ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ

ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ
ಲಿಂಕ್ : ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ

ಓದಿ


ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ


ಕೊಪ್ಪಳ ಜು. 03 (ಕರ್ನಾಟಕ ವಾರ್ತೆ): ಡೆಂಗ್ಯೂ ರೋಗ ತಡೆಗಟ್ಟಲು, ಮುಖ್ಯವಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ರಾಮಕೃಷ್ಣ ಅವರು ಹೇಳಿದರು.
     ಡೆಂಗ್ಯೂ ವಿರೋಧಿ ಮಾಸಾಚರಣೆ ನಿಮಿತ್ಯ ಡೆಂಗ್ಯೂ ಜ್ವರದ ಹರಡುವಿಕೆ, ನಿಯಂತ್ರಣ ಹಾಗೂ ರೋಗಗಳನ್ನು  ತಡೆಗಟ್ಟುವ ನಿಟ್ಟಿನಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ಕೊಪ್ಪಳದ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಬುಧವಾರದಂದು  “ಡೆಂಗ್ಯೂ ವಿರೋದಿ ಜನ ಜಾಗೃತಿ ಜಾಥ” ಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
     ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಡೆಂಗ್ಯೂ  ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆ ಇಲ್ಲ ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಮತ್ತು ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಕೋರಿದರು.
     ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ||.ವಿ.ಎಸ್ ಮಾದಿನೂರ ಅವರು, ಡೆಂಗ್ಯೂ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ,  ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ  ಶುದ್ದ ನೀರಿನಲ್ಲಿಯೇ ಸಂತಾನಾಭಿವೃದ್ದಿ ಮಾಡುತ್ತವೆ ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ  ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು, ಮನೆಗಳ ಸುತ್ತಮುತ್ತ ಸ್ವಚ್ಚತೆ ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದರು.
 ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರ ರಮೇಶ್ ಅವರು, ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಲು ಹಾಗೂ ಮಲಗುವಾಗ ಸೊಳ್ಳೆಪರದೆಗಳನ್ನು ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿಮಾಡಿ ಸ್ವಚ್ಚಗೊಳಿಸಿ ನೀರು ತುಂಬಿ ಮುಚ್ಚಿಡಲು ಜನಸಮುದಾಯಕ್ಕೆ ಮನವಿ ಮಾಡಿದರು. ಮತ್ತು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೆ ಪರಿಹಾರ ಮಾರ್ಗ ಎಂದರು.
     ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ತಾಲೂಕ ಆರೋಗ್ಯಾಧಿಕಾರಿ ಸೇರಿದಂತೆ ಜಾಥದಲ್ಲಿ ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಕಿರಿಯ ಮಹಿಳಾ ತರಬೇತಿ ಕೇಂದ್ರದ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು,ಆಶಾ ಕಾರ್ಯಕರ್ತೆಯರು, ಕೊಪ್ಪಳ ತಾಲೂಕ ಆರೋಗ್ಯಾಧಿಕಾರಿ ಕಚೇರಿಯ ವೈಧ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಕೊಪ್ಪಳ ನಗರದಾದ್ಯಂತ ಸಂಚರಿಸಿದ ಜಾಥದಲ್ಲಿ ತೆರೆದವಾಹನದಲ್ಲಿ ಡೆಂಗ್ಯೂ ಜಾಗೃತಿ ಗೀತೆಗಳನ್ನು ಹಾಡುವುದರ ಮೂಲಕ ಹಾಗೂ ಡೆಂಗ್ಯೂ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ನಗರದಲ್ಲಿ ಜನ ಜಾಗೃತಿ ಜಾಥವನ್ನು ಕೈಗೊಳ್ಳಲಾಯಿತು.


ಹೀಗಾಗಿ ಲೇಖನಗಳು ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ

ಎಲ್ಲಾ ಲೇಖನಗಳು ಆಗಿದೆ ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ ಲಿಂಕ್ ವಿಳಾಸ https://dekalungi.blogspot.com/2017/08/blog-post_3.html

Subscribe to receive free email updates:

0 Response to "ಡೆಂಗ್ಯೂ ತಡೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಅಗತ್ಯ- ಡಾ. ರಾಮಕೃಷ್ಣ"

ಕಾಮೆಂಟ್‌‌ ಪೋಸ್ಟ್‌ ಮಾಡಿ