ಶೀರ್ಷಿಕೆ : ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ
ಲಿಂಕ್ : ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ
ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ
ಕೊಪ್ಪಳ ಸೆ. 05 (ಕರ್ನಾಟಕ ವಾರ್ತೆ): ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಸೆ. 22 ರಂದು ಮುಖ್ಯಮಂತ್ರಿಗಳು ಕೊಪ್ಪಳಕ್ಕೆ ಆಗಮಿಸಲಿದ್ದು, ಅಂದಿನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮುಖ್ಯಮಂತ್ರಿಗಳ ಸಮಾರಂಭದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ. 22 ರಂದು ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ಅಂದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಈ ಕಾರ್ಯಕ್ರಮ ಹೆಚ್ಚಿನ ಮಹತ್ವವನ್ನು ಪಡೆದಿದ್ದು, ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರುವ ವ್ಯವಸ್ಥೆಯನ್ನು ಆಯಾ ಇಲಾಖಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಕರೆತರುವ ಫಲಾನುಭವಿಗಳ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯತಿವಾರು ಮತ್ತು ಯೋಜನೆವಾರು ಸಿದ್ಧಪಡಿಸಿ, ಎರಡು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಗ್ರಾಮ ಪಂಚಾಯತಿವಾರು ಫಲಾನುಭವಿಗಳ ಸಂಖ್ಯೆ ನಿಗದಿಯಾದ ಬಳಿಕ, ವಾಹನದ ವ್ಯವಸ್ಥೆ ಕೈಗೊಳ್ಳಲು ಸಹಕಾರಿಯಾಗಲಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದೆ. ಪ್ರಮುಖವಾಗಿ ವೇದಿಕೆ ಸಮಿತಿ, ಸ್ವಚ್ಛತೆ ಸಮಿತಿ, ಸ್ವಾಗತ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ, ಸಾರಿಗೆ ಸಮಿತಿ, ಆರೋಗ್ಯ ಸಮಿತಿ, ಪೊಲೀಸ್ ಬಂದೋಬಸ್ತ್ ಸಮಿತಿ ಹೀಗೆ ಹಲವು ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳಿಗೆ ಆಯಾ ಇಲಾಖಾ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಆಯಾ ಸಮಿತಿಯವರು ತಮಗೆ ವಹಿಸಿದ ಕೆಲಸ ಕಾರ್ಯಗಳ ಬಗ್ಗೆ ಸಿದ್ಧತೆಗಳನ್ನು ಕೈಗೊಂಡು, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು, ಅನ್ನಭಾಗ್ಯ, ಕೃಷಿ ಭಾಗ್ಯ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರುವ ಬಗ್ಗೆ ಆಯಾ ಇಲಾಖಾ ಅಧಿಕಾರಿಗಳು, ಫಲಾನುಭವಿಗಳ ಸಂಖ್ಯೆಯನ್ನು ನಿಗದಿಪಡಿಸಿಕೊಂಡು, ಮಾಹಿತಿಯನ್ನು ಶೀಘ್ರ ಸಲ್ಲಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ
ಎಲ್ಲಾ ಲೇಖನಗಳು ಆಗಿದೆ ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ ಲಿಂಕ್ ವಿಳಾಸ https://dekalungi.blogspot.com/2017/09/22_5.html
0 Response to "ಸೆ. 22 ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳ ರಚನೆ- ವೆಂಕಟರಾಜಾ"
ಕಾಮೆಂಟ್ ಪೋಸ್ಟ್ ಮಾಡಿ