ಶೀರ್ಷಿಕೆ : ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಸೆ. 01 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಒದಗಿಸಿಕೊಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದ 105 ಹಾಗೂ ಅಲ್ಪಸಂಖ್ಯಾತರ 17 ಫಲಾನುಭವಿಗಳಿಗೆ, ಒಟ್ಟು 122 ಗುರಿಯನ್ನು ನಗರಸಭೆ ವತಿಂಯಿದ ನಿಗದಿಪಡಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊಪ್ಪಳ ನಗರ ಪ್ರದೇಶದವರಾಗಿರಬೇಕು. ಅರ್ಜಿದಾರರು ತಮ್ಮ ಹೆಸರಿನಲ್ಲಿ ಖುಲ್ಲಾ ಜಾಗೆ ಹೊಂದಿರಬೇಕು. ಪ್ರಸಕ್ತ ಸಾಲಿನ ಆಸ್ತಿಕರ ಪಾವತಿಸಿದ ರಶೀದಿ ಹಾಗೂ ನಮೂನೆ-3, ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ, ರೂ.20-00 ರ ಛಾಪಾ ಕಾಗದದ ಮೇಲೆ ಆಶ್ರಯ ಯೋಜನೆಯಡಿಯಲ್ಲಿ ಯಾವುದೇ ವಸತಿ ಸೌಲಭ್ಯ ಪಡೆದಿರುವುದಿಲ್ಲವೆಂದು ನೋಟರಿ ಮಾಡಿಸಿ ಲಗತ್ತಿಸಬೇಕು. ಖುಲ್ಲಾ ಜಾಗೆಯ ಭಾವಚಿತ್ರ ಹಾಗೂ ಅರ್ಜಿದಾರರ ಪಾಸ್‍ಪೋರ್ಟ್ ಸೈಜಿನ 03 ಭಾವಚಿತ್ರ, ಪ್ರಸಕ್ತ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಫಲಾನುಭವಿ ಹೆಸರಿನಲ್ಲಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್‍ಪುಸ್ತಕದ ಜರಾಕ್ಸ್ ಇತ್ಯಾದಿಗಳನ್ನು ಲಗತ್ತಿಸಿ, ಸೆಪ್ಟೆಂಬರ್. 11 ರೊಳಗಾಗಿ ಕೊಪ್ಪಳ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_36.html
0 Response to "ವಾಜಪೇಯಿ ನಗರ ವಸತಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ