ಶೀರ್ಷಿಕೆ : NEWS AND PHOTO DATE: 03--08--2017
ಲಿಂಕ್ : NEWS AND PHOTO DATE: 03--08--2017
NEWS AND PHOTO DATE: 03--08--2017
ಸಡಗರ-ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ನಿರ್ಧಾರ
************************************************************
ಕಲಬುರಗಿ,ಆ.03.(ಕ.ವಾ.)-ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪರೇಡ್(ಡಿ.ಎ.ಆರ್.) ಮೈದಾನದಲ್ಲಿ ದೇಶದ 71ನೇ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 15ರಂದು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜರುಗಿದ ಸಭೆಯು ಸಹಮತದ ನಿರ್ಧಾರ ಕೈಗೊಂಡಿತು.
ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸಲು ಹಾಗೂ ಧ್ವಜಾರೋಹಣ ಕಾರ್ಯಕ್ರಮಕ್ಕೆ ಜಿಲ್ಲೆಯ ಜನಪ್ರತಿನಿಧಿಗಳನ್ನು, ಗಣ್ಯರನ್ನು ಆಹ್ವಾನಿಸಲು ತಿಳಿಸಲಾಯಿತು.
ಅಂದು ಬೆಳಗಿನ 7 ಗಂಟೆಯಿಂದ 8-30 ಗಂಟೆಯೊಳಗೆ ಎಲ್ಲ ಸರ್ಕಾರಿ, ಸರ್ಕಾರದ ನಿಗಮ ಮಂಡಳಿ, ಸರ್ಕಾರಿ ಸ್ವಾಮ್ಯದ ಎಲ್ಲ ಕಚೇರಿಗಳಲ್ಲಿ ಹಾಗೂ ಎಲ್ಲ ಶಾಲಾ ಕಾಲೇಜುಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಎಲ್ಲ ಅಧಿಕಾರಿಗಳು, ಶಾಲಾ ಕಾಲೇಜು ಮಕ್ಕಳು ಪೊಲೀಸ್ ಪರೇಡ್ ಮೈದಾನಕ್ಕೆ 8-30 ಗಂಟೆಯೊಳಗೆ ಆಗಮಿಸಬೇಕು. ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸಿ ಹಾಜರಾತಿ ನೀಡಬೇಕೆಂದು ಸೂಚಿಸಲಾಯಿತು.
ಡಿಎಆರ್ ಮೈದಾನದಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜರುಗುವ ಸ್ವಾತಂತ್ರ್ಯ ದಿನಾಚರಣೆಯ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಆಕರ್ಷಕ ತ್ರೀವರ್ಣದ ಬಲೂನ್ ಹಾರಿಸುವ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿದ ಎಲ್ಲ ಕೆಲಸ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು. ಕಲಬುರಗಿ ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಬಳಕೆ ಮಾಡುವುದನ್ನು ನಿಯಮಾನುಸಾರ ನಿಷೇಧಿಸುವಂತೆ ಹಾಗೂ ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಮಳೆಗಾಲದ ಪ್ರಯುಕ್ತ ಕ್ರೀಡಾಂಗಣದಲ್ಲಿ ಅಂದು ಮಳೆನೀರು ಸೋರದ(ವಾಟರ್ ಪ್ರೂಫ್) ಶಾಮಿಯಾನಾ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ನಗರದ ಎಲ್ಲ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳಲ್ಲಿ ವಿದ್ಯುದ್ದೀಪಗಳಿಂದ ಅಲಂಕರಿಸಬೇಕು. ಸ್ವಾತಂತ್ರ್ಯ ದಿನಾಚರಣೆಯ ಬೆಳಗಿನ ಮುಖ್ಯ ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು, ಎಸ್.ಎಸ್.ಎಲ್.ಸಿ., ಪಿ.ಯು.ಸಿ.ಯಲ್ಲಿ ಅತ್ಯಧಿಕ ಅಂಕ ಪಡೆದ, ಸಿ.ಇ.ಟಿ., ಎನ್.ಸಿ.ಸಿ. ವಿದ್ಯಾರ್ಥಿಗಳನ್ನು, ರಾಷ್ಟ್ರ ಮತ್ತು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಪ್ರತಿಭಾವಂತ ಕ್ರೀಡಾಪಟುಗಳನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಕ್ರಮ ಕೈಗೊಳ್ಳಬೇಕಲ್ಲದೆ ಶಾಲಾ ಮಕ್ಕಳಿಂದ ಆಕರ್ಷಕ ಮತ್ತು ಗುಣಮಟ್ಟದ ಸಾಂಸ್ಕøತಿಕ ಪ್ರದರ್ಶನಕ್ಕೂ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಂಜೆ ಡಾ. ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಭಾವೈಕ್ಯತೆ, ದೇಶಪ್ರೇಮ, ದೇಶಭಕ್ತಿ, ದೇಶಾಭಿಮಾನದ ಮೇಲೆ ಬೆಳಕು ಚೆಲ್ಲುವಂಥ ಹಾಗೂ ಕಣ್ಮನ ಸೆಳೆಯುವ ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಂಘಟಿಸಬೇಕೆಂದು ಸೂಚಿಸಿದರು. ಸರ್ಕಾರದ ಎಲ್ಲ ಕಚೇರಿ, ಸ್ಥಳೀಯ ಸಂಘ ಸಂಸ್ಥೆ, ನಿಗಮ ಮಂಡಳಿ, ಶಾಲಾ ಕಾಲೇಜುಗಳಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣ ಮಾಡುವಾಗ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಸೇಡಂ ಸಹಾಯಕ ಆಯುಕ್ತ ಪರಶುರಾಮ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಯುವಕರು ಕಾನೂನಿನ ಜ್ಞಾನ ಹೊಂದುವುದು ಅವಶ್ಯಕ
***********************************************
ಕಲಬುರಗಿ.ಆಗಸ್ಟ್.03.(ಕ.ವಾ.)-ಯುವಕರಿಗೆ ದಿನನಿತ್ಯ ಜೀವನಕ್ಕೆ ಬೇಕಾಗುವ ಕೆಲವು ಕಾನೂನುಗಳ ಸಂಕ್ಷಿಪ್ತ ಜ್ಞಾನ ನೀಡುವ ಉದ್ದೇಶದಿಂದ ಈ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಯುವಕರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರಿತು ಸಮಾಜದ ಮುನ್ನಡೆಗೆ ಸಹಕರಿಸಬೇಕೆಂದು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ತಿಳಿಸಿದರು.
ಅವರು ಇತ್ತೀಚೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಹಾರಾ ಸೇವಾ ಸಂಸ್ಥೆ, ರೆಹನುಮಾ ಕಾನೂನು ಕೇಂದ್ರ ಹಾಗೂ ಸೈಯ್ಯದ್ ಅಕ್ಬರ್ ಹುಸೇನಿ ಪದವಿಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಸಂತ್ರಾಸವಾಡಿಯ ಸೈಯ್ಯದ್ ಅಕ್ಬರ್ ಹುಸೇನಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ದೇಶ ಕಟ್ಟುವಲ್ಲಿ ಯುವಕರ ಪಾತ್ರ ಮತ್ತು ರ್ಯಾಂಗಿಗ್‍ನಿಂದಾಗುವ ದುಷ್ಪರಿಣಾಮಗಳ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಕರು ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಜಾತೀಯತೆ ಮತ್ತು ಅಪರಾಧಗಳಲ್ಲಿ ಭಾಗವಹಿಸುವಿಕೆಯಿಂದ ದೂರವಿರಬೇಕು. ಸದೃಢ ಭಾರತ ನಿರ್ಮಾಣಕ್ಕಾಗಿ ಎಲ್ಲ ಯುವಕರು ತಮ್ಮ ಜೀವನದಲ್ಲಿ ಸದ್ಬಾವನೆ, ಹಿರಿಯರನ್ನು ಗೌರವಿಸಿ, ದೇಶದ ಬಗ್ಗೆ ಆತ್ಮಾಭಿಮಾನ ಬೆಳೆಸಿಕೊಳ್ಳುವುದು ಮತ್ತು ದೇಶದ ಅಭ್ಯುದಯಕ್ಕಾಗಿ ವಿದ್ಯಾರ್ಜನೆ ಮಾಡಿ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುವುದು ಅವಶ್ಯಕವಾಗಿದೆ ಎಂದು ತಿಳಿಸಿದ ಅವರು ಜನನ-ಮರಣ, ನೋಂದಣಿ ಕಾಯ್ದೆ, ಮೋಟಾರ ವಾಹನ ಕಾಯ್ದೆ, ಸೈಬರ್ ಕಾಯ್ದೆ ಮತ್ತು ಸಂವಿಧಾನದ ಬಗ್ಗೆ ವಿವರಿಸಿದರು.
ಸೈಯ್ಯದ್ ಅಕ್ಬರ್ ಹುಸೇನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿರಾಜುದ್ದೀನ್ ಅಧ್ಯಕ್ಷತೆವಹಿಸಿದ್ದರು. ಸಹರಾ ಸೇವಾ ಸಂಸ್ಥೆ ನಿರ್ದೇಶಕ ಮಸ್ತಾನ್ ಬಿರಾದಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾ ಅಧಿಕಾರಿ ಭರತೇಶ ಶೀಲವಂತರ ಅವರು ದೇಶ ಕಟ್ಟುವಲ್ಲಿ ಯುವಕರ ಪಾತ್ರ ಹಾಗೂ ನ್ಯಾಯವಾದಿ ಎನ್.ಎನ್. ಜಾಹಗೀರದಾರ್ ಅವರು ರ್ಯಾಗಿಂಗದಿಂದಾಗುವ ದುಷ್ಪರಿಣಾಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 110ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ಅಧ್ಯಾಪಕ ವರ್ಗದವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಡೆಂಗ್ಯೂ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆಗೆ ಸೂಚನೆ
***************************************************************
ಕಲಬುರಗಿ.ಆಗಸ್ಟ್.03.(ಕ.ವಾ.)-ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಹರಡುವಿಕೆಗೆ ಕಾರಣವಾದ ಈಡಿಸ್ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ ಧ್ವಂಸಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಡೆಂಗ್ಯೂ ನಿಯಂತ್ರಣ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಇಲ್ಲಿಯವರೆಗೆ 235 ಖಚಿತ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಕಲಬುರಗಿ ನಗರದಲ್ಲೇ 171 ಪ್ರಕರಣಗಳಿದ್ದು, ಸಾರ್ವಜನಿಕರು ಗಾಬರಿಗೊಳ್ಳದಂತೆ ಮುಂಜಾಗೃತೆ ವಹಿಸಲು ತಿಳಿಸಿದರು.
ಕಲಬುರಗಿ ನಗರದ ನಯಾ ಮೋಹಲ್ಲಾ, ಮಕ್ತಂಪುರ, ಶಿವಾಜಿನಗರ, ವಸಂತನಗರ, ಕರುಣೇಶ್ವರ ನಗರ, ವಾರ್ಧಾ ನಗರಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕು ಹಾಗೂ ಮನೆ ಮನೆಗೆ ಭೇಟಿ ನೀಡಿ ಸೊಳ್ಳೆಗಳ ನಿಯಂತ್ರಣ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು. ವಾರ್ಡ್‍ಗಳಲ್ಲಿ ಜಾಥಾ ಹಮ್ಮಿಕೊಳ್ಳುವುದು ಹಾಗೂ ಕರಪತ್ರಗಳನ್ನು ವಿತರಿಸುವಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಎಲ್ಲ ತಾಲೂಕುಗಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನೊಳಗೊಂಡ, ಮಹಾನಗರ ಪಾಲಿಕೆ ಅಧಿಕಾರಿಗಳನ್ನೊಳಗೊಂಡ, ಆರೋಗ್ಯ ಮತ್ತು ಆಶಾ ಕಾರ್ಯಕರ್ತರನ್ನೊಳಗೊಂಡ ಸಭೆ ಕರೆದು ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ, ಫಾಗಿಂಗ್ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರು ಕುಡಿಯುವ ನೀರಿನ ಸಂಪರ್ಕ ಪಡೆಯಲು ಗುಂಡಿಗಳನ್ನು ತೊಡಿದ್ದು, ಆ ಗುಂಡಿಗಳಲ್ಲಿ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿಯ ತಾಣವಾಗಿವೆ. ಇವುಗಳನ್ನು ನಗರ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಗುರುತಿಸಿ ಸ್ವಚ್ಛಗೊಳಿಸಬೇಕು. ಮನೆಯಲ್ಲಿ ನೀರು ಶೇಖರಣೆಯ ತೊಟ್ಟಿಗಳಲ್ಲಿನ ಬ್ಯಾರಲ್, ಹೂವಿನ ಕುಂಡ, ಪ್ಲಾಸ್ಟಿಕ್ ಕಪ್ಪುಗಳು, ಟೈರ್, ಎಳೆ ನೀರಿನ ಚಿಪ್ಪಿನಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ಡೆಂಗ್ಯೂ ಜ್ವರದ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳನ್ನು ಖಾಸಗಿ ಆಸ್ಪತ್ರೆಯವರು ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ಡೆಂಗ್ಯೂ ಜ್ವರವನ್ನು ಪತ್ತೆ ಮಾಡಲು ಮೂರು ಬಾರಿ ರಕ್ತ ಪರೀಕ್ಷೆ ಮಾಡಬೇಕಾಗುತ್ತದೆ. ಒಂದು ಬಾರಿ ರಕ್ತ ಪರೀಕ್ಷೆಗೆ 250ರೂ. ಹಾಗೂ ಮೂರು ಬಾರಿಯ ರಕ್ತ ಪರೀಕ್ಷೆಗೆ 500ರೂ.ಗಿಂತಲೂ ಹೆಚ್ಚಿನ ಶುಲ್ಕ ಪಡೆಯದಂತೆ ಎಲ್ಲ ರಕ್ತ ಪರೀಕ್ಷಾ ಕೇಂದ್ರಗಳಿಗೆ ತಿಳಿಸುವಂತೆ ಸೂಚಿಸಿದರು.
ಅಪಘಾತ ಸಂಭವಿಸಿದಾಗ ನೆರವಿಗೆ ಬರುವ 108 ಅಂಬ್ಯುಲೆನ್ಸ್‍ನವರು ಅಪಘಾತಕ್ಕೊಳಗಾದ ವ್ಯಕ್ತಿಯನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸಾಗಿಸುತ್ತಾರೆಂಬ ವದಂತಿಗಳಿವೆ. ಅಪಘಾತದಲ್ಲಿ ತಲೆಗೆ ಪೆಟ್ಟುಬಿದ್ದ ಸಂದರ್ಭದಲ್ಲಿ ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾಗುತ್ತದೆ. ಅಂಥಹ ಸಂದರ್ಭದಲ್ಲಿ ಸಮೀಪದ ಯಾವುದೇ ಆಸ್ಪತ್ರೆಗೆ ರೋಗಿಯನ್ನು ಕೊಂಡೊಯ್ಯಬಹುದು. ಉಳಿದಂತೆ ಶರೀರದ ಮೇಲಿನ ಯಾವುದೇ ಗಾಯ ಅಥವಾ ಮೂಳೆ ಮುರಿತಕ್ಕೆ ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಯನ್ನು ಕೊಂಡೊಯ್ಯುವಂತೆ 108 ಅಂಬ್ಯುಲೆನ್ಸ್ ಅವರಿಗೆ ಕಟ್ಟುನಿಟ್ಟಾದ ಎಚ್ಚರಿಕೆ ನೀಡಲು ತಿಳಿಸಿದ ಸಚಿವರು ಸಾರ್ವಜನಿಕರಿಗೆ ಹಾಗೂ ಬಡವರಿಗಾಗಿ ಸರ್ಕಾರ ಈ ಭಾಗದಲ್ಲಿ ಜಯದೇವ, ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಿದೆ. ಅದರ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ಮಾತನಾಡಿ, ಕೊಳಚೆ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಬೇಕು. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ನೀರು ಸಂಗ್ರಹಿಸಿದವರ ಪಟ್ಟಿ ಮಾಡಿ ಅವರಿಗೆ ಸೂಚನೆ ನೀಡಿ ದಂಡ ವಿಧಿಸಬೇಕು ಹಾಗೂ ಮನೆಯ ಅಕ್ಕಪಕ್ಕದಲ್ಲಿ ಮತ್ತು ಅನಧಿಕೃತವಾಗಿ ನೀರು ಸಂಗ್ರಹ ಮಾಡಿದವರ ಮಾಹಿತಿಯನ್ನು ಸಾರ್ವಜನಿಕರಿಂದ ಪಡೆಯಲು ಕಂಟ್ರೋಲ್ ರೂಂ. ಸ್ಥಾಪಿಸುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಮಾತನಾಡಿ, ನಗರದಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಡೆಂಗ್ಯೂ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಂಡು ತಂಡಗಳನ್ನು ರಚಿಸಲಾಗುವುದು. ಓರ್ವ ಆರೋಗ್ಯ ಕಾರ್ಯಕರ್ತ ಅಥವಾ ಆಶಾ ಕಾರ್ಯಕರ್ತ ಮತ್ತು ಓರ್ವ ದಂತ ವೈದ್ಯಕೀಯ ವಿದ್ಯಾರ್ಥಿಗಳನ್ನೊಳಗೊಂಡ ತಂಡ ರಚಿಸಿ ಮನೆ ಮನೆಗೆ ಭೇಟಿ ಮಾಡುವ ಮೂಲಕ ಸೊಳ್ಳೆಗಳ ಹತೋಟಿ ಕುರಿತು ಜಾಗೃತಿ ಮೂಡಿಸಲು ಕ್ರಮ ಜರುಗಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯರ್ಶಿ ಡಾ|| ಉಮೇಶ ಜಾಧವ, ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಅಕ್ಟೋಬರ್ 5ರಿಂದ 14 ರವರೆಗೆ ಸೇನಾ ಭರ್ತಿ ರ್ಯಾಲಿ
************************************************
ಕಲಬುರಗಿ.ಆಗಸ್ಟ್.03.(ಕ.ವಾ.)-ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ 2017ರ ಅಕ್ಟೋಬರ್ 5ರಿಂದ 14ರವರೆಗೆ ಸೇನಾ ಭರ್ತಿ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳೆಲ್ಲರೂ ಇದಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಸೇನಾ ಭರ್ತಿ ರ್ಯಾಲಿ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಸೇನಾ ಭರ್ತಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸೇನಾ ಭರ್ತಿ ರ್ಯಾಲಿ ಸುಗಮವಾಗಿ ಮತ್ತು ಅಚ್ಚುಕಟ್ಟಾಗಿ ನೆರವೇರಿಸಲು ಚಂದ್ರಶೇಖರ ಪಾಟೀಲ ಕ್ರೀಡಾಂಗಣವನ್ನು ಅಕ್ಟೋಬರ್ 1ರಿಂದ 15ರವರೆಗೆ ಕಾಯ್ದಿರಿಸಬೇಕು. ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರು ವೈದ್ಯರ ತಂಡದ ಜೊತೆಗೆ ಅಂಬ್ಯುಲೆನ್ಸ್ ಸೇವೆ ಒದಗಿಸಬೇಕು. ಸೇನಾ ಭರ್ತಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿ ಮತ್ತು ಅಧಿಕಾರಿಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು. ರ್ಯಾಲಿ ಸಂದರ್ಭದಲ್ಲಿ ಪ್ರತಿದಿನ ಸುಮಾರು 2500 ಅಭ್ಯರ್ಥಿಗಳು ಆಗಮಿಸಲಿದ್ದು, ಅವರ ವಾಸ್ತವ್ಯಕ್ಕೆ ಸೂಕ್ತ ಸ್ಥಳ ಗುರುತಿಸುಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಬೆಳಗಾವಿಯ ಆರ್ಮಿ ರಿಕ್ರೂಟ್‍ಮೆಂಟ್ ಆಫೀಸಿನ ರಿಕ್ರೂಟಿಂಗ್ ಡೈರೆಕ್ಟರ್ ಸೆಂಗೋಲ್ ಸಂಥನಮ್ ಮಾತನಾಡಿ, ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್/ಎಸ್.ಕೆ.ಟಿ., ಸೋಲ್ಜರ್ ಟ್ರೇಡ್ಸ್‍ಮನ್, ಸೋಲ್ಜರ್ ನರ್ಸಿಂಗ್ ಅಸಿಸ್ಟಂಟ್ ಹಾಗೂ ಸೋಲ್ಜರ್ ಟೆಕ್ನಿಕಲ್ ಹುದ್ದೆಗಳ ಭರ್ತಿಗಾಗಿ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಅಭ್ಯರ್ಥಿಗಳುhttp://ift.tt/2vsJQq7 ವೆಬ್‍ಸೈಟ್‍ನಲ್ಲಿ 2017ರ ಆಗಸ್ಟ್ 10ರಿಂದ ಸೆಪ್ಟೆಂಬರ್ 15ರವರೆಗೆ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಅಭ್ಯರ್ಥಿಗಳಿಗೆ ನೀಡುವ ಅಡ್ಮಿಟ್ ಕಾರ್ಡ್‍ನೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕೆಂದರು.
ಸಭೆಯಲ್ಲಿ ಬೆಳಗಾವಿಯ ಆರ್ಮಿ ರಿಕ್ರೂಟ್‍ಮೆಂಟ್ ಆಫೀಸಿನ ಮೆಡಿಕಲ್ ಆಫೀಸರ್ ಮೇಜರ್ ಲೋವ್‍ರಾಜ್ ಗೋಯಲ್, ಸುಬೇದಾರ್ ಮೇಜರ್ ಎನ್.ಕೆ. ಶರ್ಮಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಅಂಬಾದಾಸ್ ಭಜಂತ್ರಿ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹೀಗಾಗಿ ಲೇಖನಗಳು NEWS AND PHOTO DATE: 03--08--2017
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 03--08--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 03--08--2017 ಲಿಂಕ್ ವಿಳಾಸ https://dekalungi.blogspot.com/2017/08/news-and-photo-date-03-08-2017.html
0 Response to "NEWS AND PHOTO DATE: 03--08--2017"
ಕಾಮೆಂಟ್ ಪೋಸ್ಟ್ ಮಾಡಿ