ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ

ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ
ಲಿಂಕ್ : ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ

ಓದಿ


ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ


ಕೊಪ್ಪಳ ಸೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಸೆ. 22 ರಂದು ಬೆಳಿಗ್ಗೆ ಕೊಪ್ಪಳ ನಗರದ ಹೊರವಲಯದಲ್ಲಿ ಹೊಸಪೇಟೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಬದಿಯ ಬೃಹತ್ ಮೈದಾನದಲ್ಲಿ ಆಯೋಜಿಸಲಾಗಿದೆ.
     ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಮಾರಂಭದ ಉದ್ಘಾಟನೆ ನೆರವೇರಿಸುವರು.  ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.  ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವ ಆರ್.ವಿ. ದೇಶಪಾಂಡೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಹೆಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವೆ ಉಮಾಶ್ರೀ, ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಂತೋಷ್ ಎಸ್ ಲಾಡ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಔಕಾಫ್ ಸಚಿವ ತನ್ವೀರ್ ಸೇಠ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಸಚಿವರುಗಳು, ಗಣ್ಯಾತಿ ಗಣ್ಯರು, ಉನ್ನತ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಅಭಿವೃದ್ಧಿಯ ಪರ್ವ : ಸೆ. 22 ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ.  ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಯಲಬುಗಾ ತಾಲೂಕಿನ ಗ್ರಾಮಗಳಿಗೆ 763 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಶಂಕುಸ್ಥಾಪನೆ.  ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲೂಕಿನ ಆಯ್ದ ಕೆರೆಗಳಿಗೆ 290 ಕೋಟಿ ರೂ. ವೆಚ್ಚದಲ್ಲಿ ತುಂಗಭದ್ರಾ ನದಿಯ ನೀರನ್ನು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ.  ಕೊಪ್ಪಳದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಕಟ್ಟಡದ ಉದ್ಘಾಟನೆ.  ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ 103 ಕೋಟಿ ರೂ. ವೆಚ್ಚದಲ್ಲಿ ಬನ್ನಿಕೊಪ್ಪ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ.  ಯಲಬುರ್ಗಾ ತಾಲೂಕು ತಳಕಲ್ ಬಳಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಶಂಕುಸ್ಥಾಪನೆ.  32 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಆನೆಗೊಂದಿ ಸೇತುವೆಯ ಉದ್ಘಾಟನೆ.  ಗಂಗಾವತಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಉದ್ಘಾಟನೆ.  ಗಂಗಾವತಿ ತಾಲೂಕು ಚಿಕ್ಕಬೆಣಕಲ್‍ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಸ್ಟೆಲ್ ಕಟ್ಟಡದ ಉದ್ಘಾಟನೆ.  ಗಂಗಾವತಿ ಮತಕ್ಷೇತ್ರ ಕೊಪ್ಪಳ ತಾಲೂಕಿನ ಹಿರೇಹಳ್ಳ ಯೋಜನೆಯ ಮುದ್ಲಾಪುರ ಗ್ರಾಮ ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯ ಉದ್ಘಾಟನೆ.  ಯಲಬುರ್ಗಾ ತಾಲೂಕು ಕುಕನೂರು ಪಟ್ಟಣದಲ್ಲಿ 09 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ 60 ಹಾಸಿಗೆಗಳ ಮಹಿಳಾ ಪ್ರಸೂತಿ ಮತ್ತು ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆ.  ಹಾಗೂ ಯಲಬುರ್ಗಾ ತಾಲೂಕು ಕುಕನೂರಿನಲ್ಲಿ 05 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನೆಯನ್ನು ಸೆ. 22 ರಂದು ಮುಖ್ಯಮಂತ್ರಿಗಳು ನೆರವೇರಿಸುವರು.


ಹೀಗಾಗಿ ಲೇಖನಗಳು ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ

ಎಲ್ಲಾ ಲೇಖನಗಳು ಆಗಿದೆ ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಲಿಂಕ್ ವಿಳಾಸ https://dekalungi.blogspot.com/2017/09/22_68.html

Subscribe to receive free email updates:

0 Response to "ಸೆ. 22 ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಆಗಮನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ