ಶೀರ್ಷಿಕೆ : News and photo date: Date: 20--08--2017
ಲಿಂಕ್ : News and photo date: Date: 20--08--2017
News and photo date: Date: 20--08--2017
ಅರಣ್ಯದಲ್ಲಿ ವಾಸಿಸುವವರಿಗೆ ಅರಣ್ಯ ಹಕ್ಕು ದೊರಕಿಸಿ
ಕಲಬುರಗಿ,ಆ.20(ಕ.ವಾ.)-ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ತಾಂಡಾಗಳಿದ್ದು, ಚಿಂಚೋಳಿ ಮತ್ತು ಯಾದಗಿರಿ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಂಬಾಣಿಗಳು ಅರಣ್ಯ ಪ್ರದೇಶದಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದಾರೆ. ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕು ಮಾನ್ಯತೆ ದೊರಕಿಸುವಂತಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ತಿಳಿಸಿದರು.
ಅವರು ರವಿವಾರ ಕಮಲಾಪುರದ ಮೈರಾಡ ತರಬೇತಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಅರಣ್ಯ ಹಕ್ಕು ಕಾಯ್ದೆ, ಅಕ್ರಮ-ಸಕ್ರಮ ಜಮೀನು ಸಾಗುವಳಿ ಹಾಗೂ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕುರಿತು ಹಮ್ಮಿಕೊಂಡಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಲಂಬಾಣಿಗಳು ಅರಣ್ಯದಲ್ಲಿ ವಾಸಿಸುತ್ತಿರುವುದರಿಂದ ಅರಣ್ಯದ ರಕ್ಷಣೆಯಾಗುತ್ತಿದೆ. ಎಲ್ಲ ತಾಂಡಾಗಳಲ್ಲಿ ಅರಣ್ಯ ಸಮಿತಿ ರಚಿಸಲಾಗಿದೆ. ಅರಣ್ಯ ಹಕ್ಕು ಮಾನ್ಯತೆಗಾಗಿ ಅರಣ್ಯ ಸಮಿತಿಗಳ ಮೂಲಕ ಸ್ವೀಕೃತವಾಗುವ ಎಲ್ಲ ಅರ್ಜಿಗಳನ್ನು ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕಾಳಜಿಯಿಂದ ಪರಿಶೀಲಿಸಿ ಅರಣ್ಯವಾಸಿಗಳಿಗೆ ಅವರ ಹಕ್ಕು ದೊರಕಿಸಬೇಕು. ತಾಂಡಾ, ಗೊಲ್ಲರ ಹಟ್ಟಿ, ಕುರುಬರ ಹಟ್ಟಿ, ಆಡಿಗಳಲ್ಲಿ ವಾಶಿಸುವ ಜನರ ಜೀವನಮಟ್ಟ ಅಭಿವೃದ್ಧಿಗಾಗಿ ಎಲ್ಲರೂ ಸಹಕರಿಸಬೇಕೆಂದರು.
ಸುಮಾರು 50 ಕುಟುಂಬಗಳನ್ನು ಹೊಂದಿದ ಅಥವಾ 250 ಜನಸಂಖ್ಯೆ ಹೊಂದಿರುವ ತಾಂಡಾ, ದೊಡ್ಡಿ, ಆಡಿ, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ತಾಂಡಾಗಳು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡರೆ ಗ್ರಾಮಗಳಿಗೆ ಸಿಗುವ ಎಲ್ಲ ಸವಲತ್ತುಗಳು ದೊರೆಯುತ್ತವೆ. ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಗುತ್ತವೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯಪ್ರವೃತ್ತರಾಗಲು ತಿಳಿಸಿದರು.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಬಾಲರಾಜ ಮಾತನಾಡಿ, 2017ರ ಡಿಸೆಂಬರ್ ಅಂತ್ಯದೊಳಗಾಗಿ ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕು ಪಡೆಯಲು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ. ಅರಣ್ಯ ಹಕ್ಕು ಸಮಿತಿಗಳನ್ನು ಆದಷ್ಟು ಬೇಗ ಎಲ್ಲ ತಾಂಡಾಗಳಲ್ಲಿ ರಚಿಸಿಕೊಂಡು ಅದರ ಮೂಲಕ ಅರ್ಜಿ ಸಲ್ಲಿಸಬೇಕು. ಸರ್ಕಾರ ನಮಗೆ ನೀಡಿರುವ ಹಕ್ಕುಗಳನ್ನು ಪಡೆಯಲು ನಾವು ಪ್ರಯತ್ನಿಸಬೇಕು. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾರ್ಪಡಿಸಲು ಹಾಗೂ ಅರಣ್ಯ ಹಕ್ಕು ಕಾಯ್ದೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಹಾವೇರಿ ಮತ್ತು ಬೀದರ ಜಿಲ್ಲೆಗಳಲ್ಲಿ ಜಾಗೃತಿ ಮತ್ತು ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ವಿಜಯಪುರದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರಸ್ತುತ ಸರ್ಕಾರದ 4 ವರ್ಷಗಳ ಅವಧಿಯಲ್ಲಿ ಕರ್ನಾಟಕ ಬಂಜಾರಾ ಅಭಿವೃದ್ಧಿ ನಿಗಮಕ್ಕೆ ನೀಡಿದ 376 ಕೋಟಿ ರೂ.ಗಳಲ್ಲಿ ತಾಂಡಾಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಾಗೂ ಮೂಲಭೂತ ಸೌಕರ್ಯಗಳನ್ನು ರೂಪಿಸಲಾಗಿದೆ ಎಂದರು.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ಹೀರಾಲಾಲ ಮಾತನಾಡಿ, ಲಂಬಾಣಿ ಜನಾಂಗದವರು ಸುಮಾರು 4-5 ತಲೆಮಾರುಗಳಿಂದ ಅರಣ್ಯದಲ್ಲಿ ಕೃಷಿಮಾಡಿಕೊಂಡು ವಾಸಿಸುತ್ತ ಅಲ್ಲಿಯೇ ತಾಂಡಾಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರಿಗೆ ಅರಣ್ಯ ಹಕ್ಕು ನೀಡಲು ಕೇಂದ್ರ ಸರ್ಕಾರ 2006ರಲ್ಲಿ ಅರಣ್ಯ ಹಕ್ಕು ಮಾನ್ಯತೆ ಅಧಿನಿಯಮ ಜಾರಿಗೆ ತಂದಿದೆ. ಈ ಅಧಿನಿಯಮದಡಿ 2008ರಲ್ಲಿ ಛತ್ತಿಸಗಡ, ಓರಿಸ್ಸಾ, ಆಂದ್ರಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿ ಅರಣ್ಯದಲ್ಲಿ ವಾಸಿಸುವ ಬುಡಕಟ್ಟು ಮತ್ತು ಪರಿಶಿಷ್ಟ ಜಾತಿಯ ಜನಾಂಗದವರಿಗೆ ಅರಣ್ಯ ಹಕ್ಕು ನೀಡಲಾಯಿತು. ಕರ್ನಾಟಕದಲ್ಲಿ ಈ ಅಧಿನಿಯಮವನ್ನು ಸಮರ್ಪಕವಾಗಿ ಜಾರಿಗೊಳಿಸುವ ಅಗತ್ಯತೆ ಇದೆ. ಕಲಬುರಗಿ ಜಿಲ್ಲೆಯಲ್ಲಿ ಸುಮಾರು 39000 ಹೆಕ್ಟೇರ್ ಅರಣ್ಯಪ್ರದೇಶವಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಂಡಾಗಳಿವೆ. ಅರಣ್ಯದಲ್ಲಿ ವಾಸವಾಗಿ ಅರಣ್ಯ ಪ್ರದೇಶವನ್ನು ಉಳಿಮೆಮಾಡುತ್ತಿರುವ ತಾಂಡಾ ನಿವಾಸಿಗಳು ಕಡ್ಡಾಯವಾಗಿ ಅರಣ್ಯ ಹಕ್ಕು ಸಮಿತಿಯ ಮೂಲಕ ಅರ್ಜಿ ಸಲ್ಲಿಸಬೇಕು ಎಂದರು.
ಉಪಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಈಗಾಗಲೇ ಅರಣ್ಯ, ಕಂದಾಯ ಮತ್ತು ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಅರಣ್ಯ ಭೂಮಿ ಸಾಗುವಳಿ ಮಾಡುವವರು ಅರಣ್ಯ ಹಕ್ಕು ಸಮಿತಿಗಳ ಮೂಲಕ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬೇಕು. ಗ್ರಾಮ ಪಂಚಾಯತಿಯಿಂದ ಗ್ರಾಮ ಸಭೆ ಕರೆದು ಅರ್ಜಿಗಳಿಗೆ ಅನುಮೋದನೆ ನೀಡುವರು. ಇಂಥಹ ಅರ್ಜಿಗಳನ್ನು ಉಪ ವಿಭಾಗ ಮತ್ತು ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಪರಿಶೀಲನೆ ಕೈಗೊಂಡು ಅರ್ಹ ಅರ್ಜಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಅರಣ್ಯ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದರೆ ಅರಣ್ಯ ಹಕ್ಕಿನಡಿ, ಬೇರೆ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದರೆ ಅಕ್ರಮ-ಸಕ್ರಮ ಜಮೀನು ಸಾಗುವಳಿ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಯೋಜನಾ ನಿರ್ದೇಶಕ ಗುರುನಾಥ, ಸಂಪನ್ಮೂಲ ವ್ಯಕ್ತಿಗಳಾದ ಕೆ.ಎಲ್. ಪೂಜಾರ, ಅರುಣಕುಮಾರ, ಲೋಕೇಶ ಗೌಡ, ಚಿಂಚೋಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನೀಲ ರಾಠೋಡ, ಬೀದರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮೀರಾಬಾಯಿ ರಾಮಚಂದ್ರ ಜಾಧವ, ಹೀರಾಬಾಯಿ ಬಾಬು ಚವ್ಹಾಣ, ಗೋಪಾಲ ಜಾಧವ, ಎಲ್.ಜಿ. ನಾಯಕ, ರಾಮಚಂದ್ರ ಜಾಧವ ಮತ್ತಿತರರು ಪಾಲ್ಗೊಂಡಿದ್ದರು.
ಮೌನಕ್ರಾಂತಿಯ ಹರಿಕಾರ ದೇವರಾಜ ಅರಸು
ಕಲಬುರಗಿ,ಆ.20.(ಕ.ವಾ.)-ದಿ. ಡಿ. ದೇವರಾಜ ಅರಸು ಅವರು ಸಾಮಾಜಿಕ ಸಮಾನತೆಯ ಹಿತದೃಷ್ಟಿಯಿಂದ ಕಡು ಬಡವರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಿ ಬಡವರ ಬದುಕಿನಲ್ಲಿ ಹೊಸ ಆಶಾಕಿರಣ ಮತ್ತು ಹೊಸ ಬದುಕಿನ ಬೆಳಕನ್ನು ಮೂಡಿಸಿದರು ಎಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ ಹೇಳಿದರು.
ಅವರು ರವಿವಾರ ಕಲಬುರಗಿಯ ಡಾ. ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಪರಿವರ್ತನೆಯ ಹರಿಕಾರ ಡಿ. ದೇವರಾಜ ಅರಸು ಅವರ 102ನೇ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ನ್ಯಾಯ ಒದಗಿಸಲು ಬಗರ ಹುಕುಂ ಸಾಗುವಳಿಕೆ ಪದ್ಧತಿ ಜಾರಿಗೆ ತಂದಿದ್ದು ಒಂದು ಐತಿಹಾಸಿಕ ಮತ್ತು ಕ್ರಾಂತಿಕಾರಿ ನಿರ್ಣಯವಾಗಿದೆ. ಇದರಿಂದ ದೀನ ದಲಿತರು, ಬಡವರು ಮತ್ತು ರೈತರಿಗೆ ಅನುಕೂಲವಾಗಿದೆ. ಡಿ. ದೇವರಾಜ ಅರಸು ಅವರು ಬಡವರ ಪರವಾಗಿದ್ದರು. ಬಡತನ ರೇಖೆಯ ಕೆಳಗಿನವರಿಗೆ ಮುಖ್ಯವಾನಿಗೆ ತಂದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸದೃಢಗೊಳಿಸುವ ಗುರಿ ಹೊಂದಿದ ಅವರು ಈ ರಾಜ್ಯದ, ಈ ದೇಶದ ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿದ್ದಾರೆ. ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ “ಮೌನಕ್ರಾಂತಿಯ ಹರಿಕಾರ” ಅವರಾಗಿದ್ದಾರೆ ಎಂದರು.
ನ್ಯಾಯವಾದಿ ಮಹಾಂತೇಶ ಕೌಲಗಿ ಅವರು ಡಿ. ದೇವರಾಜ ಅರಸುರವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿ, ದಿ. ಡಿ. ದೇವರಾಜ ಅರಸುರವರು ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮಾ ಗಾಂಧಿ ಸೇರಿದಂತೆ ಮತ್ತಿತರರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದರು. ವಿಧ್ಯೆ ಕಲಿತು ಸಾಕಷ್ಟು ಜ್ಞಾನ ಪಡೆದ ಅವರು ಯಾವುದೇ ನೌಕರಿಗೆ ಹೋಗದೇ ತಮ್ಮ ಸ್ವಂತ ಗ್ರಾಮಕ್ಕೆ ಬಂದು ಕೃಷಿ ಕಾರ್ಯವನ್ನು ಕೈಗೊಂಡು ತಮ್ಮ ಗ್ರಾಮಕ್ಕೆ ಮಾದರಿಯಾಗುವ ಹಾಗೆ ಕೆಲಸ ಮಾಡಿದರು. ಬಡವರ ಸಮಸ್ಯೆಯನ್ನು ಮನೆಯಲ್ಲಿ ಕುಳಿತುಕೊಂಡು ಕೇಳಿ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಿದರು. ಮುಂದೆ ಒಂದು ದಿನ ಅವರು ಜನನಾಯಕರಾಗಿ ಹೊರಹೊಮ್ಮಿದರು ಎಂದರು.
ದಿ. ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗದವರ ಧ್ವನಿಯಾಗಿದ್ದರು. ಹಿಂದುಳಿದ ವರ್ಗಗಳ ಜನರಿಗೆ ಏನಾದರೂ ಮಾಡಬೇಕು. ಎಲ್ಲರಿಗೂ ಸಮಬಾಳು ಸಮಪಾಲು ನೀಡುವುದು ಅವರ ಆಶಯವಾಗಿತ್ತು. ಅರಸುರವರು ಭೂ ಕಂದಾಯ ಅಧಿನಿಯಮವನ್ನು ಸಹ ಜಾರಿಗೆ ತಂದರು. ಉಳ್ಳುವವನೇ ಭೂ ಒಡೆಯ ಎಂದು ಘೋಷಣೆ ಮಾಡಿ, ಭೂಮಿಯನ್ನು ಬಡವರಿಗೆ ಹಂಚಿ ಸಾಮಾಜಿಕ ನ್ಯಾಯ ಒದಗಿಸಿದರಲ್ಲದೇ ಸೂರು ಇಲ್ಲದವರಿಗೆ ಸೂರು ಒದಗಿಸಿದರು. ವೃದ್ದಾಪ್ಯ ವೇತನ, ಅಂಗವಿಕಲರ ವೇತನ ಮತ್ತು ಹಿಂದುಳಿದ ವರ್ಗಗಳ ನಿರ್ದೇಶನಾಲಯ ಸಹ ಜಾರಿಗೆ ತಂದರು ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಈ ಸಮಾರಂಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಮಹಾಂತೇಶ ಎಸ್.ಕೌಲಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಸುಭಾಷ ಗೌಳಿ, ವೆಂಕಟೇಶ ಯಾದವ, ಮತ್ತಿತರರು ಪಾಲ್ಗೊಂಡಿದ್ದರು.
ಕಲಬುರಗಿ ಜಿಲ್ಲೆಯ ಕೆ.ಎ.ಎಸ್./ಐ.ಎಸ್.ಎಸ್. ಪರೀಕ್ಷೆಯಲ್ಲಿ ಪಾಸಾದ ಹಿಂದುಳಿದ ವರ್ಗದ ಸಮುದಾಯ ವಿದ್ಯಾರ್ಥಿಗಳಿಗೆ, 2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ದ್ವಿತೀಯ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಹಿಂದುಳಿದ ವರ್ಗಗಳ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೆಹಬೂಬ್ ಪಾಷಾ ಕಾರಟಗಿ ಸಭೆಗೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಶಿವಾನಂದ ಅಣಜಗಿ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಹಿಂದುಳಿದ ವರ್ಗದ ಶಂಕರ ಸಂಗಾವಿ, ರಮೇಶ ನಾಟಿಕರ್, ಶಿವಾನಂದ ಅಣಜಗಿ ಮತ್ತು ವೆಂಕಟೇಶ ಯಾಧವ ಅವರನ್ನು ಸನ್ಮಾನಿಸಲಾಯಿತು. ನಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ದಿನಾಚರಣೆಯ ಅಂಗವಾಗಿ ಬೆಳಿಗ್ಗೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಡಿ.ದೇವರಾಜ ಅರಸು ಅವರ ಭಾವಚಿತ್ರದ ಹಾಗೂ ಕಲಾ ತಂಡಗಳ ಭವ್ಯ ಮೆರವಣಿಗೆ ಜರುಗಿತು.
ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ-ನಿವಾರಣಾ ಕಾರ್ಯಕ್ರಮ
ಕಲಬುರಗಿ.ಆ.19.(ಕ.ವಾ.)-ರಾಷ್ಟ್ರೀಯ ಆರೋಗ್ಯ ಅಭಿಯಾನದ ನೂತನ ಕಾರ್ಯಕ್ರಮವಾದ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮಗಳನ್ನು ಕಲಬುರಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಕಿವಿಯಲ್ಲಿ ನೋವು, ಸೋರುವಿಕೆ ಮತ್ತು ಕಡಿಮೆಯಾಗಿ ಕಿವಿ ಕೇಳಿಸುವ ಲಕ್ಷಣಗಳು ಕಂಡು ಬಂದಲ್ಲಿ ತ್ವರಿತವಾಗಿ ತಪಾಸಣೆ ಮತ್ತು ಚಿಕಿತ್ಸೆಗಾಗಿ ತಮ್ಮ ಸಮೀಪದ ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿನ ಕಿವಿ, ಮೂಗು, ಗಂಟಲು ವಿಭಾಗವನ್ನು ಸಂಪರ್ಕಿಸಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ ತಿಳಿಸಿದ್ದಾರೆ.
ಶ್ರವಣ ಶಕ್ತಿ (ಕೇಳುವಿಕೆ) ಎಲ್ಲರ ಜೀವನದ ಅವಿಭಾಜ್ಯ ಅಂಗ. ನಾನು ಒಂದು ಕ್ಷಣ ಶಬ್ದಗಳೆ ಇಲ್ಲದೆ ಪ್ರಪಂಚವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಯಾರೊಂದಿಗೂ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಮನ: ಸಂತೋಷಕ್ಕಾಗಿ ಸಂಗೀತವನ್ನು ಆಲಿಸಲಾಗುವುದಿಲ್ಲ. ಇಷ್ಟೆಲ್ಲ ತಮ್ಮ ಜೀವನದಲ್ಲಿ ಬೆರೆತಿರುವ ಶ್ರವಣ ಶಕ್ತಿಯನ್ನು ಉಳಿಸಿಕೊಳ್ಳುವುದು ಬಹು ಮುಖ್ಯವಾಗಿದೆ. ಸಾರ್ವಜನಿಕರು ಈ ಕೆಳಕಂಡ ಸಲಹೆಗಳನ್ನು ಪಾಲಿಸಿ ಅಮೂಲ್ಯವಾದ ಶ್ರವಣ ಶಕ್ತಿಯನ್ನು ಕಾಪಾಡಿಕೊಳ್ಳಬೇಕು.
ಕಿವಿ ಸೋಂಕು (ಕಿವಿ ನೋವು, ಸೂರುವಿಕೆ) ಇದ್ದಲ್ಲಿ ತಕ್ಷಣವೇ ಕಿವಿ, ಮೂಗು, ಗಂಟಲು ತಜ್ಞರನ್ನು ಸಂಪರ್ಕಿಸಬೇಕು. ಕಿವಿಗೆ ಕಡ್ಡಿ ಅಥವಾ ಚೂಪಾದ ವಸ್ತುಗಳನ್ನು ಹಾಕಬಾರದು. ಕಿವಿಯಲ್ಲಿ ಎಣ್ಣೆ ಅಥವಾ ನೀರು ಹಾಕಬಾರದು ಮತ್ತು ಹತ್ತಿ ಕಡ್ಡಿಯಿಂದ (ಇಯರ್ ಬಡ್ಸ್) ಸ್ವಚ್ಛಗೊಳಿಸಲು ಪ್ರಯತ್ನಿಸಬಾರದು. ಅತ್ಯಂತ ಜೋರಾದ ಶಬ್ದಗಳಾದ ಪಟಾಕಿ ಶಬ್ದ, ಸಮಾರಂಭಗಳಲ್ಲಿನ ಸ್ಪೀಕರ್‍ಗಳು ಮತ್ತಿತರ ಶಬ್ದಗಳಿಂದ ದೂರು ಇರಬೇಕು. ಅತೀ ಜೋರಾದ ಶಬ್ದ ಬರುವ ಕಾರ್ಖಾನೆ, ಬಸ್ ಓಡಿಸುವುದು, ರೈಸ್ ಮಿಲ್ಲಿನಲ್ಲಿ ಕೆಲಸ ಮಾಡುವವರು ಕಿವಿ ರಕ್ಷಾ ಕವಚವನ್ನು ಧರಿಸಬೇಕು. ಕಲುಷಿತ ನೀರಿನಲ್ಲಿ ಈಜಬಾರದು. ಸಾರ್ವಜನಿಕರು ಶ್ರವಣ ಪರೀಕ್ಷೆ ಮಾಡದೆ ಹಾಗೂ ಶ್ರವಣ ತಜ್ಞರ ಸಲಹೆ ಇಲ್ಲದೇ ಶ್ರವಣ ಯಂತ್ರವನ್ನು ಉಪಯೋಗಿಸಬಾರದೆಂದು ಅವರು ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು News and photo date: Date: 20--08--2017
ಎಲ್ಲಾ ಲೇಖನಗಳು ಆಗಿದೆ News and photo date: Date: 20--08--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo date: Date: 20--08--2017 ಲಿಂಕ್ ವಿಳಾಸ https://dekalungi.blogspot.com/2017/08/news-and-photo-date-date-20-08-2017.html
0 Response to "News and photo date: Date: 20--08--2017"
ಕಾಮೆಂಟ್ ಪೋಸ್ಟ್ ಮಾಡಿ