ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ

ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ
ಲಿಂಕ್ : ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ

ಓದಿ


ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ

ಕೊಪ್ಪಳ ಆಗಸ್ಟ್ 20 (ಕರ್ನಾಟಕ ವಾರ್ತೆ) : ದೀನ ದಲಿತರ ಮತ್ತು ಶೋಷಿತ ವರ್ಗದವರ ಧ್ವನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರಲು ದಿಟ್ಟ ನಿರ್ಧಾರ ಕೈಗೊಳ್ಳುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಕರ್ನಾಟಕದ ಉಕ್ಕಿನ ಮನುಷ್ಯರೆಂದೇ ಖ್ಯಾತಿ ಗಳಿಸಿದ್ದರು ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ ಅವರು ಹೇಳಿದರು.

     ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ಅವರ 102 ನೇ ಜನ್ಮದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

     ಉತ್ತರ ಭಾರತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರು ತಮ್ಮ ದಿಟ್ಟ ನಿಲುವು, ದೃಢ ಮನಸ್ಸು ಹಾಗೂ ದೃಢ ಶರೀರದಿಂದ, ಉಕ್ಕಿನ ಮನುಷ್ಯರೆಂದು ಖ್ಯಾತಿ ಗಳಿಸಿದ್ದರೆ, ದಕ್ಷಿಣ ಭಾರತದಲ್ಲಿ ದೀನ ದಲಿತರ, ಶೋಷಿತ ವರ್ಗದವರಿಗೆ ಸಾಮಾಜಿಕ ಸಮಾನತೆ ತರಲು ದಿಟ್ಟ ನಿರ್ಧಾರ ಕೈಗೊಂಡಿದ್ದಲ್ಲದೆ, ಶಾರೀರಿಕವಾಗಿಯೂ ದೃಢಕಾಯರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಕರ್ನಾಟಕದ ಉಕ್ಕಿನ ಮನುಷ್ಯರೆಂದೇ ಖ್ಯಾತಿ ಗಳಿಸಿದ್ದರು.  ದೇವರಾಜ ಅರಸು ಅವರು ಮೂಲತಃ ಕೃಷಿಕ ಕುಟುಂಬದಿಂದ ಬಂದವರು, ಬಹು ಸಂಖ್ಯಾತರ ವಿರೋಧವನ್ನೂ ಲೆಕ್ಕಿಸದೆ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ  “ಉಳುವವನೇ ಹೊಲದೊಡೆಯ” ಆಗುವಂತಹ ಭೂ-ಸುಧಾರಣೆ ಕಾನೂನನ್ನು ಜಾರಿಗೆ ತಂದರು.  ಈ ಮೂಲಕ ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಕಾರಣೀಭೂತರಾಗಿದ್ದಾರೆ. ಹಿಂದುಳಿದ ವರ್ಗಗಳು, ದುರ್ಬಲರಿಗೆ ರಾಜಕೀಯ ಹಕ್ಕಿನ ನೆಲೆಯನ್ನು ಒದಗಿಸಿದಂತಹ ಮಹಾನ್ ವ್ಯಕ್ತಿ ಅರಸು ಅವರು. ದೇಶದ ಉನ್ನತಿಗಾಗಿ ಇಂತಹ ಮಹಾನ್ ನಾಯಕರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದಲ್ಲಿ, ನಮ್ಮ ನಾಡು ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದು ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ ಅವರು ಹೇಳಿದರು.

     ಡಿ. ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿವೃತ್ತ ಉಪನಿರ್ದೇಶಕ ಟಿ. ಕೊಟ್ರಪ್ಪ ಅವರು,  ರಾಷ್ಟ್ರ ಕಂಡ ಮಹಾನ್ ಮುತ್ಸದ್ದಿ ರಾಜಕಾರಣಿಗಳಲ್ಲಿ ಡಿ. ದೇವರಾಜ ಅರಸು ಅವರು ಅಗ್ರಗಣ್ಯರು. ಈ ರಾಜ್ಯದ ಮುಖ್ಯಮಂತ್ರಿಯಾಗಿ ಅತಿ ದೀರ್ಘಕಾಲ ಆಡಳಿತ ನಡೆಸಿ, ಸಮಾಜದ ಹಿಂದುಳಿದ ವರ್ಗದವರು, ದಲಿತರು ಮತ್ತು ಬಡವರನ್ನು ಜಾಗೃತಗೊಳಿಸಿ, ಅವರು ಕನಸು ಮನಸಿನಲ್ಲಿಯೂ ನೆನಸಲಾಗದಿದ್ದ ಅಧಿಕಾರದ ಅರಮನೆಗೆ ಕರೆದುಕೊಂಡ ಹೋದ ಮುತ್ಸದ್ದಿ.  ಅದಕ್ಕೆಂದೇ 1969 ರಿಂದ 1979 ರ ದಶಕವನ್ನು ‘ಅರಸು ಯುಗ’ ಎಂದೇ ಹೇಳುವುದು ವಾಡಿಕೆಯಾಗಿದೆ.  ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ ಅವರನ್ನು ಮೌನ ಕ್ರಾಂತಿಯ ಹರಿಕಾರ ಎಂದೂ ಹೇಳುತ್ತಾರೆ.  ಭೂಮಿ, ಅಧಿಕಾರ ಮತ್ತು ಜ್ಞಾನ ಇವುಗಳಿಂದ ವಂಚಿತರಾಗಿದ್ದ ಶೋಷಿತ ವರ್ಗದವರನ್ನು ಮುಖ್ಯವಾಹಿನಿಗೆ ತಂದು, ಅವರ ಶ್ರೇಯೋಭಿವೃದ್ದಿಗಾಗಿ ಕೈಗೊಂಡ ದಿಟ್ಟ ನಿರ್ಧಾರಗಳಿಗಾಗಿ ಅವರನ್ನು ಸಾಮಾಜಿಕ ಸುಧಾರಣೆಯ ಹರಿಕಾರ ಎಂದೇ ಕರೆಯುತ್ತಾರೆ. ಜಮೀನ್ದಾರಿಕೆ ಪದ್ಧತಿಯನ್ನು ಕೊನೆಗಾಣಿಸಿ, ಶ್ರಮಜೀವಿ ರೈತನಿಗೇ ಭೂಮಿಯ ಒಡೆಯನಾಗುವಂತೆ, ಯಾವುದೇ ಸರ್ಕಾರ ಕೈಗೊಳ್ಳದ ಐತಿಹಾಸಿಕ ತೀರ್ಮಾನವನ್ನು ಕೈಗೊಂಡರು.  ಅನೇಕ ಅಡೆ-ತಡೆ ಹಾಗೂ ವಿರೋಧಗಳನ್ನು ಲೆಕ್ಕಿಸದೆ ಕನ್ನಡಿಗರ ಭಾವನೆಯನ್ನು ಅರ್ಥ ಮಾಡಿಕೊಂಡು, 1973 ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ನಾಮಕರಣ ಮಾಡುವ ದಿಟ್ಟ ನಿರ್ಧಾರವನ್ನು ಅರಸು ಅವರು ಕೈಗೊಂಡರು.  ಶ್ರೇಷ್ಠ ಕುಸ್ತಿಪಟುವಾಗಿ ರೂಪುಗೊಂಡ ಅವರು ಬೌದ್ಧಿಕ ಹಾಗೂ ದೈಹಿಕ ಸಾಮಥ್ರ್ಯ ಗಳಿಸುವ ಮೂಲಕ ರಾಜಕೀಯದಲ್ಲೂ ಶ್ರೇಷ್ಠತೆಯನ್ನು ಗಳಿಸಿದರು. ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳು, ಪ.ಜಾತಿ, ಪ.ವರ್ಗ ಸೇರಿದಂತೆ ಎಲ್ಲ ದುರ್ಬಲ ವರ್ಗಗಳ ಸ್ಥಿತಿಗತಿಗಳನ್ನು ಅರಿತು ಎಲ್.ಜಿ. ಹಾವನೂರು ಅವರ ವರದಿಯನ್ನು ಜಾರಿಗೆ ತಂದು, ದುರ್ಬಲ ವರ್ಗದವರಿಗೆ ಮೀಸಲಾತಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದರು. ಈ ಮೂಲಕ ಹಿಂದುಳಿದ ವರ್ಗದವರರನ್ನು ಮುಖ್ಯ ವಾಹಿನಿಗೆ ಸೇರಿಸುವಂತಹ ಮಹತ್ವದ ಕಾರ್ಯವನ್ನು ಅರಸು ಅವರು ಕೈಗೊಂಡರು.  ಮಹಾ ಮಾನವತಾವಾದಿಗಳಾಗಿದ್ದ ಅರಸು ಅವರು, ಸಮಾಜ ಕಟ್ಟಕಡೆಯ ವ್ಯಕ್ತಿಯ ಬಗ್ಗೆ, ನಿಸ್ಸಹಾಯಕರ ಬಗ್ಗೆ ಅನುಕಂಪವನ್ನು ಹೊಂದಿದ್ದರು.  ಹೀಗಾಗಿಯೇ ವೃದ್ಧರಿಗೆ ಮಾಸಾಶನ, ಜೀತ ಪದ್ಧತಿಯಿಂದ ವಿಮುಕ್ತಿ, ಮಲ ಹೊರುವ ಪದ್ಧತಿ ನಿಷೇಧ, ನಿರುದ್ಯೋಗಿ ಪದವಿಧರರಿಗೆ ಸ್ಟೈಫೆಂಡರಿ, ಗ್ರಾಮೀಣ ಮಕ್ಕಳ ಆರೋಗ್ಯ ರಕ್ಷಣೆಗೆ ಪೌಷ್ಠಿಕ ಆಹಾರ, ದುರ್ಬಲ ವರ್ಗಗಗಳಿಗೆ ಉಚಿತ ನಿವೇಶನ  ದಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದರು.  ಅಲ್ಲದೆ ಭಾಗ್ಯಜ್ಯೋತಿ ಯೋಜನೆಯ ಮೂಲಕ ದೇವರಾಜ ಅರಸು ಅವರು ಬಡವರ ಮನೆಯ ಬೆಳಕಾದರು ಎಂದರು.

     ತಾಲೂಕಾ ಪಂಚಾಯತಿ ಅಧ್ಯಕ್ಷ ಬಾಲಚಂದ್ರನ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ವೈ.ಬಿ. ಚಲುವಾದಿ, ನಗರಸಭೆ ಸದಸ್ಯೆ ಚೆನ್ನಮ್ಮ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಗಣ್ಯರಾದ ಶಿವಾನಂದ ಹೊದ್ಲೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಭಾರಿ ಜಿಲ್ಲಾ ಅಧಿಕಾರಿ ಅಮದಿಹಾಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.  ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.   
     ಸಮಾರಂಭಕ್ಕೂ ಮುನ್ನ ಡಿ. ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆಗೆ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಸಂಸದ ಕರಡಿ ಸಂಗಣ್ಣ ಅವರು ಚಾಲನೆ ನೀಡಿದರು.   ಭವ್ಯ ಮೆರವಣಿಗೆಯು ಗವಿಮಠ ರಸ್ತೆ, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ನೆರವೇರಿತು. 


ಹೀಗಾಗಿ ಲೇಖನಗಳು ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ

ಎಲ್ಲಾ ಲೇಖನಗಳು ಆಗಿದೆ ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ ಲಿಂಕ್ ವಿಳಾಸ https://dekalungi.blogspot.com/2017/08/blog-post_47.html

Subscribe to receive free email updates:

0 Response to "ಕರ್ನಾಟಕದ ಉಕ್ಕಿನ ಮನುಷ್ಯ ಡಿ. ದೇವರಾಜ ಅರಸು- ಮಹೇಂದ್ರ ಚೋಪ್ರಾ"

ಕಾಮೆಂಟ್‌‌ ಪೋಸ್ಟ್‌ ಮಾಡಿ