ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ

ಓದಿ


ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ


ಕೊಪ್ಪಳ ಸೆ. 27 (ಕರ್ನಾಟಕ ವಾರ್ತೆ): ಕೊಪ್ಪಳದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣ ಖರೀದಿಸಲು ಮತ್ತು ನಿರುದ್ಯೋಗಿ ಯುವಕ/ ಯುವತಿಯರಿಗೆ ಅಟೋಮೊಬೈಲ್ಸ್ ಸರ್ವೀಸ್ ಯೋಜನೆಯಡಿ ತರಬೇತಿ ನೀಡಿ, ಸ್ವಂತ ಉದ್ಯೋಗ ಕಲ್ಪಿಸಲು ಸಾಲ ಸೌಲಭ್ಯ ಹಾಗೂ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. 
ರೈತರಿಗಾಗಿ ಕೃಷಿ ಯಂತ್ರೋಪಕರಣ ಖರೀದಿಸಲು ಸಾಲ ಯೋಜನೆ : ಮತೀಯ ಅಲ್ಪಸಂಖ್ಯಾತರ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆರ್ಥಿಕವಾಗಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ಉಳುಮೆಯಿಂದ ಕೊಯ್ಲುವರೆಗೆ ಕೃಷಿ ಸಂಬಂಧಿತ ಉಪಯುಕ್ತ ವಿವಿಧ ಮಾದರಿಯ ಉಪಕರಣಗಳಾದ ಸಣ್ಣ ಟ್ರ್ಯಾಕ್ಟರ್, ಪವರ್ ಟ್ರೇಲ್ಲರ್, ಭೂಮಿ ಸಿದ್ದತೆ ಉಪಕರಣ, ನಾಟಿ/ ಬಿತ್ತನೆ, ಡಿಸೇಲ್ ಪಂಪಸೆಟ್, ಕೃಷಿ ಸಂಬಂಧಿತ ಮುಂತಾದ ಉಪಕರಣಗಳ ಖರೀದಿಗಾಗಿ ಘಟಕ ವೆಚ್ಚ ರೂ. 1 ಲಕ್ಷ ಸಾಲ ಸೌಲಭ್ಯ.  ಇದರಲ್ಲಿ ಶೇಕಡಾ 50 ರಷ್ಟು ಸಹಾಯಧನ ಮತ್ತು ಶೇ. 50 ರಷ್ಟು ಸಾಲದ ಮೊತ್ತವನ್ನು ಶೇ. 3ರ ಬಡ್ಡಿದರದಲ್ಲಿ 36 ಮಾಹೆಗಳ ಕಂತುಗಳಲ್ಲಿ ಮರುಪಾವತಿಗೆ ಅವಕಾಶವಿರುತ್ತದೆ.  ಶೇ. 50 ರಷ್ಟು ಸಾಲದ ಮೊತ್ತವನ್ನು ಮರುಪಾವತಿಸಿದ ನಂತರ ಶೇ. 50 ರ ಸಹಾಯಧನವನ್ನು ಬ್ಯಾಕ್ & ಸಬ್ಸಿಡಿಯಾಗಿ ಹೊಂದಾಣಿಕೆ ಮಾಡಿಕೊಂಡು ಸಾಲದ ಖಾತೆಯನ್ನು ಮುಕ್ತಾಯಗೊಳಿಸಲಾಗುವುದು.  ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡದೆ ಇದ್ದ ಪಕ್ಷದಲ್ಲಿ ಶೇ. 50 ರ ಸಹಾಯಧನ ಮೊತ್ತವನ್ನು ಸಾಲದ ಖಾತೆಗೆ ಸೇರಿಸಿ ಸಂಪೂರ್ಣ ಮೊತ್ತವನ್ನು ಮರುಪಾವತಿಗೆ ಕ್ರಮ ಕೈಗೊಳ್ಳಲಾಗುವುದು. 
ಅಟೋಮೊಬೈಲ್ ಸರ್ವೀಸ್ : ಮತೀಯ ಅಲ್ಪಸಂಖ್ಯಾತರ ಅಶಿಕ್ಷಿತ ನಿರುದ್ಯೋಗಿ ಯುವಕ/ ಯುವತಿಯರಿಗೆ ಅಟೋಮೊಬೈಲ್ಸ್ ಸರ್ವೀಸ್‍ನಲ್ಲಿ ಪ್ರತಿಷ್ಠಿತ ಅಟೋಮೊಬೈಲ್ಸ್ ಸರ್ವೀಸ್ ಸಂಸ್ಥೆಗಳ ಸಹಯೋಗದೊಂದಿಗೆ ತರಬೇತಿಯನ್ನು ನೀಡಿ, ತರಬೇತಿಯ ನಂತರ ಸ್ವಂತ ಉದ್ಯೋಗ ಕಲ್ಪಿಸಲು ರಾಷ್ಟ್ರೀಕೃತ/ ಶೆಡ್ಯೂಲ್/ ಗ್ರಾಮೀಣ ಬ್ಯಾಂಕ್‍ಗಳಿಂದ ರೂ. 2 ಲಕ್ಷಗಳಿಂದ 5 ಲಕ್ಷಗಳವರೆಗೆ ನೀಡಲಾಗುವ ಸಾಲಕ್ಕೆ ನಿಗಮದಿಂದ ಶೇ. 35 ರಷ್ಟು ಅಂದರೆ ಕನಿಷ್ಠ ರೂ. 70,000/- ಗಳಿಂದ ಗರಿಷ್ಠ ರೂ. 1,25,000/- ಗಳವರೆಗೆ ಸಹಾಯಧನವನ್ನು ನೀಡಲಾಗುವುದು. 
    ಅರ್ಜಿ ಸಲ್ಲಿಸಲು ಮತಿಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು, ಫಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದಕ್ಕೆ ಸೇರಿದ್ದು, ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು.  18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.  ಆಸಕ್ತರು ನಿಗಮದ ಅಂತರಜಾಲ  www.kmdc.kar.nic.in ದಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳಾದ ಆಧಾರ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಯೋಜನಾ ವರದಿ, ಬ್ಯಾಂಕ್ ಪಾಸ್‍ಬುಕ್ ಝರಾಕ್ಸ್, ಇತ್ಯದಿಗಳನ್ನು ಲಗತ್ತಿಸಿ, ಅಕ್ಟೋಬರ್. 28 ರೊಳಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾಡಳಿತ ಭವನ ಕೊಪ್ಪಳ, ದೂರವಾಣಿ ಸಂಖ್ಯೆ 08539-225008 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_421.html

Subscribe to receive free email updates:

0 Response to "ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯ ಹಾಗೂ ಸಹಾಯಧನ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ