ಶೀರ್ಷಿಕೆ : ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಲಿಂಕ್ : ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಸೆ. 27 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅ. 02 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬಸವರಾಜ ರಾಯರಡ್ಡಿ ಅವರು ಅ. 02 ರಂದು ಹಂಪಿ ಎಕ್ಸ್‍ಪ್ರೆಸ್ ರೈಲು ಮೂಲಕ ಬೆಳಿಗ್ಗೆ 8 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ನಂತರ ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಸೇವಾನಿಕೇತನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ವಸತಿಶಾಲೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲಾಡಳಿತ ಆಯೋಜಿಸಿರುವ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12-30 ಗಂಟೆಗೆ ಜಿಲ್ಲಾಡಳಿತ, ಜಿ.ಪಂ. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿರುವ ಮಾತೃಪೂರ್ಣ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಂತ್ರಿಗಳು ಅದೇ ದಿನ ಮಧ್ಯಾಹ್ನ 02 ಗಂಟೆಗೆ ಹುಬ್ಬಳ್ಳಿಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/09/blog-post_456.html
0 Response to "ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ