ಶೀರ್ಷಿಕೆ : ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ
ಲಿಂಕ್ : ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ
ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ
ಕೊಪ್ಪಳ ಸೆ. 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಕೊಪ್ಪಳದಲ್ಲಿ ಸೆಪ್ಟಂಬರ್ 22 ರಂದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಲು ವಿವಿಧ ಸಮಿತಿಗಳನ್ನು ರಚಿಸಿ, ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ನಾನಾ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳು ಸೆಪ್ಟಂಬರ್ 22 ರಂದು ಜಿಲ್ಲೆಗೆ ಆಗಮಿಸುವರು. ಇದೇ ಸಂದರ್ಭದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ವಸತಿಭಾಗ್ಯ, ಕೃಷಿಭಾಗ್ಯ, ರೈತರ ಸಾಲ ಮನ್ನಾ, ಪಶುಭಾಗ್ಯ ಮುಂತಾದ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿ ಬೃಹತ್ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಈಗಾಗಲೆ ಹಲವು ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಗಳ ನೇತೃತ್ವ ವಹಿಸಿರುವ ಅಧಿಕಾರಿಗಳು, ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಬೇಕು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಈಗಿನಿಂದಲೇ ಸಿದ್ಧತೆಗಳನ್ನು ಪ್ರಾರಂಭಿಸಬೇಕು. ಪ್ರತಿ ಪಂಚಾಯತಿ ವಾರು ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಫಲಾನುಭವಿಗಳನ್ನು ಕರೆತರಲು ಈಗಾಗಲೆ ಸಾರಿಗೆ ಸಂಸ್ಥೆಯ ಬಸ್‍ಗಳನ್ನು ಪಡೆಯಲು ಸೂಚನೆ ನೀಡಲಾಗಿದ್ದು, ತಾಲೂಕುವಾರು, ಗ್ರಾಮವಾರು ಬಸ್‍ಗಳು ತಲುಪುವ ಸಮಯ ಹಾಗೂ ಹೊರಡುವ ಸಮಯವನ್ನು ನಿಗದಿಪಡಿಸಿ, ಸಕಾಲದಲ್ಲಿ ಕಾರ್ಯಕ್ರಮ ಸ್ಥಳಕ್ಕೆ ತಲುಪುವಂತಾಗಬೇಕು. ಕಾರ್ಯಕ್ರಮದ ಯಶಸ್ವಿ ಆಯೋಜನೆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಿದ್ಧತೆ ಸಭೆಯನ್ನು ನಡೆಸಬೇಕು. ವೇದಿಕೆ ಸಮಿತಿ ಮತ್ತು ಆಹಾರ ಸಮಿತಿಯ ಜವಾಬ್ದಾರಿ ಮಹತ್ವದ್ದಾಗಿದ್ದು, ವೇದಿಕೆ ನಿರ್ಮಾಣದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಆಹಾರ ಸಮಿತಿಯವರು ಫಲಾನುಭವಿಗಳಿಗೆ ಸೂಕ್ತ ರೀತಿಯಲ್ಲಿ ಊಟ ಒದಗಿಸಲು ಅಗತ್ಯವಿರುವ ಕೌಂಟರ್‍ಗಳ ಸಂಖ್ಯೆಯನ್ನು ನಿಗದಿಪಡಿಸಿಕೊಂಡು, ಅದರಂತೆ ಕಾರ್ಯ ತತ್ಪರರಾಗಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಒಟ್ಟಾರೆ ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲ ಅಧಿಕಾರಿಗಳು ತಮಗೆ ಒಪ್ಪಿಸಿರುವ ಹೊಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪ್ರಾವೀಣ್ಯ ಸೇರಿದಂತೆ ಲೋಕೋಪಯೋಗಿ, ಆಹಾರ, ಸಹಕಾರ, ತೋಟಗಾರಿಕೆ, ಕೃಷಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಸಿಲ್ದಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ
ಎಲ್ಲಾ ಲೇಖನಗಳು ಆಗಿದೆ ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2017/09/22_15.html
0 Response to "ಸೆ. 22 ರಂದು ಸಿ.ಎಂ. ಕಾರ್ಯಕ್ರಮ : ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ- ಕನಗವಲ್ಲಿ"
ಕಾಮೆಂಟ್ ಪೋಸ್ಟ್ ಮಾಡಿ