ಶೀರ್ಷಿಕೆ : ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಲಿಂಕ್ : ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಕೊಪ್ಪಳ ಸೆ. 01 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ ‘ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ”ವನ್ನು ಸೆ. 03 ರಂದು ಬೆಳಿಗ್ಗೆ 10-00 ಗಂಟೆಗೆ ಮಳೆಮಲ್ಲೇಶ್ವರ ದೇವಸ್ಥಾನ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾದ ರಾಜಶೇಖರ ಹಿಟ್ನಾಳ್ ಅವರು ಕ್ರೀಡಾ ಧ್ವಜಾರೋಹಣವನ್ನು ನೆರೆವೇರಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ತಂಗಡಗಿ, ಇಕ್ಬಾಲ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ಜಿ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮಹೇಶ ನವಲಹಳ್ಳಿ, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಪ್ಪ ಅಗಸಿಮುಂದಿನ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಸೇರಿದಂತೆ ಜಿ.ಪಂ., ತಾ.ಪಂ., ನಗರಸಭೆ ಸರ್ವ ಸದಸ್ಯರುಗಳು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಮತ್ತು ಜಿಲ್ಲಾ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಎಲ್ಲಾ ಲೇಖನಗಳು ಆಗಿದೆ ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಲಿಂಕ್ ವಿಳಾಸ https://dekalungi.blogspot.com/2017/09/03.html
0 Response to "ಸೆಪ್ಟೆಂಬರ್. 03 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ"
ಕಾಮೆಂಟ್ ಪೋಸ್ಟ್ ಮಾಡಿ