ಶೀರ್ಷಿಕೆ : ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ
ಲಿಂಕ್ : ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ
ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ
ಕೊಪ್ಪಳ ಆ. 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಬರುವ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಬೆಳೆ ಬೆಳೆಯುವ ಬದಲು ಪರ್ಯಾಯವಾಗಿ ಅಲ್ಪ ನೀರಾವರಿ ಬೆಳೆಗಳನ್ನು ಬೆಳೆಯಬೇಕು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ರೈತರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ 37800 ಹೆಕ್ಟೇರ ಭತ್ತ ಬೆಳೆ ಬೆಳೆಯಲಾಗುತ್ತಿತ್ತು. ಆದರೆ ತುಂಗಭದ್ರಾ ಜಲಾಶಯದಲ್ಲಿ ಈ ಬಾರಿ ಸಂಗ್ರಹಣೆಯಾದ ನೀರಿನ ಪ್ರಮಾಣ ಕಡಿಮೆ ಇದೆ. ಜಿಲ್ಲೆಯಲ್ಲಿ ಇದುವರೆಗೂ ಭತ್ತ ಬೆಳೆ ನಾಟಿಯಾಗದೇ, ಸಸಿ ಮಡಿಗಳಲ್ಲಿ ಇದ್ದು, ಭತ್ತ ನಾಟಿ ಮಾಡಲು 25 ರಿಂದ 40 ದಿವಸಗಳ ಸಸಿ ಸೂಕ್ತ. ಆದ್ದರಿಂದ ಈಗಿನ ಸಸಿ ಮಡಿಗಳು 45 ರಿಂದ 50 ದಿವಸಗಳದ್ದಾಗಿದ್ದು ನಾಟಿ ಮಾಡಲು ಯೋಗ್ಯವಿರುವುದಿಲ್ಲ.
ಆದ್ದರಿಂದ ರೈತರು ಭತ್ತದ ಬೆಳೆಯನ್ನು ಬೆಳೆಯುವ ಬದಲಿಗೆ, ಅಲ್ಪ ನೀರಾವರಿ ಬೆಳೆಗಳಾದ ಮೆಕ್ಕೆಜೋಳ, ನವಣೆ, ಸೂರ್ಯಕಾಂತಿ, ಜೋಳ ಹಾಗೂ ಕಡಲೆ ಬೆಳೆಗಳನ್ನು ಬೆಳೆದು ಆರ್ಥಿಕ ನಷ್ಟದಿಂದ ಪಾರಾಗುವುದು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವುದು ಸೂಕ್ತ. ರೈತರು ಇವೆಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಭತ್ತ ಬೆಳೆ ಬದಲು ಪರ್ಯಾಯ ಅಲ್ಪ ನೀರಾವರಿ ಬೆಳೆಗಳನ್ನು ಬೆಳೆಯುವಂತೆ ಕೊಪ್ಪಳ ಜಂಟಿಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹೀಗಾಗಿ ಲೇಖನಗಳು ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ
ಎಲ್ಲಾ ಲೇಖನಗಳು ಆಗಿದೆ ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ ಲಿಂಕ್ ವಿಳಾಸ https://dekalungi.blogspot.com/2017/08/blog-post_75.html
0 Response to "ತುಂಗಭದ್ರಾ ಅಚ್ಚುಕಟ್ಟಿನಲ್ಲಿ ಅಲ್ಪ ನೀರಾವರಿ ಬೆಳೆ ಬೆಳೆಯಲು ರೈತರಿಗೆ ಮನವಿ"
ಕಾಮೆಂಟ್ ಪೋಸ್ಟ್ ಮಾಡಿ