot.com/2017/07/news-and-photos-date-11-07-2017.html

Subscribe to receive free email updates:

0 Response to "NEWS AND PHOTOS DATE; 11--07--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ