ಶೀರ್ಷಿಕೆ : ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ
ಲಿಂಕ್ : ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ
ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ
ಕೊಪ್ಪಳ ಸೆ. 08 (ಕರ್ನಾಟಕ ವಾರ್ತೆ) : ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಸೆ. 17 ರಂದು ಸಡಗರ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ದೇಶ 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದರೆ, ಹೈದ್ರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಈ ಪ್ರದೇಶಕ್ಕೆ 1948 ರ ಸೆ. 17 ರಂದು ಸ್ವಾತಂತ್ರ್ಯ ದೊರೆಯಿತು. ಇದರ ಸವಿ ನೆನಪಿಗಾಗಿ ಹೈದ್ರಾಬಾದ್-ಕರ್ನಾಟಕ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಿಮೋಚನಾ ದಿನ ಆಚರಿಸಲಾಗುತ್ತಿದೆ. ಇದನ್ನು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಷ್ಟೆ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸೆ. 17 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಬೆ. 9 ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವರು. ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಅಂದು ಸಂಜೆ 6 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ನಗರದ ಸಾರ್ವಜನಿಕ ಕಟ್ಟಡಗಳು, ವಾಣಿಜ್ಯ ಮಳಿಗೆ ಹಾಗೂ ಪ್ರಮುಖ ವೃತ್ತಗಳಿಗೆ ವಿಶೇಷ ದೀಪಾಲಂಕಾರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ಸೂಚನೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದರು.
ಸಮಾರಂಭದ ಯಶಸ್ವಿಗೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಾಂಸ್ಕøತಿಕ ಸಮಿತಿ, ಕೈಗಾರಿಕೆ ಇಲಾಖೆ ಜಂಟಿನಿರ್ದೇಶಕರ ಅಧ್ಯಕ್ಷತೆಯಲ್ಲಿ ಸ್ತಬ್ಧಚಿತ್ರ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಆಹಾರ ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ, ನಗರಸಭೆ ಪೌರಾಯುಕ್ತ ಪರಮೇಶಪ್ಪ, ಡಿವೈಎಸ್‍ಪಿ ಶ್ರೀಕಾಂತ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ
ಎಲ್ಲಾ ಲೇಖನಗಳು ಆಗಿದೆ ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ ಲಿಂಕ್ ವಿಳಾಸ https://dekalungi.blogspot.com/2017/09/17.html
0 Response to "ಸೆ. 17 ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ"
ಕಾಮೆಂಟ್ ಪೋಸ್ಟ್ ಮಾಡಿ