ಶೀರ್ಷಿಕೆ : ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ
ಲಿಂಕ್ : ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ
ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ
ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆಯಡಿ (ಪಿಎಂಇಜಿಪಿ) ಸೌಲಭ್ಯ ಪಡೆಯಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯ ಗರಿಷ್ಠ ವೆಚ್ಚ ರೂ.25.00 ಲಕ್ಷ ರೂ. ಗಳು, ಉತ್ಪಾದನಾ ಮತ್ತು ಸೇವಾ ಚಟುವಟಿಕೆಗಳಿಗೆ ಬ್ಯಾಂಕುಗಳು ನೀಡುವ ಸಾಲದ ಮೊತ್ತದ ಮೇಲೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ. 35% (ಗರಿಷ್ಟ ಮೊತ್ತ ರೂ. 8.75 ಲಕ್ಷ) ಸಹಾಯಧನ ಸೌಲಭ್ಯ ಇರುತ್ತದೆ. ಉದ್ದಿಮೆಯನ್ನು ಪ್ರಾರಂಭ ಮಾಡುವ ವಿಶೇಷ ವರ್ಗದವರು ಶೇ. 5% ರಷ್ಟು ಸ್ವಂತ ಬಂಡವಾಳ ಹೂಡಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ 18 ವರ್ಷ ತುಂಬಿರಬೇಕು. ಈ ಯೋಜನೆಯು ಹೊಸದಾಗಿ ಪ್ರಾರಂಭಿಸುವ ಘಟಕಗಳಿಗೆ ಮಾತ್ರ ಅನ್ವಯಿಸುತ್ತದೆ. ಜಿಲ್ಲಾ ಕೈಗಾರಿಕಾ ಕೇಂದ್ರ ಕೆ.ವಿ.ಐ.ಸಿ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಮುಖಾಂತರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
ಯೋಜನೆಯ ಸೌಲಭ್ಯ ಪಡೆಯಲು ಅಪೇಕ್ಷಿಸುವ ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ http://ift.tt/2iBvFbP ನಲ್ಲಿ ಕೆ.ವಿ.ಐ.ಬಿ ಎಜೆನ್ಸಿ ದಾಖಲಿಸಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ ಕೊಪ್ಪಳ ರವರಿಗೆ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳ ಯಥಾ ಪ್ರತಿ ಸಲ್ಲಿಸಬೇಕು. ಅಕ್ಟೋಬರ್. 07 ರೊಳಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಆದ್ಯತೆ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿ ಬ್ಯಾಂಕ್ ಶಾಖೆಗಳಿಗೆ ಸಲ್ಲಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-231473 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/09/blog-post_46.html
0 Response to "ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಸ್ವಯಂ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ