ಶೀರ್ಷಿಕೆ : ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
ಲಿಂಕ್ : ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
ಕೊಪ್ಪಳ ಸೆ. 23 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪೆÇಲೀಸ್ ಇವರ ವತಿಯಿಂದ ಖಾಲಿ ಇರುವ 120 ನಾಗರೀಕ ಪೊಲೀಸ್ ಕಾನ್ಸ್‍ಸ್ಟೇಬಲ್/ ಮಹಿಳಾ ಪೊಲೀಸ್ ಕಾನ್ಸ್‍ಸ್ಟೇಬಲ್‍ರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು ಸೆ. 25 ಮತ್ತು 26 ರಂದು ಬೆಳಿಗ್ಗೆ 06-00 ಗಂಟೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಹೈದ್ರಾಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ/ ಸ್ಥಳೀಯೇತರ ಅಭ್ಯರ್ಥಿಗಳಿಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 120 ನಾಗರೀಕ ಪೊಲೀಸ್ ಕಾನ್ಸ್‍ಸ್ಟೇಬಲ್/ ಮಹಿಳಾ ಪೆÇಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಪುರುಷ/ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿ, ನಂತರ ಲಿಖಿತ ಪರೀಕ್ಷೆಯನ್ನು ಈಗಾಗಲೇ ಏರ್ಪಡಿಸಿದ್ದು, ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 1:5 ಅನುಪಾತದಂತೆ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾಢ್ರ್ಯ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಿಂದ ಪಡೆದು ಹಾಜರಾಗಬೇಕು. ಕರೆಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ದೈಹಿಕ ಪರೀಕ್ಷೆಗೆ ಬರುವಾಗ ಕರೆಪತ್ರದ ಜೊತೆಗೆ, ಪತ್ರದಲ್ಲಿ ನಮೂದಿಸಿದ ಎಲ್ಲಾ ದಾಖಲಾತಿಯೊಂದಿಗೆ ಹಾಜರಾಗಬೇಕು. ಮತ್ತು ಆನ್‍ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಝರಾಕ್ಸ್ ಪ್ರತಿ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತಪ್ಪಿದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ವಿದ್ಯಾರ್ಹತೆಗೆ ಹಾಗೂ ಮೀಸಲಾತಿಗೆ ಸಂಬಂಧಿಸಿದಂತೆ ದಿನಾಂಕ 22-06-2017 ರೊಳಗೆ ಪಡೆದ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ದೃಢೀಕೃತ ಝರಾಕ್ಸ್ ಪ್ರತಿಗಳ ಒಂದು ಸೆಟ್ ತರಬೇಕು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ನೇಮಕಾತಿ ಅಧ್ಯಕ್ಷರು ಆಗಿರುವ ಡಾ. ಅನೂಪ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
ಎಲ್ಲಾ ಲೇಖನಗಳು ಆಗಿದೆ ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಲಿಂಕ್ ವಿಳಾಸ https://dekalungi.blogspot.com/2017/09/25_51.html
0 Response to "ಪೊಲೀಸ್ ಪೇದೆ ನೇಮಕಾತಿ : ಸೆ. 25 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ"
ಕಾಮೆಂಟ್ ಪೋಸ್ಟ್ ಮಾಡಿ