ಶೀರ್ಷಿಕೆ : ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ
ಲಿಂಕ್ : ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ
ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ
ಕೊಪ್ಪಳ ಸೆ. 01 (ಕರ್ನಾಟಕ ವಾರ್ತೆ): ಇದೇ ಸೆ. 22 ರಂದು ಕೊಪ್ಪಳದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ನಗರದ ಹೊರವಲಯದ ಹೊಸಪೇಟೆ ರಸ್ತೆಯಲ್ಲಿನ ಬೃಹತ್ ಮೈದಾನದಲ್ಲಿ ಏರ್ಪಡಿಸುವ ಕುರಿತಂತೆ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೆ. 22 ರಂದು ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮದ ಜೊತೆಗೆ ವಿವಿಧ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದ್ದು, ಸುಮಾರು ಒಂದು ಲಕ್ಷ ಜನರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಸಮಾರಂಭಕ್ಕೆ ವಿಶಾಲವಾದ ಪ್ರದೇಶ ಬೇಕಾಗುತ್ತದೆ. ಕಳೆದ ವರ್ಷ ಉತ್ತರ ಕರ್ನಾಟಕದ ಕೃಷಿ ಭಾಗ್ಯ ಯೋಜನೆಯ ರೈತರ ಸಮಾವೇಶವನ್ನು ಕೊಪ್ಪಳ ಹೊರವಲಯದ ಹೊಸಪೇಟೆ ರಸ್ತೆಯಲ್ಲಿನ ಇದೇ ವಿಶಾಲವಾದ ಮೈದಾನದಲ್ಲಿ ಆಯೋಜಿಸಲಾಗಿತ್ತು. ಸಮಾವೇಶ ಅತ್ಯಂತ ಯಶಸ್ವಿಗೊಂಡಿತ್ತು ಎಂಬುದನ್ನು ಸ್ಮರಿಸಿದ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಇದೇ ಮೈದಾನದಲ್ಲಿ ಸೆ. 22 ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂದರು. ಕಾರ್ಯಕ್ರಮ ಜರುಗುವ ಸ್ಥಳದಲ್ಲಿ ಜನರಿಗೆ ಊಟ ಪೂರೈಸುವ ಸಲುವಾಗಿ 100 ಕೌಂಟರ್ ಸ್ಥಾಪಿಸುವುದು, ವಾಹನಗಳ ಪಾರ್ಕಿಂಗ್, ವೇದಿಕೆ, ಪೆಂಡಾಲ್ ವ್ಯವಸ್ಥೆ, ಗ್ಯಾಲರಿ, ಪೊಲೀಸ್ ಬಂದೋಬಸ್ತ್, ಟ್ರಾಫಿಕ್ ನಿಯಂತ್ರಣ ಮುಂತಾದ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸಲು ಎಲ್ಲ ಅಧಿಕಾರಿಗಳು, ತಮಗೆ ಒಪ್ಪಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸೂಚನೆ ನೀಡಿದರು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ
ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ ಲಿಂಕ್ ವಿಳಾಸ https://dekalungi.blogspot.com/2017/09/blog-post_32.html
0 Response to "ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ಸ್ಥಳ ಪರಿಶೀಲನೆ"
ಕಾಮೆಂಟ್ ಪೋಸ್ಟ್ ಮಾಡಿ